Health Benefits: ಪ್ಲಮ್​ ಹಣ್ಣು ಸೇವಿಸಿದ್ದೀರಾ? ಹುಳಿ-ಸಿಹಿ ರುಚಿಯ ಜತೆಗೆ ಇದು ಅನೇಕ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ

Plum fruit: ಪ್ಲಮ್​ ಎಂದು ಕರೆಯಲಾಗುವ ಈ ಹಣ್ಣು ರುಚಿಯಲ್ಲಿ ಹುಳಿ ಮತ್ತು ಸಿಹಿಯಾಗಿರುತ್ತದೆ. ಆದರೆ ಆರೋಗ್ಯದ ದೃಷ್ಟಿಯಿಂದ ಈ ಹಣ್ಣು ಬಹಳ ಪ್ರಯೋಜನಕಾರಿ. ಅನೇಕ ರೀತಿಯ ಔಷಧೀಯ ಅಂಶಗಳನ್ನು ಇದು ಹೊಂದಿದೆ.

Health Benefits: ಪ್ಲಮ್​ ಹಣ್ಣು ಸೇವಿಸಿದ್ದೀರಾ? ಹುಳಿ-ಸಿಹಿ ರುಚಿಯ ಜತೆಗೆ ಇದು ಅನೇಕ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ
ಪ್ಲಮ್​ ಹಣ್ಣು
Follow us
TV9 Web
| Updated By: Skanda

Updated on: Jul 24, 2021 | 7:12 AM

ಮಾರುಕಟ್ಟೆಯಲ್ಲಿ ಹಣ್ಣುಗಳ ಬೇಡಿಕೆ ಋತುವಿಗೆ ಅನುಗುಣವಾಗಿ ಬದಲಾಗುತ್ತದೆ. ಅದರಂತೆ ಈ ದಿನಗಳಲ್ಲಿ ಹೆಚ್ಚಾಗಿ ಎಲ್ಲಾ ಹಣ್ಣಿನ ಅಂಗಡಿ ಮತ್ತು ಮಾರುಕಟ್ಟೆಗಳಲ್ಲಿ ತಾಜಾ ಕೆಂಪು ಬಣ್ಣದ ಹಣ್ಣುಗಳು ಕಾಣ ಸಿಗುತ್ತದೆ. ಹಾಗಿದ್ದರೆ ಅದು ಯಾವ ಹಣ್ಣು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಪ್ಲಮ್​ (Plum)ಎಂದು ಕರೆಯಲಾಗುವ ಈ ಹಣ್ಣು ರುಚಿಯಲ್ಲಿ ಹುಳಿ ಮತ್ತು ಸಿಹಿಯಾಗಿರುತ್ತದೆ. ಆದರೆ ಆರೋಗ್ಯದ ದೃಷ್ಟಿಯಿಂದ ಈ ಹಣ್ಣು ಬಹಳ ಪ್ರಯೋಜನಕಾರಿ. ಅನೇಕ ರೀತಿಯ ಔಷಧೀಯ ಅಂಶಗಳನ್ನು ಇದು ಹೊಂದಿದೆ.

ವಿಟಮಿನ್ ಎ, ಕೆ, ಬಿ 1, ಬಿ 2, ಬಿ 3, ಸಿ, ಇ ಜತೆಗೆ, ಬೀಟಾ ಕ್ಯಾರೋಟಿನ್​ನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಈ ರಸಭರಿತ ಹಣ್ಣು ದೇಹವನ್ನು ಹೈಡ್ರೀಕರಿಸುತ್ತದೆ. ಅಲ್ಲದೆ ಪ್ಲಮ್ ಹಣ್ಣು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಇದು ಎಲ್ಲಾ ದೈಹಿಕ ಕಾಯಿಲೆಗಳಿಂದ ರಕ್ಷಿಸುವ ಸಾಮರ್ಥ್ಯ ಹೊಂದಿದೆ.

1. ಹೃದಯ ಆರೋಗ್ಯವನ್ನು ಕಾಪಾಡುತ್ತದೆ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಪ್ಲಮ್ ಹಣ್ಣು ಕೆಲಸ ಮಾಡುತ್ತದೆ ಎಂದು ಅನೇಕ ಅಧ್ಯಯನಗಳಿಂದ ಸಾಬೀತಾಗಿದೆ. ಜತೆಗೆ ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸಹ ಕಡಿಮೆ ಮಾಡುತ್ತದೆ. ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್​ ಹೃದಯದ ಪ್ರಮುಖ ಸಮಸ್ಯೆಗಳಿಗೆ ಕಾರಣವೆಂದು ನಂಬಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಈ ಎರಡು ಸಮಸ್ಯೆಗಳನ್ನು ದೂರ ಮಾಡಿ ಹೃದಯವನ್ನು ಆರೋಗ್ಯವಾಗಿಡಲು ಪ್ಲಮ್ ಹಣ್ಣು ಪ್ರಮುಖ ಪಾತ್ರ ವಹಿಸುತ್ತದೆ.

2. ಮಲಬದ್ಧತೆಯನ್ನು ಗುಣಪಡಿಸುತ್ತದೆ ಹೊಟ್ಟೆಯು ದೇಹದ ಅರ್ಧದಷ್ಟು ಸಮಸ್ಯೆಗಳ ಮೂಲ ಎಂದು ನಂಬಲಾಗಿದೆ. ಮಲಬದ್ಧತೆಯಿಂದಾಗಿ ಜನರಿಗೆ ಆಮ್ಲೀಯತೆ, ಅಜೀರ್ಣ ಮುಂತಾದ ಸಮಸ್ಯೆಗಳು ಸೃಷ್ಟಿಯಾಗುತ್ತದೆ. ಹೀಗಾಗಿ ಪ್ಲಮ್​ ಹಣ್ಣು ಸೇವಿಸುವುದು ಉತ್ತಮ. ಈ ಹಣ್ಣಿನಲ್ಲಿ ಫೈಬರ್ ಅಂಶ ಸಮೃದ್ಧವಾಗಿದೆ ಮತ್ತು ಮಲಬದ್ಧತೆಯ ಸಮಸ್ಯೆಯನ್ನು ತೆಗೆದುಹಾಕಲು ಇದು ಸಹಕಾರಿಯಾಗಿದೆ.

3. ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡುತ್ತದೆ ಪುರುಷರಿಗಿಂತ 45 ವರ್ಷದ ನಂತರ ಮಹಿಳೆಯರಿಗೆ ಆಸ್ಟಿಯೊಪೊರೋಸಿಸ್ ಬರುವ ಅಪಾಯ ಹೆಚ್ಚು. ಪ್ಲಮ್​ ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಜತೆಗೆ ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಮಹಿಳೆಯರಿಗೆ ಕಾಡುವ ಮುಟ್ಟಿಗೆ ಸಂಬಂಧಿಸಿದ ಸಮಸ್ಯೆಗೆ ಪ್ಲಮ್​ ರಾಮಬಾಣವಾಗಿದೆ. ಅದರಲ್ಲೂ ಒಣಗಿದ ಪ್ಲಮ್​ ಸೇವಿಸುವುದು ಉತ್ತಮ.

4. ಕಣ್ಣಿನ ಆರೋಗ್ಯಕ್ಕೆ ಪ್ರಯೋಜನಕಾರಿ ಪ್ಲಮ್ ಹಣ್ಣು ಕಣ್ಣುಗಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಇದು ಫೈಬರ್ ಮತ್ತು ವಿಟಮಿನ್ ಎ ಅನ್ನು ಹೊಂದಿರುತ್ತದೆ. ಇದು ರೆಟಿನಾವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಪ್ಲಮ್​ ಯುವಿ ಕಿರಣಗಳಿಂದ ಉಂಟಾಗುವ ಹಾನಿಯಿಂದ ಕಣ್ಣುಗಳನ್ನು ರಕ್ಷಿಸುತ್ತದೆ.

5. ತೂಕ ನಷ್ಟಕ್ಕೆ ಸಹಾಯ ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಪ್ಲಮ್ ಹಣ್ಣು ಸೇವಿಸುವುದು ಉತ್ತಮ. ಈ ಹಣ್ಣು ರಸಭರಿತವಾಗಿದ್ದು, ಇದನ್ನು ತಿನ್ನುವುದರಿಂದ ಕೊಬ್ಬು ಹೆಚ್ಚಾಗುವುದಿಲ್ಲ. ಆ ಮೂಲಕ ತೂಕವನ್ನು ನಿಯಂತ್ರಿಸಬಹುದು.

6. ಚರ್ಮವನ್ನು ಆರೋಗ್ಯವಾಗಿರಿಸುತ್ತದೆ ಪ್ಲಮ್​ ಹಣ್ಣು ತಿನ್ನುವುದರಿಂದ ಚರ್ಮವು ಆರೋಗ್ಯಕರವಾಗಿರುತ್ತದೆ. ಸುಕ್ಕುಗಳನ್ನು ತೆಗೆದುಹಾಕುವುದಲ್ಲದೆ, ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಇದರ ತಿರುಳನ್ನು ರೋಸ್ ವಾಟರ್ ಅಥವಾ ಸೌತೆಕಾಯಿ ರಸದೊಂದಿಗೆ ಬೆರೆಸಿ ಮುಖಕ್ಕೆ ಹಚ್ಚುವುದರಿಂದ ಚರ್ಮದ ಹೊಳಪು ಹೆಚ್ಚಾಗುತ್ತದೆ.

ಇದನ್ನೂ ಓದಿ: Liver Health: ಪಿತ್ತಜನಕಾಂಗದ ಆರೋಗ್ಯವನ್ನು ಕಾಪಾಡಲು ವಾರದ 7 ದಿನವನ್ನು ಬಳಸಿ; ಆಹಾರದಲ್ಲಿನ ಈ ಕ್ರಮ ಯಕೃತ್ತಿನ ಕಾಯಿಲೆಯಿಂದ ನಿಮ್ಮನ್ನು ದೂರ ಇಡುತ್ತದೆ

Heart Health: ಹೃದಯಾಘಾತ ಮಾತ್ರ ಅಲ್ಲ, ಹೃದಯಕ್ಕೆ ಸಂಬಂಧಿಸಿದ ಇನ್ನಿತರ ಕಾಯಿಲೆಗಳಿಂದ ಪಾರಾಗಲು ಸದಾ ಪ್ರಯತ್ನಿಸಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್