Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips: ಈ 3 ಅಪಾಯಕಾರಿ ಕಾಯಿಲೆ ಯುವಜನತೆಯನ್ನೇ ಬಲಿಪಡೆಯುತ್ತಿದೆ!

ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ವರದಿಯ ಪ್ರಕಾರ ಭಾರತದಲ್ಲಿ ಅಧಿಕ ರಕ್ತದೊತ್ತಡ, ಮಧುಮೇಹ, ಡಿಸ್ಲಿಪಿಡೆಮಿಯಾ, ಬೊಜ್ಜು ಮತ್ತು ಹೃದ್ರೋಗಗಳಿಗೆ ಮುಖ್ಯ ಕಾರಣ ಆಹಾರದಲ್ಲಿ ಪೋಷಕಾಂಶಗಳ ಕೊರತೆ ಮತ್ತು ಅನಾರೋಗ್ಯಕರ ಜೀವನಶೈಲಿ.

Health Care Tips: ಈ 3 ಅಪಾಯಕಾರಿ ಕಾಯಿಲೆ ಯುವಜನತೆಯನ್ನೇ ಬಲಿಪಡೆಯುತ್ತಿದೆ!
Youth HealthImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Apr 09, 2024 | 5:32 PM

ಇತ್ತೀಚಿನ ದಿನಗಳಲ್ಲಿ ಬಿಡುವಿಲ್ಲದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ ಹಿರಿಯರಿಗಿಂತ ಕಿರಿಯರಲ್ಲೇ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತಿವೆ. ಇದು ಅವರ ಆರೋಗ್ಯದ ಮೇಲೆ ಗಂಭೀರವಾಗಿ ಪರಿಣಾಮ ಬೀರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ 50 ವರ್ಷದೊಳಗಿನವರು ಮೂರು ಅಪಾಯಕಾರಿ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ಸರಿಯಾದ ಸಮಯಕ್ಕೆ ಗಮನಹರಿಸದಿದ್ದರೆ ಈ ಮೂರು ರೋಗಗಳು ಮಹಾಮಾರಿಯ ರೂಪ ತಳೆಯುತ್ತವೆ ಹಾಗಾಗಿ ಯುವಕರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

ಬೊಜ್ಜು:

WHO ಪ್ರಕಾರ, ಬೊಜ್ಜು ಇಂದು ಜಗತ್ತಿನಲ್ಲಿ ವೇಗವಾಗಿ ಹೆಚ್ಚುತ್ತಿದೆ.ಅಂಕಿಅಂಶಗಳನ್ನು ನೋಡಿದರೆ, ಬೊಜ್ಜು 1990 ರಿಂದ 2024 ರವರೆಗೆ ನಾಲ್ಕು ಪಟ್ಟು ಹೆಚ್ಚಾಗಿದೆ. ಆದ್ದರಿಂದ, ಅದನ್ನು ಕಡಿಮೆ ಮಾಡುವತ್ತ ಗಮನ ಹರಿಸಬೇಕು. ಸ್ಥೂಲಕಾಯತೆಯನ್ನು ನಿಯಂತ್ರಿಸಲು, ವಾತ, ಪಿತ್ತ ಮತ್ತು ಕಫವನ್ನು ನಿಯಂತ್ರಿಸಲು ಚಯಾಪಚಯ ಪ್ರಕ್ರಿಯೆಯನ್ನು ಸರಿಪಡಿಸಲು ಆಯುರ್ವೇದ ಸಲಹೆ ನೀಡುತ್ತದೆ.

ಇದನ್ನೂ ಓದಿ: ಯುವಜನರಲ್ಲಿ ಹೃದಯಾಘಾತಕ್ಕೆ ಕಾರಣವೇನು? ಈ ತಪ್ಪು ಮಾಡಬೇಡಿ

ಮಧುಮೇಹ:

ಅಧಿಕ ರಕ್ತದೊತ್ತಡದಿಂದ ಉಂಟಾಗುವ ಮಧುಮೇಹ ಭವಿಷ್ಯದಲ್ಲಿ ಮಹಾಮಾರಿಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು. ದೇಶದಲ್ಲಿ ಇದರ ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಇದಕ್ಕೆ ಕಾರಣಗಳು ಅನಾರೋಗ್ಯಕರ ಜೀವನಶೈಲಿ, ಹೆಚ್ಚಿನ ಕ್ಯಾಲೋರಿ ಆಹಾರ, ಒತ್ತಡ ಮತ್ತು ನಿದ್ರೆಯ ಕೊರತೆ ಎಂದು ಹೇಳಲಾಗುತ್ತದೆ. ಇದನ್ನು ನಿಯಂತ್ರಿಸಲು ಆಯುರ್ವೇದದಲ್ಲಿ ಹಲವು ಸಲಹೆಗಳಿವೆ. ಅವುಗಳಲ್ಲಿ ಸಿಹಿ ತಿನಿಸುಗಳಿಂದ ದೂರವಿರುವುದು, ದಿನನಿತ್ಯದ ವ್ಯಾಯಾಮ, ಒತ್ತಡದಿಂದ ದೂರವಿರುವುದು, ಋತುಮಾನಕ್ಕೆ ತಕ್ಕಂತೆ ಆಹಾರ ಸೇವನೆ, ಧ್ಯಾನ, ಪ್ರಾಣಾಯಾಮ, ಯೋಗ ಮುಂತಾದವುಗಳನ್ನು ಅಳವಡಿಸಿಕೊಳ್ಳಬೇಕು.

ಹೃದ್ರೋಗಗಳು (ಹೃದಯರಕ್ತನಾಳದ ಕಾಯಿಲೆಗಳು):

ಹೃದಯರಕ್ತನಾಳದ ಅಸ್ವಸ್ಥತೆಗಳು ಯುವಕರನ್ನು ಹೆಚ್ಚು ಬಲಿಪಶುಗಳಾಗಿ ಮಾಡುತ್ತಿವೆ. ಪ್ರತಿ ವರ್ಷ ವಿಶ್ವದ ಶೇಕಡಾ 30 ಕ್ಕಿಂತ ಹೆಚ್ಚು ಸಾವುಗಳು ಈ ಕಾರಣದಿಂದ ಸಂಭವಿಸುತ್ತವೆ. ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ವರದಿಯ ಪ್ರಕಾರ ಭಾರತದಲ್ಲಿ ಅಧಿಕ ರಕ್ತದೊತ್ತಡ, ಮಧುಮೇಹ, ಡಿಸ್ಲಿಪಿಡೆಮಿಯಾ, ಬೊಜ್ಜು ಮತ್ತು ಹೃದ್ರೋಗಗಳಿಗೆ ಮುಖ್ಯ ಕಾರಣ ಆಹಾರದಲ್ಲಿ ಪೋಷಕಾಂಶಗಳ ಕೊರತೆ ಮತ್ತು ಅನಾರೋಗ್ಯಕರ ಜೀವನಶೈಲಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ