AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Period Hygiene : ಮುಟ್ಟಿನ ಅವಧಿಯಲ್ಲಿ ಎಷ್ಟು ಗಂಟೆಗಳಿಗೊಮ್ಮೆ ಸ್ಯಾನಿಟರಿ ಪ್ಯಾಡ್ ಬದಲಾಯಿಸಬೇಕು?

ಮಹಿಳೆಯರಿಗೆ ಋತುಚಕ್ರ ಅಥವಾ ಮುಟ್ಟು ನೈಸರ್ಗಿಕ ಪ್ರಕ್ರಿಯೆಯಾಗಿದ್ದರೂ ಕೆಲವು ಹೆಣ್ಣು ಮಕ್ಕಳು ಈ ಸಮಯದಲ್ಲಿ ನರಕಯಾತನೆ ಅನುಭವಿಸುತ್ತಾರೆ. ಈ ಅವಧಿಯಲ್ಲಿ ಸೇವಿಸುವ ಆಹಾರದಿಂದ ಹಿಡಿದು ಸ್ವಚ್ಛತೆಯ ಕಡೆಗೂ ಹೆಚ್ಚು ಗಮನ ಕೊಡಬೇಕಾಗುತ್ತದೆ. ಇಲ್ಲದಿದ್ದರೆ ಆರೋಗ್ಯ ಸಮಸ್ಯೆಗಳಿಗೆ ಆಹ್ವಾನಕೊಟ್ಟಂತಾಗುತ್ತದೆ. ಆದರೆ ಕೆಲವು ಹೆಣ್ಣು ಮಕ್ಕಳು ಕಡಿಮೆ ರಕ್ತಸ್ರಾವವಿದ್ದಾಗ ಬೆಳಗ್ಗೆಯಿಂದ ಸಂಜೆಯವರೆಗೂ ಒಂದೇ ಸ್ಯಾನಿಟರಿ ಪ್ಯಾಡ್‌ ಬಳಸುತ್ತಾರೆ. ಆದರೆ ಇಂತಿಷ್ಟು ಗಂಟೆಗಳಿಗೊಮ್ಮೆ ಸ್ಯಾನಿಟರಿ ಪ್ಯಾಡ್ ಗಳನ್ನು ಬದಲಾಯಿಸುವುದು ಮುಖ್ಯ. ಆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Period Hygiene : ಮುಟ್ಟಿನ ಅವಧಿಯಲ್ಲಿ ಎಷ್ಟು ಗಂಟೆಗಳಿಗೊಮ್ಮೆ ಸ್ಯಾನಿಟರಿ ಪ್ಯಾಡ್ ಬದಲಾಯಿಸಬೇಕು?
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Aug 23, 2024 | 11:43 AM

Share

ಮುಟ್ಟು ಹೆಣ್ತನದ ಪ್ರತೀಕವಾಗಿದ್ದು, ಇದು ಪ್ರತಿ 28 ದಿನಗಳಿಗೊಮ್ಮೆ ಆಗುತ್ತದೆ. ಈ ಸಮಯದಲ್ಲಿ ಐದು ದಿನಗಳ ಕಾಲ ಮುಟ್ಟಿನ ರಕ್ತಸ್ರಾವ ಇರುತ್ತದೆ. ಸಹಿಸಲಾರದ ನೋವು, ಕಿರಿಕಿರಿ ಭಾವನೆಯೂ ಕಾಡಬಹುದು. ಈ ಸಮಯದಲ್ಲಿ ಆಕೆಯಲ್ಲಿ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳಾಗುತ್ತದೆ. ಈ ವೇಳೆ ನೋವು ಅತಿಯಾಗಿ ಕಾಡಿದರೆ ಯಾವುದೇ ಕೆಲಸ ಮಾಡಲು ಮನಸ್ಸಾಗುವುದಿಲ್ಲ. ಹೀಗಾಗಿ ಸೇವಿಸುವ ಆಹಾರದೊಂದಿಗೆ ಸ್ವಚ್ಛತೆಯ ಕಡೆಗೂ ಹೆಚ್ಚು ಗಮನ ಹರಿಸಬೇಕು. ಒಂದು ವೇಳೆ ಸ್ವಚ್ಛತೆಗೆ ಆದ್ಯತೆ ನೀಡದಿದ್ದರೆ ಮೂತ್ರನಾಳದ ಸೋಂಕು, ತುರಿಕೆ ಹಾಗೂ ಗರ್ಭಕಂಠದ ಕ್ಯಾನ್ಸರ್ ನಂತಹ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆಯಿದೆ.

ಸ್ಯಾನಿಟರಿ ಬದಲಾಯಿಸಲು ಸೂಕ್ತ ಸಮಯ

ಮುಟ್ಟಿನ ಅವಧಿಯಲ್ಲಿ ಸ್ಯಾನಿಟರಿ ಪ್ಯಾಡ್ ಬಳಸುತ್ತಿದ್ದಲ್ಲಿ ಪ್ರತಿ 3ರಿಂದ 5ಗಂಟೆಗಳಿಗೊಮ್ಮೆ ಬದಲಾಯಿಸುವುದು ಸೂಕ್ತ. ಬೆಳ್ಳಗೆ, ಮಧ್ಯಾಹ್ನ , ಸಂಜೆ ಮತ್ತು ರಾತ್ರಿ ಮಲಗುವ ಮುನ್ನ ಈ ಪ್ಯಾಡ್ ಗಳನ್ನು ಬದಲಾಯಿಸುವುದು ಸೂಕ್ತ. ಒಂದು ವೇಳೆ ಹೆಚ್ಚು ರಕ್ತಸ್ರಾವ ಹೊಂದಿದ್ದರೆ, ಐದರಿಂದ ಆರು ಬಾರಿ ಬದಲಾಯಿಸಬೇಕಾಗುತ್ತದೆ. ಹೆಚ್ಚು ಅವಧಿಯವರೆಗೂ ಒಂದೇ ಪ್ಯಾಡ್‌ ಬಳಸಿದಲ್ಲಿ ಚರ್ಮದ ಕಿರಿಕಿರಿ ಅಥವಾ ತುರಿಕೆಯಂತಹ ಸಮಸ್ಯೆಗಳು ಉಂಟಾಗಬಹುದು. ಹೀಗಾಗಿ ಈ ಸಮಯದಲ್ಲಿ ಸಾಧ್ಯವಾದಷ್ಟು ಸ್ವಚ್ಛತೆಯ ಕಡೆಗೆ ಗಮನ ಕೊಡುವುದು ಅಗತ್ಯ.

ಇದನ್ನೂ ಓದಿ: ಶವಾಸನ ಮಾಡುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?

ಯೋನಿಯ ಸ್ವಚ್ಛತೆಯ ಕಡೆಗೆ ಇರಲಿ ಗಮನ

ಋತುಚಕ್ರದ ಅವಧಿಯಲ್ಲಿ ಯೋನಿಯು ಸ್ವಚ್ಛತೆ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಆದರೆ ಯೋನಿಯು ಶುಚಿಗೊಳಿಸುವ ಒಳ್ಳೆಯ ಮತ್ತು ಕೆಟ್ಟ ಬ್ಯಾಕ್ಟೀರಿಯಾಗಳನ್ನು ಹೊಂದಿದೆ. ಒಂದು ವೇಳೆ ಸಾಬೂನಿನಿಂದ ಈ ಭಾಗವನ್ನು ತೊಳೆದರೆ ಒಳ್ಳೆಯ ಬ್ಯಾಕ್ಟೀರಿಯಾವು ಸಾಯುವ ಸಾಧ್ಯತೆಯಿದೆ. ಆರೋಗ್ಯದ ದೃಷ್ಟಿಯಿಂದ ಈ ಸಮಯದಲ್ಲಿ ಆದಷ್ಟು ಸೋಪಿನ ಬಳಕೆಯನ್ನು ತಪ್ಪಿಸುವುದು ಉತ್ತಮ. ಯೋನಿಯನ್ನು ಸ್ವಚ್ಛಗೊಳಿಸಲು ಬಿಸಿ ನೀರನ್ನು ಬಳಸುವುದು ಒಳ್ಳೆಯದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ