ಒಮೆಗಾ-3 ಸಮೃದ್ಧ ಆಹಾರಗಳು ಯಾವುದು ಗೊತ್ತಾ? ಆರೋಗ್ಯ ಕಾಳಜಿಗಾಗಿ ಇವುಗಳನ್ನು ಸೇವಿಸಿ

ಒಮೆಗಾ -3 ದೈಹಿಕ ಆರೋಗ್ಯಕ್ಕೆ ಪ್ರಯೋಜನಕಾರಿಯಾಗುವುದರಿಂದ ನಿಯಮಿತವಾಗಿ ಸೇವಿಸಿದರೆ ಆರೋಗ್ಯಕ್ಕೆ ಒಳಿತು. ಉರಿಯೂತದ ಸಮಸ್ಯೆಯಿಂದ ಬಳಲುತ್ತಿದ್ದರೆ ನಿಮ್ಮ ಆಹಾರದಲ್ಲಿ ಒಮೆಗಾ-3 ಸೇರಿಸುವುದು ಸೂಕ್ತ.

ಒಮೆಗಾ-3 ಸಮೃದ್ಧ ಆಹಾರಗಳು ಯಾವುದು ಗೊತ್ತಾ? ಆರೋಗ್ಯ ಕಾಳಜಿಗಾಗಿ ಇವುಗಳನ್ನು ಸೇವಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Nov 22, 2021 | 8:20 AM

ಆರೋಗ್ಯಕರ ಆಹಾರ ಸೇವಿಸುವುದು ಮುಖ್ಯ. ಅದರಲ್ಲೂ ಪೋಷಕಾಂಶಗಳನ್ನು ನಮ್ಮ ಆಹಾರ ಪದಾರ್ಥಗಳಲ್ಲಿ ಸೇರಿಸುವುದು ಮುಖ್ಯವಾಗಿದೆ. ಹೀಗಾಗಿ ಒಮೆಗಾ -3 ಸಮೃದ್ಧ ಆಹಾರಗಳನ್ನು ಸೇವಿಸಿ. ಇದು ಮೆದುಳು, ಹೃದಯ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆ ಸೇರಿದಂತೆ ದೇಹದ ಪ್ರಮುಖ ಭಾಗಗಳಿಗೆ ಈ ಪೋಷಕಾಂಶಗಳು ಪ್ರಯೋಜನಕಾರಿ. ಸೆಲ್ಯುಲಾರ್ ಮಟ್ಟದಲ್ಲಿ ಒಮೆಗಾ -3 (Omega-3) ದೈಹಿಕ ಆರೋಗ್ಯಕ್ಕೆ ಪ್ರಯೋಜನಕಾರಿಯಾಗುವುದರಿಂದ ನಿಯಮಿತವಾಗಿ ಸೇವಿಸಿದರೆ ಆರೋಗ್ಯಕ್ಕೆ ಒಳಿತು. ಉರಿಯೂತದ ಸಮಸ್ಯೆಯಿಂದ ಬಳಲುತ್ತಿದ್ದರೆ ನಿಮ್ಮ ಆಹಾರದಲ್ಲಿ ಒಮೆಗಾ-3 ಸೇರಿಸುವುದು ಸೂಕ್ತ. ಹೀಗಾಗಿ ಒಮೆಗಾ -3 ಸಮೃದ್ಧ ಆಹಾರ ಪದಾರ್ಥಗಳ ಬಗ್ಗೆ ತಿಳಿಯುವುದು ಸೂಕ್ತ.

ಒಮೆಗಾ-3 ಮೂಲಗಳು: ಚಿಯಾ ಬೀಜಗಳು ಅತ್ಯಂತ ಜನಪ್ರಿಯ ಮತ್ತು ಟ್ರೆಂಡಿ ಬೀಜಗಳಲ್ಲಿ ಒಂದಾದ ಚಿಯಾ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಆದಾಗ್ಯೂ, ಅವುಗಳನ್ನು ತೂಕ ನಷ್ಟ ಮತ್ತು ಹೃದಯದ ಆರೋಗ್ಯಕರ ಪದಾರ್ಥ ಎಂದು ಕರೆಯಲಾಗುತ್ತದೆ. ಚಿಯಾ ಬೀಜಗಳು ಒಮೆಗಾ-3 ಕೊಬ್ಬಿನಾಮ್ಲಗಳ ಉತ್ತಮ ಮೂಲವಾಗಿದೆ. ಇದನ್ನು ನಿಮ್ಮ ಆಹಾರದಲ್ಲಿ ಸುಲಭವಾಗಿ ಸೇರಿಸಬಹುದು. ಚಿಯಾ ಬೀಜಗಳಿಂದ ಉತ್ತಮ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಚಿಯಾ ಬೀಜಗಳನ್ನು ಮಿಲ್ಕ್ ಶೇಕ್​ಗಳಲ್ಲಿ ನಿಯಮಿತ ಪ್ರಮಾಣದಲ್ಲಿ ಸೇರಿಸುವುದರಿಂದ ಒಮೆಗಾ-3 ಅಂಶ ದೇಹಕ್ಕೆ ಸಿಗುತ್ತದೆ

ವಾಲ್​ನಟ್​ ಜನರು ಸಾಮಾನ್ಯವಾಗಿ ವಾಲ್​ನಟ್ಸ್​ ಅನ್ನು ಮನಸ್ಸು ಮತ್ತು ಹೃದಯಕ್ಕೆ ಆರೋಗ್ಯಕರ ಆಹಾರವೆಂದು ತಿಳಿದಿದ್ದಾರೆ. ಇದರ ಜತೆಗೆ ವಾಲ್​ನಟ್ಸ್ ಒಮೆಗಾ -3 ಆಮ್ಲಗಳ ಉತ್ತಮ ಮೂಲವಾಗಿದೆ. ಇದನ್ನು ಹಲವು ವಿಧಗಳಲ್ಲಿ ಸೇವಿಸಬಹುದು. ಉತ್ತಮ ಆರೋಗ್ಯ ಪ್ರಯೋಜನಗಳಿಗಾಗಿ ಕೆಲವರು ನೆನೆಸಿದ ವಾಲ್​ನಟ್ಸ್ ತಿನ್ನಲು ಶಿಫಾರಸು ಮಾಡುತ್ತಾರೆ.

ಸೋಯಾಬೀನ್ ಬೀನ್ಸ್ ಇದು ಜಪಾನ್‌ನಲ್ಲಿ ಬಹಳ ಜನಪ್ರಿಯವಾಗಿದೆ. ಸೋಯಾಬೀನ್ ಬೀನ್ಸ್ ಕೂಡ ಉತ್ತಮ ಪೌಷ್ಟಿಕಾಂಶದ ಮೂಲವಾಗಿದೆ. ಇದು ಉತ್ತಮ ಪ್ರಮಾಣದ ಒಮೆಗಾ -3 ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ. ಸಸ್ಯಾಹಾರಿಗಳು ಒಮೆಗಾ -3 ಕೊಬ್ಬಿನಾಮ್ಲ ಪೋಷಕಾಂಶಕ್ಕಾಗಿ ಆಹಾರದಲ್ಲಿ ಇದನ್ನು ಹೆಚ್ಚಾಗಿ ಸೇರಿಸಿಕೊಳ್ಳಬಹುದು. ಒಮೆಗಾ -3 ಹೊರತಾಗಿ, ಇವು ಸಸ್ಯ ಆಧಾರಿತ ಪ್ರೋಟೀನ್‌ಗಳಲ್ಲಿ ಸಮೃದ್ಧವಾಗಿವೆ. ನೀವು ಇದನ್ನು ಸಲಾಡ್ ರೂಪದಲ್ಲಿ ಕೂಡ ಸೇವಿಸಬಹುದು.

ಬೀನ್ಸ್ ಒಮೆಗಾ -3 ಅನ್ನು ಸೇರಿಸಲು ಮತ್ತೊಂದು ಉತ್ತಮ ಮಾರ್ಗವೆಂದರೆ ಬೀನ್ಸ್. ಇದು ಒಮೆಗಾ -3 ನ ಅತ್ಯಂತ ಪೌಷ್ಟಿಕ ಮೂಲವಾಗಿದೆ. ಇದನ್ನು ಹೆಚ್ಚಾಗಿ ಸಾಂಬಾರ್ ಮತ್ತು ಸಲಾಡ್‌ಗಳ ರೂಪದಲ್ಲಿ ಸೇರಿಸಲಾಗುತ್ತದೆ.

ಎಲೆ ಕೋಸು ಎಲೆ ಕೋಸು ವಿಟಮಿನ್‌ಗಳ ಉತ್ತಮ ಮೂಲವಾಗಿದೆ. ಆದರೆ ಎಲೆ ಕೋಸು ವಿಟಮಿನ್ ಸಿ, ಫಾಸ್ಫರಸ್ ಮತ್ತು ಫೈಬರ್‌ನಂತಹ ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳ ಜೊತೆಗೆ ಒಮೆಗಾ -3 ಸಮೃದ್ಧವಾಗಿದೆ. ಅಧ್ಯಯನಗಳ ಪ್ರಕಾರ, ಎಲೆ ಕೋಸನ್ನು ಆಹಾರದಲ್ಲಿ ಸೇರಿಸುವುದರಿಂದ ಹೃದ್ರೋಗದ ಅಪಾಯವನ್ನು ಶೇ. 16 ರಷ್ಟು ಕಡಿಮೆ ಮಾಡಬಹುದು. ಎಲೆ ಕೋಸನ್ನು ಬೇಯಿಸುವುದರಿಂದ ಇದರಲ್ಲಿನ ಪೋಷಕಾಂಶ ಎರಡು ಅಥವಾ ಮೂರು ಪಟ್ಟು ಹೆಚ್ಚಾಗುತ್ತದೆ.

ಇದನ್ನೂ ಓದಿ: Women Health: ಮುಟ್ಟಿನ ಸಮಯದಲ್ಲಿ ಮಹಿಳೆಯರು ರನ್ನಿಂಗ್​ ಮಾಡಬಹುದೇ? ಆರೋಗ್ಯದಲ್ಲಿನ ಬದಲಾವಣೆ ಬಗ್ಗೆ ತಿಳಿಯಿರಿ

ಈ ಕೆಲವು ಆಹಾರ ಪದಾರ್ಥಗಳು ನಿಮ್ಮ ನಿದ್ರಾಹೀನತೆ ಮತ್ತು ಒತ್ತಡವನ್ನು ನಿವಾರಿಸಲು ಸಹಾಯಕ

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ