Health Tips: ಹಾಲು ಕುಡಿಯುವ ಅಭ್ಯಾಸ ಒಳ್ಳೆಯದು, ಆದರೆ ಹಾಲಿನೊಂದಿಗೆ ಈ ಐದು ಪದಾರ್ಥಗಳನ್ನು ಸೇವಿಸುವುದು ಅಪಾಯಕಾರಿ

ಹೊಟ್ಟೆ ನೋವು, ಹೊಟ್ಟೆ ಉಬ್ಬುವುದು, ಆಯಾಸ ಇತ್ಯಾದಿಗಳಿಗೆ ಕಾರಣವಾಗಬಹುದು. ಹೀಗಾಗಿ ದಿನನಿತ್ಯ ಹಾಲನ್ನು ಕುಡಿಯುವವರು ಈ ಕೆಳಕಂಡ ಪದಾರ್ಥಗಳ ಬಗ್ಗೆ ಗಮನಹರಿಸಿ ಮತ್ತು ಹಾಲಿನೊಂದಿಗೆ ಅವುಗಳನ್ನು ಸೇವಿಸುವ ಅಭ್ಯಾಸವನ್ನು ಬಿಟ್ಟುಬಿಡಿ.

Health Tips: ಹಾಲು ಕುಡಿಯುವ ಅಭ್ಯಾಸ ಒಳ್ಳೆಯದು, ಆದರೆ ಹಾಲಿನೊಂದಿಗೆ ಈ ಐದು ಪದಾರ್ಥಗಳನ್ನು ಸೇವಿಸುವುದು ಅಪಾಯಕಾರಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Skanda

Updated on: Jul 06, 2021 | 7:55 AM

ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಎಲ್ಲರಿಗೂ ತಿಳಿದಿದೆ. ಹಾಲು ಎಲ್ಲಾ ವಯಸ್ಸಿನವರಿಗೂ ಉಪಯುಕ್ತವಾಗಿದೆ. ಅನಾರೋಗ್ಯದ ವ್ಯಕ್ತಿಯಿಂದ ಆರೋಗ್ಯವಂತ ವ್ಯಕ್ತಿಯವರೆಗೆ ಎಲ್ಲರೂ ಹಾಲು ಕುಡಿಯುವುದು ಒಳ್ಳೆಯದು. ಆದರೆ ಹಾಲನ್ನು ಕೆಲವು ಪದಾರ್ಥಗಳೊಂದಿಗೆ ಬೆರೆಸದೆ ಸೇವಿಸುವುದು ಉತ್ತಮ. ಏಕೆಂದರೆ ಈ ಆಹಾರಗಳು ಹಾಲಿನೊಂದಿಗೆ ಹೊಂದಿಕೊಳ್ಳುವುದಿಲ್ಲ. ಇದರಿಂದಾಗಿ ಆರೋಗ್ಯದಲ್ಲಿ ಅನೇಕ ಸಮಸ್ಯೆಗಳು ಎದುರಾಗುತ್ತದೆ. ಹೊಟ್ಟೆ ನೋವು, ಹೊಟ್ಟೆ ಉಬ್ಬುವುದು, ಆಯಾಸ ಇತ್ಯಾದಿಗಳಿಗೆ ಕಾರಣವಾಗಬಹುದು. ಹೀಗಾಗಿ ದಿನನಿತ್ಯ ಹಾಲನ್ನು ಕುಡಿಯುವವರು ಈ ಕೆಳಕಂಡ ಪದಾರ್ಥಗಳ ಬಗ್ಗೆ ಗಮನಹರಿಸಿ ಮತ್ತು ಹಾಲಿನೊಂದಿಗೆ ಅವುಗಳನ್ನು ಸೇವಿಸುವ ಅಭ್ಯಾಸವನ್ನು ಬಿಟ್ಟುಬಿಡಿ.

1. ಮೊಟ್ಟೆ, ಮಾಂಸ ಮತ್ತು ಮೀನು ಹಾಲನ್ನು ಎಂದಿಗೂ ಮಾಂಸದೊಂದಿಗೆ ಕುಡಿಯಬಾರದು. ಮೀನು ಮತ್ತು ಮಾಂಸದ ಜತೆಗೆ ಹಾಲು ಕುಡಿಯುವುದರಿಂದ ಹೊಟ್ಟೆ ಉಬ್ಬುವುದು ಮತ್ತು ಜೀರ್ಣಕ್ರಿಯೆಗೆ ತೊಂದರೆಯಾಗುವ ಸಾಧ್ಯತೆಗಳಿವೆ.

2. ಹುಳಿ ಪದಾರ್ಥಗಳು ಹಾಲಿನೊಂದಿಗೆ ಹುಳಿ ಅಥವಾ ಸಿಟ್ರಿಕ್ ಆಮ್ಲ ಸಮೃದ್ಧವಾಗಿರುವ ಆಹಾರವನ್ನು ಎಂದಿಗೂ ಸೇವಿಸಬೇಡಿ. ಹಾಲನ್ನು ವಿಟಮಿನ್ ಸಿ ಅಧಿಕವಾಗಿರುವ ಆಹಾರದ ಜತೆಗೆ ತೆಗೆದುಕೊಳ್ಳಬಾರದು. ಹಾಲು ಸಾಮಾನ್ಯವಾಗಿ ಜೀರ್ಣಿಸಿಕೊಳ್ಳಲು ಬಹಳ ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ನೀವು ಹಾಲು, ನಿಂಬೆ ಅಥವಾ ಇತರ ಸಿಟ್ರಸ್ ಹಣ್ಣುಗಳನ್ನು ಒಟ್ಟಿಗೆ ಸೇವಿಸಿದರೆ ಹಾಲು ಹೊಟ್ಟೆಯಲ್ಲಿ ಹುಳಿಯಾಗುತ್ತದೆ. ಇದು ಎದೆಯುರಿಗೆ ಕಾರಣವಾಗಬಹುದು.

3. ಬಾಳೆಹಣ್ಣು ಬಾಳೆಹಣ್ಣು ಮತ್ತು ಹಾಲು ಒಟ್ಟಿಗೆ ತಿನ್ನುವುದು ಸಾಮಾನ್ಯವಾಗಿದೆ. ಆದರೆ ಈ ಆಹಾರ ಸಂಯೋಜಕವು ಜೀರ್ಣಿಸಿಕೊಳ್ಳಲು ಬಹಳ ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಈ ಎರಡನ್ನು ಒಟ್ಟಿಗೆ ತೆಗದುಕೊಳ್ಳುವುದರಿಂದ ದೇಹಕ್ಕೆ ಆಯಾಸವಾದಂತೆ ಭಾಸವಾಗುತ್ತದೆ. ಒಂದು ವೇಳೆ ನೀವು ಬಾಳೆಹಣ್ಣಿನ ಮಿಲ್ಕ್‌ಶೇಕ್ ಕುಡಿಯಲು ಬಯಸಿದರೆ ಅದರೊಂದಿಗೆ ಸ್ವಲ್ಪ ದಾಲ್ಚಿನ್ನಿ ಪುಡಿಯನ್ನು ಸೇರಿಸಿ. ಇದರಿಂದ ಜೀರ್ಣಕ್ರಿಯೆಯಲ್ಲಿ ಎದುರಾಗುವ ಸಮಸ್ಯೆ ಕಡಿಮೆಯಾಗುತ್ತದೆ.

4. ಮೊಸರು ಮೊಸರನ್ನು ಹಾಲಿನೊಂದಿಗೆ ಕುಡಿಯಬಾರದು. ಹಾಲಿಗೆ ಹುದುಗುವ ಪದಾರ್ಥಗಳನ್ನು ಎಂದಿಗೂ ಸೇರಿಸಬೇಡಿ. ಏಕೆಂದರೆ ಇದು ದೇಹದಲ್ಲಿ ಅನೇಕ ರೋಗಗಳನ್ನು ಉಂಟುಮಾಡುತ್ತದೆ. ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಮತ್ತು ಸಾಂಕ್ರಾಮಿಕ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಆಯುರ್ವೇದ ಹೇಳುತ್ತದೆ.

5. ಮೂಲಂಗಿ ಹಾಲು ಸಂಪೂರ್ಣ ಪೌಷ್ಠಿಕ ಆಹಾರವಾಗಿದೆ. ಇದನ್ನು ಇತರ ಆಹಾರಗಳ ಸಂಯೋಜನೆಯಲ್ಲಿ ಎಂದಿಗೂ ತೆಗೆದುಕೊಳ್ಳಬಾರದು. ವಿಶೇಷವಾಗಿ ನೀವು ಮೂಲಂಗಿಯೊಂದಿಗೆ ಹಾಲನ್ನು ತೆಗೆದುಕೊಂಡರೆ ಅದು ದೇಹದಲ್ಲಿ ಶಾಖವನ್ನು ಹೆಚ್ಚಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ವಿಳಂಬಗೊಳಿಸುತ್ತದೆ. ಹೀಗಾಗಿ ಹಾಲಿನೊಂದಿಗೆ ಇತರ ಆಹಾರ ಪದಾರ್ಥಗಳನ್ನು ಸೇವಿಸುವಾಗ ಎಚ್ಚರಿಕೆಯಿಂದ ಇರುವುದು ಸೂಕ್ತ.

ಇದನ್ನೂ ಓದಿ: Health Benefits: ಹಾಲು ಕುಡಿಯುವ ಅಭ್ಯಾಸ ಇದೆಯೇ? ಹಾಗಿದ್ದರೆ ಸೇವಿಸುವ ಸಮಯದ ಬಗ್ಗೆ ತಿಳಿಯವುದನ್ನು ಮರೆಯಬೇಡಿ

Ragi Health Benefits: ರಾಗಿ ಸೇವಿಸುವುದರಿಂದಾಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿದರೆ ಪ್ರತಿನಿತ್ಯ ಇದನ್ನು ಸೇವಿಸುತ್ತೀರಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ