Health Tips: ಬೀಟ್​ರೂಟ್​​ ಡಿಟಾಕ್ಸ್​ ಜ್ಯೂಸ್; ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ

ಬೀಟ್​ರೂಟ್​​​​ನಿಂದ ಮಾಡಿದ ಡಿಟಾಕ್ಸ್​ ಜ್ಯೂಸ್ ಪೋಷಕಾಂಶಗಳಿಂದ ಕೂಡಿದ್ದು, ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಇಚ್ಛಿಸುವವರಿಗೆ ಅನುಕೂಲಕರವಾಗಿದೆ.

Health Tips: ಬೀಟ್​ರೂಟ್​​ ಡಿಟಾಕ್ಸ್​ ಜ್ಯೂಸ್; ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ
ಬೀಟ್​ರೂಟ್​​ ಡಿಟಾಕ್ಸ್​ ಜ್ಯೂಸ್
Follow us
| Updated By: Skanda

Updated on: Jun 29, 2021 | 7:01 AM

ಹೊಟ್ಟೆಯಲ್ಲಿನ ಕಲ್ಮಶವನ್ನು ಶುದ್ಧೀಕರಿಸಲು ಡಿಟಾಕ್ಸ್ ಜ್ಯೂಸ್ ಸಹಾಯ ಮಾಡುತ್ತದೆ. ಇದು ದೇಹದಲ್ಲಿನ ವಿಷವನ್ನು ಹೊರಹಾಕುವಲ್ಲಿ ಉಪಯುಕ್ತವಾಗಿದೆ. ಅನೇಕ ತರಕಾರಿಗಳಿಂದ ಮತ್ತು ಹಣ್ಣುಗಳಿಂದ ಡಿಟಾಕ್ಸ್ ಜ್ಯೂಸ್ ತಯಾರಿಸಲಾಗುತ್ತದೆ. ಅದರಲ್ಲೂ ಮುಖ್ಯವಾಗಿ ಬೀಟ್​ರೂಟ್​​​​ನಿಂದ ಮಾಡಿದ ಡಿಟಾಕ್ಸ್​ ಜ್ಯೂಸ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಉತ್ತಮ ಜೀವನಶೈಲಿಯ ಕೊರತೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹೀಗಾಗಿ ಬೀಟ್​ರೂಟ್​​ನಿಂದ ಮಾಡಿದ ಡಿಟಾಕ್ಸ್​ ಜ್ಯೂಸ್ ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಳ್ಳಿ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಜತೆಗೆ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಇಚ್ಛಿಸುವವರಿಗೆ ಅನುಕೂಲಕರವಾಗಿದೆ. ಬೀಟ್​ರೂಟ್​​​​ನಿಂದ ಮಾಡಿದ ಡಿಟಾಕ್ಸ್​ ಜ್ಯೂಸ್ ಪೋಷಕಾಂಶಗಳಿಂದ ಕೂಡಿದ್ದು, ಇದನ್ನು ಮಾಡುವ ವಿಧಾನದ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.

ಬೀಟ್​ರೂಟ್​​ ಡಿಟಾಕ್ಸ್​ ಜ್ಯೂಸ್ ಮಾಡುವ ವಿಧಾನ​​ ನೀರು, ಪುದೀನಾ ಸೊಪ್ಪು, ಆ್ಯಪಲ್ ಸೈಡರ್ ವಿನೆಗರ್, ನಿಂಬೆ ರಸ ಮತ್ತು ಬೀಟ್​ರೂಟ್​​ ರಸವನ್ನು ಮಿಶ್ರಣ ಮಾಡಿ 5-10 ನಿಮಿಷಗಳ ನಂತರ ಅದನ್ನು ಶೋಧಿಸಿ. ಬಳಿಕ ಅದನ್ನು ಸೇವಿಸಿ. ಖಾಲಿ ಹೊಟ್ಟೆಯಲ್ಲಿ ಬೀಟ್​ರೂಟ್​​ ಡಿಟಾಕ್ಸ್​ ಜ್ಯೂಸ್ ಕುಡಿಯುವಾಗ ನಿಯಮಿತವಾಗಿ ಸೇವಿಸಿ.

ಬೀಟ್​ರೂಟ್​​ ಡಿಟಾಕ್ಸ್​ ಜ್ಯೂಸ್ ಪ್ರಯೋಜನಗಳು ಇದರಲ್ಲಿ ಪ್ರೋಟೀನ್ ಮತ್ತು ಫೈಬರ್ ಸಮೃದ್ಧವಾಗಿದೆ. ಖಾಲಿ ಹೊಟ್ಟೆಯಲ್ಲಿ ಬೀಟ್​ರೂಟ್​​ ಡಿಟಾಕ್ಸ್​ ಜ್ಯೂಸ್ ಕುಡಿಯುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯವಾಗುತ್ತದೆ. ಕೆಲವು ವರದಿಗಳ ಪ್ರಕಾರ, ಇದಕ್ಕೆ ಆ್ಯಪಲ್ ಸೈಡರ್ ವಿನೆಗರ್ ಸೇರಿಸುವುದರಿಂದ ತೂಕ ವೇಗವಾಗಿ ಕಡಿಮೆಯಾಗಲು ಸಹಾಯವಾಗುತ್ತದೆ. ಇದು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡುತ್ತದೆ. ಪುದೀನಾವನ್ನು ಇದಕ್ಕೆ ಸೇವಿಸುವುದರಿಂದ ದೇಹಕ್ಕೆ ನವಚೈತನ್ಯ ಸಿಗುತ್ತದೆ. ನಿಂಬೆ ರಸದಲ್ಲಿ ಸಿಟ್ರಿಕ್ ಆಮ್ಲವಿದ್ದು, ಇದು ಚಯಾಪಚಯ ಕ್ರಿಯೆಯನ್ನು ಉತ್ತೇಜಿಸುತ್ತದೆ. ಕ್ಯಾಲೊರಿಗಳನ್ನು ಸುಡಲು ಬೀಟ್​ರೂಟ್​​ ಡಿಟಾಕ್ಸ್​ ಜ್ಯೂಸ್ ಸಹಾಯ ಮಾಡುತ್ತದೆ.

ಬೀಟ್​ರೂಟ್​​ನ ಆರೋಗ್ಯಯುತ ಪ್ರಯೋಜನಗಳು ಬೀಟ್​ರೂಟ್​​ ದೇಹಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಸಾಕಷ್ಟು ಪೋಷಕಾಂಶಗಳಿವೆ. ಬೀಟ್‌ರೂಟ್‌ನಲ್ಲಿ ಜೀವಸತ್ವಗಳು, ಖನಿಜಗಳು, ಕಬ್ಬಿಣ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ಇದು ದೇಹಕ್ಕೆ ಶಕ್ತಿ ನೀಡುತ್ತದೆ. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸುವ ಕೆಲಸ ಮಾಡುತ್ತದೆ. ಬೀಟ್‌ರೂಟ್‌ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಇದು ದೇಹದಲ್ಲಿನ ಆಯಾಸದಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ರಕ್ತಹೀನತೆಯಿಂದ ಬಳಲುತ್ತಿರುವವರು ಬೀಟ್​ರೂಟ್ ಸೇವಿಸುವುದು ಉತ್ತಮ. ಇದರಲ್ಲಿ ಕಬ್ಬಿಣಾಂಶವಿದ್ದು, ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ. ಅಧ್ಯಯನಗಳ ಪ್ರಕಾರ ಬೀಟ್‌ರೂಟ್‌ನಲ್ಲಿ ಬೆಟ್‌ಲೈನ್‌ಗಳಿವೆ. ಈ ಕಾರಣಕ್ಕಾಗಿ ಇದರ ಬಣ್ಣ ಕೆಂಪು ಬಣ್ಣದ್ದಾಗಿದ್ದು, ಕ್ಯಾನ್ಸರ್​ನಿಂದ ರಕ್ಷಣೆ ನಿಡುತ್ತದೆ.

ಇದನ್ನೂ ಓದಿ:

Clove Health Benefits: ಲವಂಗದ ಆರೋಗ್ಯಕರ ಪ್ರಯೋಜನದ ಬಗ್ಗೆ ನೀವು ತಿಳಿದರೆ ನಿತ್ಯವೂ ಇದನ್ನು ಸೇವಿಸುತ್ತಿರಾ

Health Tips: ನುಗ್ಗೆಕಾಯಿ ಮಾತ್ರವಲ್ಲ, ಸೊಪ್ಪಿನಲ್ಲೂ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ