AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಊಟ ಮಾಡಿದ ಬಳಿಕ ಸ್ನಾನ ಮಾಡುವ ಅಭ್ಯಾಸ ಇದೆಯೇ? ಹಾಗಿದ್ದರೆ ಅದರಿಂದ ಉಂಟಾಗುವ ಸಮಸ್ಯೆ ಬಗ್ಗೆ ಗಮನಿಸಿ

ರಾತ್ರಿ ಊಟ ಮಾಡಿದ ಕೂಡಲೇ ಸ್ನಾನ ಮಾಡುವುದರಿಂದ ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಇದಲ್ಲದೆ, ಹೊಟ್ಟೆ ನೋವು ಮತ್ತು ಸೆಳೆತದಂತಹ ಸಮಸ್ಯೆಗಳ ಸಾಧ್ಯತೆಯಿದೆ.

ರಾತ್ರಿ ಊಟ ಮಾಡಿದ ಬಳಿಕ ಸ್ನಾನ ಮಾಡುವ ಅಭ್ಯಾಸ ಇದೆಯೇ? ಹಾಗಿದ್ದರೆ ಅದರಿಂದ ಉಂಟಾಗುವ ಸಮಸ್ಯೆ ಬಗ್ಗೆ ಗಮನಿಸಿ
ಪ್ರಾತಿನಿಧಿಕ ಚಿತ್ರ
preethi shettigar
| Edited By: |

Updated on: Jun 22, 2021 | 8:13 AM

Share

ಕೆಲಸದ ಒತ್ತಡ, ಆರ್ಥಿಕ ಹೊರೆ, ಇನ್ನಿತರ ಸಮಸ್ಯೆಗಳಿಂದ ಪ್ರತಿದಿನ ಹಲವರು ಮಿಷನ್​ನಂತೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಹೆಚ್ಚು ಸೂಕ್ತವಾಗಿದೆ. ಕಾರಣ ಮನಸ್ಸು ಮತ್ತು ದೇಹದ ಸಮತೋಲವನ್ನು ಕಾಯ್ದುಕೊಳ್ಳಲು ಯಾವಾಗಲೂ ಪೌಷ್ಠಿಕ ಆಹಾರವನ್ನು ತೆಗೆದುಕೊಳ್ಳಬೇಕು. ವೈದ್ಯರು ಕೂಡ ಇದನ್ನೇ ಹೇಳುತ್ತಾರೆ. ಆದರೆ ಆಹಾರ ಸೇವಿಸುವ ಸಮಯದ ಬಗ್ಗೆ ಹಲವರಲ್ಲಿ ಗೊಂದಲಗಳಿದೆ. ಅದರಲ್ಲೂ ರಾತ್ರಿ ಊಟ ಮಾಡುವಾಗ ವಿಶೇಷ ಕಾಳಜಿ ಅಗತ್ಯ. ಕೆಲವರು ಸ್ನಾನ ಮಾಡಿ ಊಟ ಮಾಡುತ್ತಾರೆ. ಮತ್ತೆ ಕೆಲವರಿಗೆ ಊಟ ಮಾಡಿದ ಕೂಡಲೆ ಮಲಗುವ ಅಭ್ಯಾಸವಿದೆ. ಹೀಗೆ ಮಾಡುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂದು ತಜ್ಞರು ಸೂಚಿಸುತ್ತಾರೆ. ಹಾಗಿದ್ದರೆ ಯಾವೆಲ್ಲಾ ಸಮಸ್ಯೆಗಳು ಎದುರಾಗುತ್ತದೆ ಎಂಬ ಪ್ರಶ್ನೆ ನಿಮ್ಮಲ್ಲಿದ್ದರೆ ಅದಕ್ಕೆ ಉತ್ತರ ಹೀಗಿದೆ.

ರಾತ್ರಿ ಊಟ ಮಾಡಿದ ಕೂಡಲೇ ಸ್ನಾನ ಮಾಡುವುದರಿಂದ ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಇದಲ್ಲದೆ, ಹೊಟ್ಟೆ ನೋವು ಮತ್ತು ಸೆಳೆತದಂತಹ ಸಮಸ್ಯೆಗಳ ಸಾಧ್ಯತೆಯಿದೆ.

ಊಟ ಮಾಡಿದ ನಂತರ ಸ್ನಾನ ಮಾಡುವುದು ಒಳ್ಳೆಯದೋ? ಅಥವಾ ಕೆಟ್ಟದ್ದೋ? ರಾತ್ರಿ ಊಟ ಮಾಡಿದ ನಂತರ ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದರಿಂದ ದೇಹದ ಉಷ್ಣತೆ ಹೆಚ್ಚಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಇದರ ಪರಿಣಾಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ಉಂಟಾಗುತ್ತದೆ. ಇದರಿಂದಾಗಿ ವಾಂತಿ, ಹುಣ್ಣು, ಆಮ್ಲೀಯತೆ ಮತ್ತು ಇತರ ಆರೋಗ್ಯ ಸಮಸ್ಯೆಗಳು ಸೃಷ್ಟಿಯಾಗುವ ಸಾಧ್ಯತೆ ಇದೆ. ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದರಿಂದ ನಾಡಿ ದರವೂ ಹೆಚ್ಚಾಗುತ್ತದೆ. ಇದು ಮೂಳೆ ಸೆಳೆತ ಮತ್ತು ನೋವಿನಂತಹ ಸಮಸ್ಯೆಗಳಿಗೆ ಕಾರಣವಾಗಬಹುದು.

ಊಟದ ನಂತರ ತಣ್ಣಗಿನ ನೀರಿನಲ್ಲಿ ಸ್ನಾನ ಮಾಡಬಹುದೇ? ಆಹಾರ ಸೇವಿಸಿದ ನಂತರ ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವ ಬದಲು ನೀವು ತಣ್ಣಗಿನ ನೀರಿನಿಂದ ಸ್ನಾನ ಮಾಡಬಹುದು ಎಂದು ತಜ್ಞರು ಹೇಳಿದ್ದಾರೆ. ತಣ್ಣಗಿನ ನೀರಿನಲ್ಲಿ ಸ್ನಾನ ಮಾಡುವುದರಿಂದ ದೇಹದ ಉಷ್ಣಾಂಶದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಮತ್ತು ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಸಾಮಾನ್ಯವಾಗಿರುತ್ತದೆ. ಸೇವಿಸುವ ಆಹಾರದಲ್ಲಿನ ಕೆಟ್ಟ ಕೊಬ್ಬನ್ನು ಕರಗಿಸಲು ಸಹ ಇದು ಸಹಾಯ ಮಾಡುತ್ತದೆ. ಆದಾಗ್ಯೂ, ಊಟ ಮಾಡಿ ಸುಮಾರು 20 ನಿಮಿಷಗಳ ನಂತರ ಸ್ನಾನ ಮಾಡುವುದು ಉತ್ತಮ ಎಂದು ವೈದ್ಯರು ತಿಳಿಸಿದ್ದಾರೆ. ರಾತ್ರಿ ಊಟದ ನಂತರ ನೀವು 30 ನಿಮಿಷಗಳ ಕಾಲ ಬೇರೆ ಕೆಲಸದಲ್ಲಿ ನಿರತರಾಗಬಹುದು, ಬ್ರಷ್ ಮಾಡಬಹುದು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:

Health Tips: ಮನೆಯಲ್ಲೇ ಇದೆ ಮದ್ದು; ಬೆನ್ನು ನೋವಿನ ಉಪಶಮನಕ್ಕಾಗಿ ಸರಳ ವಿಧಾನ

Mouth Ulcers: ಬಾಯಿ ಹುಣ್ಣಿನಿಂದ ಬಳಲುತ್ತಿದ್ದೀರಾ? ಈ ಸರಳ ವಿಧಾನವನ್ನು ಅನುಸರಿಸಿ ನೋವಿನಿಂದ ಮುಕ್ತಿ ಪಡೆಯಿರಿ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ