AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragi Health Benefits: ರಾಗಿ ಸೇವಿಸುವುದರಿಂದಾಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿದರೆ ಪ್ರತಿನಿತ್ಯ ಇದನ್ನು ಸೇವಿಸುತ್ತೀರಿ

Health Tips: ದೈನಂದಿನ ಆಹಾರದಲ್ಲಿ ರಾಗಿಯನ್ನು ಸೇರಿಸುವ ಮೂಲಕ, ನಿಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಪಡೆಯಬಹುದು ಮತ್ತು ತೂಕವನ್ನು ಸುಲಭವಾಗಿ ನಿಯಂತ್ರಿಸಬಹುದು.

Ragi Health Benefits: ರಾಗಿ ಸೇವಿಸುವುದರಿಂದಾಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿದರೆ ಪ್ರತಿನಿತ್ಯ ಇದನ್ನು ಸೇವಿಸುತ್ತೀರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 04, 2021 | 7:29 AM

Share

ಆಧುನಿಕ ಜಗತ್ತಿನಲ್ಲಿ ಬೊಜ್ಜು ದೊಡ್ಡ ಸಮಸ್ಯೆಯಾಗಿದೆ. ಬೊಜ್ಜು ವಿವಿಧ ರೀತಿಯ ಸಮಸ್ಯೆಗಳನ್ನು ಮತ್ತು ರೋಗಗಳನ್ನು ಹೊಂದುವಂತೆ ಮಾಡಿ, ಜನರನ್ನು ಸಂಕಷ್ಟಕ್ಕೆ ತಳ್ಳುತ್ತಿದೆ. ಹೀಗಾಗಿ ವೇಗವಾಗಿ ತೂಕ ಇಳಿಸಿಕೊಳ್ಳಲು ಎಲ್ಲರೂ ಬಯಸುತ್ತಾರೆ. ಇನ್ನು ಆರೋಗ್ಯವಂತರು ಕೂಡ ಕೊಬ್ಬನ್ನು ಕಡಿಮೆ ಮಾಡಲು ಸದಾ ದೇಹವನ್ನು ಸದೃಢವಾಗಿರಿಸಿಕೊಳ್ಳಲು ಬಯಸುತ್ತಾರೆ. ಹೀಗಾಗಿ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಇಚ್ಛಿಸುವವರು, ವ್ಯಾಯಾಮದ ಜತೆಗೆ ಕೆಲವೊಂದಿಷ್ಟು ಆಹಾರ ಪದ್ಧತಿಗಳಲ್ಲೂ ಬದಲಾವಣೆ ತಂದುಕೊಳ್ಳಬೇಕಾಗುತ್ತದೆ. ಹೀಗೆ ಯೋಚಿಸುವವರಿಗೆ ರಾಗಿ ಉತ್ತಮ ಪದಾರ್ಥವಾಗಿದೆ. ರಾಗಿ ತೂಕ ಇಳಿಸಿಕೊಳ್ಳಲು ಉತ್ತಮ ಔಷಧಿಯಾಗಿ ಕಾರ್ಯನಿರ್ವಹಿಸುತ್ತವೆ. ಅಲ್ಲದೆ ರಾಗಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ.

ರಾಗಿಯು ಶೂನ್ಯ ಕೊಲೆಸ್ಟ್ರಾಲ್ ಮತ್ತು ಸೋಡಿಯಂ ಅನ್ನು ಹೊಂದಿರುತ್ತದೆ. ಕ್ಯಾಲ್ಸಿಯಂ, ವಿಟಮಿನ್, ಪ್ರೋಟೀನ್, ಫೈಬರ್, ಕಾರ್ಬೋಹೈಡ್ರೇಟ್‌ಗಳನ್ನು ರಾಗಿ ಹೊಂದಿದೆ. ದೈನಂದಿನ ಆಹಾರದಲ್ಲಿ ರಾಗಿಯನ್ನು ಸೇರಿಸುವ ಮೂಲಕ, ನಿಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಪಡೆಯಬಹುದು ಮತ್ತು ತೂಕವನ್ನು ಸುಲಭವಾಗಿ ನಿಯಂತ್ರಿಸಬಹುದು.

ಮೂಳೆಗಳಿಗೆ ಒಳ್ಳೆಯದು ರಾಗಿ ಮೂಳೆಗೆ ಸಂಬಂಧಿಸಿದ ಕಾಯಿಲೆಯನ್ನು ಕಡಿಮೆ ಮಾಡುತ್ತದೆ. ರಾಗಿಯಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದೆ. 100 ಗ್ರಾಂ ರಾಗಿ 344 ಮಿಲಿಗ್ರಾಂ ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ. ಇವುಗಳನ್ನು ಆಹಾರದಲ್ಲಿ ಸೇರಿಸುವುದರಿಂದ ಮೂಳೆಗಳು ಬಲಗೊಳ್ಳುವುದಷ್ಟೇ ಅಲ್ಲ ಆಸ್ಟಿಯೊಪೊರೋಸಿಸ್ ಅಪಾಯವು ಕಡಿಮೆಯಾಗುತ್ತದೆ.

ಹೃದಯಕ್ಕೆ ಒಳ್ಳೆಯದು ರಾಗಿ ಕೊಲೆಸ್ಟ್ರಾಲ್ ಮತ್ತು ಸೋಡಿಯಂ ಮುಕ್ತವಾಗಿದೆ. ಇದು ಕಬ್ಬಿಣ, ಮೆಗ್ನೀಸಿಯಮ್ ಮತ್ತು ಫೈಬರ್ ನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ರಾಗಿ ತಿನ್ನುವುದರಿಂದ ಕೊಲೆಸ್ಟ್ರಾಲ್ ಮತ್ತು ಬಿಪಿ ಕಡಿಮೆಯಾಗುತ್ತದೆ. ಇದರ ಪರಿಣಾಮವಾಗಿ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ.

ತೂಕವನ್ನು ನಿಯಂತ್ರಿಸಬಹುದು ತಾಮ್ರದಲ್ಲಿ ನಾರಿನಂಶವಿದೆ. ಇವುಗಳನ್ನು ಸೇವಿಸಿದ ನಂತರ ಹೊಟ್ಟೆಯಲ್ಲಿ ದೀರ್ಘಕಾಲದವರೆಗೆ ಹಸಿವಾಗುವುದಿಲ್ಲ. ಇದರಿಂದಾಗಿ ಅತಿಯಾಗಿ ತಿನ್ನುವುದನ್ನು ತಡೆಯುವುದರ ಜತೆಗೆ, ದೇಹಕ್ಕೆ ಪೋಷಕಾಂಶಗಳೂ ಸಿಗುತ್ತವೆ. ಅದಕ್ಕಾಗಿಯೇ ತೂಕ ನಷ್ಟಕ್ಕೆ ರಾಗಿ ಅತ್ಯುತ್ತಮವೆಂದು ಹೇಳಲಾಗುತ್ತದೆ.

ರಕ್ತಹೀನತೆಯನ್ನು ಸುಧಾರಿಸುತ್ತದೆ ದೇಹದಲ್ಲಿ ಕಬ್ಬಿಣದ ಕೊರತೆ ಇದ್ದರೆ ರಕ್ತಹೀನತೆ ಸಮಸ್ಯೆ ಉಂಟಾಗುತ್ತದೆ. ರಾಗಿಯಲ್ಲಿ ಕಬ್ಬಿಣಾಂಶ ಸಮೃದ್ಧವಾಗಿದೆ. ಇದನ್ನು ಆಹಾರದಲ್ಲಿ ಪ್ರತಿದಿನ ಸೇರಿಸುವುದರಿಂದ ರಕ್ತಹೀನತೆಯ ಸಮಸ್ಯೆ ಕಡಿಮೆಯಾಗುತ್ತದೆ.

ಮಧುಮೇಹ ನಿವಾರಕ ಮಧುಮೇಹ ರೋಗಿಗಳು ಬೆಳಗಿನ ಉಪಾಹಾರ ಮತ್ತು ಊಟದಲ್ಲಿ ರಾಗಿಯನ್ನು ಸೇರಿಸಿದರೆ, ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ. ಜತೆಗೆ ಮಧುಮೇಹ ಬರುವ ಅಪಾಯವೂ ಕಡಿಮೆ.

ಹೇಗೆ ರಾಗಿಯನ್ನು ಸೇವಿಸಬಹುದು? ಬೆಳಿಗ್ಗೆ ಉಪಾಹಾರದಲ್ಲಿ ಮೊಳಕೆಯೊಡೆದ ರಾಗಿಯನ್ನು ತಿನ್ನಬಹುದು. ರಾಗಿ ಅಂಬಲಿಯನ್ನು ತಯಾರಿಸಿ ಸಹ ಕುಡಿಯಬಹುದು. ರಾಗಿ ಇಡ್ಲಿ ಮತ್ತು ದೋಸೆಯನ್ನು ತಯಾರಿಸಬಹುದು. ಕಿಡ್ನಿ ಸ್ಟೋನ್ ಅಥವಾ ಮೂತ್ರಪಿಂಡ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವವರು ರಾಗಿ ತಿನ್ನಬಾರದು. ಥೈರಾಯ್ಡ್ ರೋಗಿಗಳು ಸಹ ರಾಗಿ ತಿನ್ನಬಾರದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Ragi Ambali: ರಾಗಿ ಅಂಬಲಿ ತಯಾರಿಸುವ ವಿಧಾನದ ಜತೆ ಇದನ್ನು ಕುಡಿಯುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ

Health Benefits: ದೇಹದಿಂದ ಹೊರ ಬರುವ ಬೆವರು ಆರೋಗ್ಯಕರ ಲಕ್ಷಣವನ್ನು ಹೊಂದಿದೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ