ಹಿಂದಿ ಭಾಷೆಗೆ ಪ್ರಾಮುಖ್ಯತೆ ನೀಡಬೇಕು: ಅಮಿತ್​ ಶಾ ಆಜ್ಞೆ!

ದೆಹಲಿ: ನೂರಾರು ಭಾಷೆಗಳಿಂದ ಕೂಡಿರುವ ಭಾರತದಂತಹ ದೇಶದಲ್ಲಿ ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳ ಮೇಲೆ ಬಲವಂತವಾಗಿ ಹಿಂದಿ ಭಾಷೆಯ ಬಳಕೆಯನ್ನು ಹೇರುವ ಪ್ರಯತ್ನ ಮಾಡುತ್ತಿದ್ದು, ಈಗ ಕೇಂದ್ರ ಗೃಹ ಸಚಿವ ಅಮಿತ್​ ಶಾ ಆಡಿರುವ ಮಾತುಗಳು ಉರಿಯುತ್ತಿರುವ ಕೆಂಡಕ್ಕೆ ತುಪ್ಪ ಸುರಿಯುವಂತಿದೆ.

ಹಿಂದಿ ದಿವಸ್ ಆಚರಣೆ ಹಿನ್ನೆಲೆ ಮಾತಾನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶ ಒಗ್ಗೂಡಿಸುವಲ್ಲಿ ಹಿಂದಿ ಭಾಷೆಯ ಪಾತ್ರ ಬಹಳಷ್ಟಿದೆ ಹಾಗಾಗಿ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ, ಬ್ಯಾಂಕ್‌ಗಳಲ್ಲಿ ಹಿಂದಿ ಭಾಷೆಯ ಬಳಕೆಯನ್ನು ಹೆಚ್ಚು ಮಾಡಬೇಕು ಎಂದಿದ್ದಾರೆ. ಜೊತೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಿಂದಿ ಭಾಷೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದಿದ್ದಾರೆ.

Related Tags:

Related Posts :

Category: