ಕೋಲಾರ ಜಿಲ್ಲೆಯಲ್ಲಿ ನಿವಾರ್ ಸೈಕ್ಲೋನ್ ಎಫೆಕ್ಟ್ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಕಂಟ್ರೋಲ್ ರೂಂ ಓಪನ್ ಮಾಡಿದೆ. ಈ ಮೂಲಕ ಮಳೆಯಿಂದ ಉಂಟಾಗುವ ಸಮಸ್ಯೆ ಬಗ್ಗೆ ಮಾಹಿತಿ ನೀಡಬಹುದಾಗಿದೆ.
ಕೋಲಾರ: ಬರದ ನಾಡು ಕೋಲಾರದಲ್ಲಿ ಈಗ ಮಳೆಯೋ ಮಳೆ.. ನಿವಾರ್ ಸೈಕ್ಲೋನ್ ಎಫೆಕ್ಟ್ ಜೋರಾಗಿದೆ. ನಿನ್ನೆ ರಾತ್ರಿಯಿಂದಲೂ ಮಳೆ ಸುರಿಯುತ್ತಿದೆ.
ಜಿಲ್ಲೆಯಲ್ಲಿ ‘ನಿವಾರ್’ ಸೈಕ್ಲೋನ್ ಎಫೆಕ್ಟ್ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾಡಳಿತ ಕಂಟ್ರೋಲ್ ರೂಂಗೆ ಚಾಲನೆ ನೀಡಿದೆ. ವಿಪತ್ತು ನಿರ್ವಹಣೆಗೆ ಕಂಟ್ರೋಲ್ ರೂಂ ಓಪನ್ ಮಾಡಲಾಗಿದ್ದು ಕಂಟ್ರೋಲ್ ರೂಂ ಸಂಖ್ಯೆ-1077 ಮತ್ತು 08152-243506 ಇದಕ್ಕೆ ಕರೆ ಮಾಡಿ ಸಮಸ್ಯೆ ಬಗ್ಗೆ ಮಾಹಿತಿ ನೀಡಬಹುದು.
ಕೋಲಾರ ಜಿಲ್ಲಾ ಕೃಷಿ ಹವಾಮಾನ ಘಟಕದಿಂದ ಇಂದು ನಾಳೆ ಭಾರಿ ಮಳೆಯಾಗುವ ಕುರಿತು ಮುನ್ಸೂಚನೆ ನೀಡಲಾಗಿದ್ದು ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಕೋಲಾರ ಡಿಸಿ ಸಿ.ಸತ್ಯಭಾಮಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಳೆ ಹಾನಿ ಬಗ್ಗೆ ಪ್ರತಿದಿನ ವರದಿ ಸಲ್ಲಿಸುವಂತೆಯೂ ಎಲ್ಲ ತಹಶೀಲ್ದಾರ್ಗಳಿಗೆ ಸೂಚಿಸಿದ್ದಾರೆ.