Walking After Dinner: ರಾತ್ರಿ ಊಟದ ನಂತರ ವಾಕಿಂಗ್ ಮಾಡುವ ಅಭ್ಯಾಸ ಇರುವವರು ಈ ಬಗ್ಗೆ ಗಮನಹರಿಸಿ

Health Tips: ಎಲ್ಲಾ ಕಾರ್ಯಗಳಿಗೂ ಒಂದು ಸಮಯ ಎಂದು ನಿಗದಿಯಾಗಿರುತ್ತದೆ. ಅದರಂತೆ ನಡೆದುಕೊಳ್ಳುವುದು ಬಹಳ ಮುಖ್ಯ. ಇಲ್ಲವಾದಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲಬೇಕಾಗುತ್ತದೆ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮುಖ್ಯ.

Walking After Dinner: ರಾತ್ರಿ ಊಟದ ನಂತರ ವಾಕಿಂಗ್ ಮಾಡುವ ಅಭ್ಯಾಸ ಇರುವವರು ಈ ಬಗ್ಗೆ ಗಮನಹರಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Aug 18, 2021 | 8:12 AM

ಹೆಚ್ಚಿನ ಜನರು ಸದಾ ಕಾಲ ಒಂದಿಲ್ಲಾ ಒಂದು ಕೆಲಸದಲ್ಲಿ ನಿರತರಾಗಿರಲು ಇಷ್ಟಪಡುತ್ತಾರೆ. ಅದಕ್ಕಾಗಿ ವ್ಯಾಯಾಮ, ಯೋಗ ಮತ್ತು ಇನ್ನಿತ ಅಭ್ಯಾಸವನ್ನು ಮೈಗೂಡಿಸಿಕೊಂಡಿರುತ್ತಾರೆ. ಆದರೆ ಎಲ್ಲಾ ಕಾರ್ಯಗಳಿಗೂ ಒಂದು ಸಮಯ ಎಂದು ನಿಗದಿಯಾಗಿರುತ್ತದೆ. ಅದರಂತೆ ನಡೆದುಕೊಳ್ಳುವುದು ಬಹಳ ಮುಖ್ಯ. ಇಲ್ಲವಾದಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲಬೇಕಾಗುತ್ತದೆ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮುಖ್ಯ. ನಾವು ಊಟ ಮಾಡಿದ ನಂತರ ವಾಕಿಂಗ್ ಮಾಡುವುದು ಉತ್ತಮ ಎಂದು ಹಲವರು ಹೇಳುತ್ತಾರೆ. ಇನ್ನೂ ಕೆಲವರು ರಾತ್ರಿ ಊಟ ಮಾಡಿದ ತಕ್ಷಣ ವಾಕಿಂಗ್ ಸೂಕ್ತವಲ್ಲ ಎನ್ನುತ್ತಾರೆ. ಇಂತಹ ಗೊಂದಲದಲ್ಲಿರುವವರಿಗೆ ಇಲ್ಲಿದೆ ಉತ್ತರ.

ರಾತ್ರಿ ಊಟ ಮಾಡಿದ ನಂತರ ವಾಕಿಂಗ್ ಮಾಡುವುದು ಉತ್ತಮ. ಇದರಿಂದ ಅನೇಕ ಪ್ರಯೋಜನಗಳಿವೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ರಾತ್ರಿ ಊಟ ಮಾಡಿದ ನಂತರದ ನಡಿಗೆ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ಇದು ಹೊಟ್ಟೆ ಉಬ್ಬುವುದನ್ನು ಕಡಿಮೆ ಮಾಡುತ್ತದೆ. ಮಲಬದ್ಧತೆಯ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.

ಚಯಾಪಚಯವನ್ನು ಹೆಚ್ಚಿಸುತ್ತದೆ ಚಯಾಪಚಯವನ್ನು ಹೆಚ್ಚಿಸಲು ಬಯಸಿದರೆ ಊಟ ಮಾಡಿದ ನಂತರ ನಾಲ್ಕು ಹೆಜ್ಜೆ ವಾಕಿಂಗ್ ಮಾಡುವ ಅಭ್ಯಾಸ ಮಾಡಿಕೊಳ್ಳಿ. ಹೀಗೆ ಮಾಡುವುದರಿಂದ ದೇಹದಲ್ಲಿ ಅದರಲ್ಲೂ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡುವುದು ಸುಲಭವಾಗುತ್ತದೆ. ದೇಹದ ತೂಕ ಕಡಿಮೆ ಮಾಡಿಕೊಳ್ಳಲು ನಡಿಗೆ ಸಹಾಯ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಊಟದ ನಂತರದ ನಡಿಗೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಏಕೆಂದರೆ ಇದು ನಿಮ್ಮ ದೇಹದಿಂದ ವಿಷವನ್ನು ಹೊರಹಾಕುತ್ತದೆ. ಇದು ಆಂತರಿಕ ಅಂಗಗಳಿಗೆ ಚೆನ್ನಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ಬಲವಾದ ರೋಗನಿರೋಧಕತೆಯು ನಿಮ್ಮನ್ನು ಜ್ವರ, ಶೀತ ಮತ್ತು ಇತರ ಹಲವು ರೋಗಗಳಿಂದ ರಕ್ಷಿಸುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ ಆಹಾರ ಸೇವಿಸಿದ ನಂತರ ರಕ್ತದಲ್ಲಿನ ಸಕ್ಕರೆ ಮಟ್ಟವು ಏರಿಕೆಯಾಗಲು ಆರಂಭವಾಗುತ್ತದೆ. ಆದಾಗ್ಯೂ ನೀವು ಊಟದ ನಂತರ ವಾಕ್ ಮಾಡಲು ಹೋದರೆ ಅದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ. ಆ ಮೂಲಕ ಹೈಪರ್ಗ್ಲೈಸೀಮಿಯಾ ಅಪಾಯವನ್ನು ನಿವಾರಿಸುತ್ತದೆ.

ಖಿನ್ನತೆಯನ್ನು ಕಡಿಮೆ ಮಾಡುತ್ತದೆ ನಡಿಗೆಯು ದೇಹದಲ್ಲಿ ಎಂಡಾರ್ಫಿನ್‌ಗಳನ್ನು ಬಿಡುಗಡೆ ಮಾಡುವ ಮೂಲಕ ಒತ್ತಡವನ್ನು ಕಡಿಮೆಗೊಳಿಸಬಹುದು. ಇದಕ್ಕಾಗಿ ವಾಕಿಂಗ್ ಮಾಡುವುದು ಉತ್ತಮ. ಮನಸ್ಥಿತಿಯನ್ನು ಸುಧಾರಿಸಲು ಇದು ಸಹಾಯ ಮಾಡುತ್ತದೆ.

ಇದನ್ನೂ ಓದಿ: Guava Leaves Benefits: ಪೇರಲೆ ಎಲೆಯ ನೀರಿನಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ

Types of Walking: ವಾಕಿಂಗ್​ನಲ್ಲಿ ಹಲವು ವಿಧಗಳಿವೆ; ನಿಮ್ಮ ಆರೋಗ್ಯಕ್ಕೆ ಯಾವ ನಡಿಗೆ ಸೂಕ್ತ ತಿಳಿಯಿರಿ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ