ಚಹಾ ಮತ್ತು ಬಿಸ್ಕತ್ತು ಒಟ್ಟಿಗೆ ಸೇವಿಸುತ್ತಿದ್ದೀರಾ? ಅಡ್ಡಪರಿಣಾಮಗಳ ಬಗ್ಗೆ ಇಲ್ಲಿದೆ ಮಾಹಿತಿ

ಸಾಮಾನ್ಯವಾಗಿ ಎಲ್ಲಾ ಬಿಸ್ಕತ್ತುಗಳು ಹೈಡ್ರೋಜನೀಕರಿಸಿದ ಕೊಬ್ಬನ್ನು ಹೊಂದಿರುತ್ತವೆ. ಚಹಾದಲ್ಲಿನ ಸಂಯೋಜನೆಯಿಂದಾಗಿ ಬಿಸ್ಕತ್ತುಗಳನ್ನು ಸಾಮಾನ್ಯವಾಗಿ ತಿಳಿಯದೆ ತಿನ್ನಲಾಗುತ್ತದೆ. ದೀರ್ಘಕಾಲದವರೆಗೆ ಬಿಸ್ಕತ್ತುಗಳನ್ನು ಸೇವಿಸುವುದರಿಂದ ತೂಕ ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ.

ಚಹಾ ಮತ್ತು ಬಿಸ್ಕತ್ತು ಒಟ್ಟಿಗೆ ಸೇವಿಸುತ್ತಿದ್ದೀರಾ? ಅಡ್ಡಪರಿಣಾಮಗಳ ಬಗ್ಗೆ ಇಲ್ಲಿದೆ ಮಾಹಿತಿ
ಚಹಾ ಮತ್ತು ಬಿಸ್ಕತ್ತು
Follow us
TV9 Web
| Updated By: preethi shettigar

Updated on: Mar 30, 2022 | 7:57 AM

ಟೀ ಮತ್ತು ಬಿಸ್ಕೆಟ್ ಎರಡರ ಕಾಂಬಿನೇಷನ್ ಎಂದರೆ ಹೆಚ್ಚಿನವರು ಇಷ್ಟಪಡುತ್ತಾರೆ. ಬೆಳಿಗ್ಗೆ ಮತ್ತು ಸಂಜೆ, ಬಿಸ್ಕತ್ತುಗಳನ್ನು ಚಹಾದಲ್ಲಿ(Tea) ಮುಳುಗಿಸಿ ತಿನ್ನಲಾಗುತ್ತದೆ. ನಮ್ಮಲ್ಲಿ ಹೆಚ್ಚಿನವರಿಗೆ ಈ ಅಭ್ಯಾಸವಿದೆ. ಆದರೆ, ಈ ಅಭ್ಯಾಸವನ್ನು ಅತಿಯಾಗಿ ಮಾಡುವುದು ಒಳ್ಳೆಯದಲ್ಲ, ಇದು ಯಾವುದೇ ಅನಾಹುತಕ್ಕೆ ಕಾರಣವಾಗಬಹುದು ಎಂದು ತಜ್ಞರು ಹೇಳುತ್ತಾರೆ. ಟೀ ಮತ್ತು ಬಿಸ್ಕತ್ತುಗಳನ್ನು(biscuits) ದೀರ್ಘಕಾಲ ಒಟ್ಟಿಗೆ ಸೇವಿಸಿದರೆ ಆರೋಗ್ಯದ ಮೇಲೆ ಹೆಚ್ಚಿನ ಅಡ್ಡಪರಿಣಾಮ (Side effects) ಬೀರುತ್ತದೆ. ಇವುಗಳಿಂದಾಗುವ ಹಾನಿ ಏನು? ಇದು ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬ ವಿವರ ಇಲ್ಲಿದೆ ನೋಡಿ.

ಸಾಮಾನ್ಯವಾಗಿ ಎಲ್ಲಾ ಬಿಸ್ಕತ್ತುಗಳು ಹೈಡ್ರೋಜನೀಕರಿಸಿದ ಕೊಬ್ಬನ್ನು ಹೊಂದಿರುತ್ತವೆ. ಚಹಾದಲ್ಲಿನ ಸಂಯೋಜನೆಯಿಂದಾಗಿ ಬಿಸ್ಕತ್ತುಗಳನ್ನು ಸಾಮಾನ್ಯವಾಗಿ ತಿಳಿಯದೆ ತಿನ್ನಲಾಗುತ್ತದೆ. ದೀರ್ಘಕಾಲದವರೆಗೆ ಬಿಸ್ಕತ್ತುಗಳನ್ನು ಸೇವಿಸುವುದರಿಂದ ತೂಕ ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ. ಚಹಾದೊಂದಿಗೆ ಸಕ್ಕರೆಯ ಬಿಸ್ಕತ್ತುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಅಲ್ಲದೆ ಬಿಸ್ಕತ್ತುಗಳನ್ನು ಹೆಚ್ಚಾಗಿ ಸಂಸ್ಕರಿಸಿದ ಹಿಟ್ಟಿನಿಂದ ತಯಾರಿಸಲಾಗುತ್ತದೆ. ಇವುಗಳಲ್ಲಿ ಫೈಬರ್ ಅಂಶ ಇರುವುದಿಲ್ಲ. ನೀವು ಬಿಸ್ಕತ್ತುಗಳನ್ನು ಅತಿಯಾಗಿ ಸೇವಿಸಿದರೆ ಇದು ಮಲಬದ್ಧತೆಗೆ ಕಾರಣವಾಗಬಹುದು. ಮೈದಾ ಹಿಟ್ಟಿನಿಂದ ತಯಾರಿಸಿದ ಬಿಸ್ಕೆಟ್ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದರ ಜೊತೆಗೆ, ಬಿಸ್ಕತ್ತುಗಳು ಮತ್ತು ಚಹಾದ ಅತಿಯಾದ ಸೇವನೆಯು ಹಲ್ಲಿನ ದಂತಕವಚವನ್ನು ಹಾನಿಗೊಳಿಸುತ್ತದೆ.

ಟೀ ಮತ್ತು ಬಿಸ್ಕೆಟ್ ಅನ್ನು ಒಟ್ಟಿಗೆ ಸೇವಿಸುವುದರಿಂದ ಅಜೀರ್ಣ, ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಳ, ರೋಗನಿರೋಧಕ ಶಕ್ತಿ ಕಡಿಮೆಯಾಗಲು ಕೂಡ ಕಾರಣವಾಗುತ್ತದೆ. ಹೀಗಾಗಿ ಆದಷ್ಟು ಟೀ ಮತ್ತು ಬಿಸ್ಕತ್ತು ಸೇವನೆಯನ್ನು ನಿಯಮಿತವಾಗಿ ಸೇವಿಸುವುದು ಉತ್ತಮ.

ಇದನ್ನೂ ಓದಿ: Cumin for health: ಪ್ರತಿದಿನ ಜೀರಿಗೆ ಸೇವಿಸುವುದರಿಂದಾಗುವ ಆರೋಗ್ಯಕರ ಬದಲಾವಣೆ ಬಗ್ಗೆ ನಿಮಗೆಷ್ಟು ಗೊತ್ತು?

High Cholesterol: ಕೊಲೆಸ್ಟ್ರಾಲ್​ನ್ನು ನಿಯಂತ್ರಿಸಲು ಆಹಾರದಲ್ಲಿ ಯಾವ ಎಣ್ಣೆ ಬಳಸಬೇಕು ಗೊತ್ತಾ..! ಇಲ್ಲಿದೆ ಮಾಹಿತಿ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ