Health Tips: ವಾರಕ್ಕೆ ಮೂರಕ್ಕಿಂತ ಹೆಚ್ಚು ಬಾರಿ ಚಿಕನ್​ ಸೇವಿಸುವ ಅಭ್ಯಾಸ ಇದೆಯೇ? ಅಡ್ಡಪರಿಣಾಮಗಳ ಬಗ್ಗೆ ಎಚ್ಚರ ವಹಿಸಿ

ಚಿಕನ್ ಬಿರಿಯಾನಿ, ಚಿಕನ್ ಟಿಕ್ಕಾ, ಸುಕ್ಕ, ಕಬಾಬ್​ ಹೀಗೆ ವಿವಿಧ ಶೈಲಿಯಲ್ಲಿ ಚಿಕನ್ ಅನ್ನು ಸವಿಯಬಹುದು. ಆದರೆ ಚಿಕನ್​ ಅತಿಯಾಗಿ ತಿನ್ನುವುದರಿಂದ ಅನೇಕ ಅಡ್ಡಪರಿಣಾಮಗಳನ್ನು ನಾವು ಎದುರಿಸಬೇಕಾಗುತ್ತದೆ.

Health Tips: ವಾರಕ್ಕೆ ಮೂರಕ್ಕಿಂತ ಹೆಚ್ಚು ಬಾರಿ ಚಿಕನ್​ ಸೇವಿಸುವ ಅಭ್ಯಾಸ ಇದೆಯೇ? ಅಡ್ಡಪರಿಣಾಮಗಳ ಬಗ್ಗೆ ಎಚ್ಚರ ವಹಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jul 29, 2021 | 7:15 AM

ನಾನ್​ ವೆಜ್​ ಪ್ರಿಯರು ಹೆಚ್ಚು ಇಷ್ಟಪಡುವುದು ಚಿಕನ್​ ಅಥವಾ ಕೋಳಿ ಊಟ. ಭೋಜನದ ಜತೆಗೆ ಒಂದು ತುಂಡು ಚಿಕನ್​ (Chicken) ಇಲ್ಲ ಎಂದರೆ ಹಲವರಿಗೆ ಅವತ್ತಿನ ಊಟ ಸಮಾಧಾನವೇ ತರುವುದಿಲ್ಲ. ಅಷ್ಟರಮಟ್ಟಿಗೆ ಚಿಕನ್​ ಊಟವನ್ನು ಇಷ್ಟಪಡುತ್ತಾರೆ. ಅಲ್ಲದೇ ರುಚಿಯಷ್ಟೇ ಪ್ರೋಟೀನ್ ಹೊಂದಿರುವುದರಿಂದ ಹೆಚ್ಚಿನವರು ಇದನ್ನು ಇಷ್ಟಪಟ್ಟು ತಿನ್ನುತ್ತಾರೆ. ಚಿಕನ್ ಬಿರಿಯಾನಿ, ಚಿಕನ್ ಟಿಕ್ಕಾ, ಸುಕ್ಕ, ಕಬಾಬ್​ ಹೀಗೆ ವಿವಿಧ ಶೈಲಿಯಲ್ಲಿ ಚಿಕನ್ ಅನ್ನು ಸವಿಯಬಹುದು. ಆದರೆ ಚಿಕನ್​ ಅತಿಯಾಗಿ ತಿನ್ನುವುದರಿಂದ ಅನೇಕ ಅಡ್ಡಪರಿಣಾಮಗಳನ್ನು( side Eeffects) ನಾವು ಎದುರಿಸಬೇಕಾಗುತ್ತದೆ. ಚಿಕನ್​ ತಿಂದರೆ ಏನು ಆಗಲ್ಲ ಎನ್ನುವವರು ಈ ವರದಿಯನ್ನೊಮ್ಮೆ ಓದಿ.

ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳ ಹೆಚ್ಚಳ ಅಮೇರಿಕನ್ ಜರ್ನಲ್ ಆಫ್ ಕ್ಲಿನಿಕಲ್ ನ್ಯೂಟ್ರಿಷನ್‌ನಲ್ಲಿ ಪ್ರಕಟವಾದ ವಿವರಗಳ ಪ್ರಕಾರ, ಚಿಕನ್ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಳಕ್ಕೆ ಕಾರಣವಾಗುತ್ತದೆ. ಅತಿಯಾಗಿ ಚಿಕನ್ ಸೇವಿಸುವುದರಿಂದ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಉಂಟಾಗುತ್ತದೆ.

ಬ್ಯಾಕ್ಟೀರಿಯಾದ ಹೆಚ್ಚಳ ಕೋಳಿಯಲ್ಲಿ ಹೆಚ್ಚಿನ ಪ್ರಮಾಣದ ಬ್ಯಾಕ್ಟೀರಿಯಾ ಇದ್ದು, ಅದು ಆರೋಗ್ಯಕ್ಕೆ ಹಾನಿಕಾರಕ ಎಂದು ತಜ್ಞರು ತಿಳಿಸಿದ್ದಾರೆ. ವಿಶೇಷವಾಗಿ ಕೋಳಿ ಎದೆಯಲ್ಲಿ ಹೆಚ್ಚು ಬ್ಯಾಕ್ಟೀರಿಯಾ ಇರುತ್ತದೆ. 2014 ರಲ್ಲಿ, ವಿಜ್ಞಾನಿಗಳು ಯುನೈಟೆಡ್ ಸ್ಟೇಟ್ಸ್​ನಲ್ಲಿ 300 ಕ್ಕೂ ಹೆಚ್ಚು ಕೋಳಿ ಎದೆಗಳನ್ನು ಪರೀಕ್ಷಿಸಿದ್ದು, ಹೆಚ್ಚಿನ ಕೋಳಿಗಳಲ್ಲಿ ಬ್ಯಾಕ್ಟೀರಿಯಾ ಇರುವುದು ಕಂಡುಬಂದಿದೆ.

ತೂಕ ಹೆಚ್ಚಳ ಲಂಡನ್‌ನ ಲಿಂಡಾ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದ ಪ್ರಕಾರ, ನಿಯಮಿತ ಮಟ್ಟಕ್ಕಿಂತ ಮೀರಿ ಕೋಳಿ ಸೇವಿಸುವುದರಿಂದ ತೂಕ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಸಸ್ಯಾಹಾರಿಗಳಿಗೆ ಹೋಲಿಸಿದರೆ, ಚಿಕನ್ ತಿನ್ನುವವರಲ್ಲಿ ಹೆಚ್ಚಿನ ಕೊಬ್ಬಿನಾಂಶ ಇರುತ್ತದೆ. ಆದಾಗ್ಯೂ, ಕಡಿಮೆ ಪ್ರಮಾಣದಲ್ಲಿ ಚಿಕನ್ ಸೇವಿಸುವುದರಿಂದ ದೇಹಕ್ಕೆ ಅಗತ್ಯವಾದ ಪ್ರೋಟೀನ್ ಸಿಗುತ್ತದೆ ಎಂದು ತಜ್ಞರು ಹೇಳುತ್ತಾರೆ, ಆದರೆ ಹೆಚ್ಚು ಸೇವಿಸುವುದು ಅಪಾಯಕಾರಿ.

ದೇಹಕ್ಕೆ ಹಾನಿಕಾರಕ ಚಿಕನ್‌ನಲ್ಲಿರುವ ಇ ಕೋಲಿ ಬ್ಯಾಕ್ಟೀರಿಯಾ ಆರೋಗ್ಯಕ್ಕೆ ಹಾನಿಕಾರಕ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಮೆರಿಕನ್ ಸೊಸೈಟಿ ಫಾರ್ ಮೈಕ್ರೋಬಯಾಲಜಿ ನಡೆಸಿದ ಅಧ್ಯಯನದಲ್ಲಿ ಇದು ಬಹಿರಂಗವಾಗಿದೆ. ಸರಿಸುಮಾರು 2500 ಕೋಳಿ ಮಾದರಿಗಳನ್ನು ಪರೀಕ್ಷಿಸಲಾಯಿತು ಮತ್ತು ಅವುಗಳಲ್ಲಿ ಸುಮಾರು 72 ಪ್ರತಿಶತದಷ್ಟು ಇ ಕೋಲಿ ಇರುವುದು ಕಂಡುಬಂದಿದೆ. ಸಾಮಾನ್ಯವಾಗಿ ಈ ಬ್ಯಾಕ್ಟೀರಿಯಾಗಳು ನೀರಿನಲ್ಲಿ ಹೆಚ್ಚು ಕಂಡುಬರುತ್ತದೆ.

ಪುರುಷರ ಬಂಜೆತನ ಕೋಳಿಯಲ್ಲಿ ನಾಟಿ, ಫಾರಮ್​, ಬಾಯ್ಲರ್​ ಎಂಬ ವಿಧಗಳಿವೆ. ಬಾಯ್ಲರ್​ ಕೋಳಿಯನ್ನು ಅತಿಯಾಗಿ ತಿನ್ನುವುದರಿಂದ ಪುರುಷರಲ್ಲಿ ಬಂಜೆತನ ಪ್ರಮಾಣ ಹೆಚ್ಚಾಗುತ್ತದೆ. ಈ ಕೋಳಿಯಲ್ಲಿನ ರಾಸಾಯನಿಕ ಅಂಶ ಪುರುಷರ ವೀರ್ಯಾಣು ಸಂಖ್ಯೆಯನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Kadamba Tree: ಕದಂಬ ಮರದ ವಿಶೇಷತೆ ಮತ್ತು ಆರೋಗ್ಯಕರ ಗುಣಗಳ ಬಗ್ಗೆ ತಿಳಿಯಲು, ಒಂದು ಗಿಡ ನೆಟ್ಟು ನೋಡಿ

Health Tips: ನೀರು ಕುಡಿಯುವುದು ಒಳ್ಳೆಯ ಅಭ್ಯಾಸ, ಆದರೆ ಅತಿಯಾದ ನಿರ್ಜಲೀಕರಣ ಆರೋಗ್ಯಕ್ಕೆ ಹಾನಿಕಾರಕ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ