AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stevia Benefits: ಸ್ಟೀವಿಯಾ ವಿಶೇಷತೆ ಏನು? ಈ ಎಲೆಗಳ ಆರೋಗ್ಯಯುತ ಪ್ರಯೋಜನಗಳು ಯಾವುವು?

ಸ್ಟೀವಿಯಾ ಎಲೆಗಳು ಉತ್ಕರ್ಷಣ ನಿರೋಧಕ ಅಂಶಗಳನ್ನು ಹೊಂದಿರುತ್ತವೆ. ಇದರಲ್ಲಿ ಕಬ್ಬಿಣ, ಪ್ರೋಟೀನ್, ಫೈಬರ್, ಪೊಟ್ಯಾಶಿಯಂ, ಮೆಗ್ನೀಶಿಯಂ, ಸೋಡಿಯಂ, ವಿಟಮಿನ್ ಎ, ಸಿ ಮುಂತಾದ ಪೋಷಕಾಂಶಗಳು ಹೇರಳವಾಗಿವೆ.

Stevia Benefits: ಸ್ಟೀವಿಯಾ ವಿಶೇಷತೆ ಏನು? ಈ ಎಲೆಗಳ ಆರೋಗ್ಯಯುತ ಪ್ರಯೋಜನಗಳು ಯಾವುವು?
ಸ್ಟೀವಿಯಾ ಎಲೆ
TV9 Web
| Updated By: preethi shettigar|

Updated on: Sep 18, 2021 | 7:43 AM

Share

ಸ್ಟೀವಿಯಾ ಒಂದು ಗಿಡಮೂಲಿಕೆ. ಇದು ಸಕ್ಕರೆಯಂತೆ ಸಿಹಿಯಾಗಿರುತ್ತದೆ. ಇದನ್ನು ಸಿಹಿ ತುಳಸಿ ಎಂದೂ ಕರೆಯುತ್ತಾರೆ. ಇದರ ಎಲೆಗಳು ತುಳಸಿ ಎಲೆಗಳಂತೆ ಕಾಣುತ್ತವೆ. ಮನೆಯಲ್ಲಿ ಸುಲಭವಾಗಿ ಸ್ಟೀವಿಯಾ (Stevia) ಬೆಳೆಯಬಹುದು. ಮಧುಮೇಹ ರೋಗಿಗಳಿಗೆ ಈ ಮೂಲಿಕೆ ತುಂಬಾ ಪ್ರಯೋಜನಕಾರಿ. ಇದು ಅತ್ಯಲ್ಪ ಕ್ಯಾಲೊರಿಗಳನ್ನು ಹೊಂದಿದೆ. ಸಕ್ಕರೆಯ ಬದಲು ಸ್ಟೀವಿಯಾವನ್ನು ಬಳಸಬಹುದು. ಚಹಾ ಅಥವಾ ಕಾಫಿ, ನಿಂಬೆ ಪಾನಕಗಳಿಗೆ ಸ್ಟೀವಿಯಾ ಸೇರಿಸಬಹುದು ಅಥವಾ ಮೊಸರಿಗೆ ಕೂಡ ಸೇರಿಸಬಹುದು.

ಚಹಾ ಮತ್ತು ಕಾಫಿಯನ್ನು ಸಿಹಿಗೊಳಿಸಲು ಸ್ಟೀವಿಯಾದ ಎಲೆಗಳನ್ನು ಬಳಸಲಾಗುತ್ತದೆ. ಸ್ಟೀವಿಯಾ ಎಲೆಗಳು ಉತ್ಕರ್ಷಣ ನಿರೋಧಕ ಅಂಶಗಳನ್ನು ಹೊಂದಿರುತ್ತವೆ. ಇದರಲ್ಲಿ ಕಬ್ಬಿಣ, ಪ್ರೋಟೀನ್, ಫೈಬರ್, ಪೊಟ್ಯಾಶಿಯಂ, ಮೆಗ್ನೀಶಿಯಂ, ಸೋಡಿಯಂ, ವಿಟಮಿನ್ ಎ, ಸಿ ಮುಂತಾದ ಪೋಷಕಾಂಶಗಳು ಹೇರಳವಾಗಿವೆ. ಈ ಎಲ್ಲಾ ಪೋಷಕಾಂಶಗಳು ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ. ಇದು ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

ಸ್ಟೀವಿಯಾ ಎಲೆಯ ಪ್ರಯೋಜನಗಳು:

ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ ಸ್ಟೀವಿಯಾದಲ್ಲಿ ಹೆಚ್ಚಿನ ಕ್ಯಾಲೋರಿ ಇಲ್ಲ. ಅಧ್ಯಯನದ ಪ್ರಕಾರ, ಸ್ಟೀವಿಯಾ ಸೇವನೆಯು ಇನ್ಸುಲಿನ್ ಪ್ರಮಾಣದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಆದ್ದರಿಂದ, ಮಧುಮೇಹ ರೋಗಿಗಳು ಈ ಸಸ್ಯದ ಎಲೆಗಳನ್ನು ಅನೇಕ ವಿಧದ ಭಕ್ಷ್ಯಗಳಲ್ಲಿ ಬಳಸಬಹುದು. ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಸ್ಟೀವಿಯಾ ಸಹಾಯ ಮಾಡುತ್ತದೆ.

ಕ್ಯಾನ್ಸರ್ ತಡೆಗಟ್ಟುವಿಕೆ ಈ ಸಸ್ಯವು ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ಇದು ಪ್ರಬಲವಾದ ಕ್ಯಾನ್ಸರ್ ವಿರೋಧಿ ಆಹಾರವಾಗಿದೆ. ಸ್ಟೀವಿಯಾದಲ್ಲಿ ಕೆಂಪ್ಫೆರಾಲ್ ಎಂಬ ಉತ್ಕರ್ಷಣ ನಿರೋಧಕ ಅಂಶವಿದೆ. ಇವು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ತಡೆಗಟ್ಟುವಲ್ಲಿ ಸ್ಟೋವಿಯಾ ವಿಶೇಷವಾಗಿ ಉಪಯುಕ್ತವಾಗಿದೆ.

ತೂಕ ಇಳಕೆಗೆ ಸಹಕಾರಿ ಸಿಹಿಯಾಗಿದ್ದರೂ, ಸ್ಟೀವಿಯಾದಲ್ಲಿ ಕ್ಯಾಲೋರಿಗಳು ತುಂಬಾ ಕಡಿಮೆ. ತೂಕ ಹೆಚ್ಚಿಸುವ ಬಗ್ಗೆ ಚಿಂತಿಸದೆ ನೀವು ಅದನ್ನು ನಿಮ್ಮ ಸಿಹಿಭಕ್ಷ್ಯಗಳು ಮತ್ತು ಕುಕೀಗಳಿಗೆ ಸೇರಿಸಬಹುದು. ಇದು ಸಿಹಿತಿಂಡಿಗಳ ಹಂಬಲವನ್ನು ಪೂರೈಸಲು ಕೆಲಸ ಮಾಡುತ್ತದೆ. ನೀವು ಇದನ್ನು ಮಕ್ಕಳ ಆಹಾರದಲ್ಲಿ ಸೇರಿಸಿಕೊಳ್ಳಬಹುದು.  ತೂಕ ಇಳಿಸಿಕೊಳ್ಳಲು ಬಯಸಿದರೆ, ಸಕ್ಕರೆಗೆ ಬದಲಾಗಿ ಸ್ಟೀವಿಯಾ ಬಳಸಬಹುದು.

ರಕ್ತದೊತ್ತಡ ಮಟ್ಟವನ್ನು ಕಡಿಮೆ ಮಾಡಬಹುದು ಸ್ಟೀವಿಯಾ ಗ್ಲೈಕೋಸೈಡ್‌ಗಳನ್ನು ಹೊಂದಿದ್ದು, ಇದು ದೇಹದಿಂದ ಹೆಚ್ಚುವರಿ ಸೋಡಿಯಂ ಅನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ. ಇದು ಹೃದಯಾಘಾತ ಮತ್ತು ಪಾರ್ಶ್ವವಾಯುವಿನಂತಹ ಹೃದಯ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Medicinal Plants: ಇನ್ಸುಲಿನ್ ಗಿಡದ ಆರೋಗ್ಯಯುತ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ತಿಳಿದಿದೆ ?

Mosambi Juice Benefits: ಮೂಸಂಬಿ ಜ್ಯೂಸ್​ ಆರೋಗ್ಯಕ್ಕೆ ಉತ್ತಮ; ವಾರಕ್ಕೆ ಎರಡು ಬಾರಿಯಾದರೂ ಮೂಸಂಬಿ ಜ್ಯೂಸ್​ ಸವಿಯಿರಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ