Health Tips: ಸೊಳ್ಳೆ ಕಡಿತದ ನಂತರ ಉಂಟಾಗುವ ಕಿರಿಕಿರಿಯಿಂದ ಹೊರಬರಲು ಈ 5 ಪದಾರ್ಥಗಳನ್ನು ಬಳಸಿ

ಸೊಳ್ಳೆ ಕಚ್ಚಿ ಹೋದ ಮೇಲೆ ತುರಿಕೆ ನಮ್ಮನ್ನು ಕಿರಿಕಿರಿ ಉಂಟಾಗುವಂತೆ ಮಾಡುತ್ತದೆ. ಹೀಗಾಗಿ ಇದರಿಂದ ಹೊರಬರಲು ಹೊಗೆ, ಇನ್ನಿತರ ವಿದ್ಯುತ್​ ಉಪಕರಣಗಳನ್ನು ಬಳಸುತ್ತೇವೆ. ಸೊಳ್ಳೆ ಕಚ್ಚಿದ ಮೇಲೆ ಅದರಿಂದಾಗುವ ಅಪಾಯವನ್ನು ಕಡಿಮೆ ಮಾಡಲು, ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳನ್ನು ಬಳಸಿಕೊಳ್ಳಿ.

Health Tips: ಸೊಳ್ಳೆ ಕಡಿತದ ನಂತರ ಉಂಟಾಗುವ ಕಿರಿಕಿರಿಯಿಂದ ಹೊರಬರಲು ಈ 5 ಪದಾರ್ಥಗಳನ್ನು ಬಳಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Jul 10, 2021 | 7:11 AM

ಮಳೆಗಾಲದಲ್ಲಿ ಹೆಚ್ಚಾಗಿ ಸೊಳ್ಳೆಗಳು ಕಂಡುಬರುತ್ತದೆ. ಅದರಲ್ಲೂ ಮನೆ ಹತ್ತಿರದಲ್ಲಿ ನಿಂತ ನೀರು ಸೊಳ್ಳೆಗಳು ಹೆಚ್ಚಾಗಲು ಕಾರಣವಾಗುತ್ತದೆ. ಇದರಿಂದ ಅನೇಕ ಕಾಯಿಲೆಗಳು ಕಾಡಬಹುದು. ಕೆಲವೊಮ್ಮೆ ನೆಮ್ಮದಿಯಿಂದ ನಿದ್ರೆ ಮಾಡಲೂ ಸಾಧ್ಯವಾಗುವುದಿಲ್ಲ. ಅಲ್ಲದೆ ಸೊಳ್ಳೆ ಕಚ್ಚಿ ಹೋದ ಮೇಲೆ ತುರಿಕೆ ನಮ್ಮನ್ನು ಕಿರಿಕಿರಿ ಉಂಟಾಗುವಂತೆ ಮಾಡುತ್ತದೆ. ಹೀಗಾಗಿ ಇದರಿಂದ ಹೊರಬರಲು ಹೊಗೆ, ಇನ್ನಿತರ ವಿದ್ಯುತ್​ ಉಪಕರಣಗಳನ್ನು ಬಳಸುತ್ತೇವೆ. ಸೊಳ್ಳೆ ಕಚ್ಚಿದ ಮೇಲೆ ಅದರಿಂದಾಗುವ ಅಪಾಯವನ್ನು ಕಡಿಮೆ ಮಾಡಲು, ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳನ್ನು ಬಳಸಿಕೊಳ್ಳಿ.

1. ಐಸ್​ ಪೀಸ್​ ( ಐಸ್​ ಕ್ಯೂಬ್) ಐಸ್​ ಪೀಸ್​ ತಂಪಾಗಿಸುವುದರಿಂದ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಮರಗಟ್ಟುವಿಕೆ ಸೃಷ್ಟಿಸುತ್ತದೆ ಮತ್ತು ಸ್ವಲ್ಪ ಸಮಯದವರೆಗೆ ಕಿರಿಕಿರಿಯನ್ನು ಕಡಿಮೆ ಮಾಡುತ್ತದೆ. ನೀವು ಸ್ವಲ್ಪ ಐಸ್ ಅನ್ನು ಬಟ್ಟೆಯಲ್ಲಿ ಸುತ್ತಿ ಸೊಳ್ಳೆ ಕಚ್ಚಿದ ಜಾಗದಲ್ಲಿ ಇಟ್ಟುಕೊಳ್ಳಿ. ಇದರಿಂದ ಚರ್ಮಕ್ಕೆ ಆಗುವ ಹಾನಿ ಕಡಿಮೆಯಾಗುತ್ತದೆ. ಆದರೆ ಐಸ್ ಅನ್ನು ಹೆಚ್ಚು ಹೊತ್ತು ಇಡಬೇಡಿ.

2. ಅಲೋವೆರಾ ಅಲೋವೆರಾ ಚರ್ಮದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಸೊಳ್ಳೆ ಕಡಿತದಿಂದ ಉಂಟಾಗುವ ಅಸ್ವಸ್ಥತೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಅಲೋವೆರಾ ಜೆಲ್ ಉರಿಯೂತದ ಗುಣಲಕ್ಷಣಗಳನ್ನು ಕಡಿಮೆ ಮಾಡುತ್ತದೆ. ಇದು ಸೊಳ್ಳೆ ಕಡಿತದ ನಂತರ ಉಂಟಾಗುವ ತುರಿಕೆಯನ್ನು ದೂರ ಮಾಡುತ್ತದೆ.

3. ಜೇನುತುಪ್ಪ ಜೇನುತುಪ್ಪವು ಚರ್ಮಕ್ಕೆ ಪ್ರಯೋಜನಕಾರಿಯಾದ ಗುಣಗಳನ್ನು ಒಳಗೊಂಡಿದೆ. ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ಗುಣಗಳನ್ನು ದೂರ ಮಾಡುತ್ತದೆ. ಸೊಳ್ಳೆ ಕಚ್ಚಿದ ಪ್ರದೇಶದ ಮೇಲೆ ನೀವು ಜೇನುತುಪ್ಪ ಹಚ್ಚುವುದರಿಂದ ಕೆಂಪಾಗುವುದು, ತುರಿಕೆ ಉಂಟಾಗುವುದು ಕಡಿಮೆಯಾಗುತ್ತದೆ.

4. ತುಳಸಿ ಪ್ರತಿ ಮನೆಯಲ್ಲೂ ತುಳಸಿ ಗಿಡ ಇರುತ್ತದೆ. ಇದರಲ್ಲಿ ಸೊಳ್ಳೆ ಕಡಿತದಿಂದ ಉಂಟಾಗುವ ಅಪಾಯವನ್ನು ದೂರ ಮಾಡುವ ಶಕ್ತಿ ಇದೆ. ತುಳಸಿ ಎಲೆಗಳನ್ನು ತೆಗೆದುಕೊಳ್ಳಿ, ಇವುಗಳನ್ನು ಒಂದು ಕಪ್ ನೀರಿನಲ್ಲಿ ಕೆಲವು ನಿಮಿಷಗಳ ಕಾಲ ಕುದಿಸಿ. ಈ ನೀರನ್ನು ತಣ್ಣಗಾಗಲು ಬಿಟ್ಟು, ನಂತರ ಹತ್ತಿಯ ಸಹಾಯದಿಂದ ಇದನ್ನು ನಿಮ್ಮ ಚರ್ಮದ ಮೇಲೆ ಹಚ್ಚಿಕೊಳ್ಳಿ. ಇದರಿಂದ ತುರಿಕೆ ದೂರವಾಗುತ್ತದೆ.

5. ಈರುಳ್ಳಿ ಪ್ರತಿಯೊಬ್ಬರ ಅಡುಗೆಮನೆಯಲ್ಲೂ ಈರುಳ್ಳಿ ಇರುತ್ತದೆ. ಇದನ್ನು ಹಲವಾರು ಆಹಾರಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ನೀವು ಸೊಳ್ಳೆ ಕಚ್ಚಿದ ಭಾಗಕ್ಕೆ ಈರುಳ್ಳಿ ಹಚ್ಚುವುದರಿಂದ ತುರಿಕೆ ಕಡಿಮೆಯಾಗುತ್ತದೆ. ಈರುಳ್ಳಿ ತುಂಡುಗಳನ್ನು ಸೊಳ್ಳೆ ಕಚ್ಚಿದ ಭಾಗಕ್ಕೆ ಹಚ್ಚಿ. ನಂತರ ನೀರಿನಿಂದ ತೊಳೆಯಿರಿ. ಇದು ತುರಿಕೆಯನ್ನು ದೂರ ಮಾಡುತ್ತದೆ.

ಇದನ್ನೂ ಓದಿ: Health Tips: ಹಾಲು ಕುಡಿಯುವ ಅಭ್ಯಾಸ ಒಳ್ಳೆಯದು, ಆದರೆ ಹಾಲಿನೊಂದಿಗೆ ಈ ಐದು ಪದಾರ್ಥಗಳನ್ನು ಸೇವಿಸುವುದು ಅಪಾಯಕಾರಿ

Health Tips: ನುಗ್ಗೆಕಾಯಿ ಮಾತ್ರವಲ್ಲ, ಸೊಪ್ಪಿನಲ್ಲೂ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ