Horoscope 05 Jan: ನಿಮ್ಮ ನಡವಳಿಕೆಯನ್ನು ಇತರರಿಗೆ ಸಾಬೀತು ಮಾಡಬೇಕಿಲ್ಲ, ಮಾತಿಗಿಂತ ಮೌನವೇ ಸೂಕ್ತವೆನಿಸುವುದು

ತಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ಹಲವರು ದಿನದಿಂದ ರಾಶಿಭವಿಷ್ಯವನ್ನು ಓದುತ್ತಾರೆ. ಒಂದಷ್ಟು ಮಂದಿ ಯಾವುದೇ ಕಾರ್ಯವನ್ನು ಪ್ರಾರಂಭಿಸಬೇಕಾದರೆ ಇಂದಿನ ದಿನ ಹೇಗಿದೆ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಇದರ ಜೊತೆಗೆ ನಿತ್ಯಪಂಚಾಂಗವನ್ನೂ ನೋಡುತ್ತಾರೆ. ಹಾಗಿದ್ದರೆ, ಇಂದಿನ ಶುಭಾಶುಭಕಾಲ ಹೇಗಿದೆ? 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ಈ ಕೆಳಗಿನಂತಿದೆ.

Horoscope 05 Jan: ನಿಮ್ಮ ನಡವಳಿಕೆಯನ್ನು ಇತರರಿಗೆ ಸಾಬೀತು ಮಾಡಬೇಕಿಲ್ಲ, ಮಾತಿಗಿಂತ ಮೌನವೇ ಸೂಕ್ತವೆನಿಸುವುದು
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 05, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಜನವರಿ​​​​ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಮಾರ್ಗಶೀರ್ಷ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ನವಮೀ, ನಿತ್ಯನಕ್ಷತ್ರ: ಸ್ವಾತಿ, ಯೋಗ: ಸುಕರ್ಮ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 00 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 15 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:13 ರಿಂದ 12:38ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:27 ರಿಂದ 04:51ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:25 ರಿಂದ 09:49ರ ವರೆಗೆ.

ಮೇಷ ರಾಶಿ: ಜವಾಬ್ದಾರಿಯ ಬಗ್ಗೆ ಹಲವು ವಿಧದಲ್ಲಿ ಯೋಚಿಸುವಿರಿ. ಏಕಾಗ್ರತೆಯನ್ನು ರೂಢಿಸಿಕೊಳ್ಳಲು ನಾನಾ ಪ್ರಯತ್ನಗಳನ್ನು ಮಾಡುವಿರಿ. ಧಾರ್ಮಿಕ ಕಾರ್ಯಕ್ಕೆ ಹೆಚ್ಚು ಒತ್ತು ನೀಡುವಿರಿ. ನಿಮ್ಮ ಕೋಪವನ್ನು ಮಾತಿನಿಂದ ಹೊರಹಾಕುವಿರಿ. ನಿಮ್ಮ ಮಾತುಗಳಿಗೆ ತೂಕವು ಕಡಿಮೆ ಆಗಬಹುದು. ಸ್ಥಾನಕ್ಕಾಗಿ ನೀವು ಎದುರುನೋಡುತ್ತಿದ್ದರೆ ನಿಮಗೆ ಅದು ಸಿಗಬಹುದು. ಗೌಪ್ಯತೆಯನ್ನು ಬಹಿರಂಗಪಡಿಸಿ, ಎಲ್ಲರ ಕೋಪಕ್ಕೆ ಗುರಿಯಾಗಬೇಕಾದೀತು. ಇಂದು ನಿಮ್ಮಲ್ಲಿ ಕ್ರೀಡಾ ಮನೋಭಾವವು ಇಲಿದೆ. ವಾಹನ ಚಾಲನೆಯನ್ನು ಎಚ್ಚರಿಕೆಯಿಂದ ಮಾಡಿ. ಪ್ರಭಾವೀ ವ್ಯಕ್ತಿಗಳ ಒತ್ತಡಕ್ಕೆ ಕೊನೆಗೂ ಶರಣಾಗಬೇಕಾಗುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ. ನಿಮ್ಮನ್ನು ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವಿರಿ. ಹೊಸ ವಸ್ತುಗಳು ಖರೀದಿಯಿಂದ ತೃಪ್ತಿ ಸಿಗುವುದು. ನಿಮ್ಮ ನಿರ್ಧಾರವನ್ನು ಮಕ್ಕಳು ಒಪ್ಪದೇ ಇರುವುದು ನಿಮಗೆ ಕೋಪಬರಬಹುದು.

ವೃಷಭ ರಾಶಿ: ಇಂದು ನಿಮ್ಮ ಕಲ್ಪನೆಯು ದೂರವಾಗಬಹುದು. ಕನಸನ್ನು ನನಸು ಮಾಡಿಕೊಳ್ಳುವುದು ಆಗದು. ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಪ್ರಶಂಸೆ ಸಿಗುವುದು. ನೀವು ಇಂದು ಮಾನಸಿಕವಾಗಿ ಕುಗ್ಗುವಿರಿ. ಯಾರ ಸಮಾಧಾನವೂ ನಿಮಗೆ ಸಾಂತ್ವನವನ್ನು ನೀಡದು. ನಿಮ್ಮ ಇಂದಿನ ಕಾರ್ಯದಲ್ಲಿ ಸಾವಧಾನತೆ ಇರಲಿದೆ. ಆಹಾರದಿಂದ ತೊಂದರೆಯನ್ನು ಅನುಭವಿಸಬೇಕಾದೀತು. ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಯತ್ನ ಮಾಡುವಿರಿ. ನಿಜವಾದ ಯಶಸ್ಸಿಗೆ ಅಡ್ಡದಾರಿಯನ್ನು ಹುಡುಕಿ ಪ್ರಯೋಜನವಾಗದು. ಯಾರದೋ ಸುದ್ದಿಯನ್ನು ಮತ್ಯಾರಿಗೋ ಹೇಳುತ್ತ ಸಮಯವನ್ನು ಕಳೆಯುವಿರಿ. ಕಲಾವಿದರು ಸನ್ಮಾನಕ್ಕೆ ಭಾಜರಾಗುವರು. ಹಣಕಾಸಿನ ವಿಚಾರದಲ್ಲಿ ಬಹಳ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ. ನಿತ್ಯ ಕೆಲಸದಲ್ಲಿ ಎಲ್ಲವೂ ವ್ಯತ್ಯಾಸವಾಗಬಹುದು. ನೂತನ ಗೃಹ ನಿರ್ಮಾಣಕ್ಕೆ ಯೋಜನೆಯನ್ನು ಸಿದ್ಧಪಡಿಸಿಕೊಳ್ಳುವಿರಿ.

ಮಿಥುನ ರಾಶಿ: ನಿಮ್ಮ ಬಳಿ ಕೇಳದೇ ಇರುವ ಯಾವ ವಿಚಾರಕ್ಕೂ ಮಧ್ಯಪ್ರವೇಶ ಮಾಡುವುದು ಬೇಡ. ನಿಮ್ಮವರ ಮಾತುಗಳು ನಿಮಗೆ ಸಹಜದಂತೆ ತೋರಬಹುದು. ತಪ್ಪಿಗೆ ದಂಡವನ್ನು ಕೊಡಬೇಕಾಗುವುದು. ಸಂಗತಿಯನ್ನು ಹಣಕ್ಕಾಗಿ ಪೀಡಿಸುವಿರಿ. ಇಷ್ಟವಿಲ್ಲದ ಕಡೆ ಬಲವಂತವಾಗಿ ಹೋಗುವಿರಿ. ಆಪ್ತರು ನೀಡಿದ ವಸ್ತುವನ್ನು ಕಳೆದುಕೊಳ್ಳುವಿರಿ. ಸ್ವಯಂ ಕೃತ ಅಪರಾಧವೇ ನಿಮಗೆ ಮುಳುವಾಗಬಹುದು. ಆಕಸ್ಮಿಕ ಲಾಭದ ನಿರೀಕ್ಷೆಯಲ್ಲಿ ನೀವು ಇರುವಿರಿ. ಬೇಕಾದಷ್ಟು ಮಾತ್ರ ಮಾತುಗಳನ್ನಾಡಿ. ತಲೆಯ ನೋವಿಗೆ ಯೋಗ್ಯ ಚಿಕಿತ್ಸೆಯನ್ನು ಮಾಡಿಕೊಳ್ಳಿ. ಅತಿಥಿಗಳ ಆಗಮನದಿಂದ ಸಂತೋಷವಾಗುವುದು. ನಿಮ್ಮ ಬಲದ ಪ್ರದರ್ಶನವನ್ನು ಮಾಡುವಿರಿ. ಸಂಗಾತಿಯ ಜೊತೆ ಸಣ್ಣ ವಿಚಾರಕ್ಕೂ ಕಲಹ ಮಾಡಿಕೊಳ್ಳುವಿರಿ. ಹೂಡಿಕೆಯ ಬಗ್ಗೆ ಸರಿಯಾದ ನಿರ್ಧಾರವಿರಲಿ. ನಿಮ್ಮ ಚಂಚಲವಾದ ಸ್ವಭಾವವನ್ನು ನಿಯಂತ್ರಿಸಲು ಪ್ರಯತ್ನಿಸಿದರೂ ಕಷ್ಟವಾದೀತು.

ಕಟಕ ರಾಶಿ: ಇಂದು ನಿಮ್ಮ ವೈಯಕ್ತಿಕ ಕಾರ್ಯಗಳ ಕಡೆ ಗಮನವಿರುವುದು. ಆಯಾಸದಿಂದ ಬುದ್ಧಿಯು ಹೆಚ್ಚಿನದಾದುದನ್ನು ಸೂಚಿಸದು. ನಿಮ್ಮ ಮಿತಿಯನ್ನು ಮೀರಿ ಮಾತನಾಡುವುದು ಹಾಸ್ಯಾಸ್ಪದವಾದೀತು. ಹೊಸ ಸಾಧ್ಯತೆಗಳನ್ನು ನೀವು ಹುಡುಕುವಿರಿ. ಗೆಳತಿಯ ಜೊತೆ ಆತ್ಮೀಯ ಒಡನಾಡವನ್ನು ಇಟ್ಟುಕೊಳ್ಳುವಿರಿ. ಮನೆಯಲ್ಲಿ ಆಸ್ತಿಯ ವಿಚಾರವಾಗಿ ಸಣ್ಣ ಬಿರುಸಿನ ಮಾತುಗಳು ಕೇಳಿಬರಬಹುದು. ಕತ್ತಲೆಯನ್ನು ಶಪಿಸುವುದಕ್ಕಿಂತ ಬೆಳಕನ್ನು ಹುಡುಕುವುದು ಉತ್ತಮ. ನಿಮ್ಮ ಮೇಲೆ ಪಿತೂರಿ ಮಾಡಿದ ಅನುಮಾನ ಇರಲಿದೆ. ಮನಸ್ಸಿನ ದುಗುಡವನ್ನು ಶಾಂತಮಾಡಿಕೊಳ್ಳುವಿರಿ. ನಿಮ್ಮ ವಿಚಾರವನ್ನು ನೀವು ಗುಪ್ತವಾಗಿ ತಿಳಿದುಕೊಳ್ಳುವಿರಿ. ನಿಮ್ಮ ಮೌನವು ಅಸಹಾಯಕತೆಯನ್ನು ತೋರಿಸಬಹುದು. ನಿಮ್ಮ ಕಾರ್ಯದಲ್ಲಿ ಉದ್ದೇಶವು ಸ್ಪಷ್ಟವಾಗಿ ಇರಲಿ. ಕೆಲಸವು ಪೂರ್ಣವಾಗದೇ ಒದ್ದಾಡಿಕೊಂಡು ಇಂದಿನ ಕೆಲಸವನ್ನು ಮಾಡುವಿರಿ. ಸಂಗಾತಿಯ ಕೋಪವನ್ನು ನೀವು ಕಡಿಮೆ ಮಾಡುವಿರಿ. ಆಹಾರವು ನಿಮ್ಮ ಆರೋಗ್ಯವನ್ನು ಕೆಡಿಸೀತು.

ಸಿಂಹ ರಾಶಿ: ನ್ಯಾಯಾಲಯದಲ್ಲಿ ನಿಮ್ಮದಾದ ಕೆಲಸಗಳು ಅಪೂರ್ಣವಾಗಲಿದೆ. ನಿಮ್ಮದಲ್ಲದ ತಪ್ಪಿದ್ದರೂ ಅದನ್ನು ಒಪ್ಪಿಕೊಂಡು ಮುಂದುರಿಯುವಿರಿ. ಸೋಲನ್ನು ಸಕಾರಾತ್ಮಕವಾಗಿ ಸ್ವೀಕರಿಸುವಿರಿ. ಸುಲಭದ ತುತ್ತನ್ನೂ ಜೀರ್ಣಿಸಿಕೊಳ್ಳಲಾಗದೆ ಸ್ಥಿತಿ ಬರಬಬಹುದು. ಅಸಹಜ ವರ್ತನೆಯ ಬಗ್ಗೆ ನೀವು ಏನನ್ನೂ ಹೇಳುವುದು ಬೇಡ. ಮಕ್ಕಳಿಂದ ನಿಮಗೆ ಆರ್ಥಿಕ ನೆರವು ಸಿಗುವುದು. ನಿಮಗೆ ಗೌರವಕ್ಕೆ ತೊಂದರೆ ಆಗಬಹುದು. ಉತ್ತಮ ಭೋಜನವನ್ನು ಮಾಡುವಿರಿ. ಆರೋಗ್ಯವು ಕೆಡಲಿದ್ದು ಹತ್ತಾರು ಆಲೋಚನೆಗಳು ಬರಬಹುದು. ನಿಮ್ಮನ್ನು ಭಾವನಾತ್ಮಕವಾಗಿ ಕಟ್ಟಿಹಾಕಬಹುದು. ವಿರೋಧಿಗಳ ಮಾತಿನ ಭರದಲ್ಲಿ ನಿಮ್ಮ ಮಾತು ಗೌಣವಾಗಬಹುದು. ನೀವು ಇಂದು ವಿದ್ಯುತ್ ಉಪಕರಣದ ಮಾರಟಗಾರರಾಇದ್ದರೆ ಅಧಿಕ ಲಾಭವು ಸಿಗುವುದು. ಸಾರ್ವಜನಿಕವಾಗಿ ಹೆಚ್ಚು ಪ್ರಭಾವ ಉಳ್ಳವರಾಗಿದ್ದು ಗೌರವವು ಸಿಗಲಿದೆ. ಬೆಳವಣಿಗೆಗೆ ಅವಕಾಶಗಳು ಸಿಕ್ಕರೂ ಅದು ನಿಮಗೆ ಸರಿಯಾಗದು.

ಕನ್ಯಾ ರಾಶಿ: ಹಣದ ಕೊರತೆ ಇದ್ದರೂ ಅದನ್ನು ತೋರಿಸಿಕೊಳ್ಳಲು ಹೋಗದೇ ಎಲ್ಲರಂತೆ ಇರುವಿರಿ. ಪ್ರಭಾವಿ ವ್ಯಕ್ತಿಗಳ ಜೊತೆ ಕೆಲಸ ಮಾಡುವ ಅವಕಾಶವನ್ನು ಹೇಗೋ ಪಡೆಯುವಿರಿ. ಕುಟುಂಬದವರ ವಿರೋಧದ ನಡುವೆ ಸಾಮಾಜಿಕ ಕೆಲಸಕ್ಕೆ ತೆರಳುವಿರಿ. ಮಾತಿನಲ್ಲಿ ಹಿಡಿತಬೇಕು ಎನಿಸಬಹುದು. ನಿಮ್ಮ ಬಗ್ಗೆ ಯಾವುದನ್ನೂ ಹೇಳಿಕೊಳ್ಳದೇ ಮಾಡುವ ಕಾರ್ತದ ಕಡೆ ಗಮನ ಇರಲಿ. ಯಾರಿಗೂ ಹೇಳಿಕೊಳ್ಳದೇ ನೀವೊಬ್ಬರೇ ರೋಗವನ್ನು ಅನುಭವಿಸುವಿರಿ. ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಉತ್ತಮಸ್ಥಾನವು ಸಿಗಲಿದೆ. ವಿದೇಶೀಯ ವ್ಯಾಪಾರವು ಹೆಸರಿಗಷ್ಟೇ ಇರುವುದು. ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು. ನಿಮ್ಮನ್ನು ಪರೋಕ್ಷವಾಗಿ ಯಾರದರೂ ನಿವಾರಿಸಬಹುದು. ಸಂಗಾತಿಯ ಮಾತಿಗೆ ನೀವು ಉತ್ತರಿಸಲಾರಿರಿ. ನಿಮ್ಮ ಲಾಭಾಂಶದ ಕೆಲವು ಭಾಗವನ್ನು ನೀವು ದಾನ ಮಾಡುವಿರಿ.

ತುಲಾ ರಾಶಿ: ಸಾಲದ ಹೊರೆಯು ಭಾರಕ್ಕಿಂತ ಕಿರಿಕಿರಿಯನ್ನು ಹೆಚ್ಚು ಮಾಡುವುದು. ವ್ಯವಹಾರದಲ್ಲಿ ಸಂಬಂಧವನ್ನು ಬೆಸೆದು ವ್ಯವಹಾರವನ್ನೂ ಸಂಬಂಧವನ್ನೂ ಎರಡನ್ನೂ ಹಾಳುಮಾಡಿಕೊಳ್ಳುವಿರಿ. ನಿಮಗೆ ಬೇಡದ ವಸ್ತುಗಳನ್ನು ನೀವು ಇನ್ನೊಬ್ಬರಿಗೆ ದಾನವಾಗಿ ಕೊಡುವಿರಿ. ಯಾರಿಂದಲೋ ಪ್ರೇರಿತರಾಗಿ ಆಸ್ತಿಯನ್ನು ಪಡೆಯುವ ಹುನ್ನಾರ ನಡೆಸುವಿರಿ. ರಾಜಕೀಯದಲ್ಲಿ ವಿವಾದಸ್ಪದ ಮಾತುಗಳು ಆಡಿ ಎಲ್ಲರ ಕೆಂಗಣ್ಣಿಗೆ ಸಿಲುಕುವಿರಿ. ಮುಖಂಡರ ಜೊತೆ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಇಂದು ನಿಮ್ಮ ಮಾತಿನ ಆರಂಭವೇ ನೀವು ಎಂತಹವರು ಎನ್ನುವುದನ್ನು ತಿಳಿಸುತ್ತದೆ. ಕೆಲಸಗಳಲ್ಲಿ ನೀವು ಜಯವನ್ನು ಸಾಧಿಸಬಹುದು. ಸೊಂಟದ ನೋವು ಅಧಿಕವಾಗಿ ಕಾಡಬಹುದು. ಸಂಗಾತಿಯ ಮೇಲೆ ಯಾರದೋ ಕಾರಣಕ್ಕೆ ಮುನಿಸಿಕೊಳ್ಳುವಿರಿ.

ವೃಶ್ಚಿಕ ರಾಶಿ: ಔದಾರ್ಯದ ಪ್ರದರ್ಶನದಿಂದ ನಿಮ್ಮ ಸಂಪತ್ತಿಗೆ ಕುತ್ತು ಬಂದೀತು. ಮಾತಿಗಿಂತ ಮೌನವೇ ಸೂಕ್ತವೆನಿಸೀತು. ಯಾರದೋ ಪ್ರಚೋದನೆಯಿಂದ ತಪ್ಪು ಹಾದಿಯಲ್ಲಿ ಹೋಗುವಿರಿ. ಗೌರವವು ಸಿಗಬೇಕಾದ ಕಡೆ ಸಿಗದೇ ಬೇಸರವಾಗುವುದು. ನಿಮ್ಮ ವೃತ್ತಿಯಲ್ಲಿ ಭವಿಷ್ಯವನ್ನು ಹೆಚ್ಚಿಸಲು ನಿಮ್ಮ ಪರಿಣತಿಯನ್ನು ಬಳಸಿ. ಇಂದು ನಿಮ್ಮ ಮಾರ್ಗದರ್ಶನವನ್ನು ಕೇಳಿಕೊಂಡು ಬರಬಹುದು. ಇಂದಿನ ನಿಮ್ಮ ಕೆಲಸಗಳು ಬಹಳ ವಿಳಂಬವಾಗುದು. ಮಕ್ಕಳ‌ ಜೊತೆ ಅನ್ಯೋನ್ಯ ಸಂಬಂಧವು ಕಾಣಿಸಿಕೊಂಡೀತು. ನೀವು ಹೇಳಿದ ಕೆಲಸವೂ ವೇಗವಾಗಿ ಮುಗಿಯದು. ಸ್ನೇಹಿತರಿಗೆ ಬೇಸರವಾಗಬಾರದೆಂದು ಅವರ ಜೊತೆ ಸಮಸ್ಯೆ ಕಳೆಯುವಿರಿ. ಅಧಿಕಾರಿಗಳು ನಿಮಗೆ ತೊಂದರೆ ಕೊಡಬಹುದು. ಶಿಸ್ತಿನ ವ್ಯವಹಾರವನ್ನು ಬಿಡದೇ ಮುಂದುವರಿಸುವಿರಿ. ನಿಮ್ಮ ಬಳಿ ಇರುವ ವಸ್ತುಗಳನ್ನು ಬಳಸಿಕೊಂಡು ನಿಮ್ಮ ಕಾರ್ಯವನ್ನು ಪೂರೈಸಿಕೊಳ್ಳಿ. ಹೊಸ ವಸ್ತುವಿಗೆ ಧನವನ್ನು ವ್ಯಯಮಾಡುವುದು ಬೇಡ.

ಧನು ರಾಶಿ: ನೌಕರರಿಗೆ ಸರಿಯಾದ ಕಾರ್ಯವನ್ನು ಹಂಚಿ, ಆಗಬೇಕಾದುದನ್ನು ಪೂರೈಸಿಕೊಳ್ಳುವಿರಿ. ಅಜ್ಞಾತವಾಸದಿಂದ ಹೊರಬಂದಂತೆ ಎಲ್ಲರೂ ನಿಮ್ಮನ್ನು ಮಾತನಾಡಿಸಿಯಾರು. ನಿಮ್ಮ ಮಾತು ಸುಳ್ಳಾಗಲಿದ್ದು ನಂಬಿಕೆಯನ್ನು ಕಳೆದುಕೊಳ್ಳುವಿರಿ. ನಿಮ್ಮವರು ನೀವಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳುವರು. ಕುಟುಂಬದಲ್ಲಿ ನಿಮ್ಮ ಪ್ರಾಮುಖ್ಯವು ಅರಿವಿಗೆ ಬರಬಹುದು. ಬೇಡದ ಆಲೋಚನೆಯನ್ನು ದೂರಮಾಡಿಕೊಳ್ಳಿ. ಪ್ರೇಮಕ್ಕಾಗಿ ಹೆಚ್ಚು ಖರ್ಚನ್ನು ಮಾಡಬೇಕಾದೀತು. ಹಿತಶತ್ರುಗಳ ಬಗ್ಗೆ ನಿಮ್ಮ ಊಹೆಯು ಸುಳ್ಳಾಗಬಹುದು. ಆರೋಗ್ಯವು ಬಡವಾದಂತೆ ತೋರುವುದು. ಸೋಲಿನ ಚಿಂತೆಯನ್ನು ಬಿಟ್ಟು ಸ್ಪರ್ಧೆಯಲ್ಲಿ ತೊಡಗಿ. ಉದ್ಯೋಗವನ್ನು ಬಿಡುವ ಸಂದರ್ಭವೂ ಬರಬಹುದು. ಮನೋ ವ್ಯಥೆಯನ್ನು ಯಾರ ಬಳಿಯಾದರೂ ಹೇಳಿಕೊಳ್ಳುವಿರಿ. ಸಂಬಂಧಗಳಲ್ಲಿ ವಿಷಮತೆ ಕಾಣಿಸಿಕೊಂಡೀತು. ನಿಮ್ಮ ಗುರಿಯನ್ನು ತಲುಪಲು ಬೇರೆ ಮಾರ್ಗವನ್ನೂ ಅನುಸರಿಸಬೇಕಾದೀತು.

ಮಕರ ರಾಶಿ: ನಿಮ್ಮ ಅದೃಷ್ಟವನ್ನು ಸರಿಯಾಗಿ ಬೆಳೆಸಿಕೊಂಡು ಆಗಬೇಕಾದುದನ್ನು ಮಾಡಿಸಿಕೊಳ್ಳುವಿರಿ. ನಿಮ್ಮ ನಡವಳಿಕೆಯನ್ನು ಇತರರಿಗೆ ಸಾಬೀತುಮಾಡಬೇಕಿಲ್ಲ. ಉದ್ಯೋಗಿಗಳಿಗೆ ಉನ್ನತ ಅಧಿಕಾರಿಗಳ ಜೊತೆ ಸರಿಯಾದ ಹೊಂದಾಣಿಕೆಯನ್ನು ಮಾಡಿಕೊಳ್ಳುವಿರಿ. ಆತ್ಮೀಯ ಸಂಬಂಧವು ಕಾರಣಾಂತರಗಳಿಂದ ಕಡಿತವಾಗಿದ್ದು ನೀವು ಪುನಃ ಸ್ಥಾಪಿಸಿಕೊಂಡು ಎಂದಿನಂತೆ ನೆಮ್ಮದಿಯಿಂದ ಇರುವಿರಿ. ಮುರಿದ ಸಂಬಂಧಗಳು ಎಷ್ಟೇ ಆದರೂ ಸರಿಯಾಗಿ ಕೂಡಿಕೊಳ್ಳುವುದು ಕಷ್ಟವಾದೀತು. ಇಂದಿನ ಕಾರ್ಯಗಳಲ್ಲಿ ತೊಂದರೆಗಳು ಎದ್ದು ಕಾಣಿಸುವುದು. ಜಾಣ್ಮೆಯನ್ನು ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ. ಯಾರಾದರೂ ರಾಜಕೀಯ ವ್ಯಕ್ತಿಗಳ ಸಂಪರ್ಕವನ್ನು ನೀವು ಮಾಡುವಿರಿ. ದೈವದ ಮೇಲೆ ಭಕ್ತಿ ಉಂಟಾದೀತು. ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಂಡು ಕೂಗಾಡಬಹುದು. ನಿಮ್ಮ ಅಭಿಪ್ರಾಯವನ್ನು ಹೇಳಬೇಕಾದಲ್ಲಿ ಹೇಳುವ ರೀತಿಯಲ್ಲಿ ಹೇಳಿ.

ಕುಂಭ ರಾಶಿ: ವೈಚಾರಿಕ ಮನೋಭಾವವನ್ನು ಬೆಳೆಸಿಕೊಳ್ಳುವುದು ನಿಮಗೆ ಇಷ್ಟವಾದೀತು. ಬೋಧನೆಯ ವಿಚಾರದಲ್ಲಿ ಆಸಕ್ತಿಯನ್ನು ಹೆಚ್ಚಿಸಿಕೊಳ್ಳುವಿರಿ. ವ್ಯಾಪಾರದಲ್ಲಿ ಅಜಾಗರೂಕರಾಗಿ ಇರುವುದು ಸರಿಯಲ್ಲ. ಸಂಶೋಧನೆಯ ಬಗ್ಗೆ ಆಸಕ್ತಿಯು ಹೆಚ್ಚಿರುವುದು. ಸಂಗಾತಿಯ ಬೇಸರವನ್ನು ಮಾತುಗಳಿಂದ ಸರಿಮಾಡುವಿರಿ. ಅಮೂಲ್ಯ ವಸ್ತುವಿನ ಲಾಭದಿಂದ ಸಂತಸವಾಗಲಿದೆ. ಸಹಾಯವನ್ನು ಮಾಡಿ ಸಂತೃಪ್ತಿಯನ್ನು ಪಡೆಯುವಿರಿ. ಅಪರಿಚಿತರ ಜೊತೆ ವೃಥಾ ಕಲಹವಾಗಬಹುದು. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಕೆಲವು ಗೊಂದಲವು ಪರಿಹಾರವಾಗದೇ ಹಾಗೆಯೇ ಇರುವುದು. ನಿಮ್ಮ ಕೆಲಸಕ್ಕೆ ಅಧಿಕಾರಿಗಳು ಪ್ರಶಂಸಿಸುವರು. ಬಹಳ ದಿನಗಳಿಂದ ನಡೆಯುತ್ತಿದ್ದ ನ್ಯಾಯಾಲಯದ ವ್ಯವಹಾರವನ್ನು ಮುಕ್ತಾಯ ಮಾಡಿಕೊಳ್ಳುವಿರಿ. ಮಿತ್ರರೆಂದು ಹೇಳಿಕೊಂಡು ಯಾರಾದರೂ ಬರಬಹುದು. ಸರಿಯಾದ ಮೂಲದಿಂದ ಬಂದ ಸುದ್ದಿ ಮಾತ್ರ ನಂಬಲು ಅರ್ಹವಾಗಿರುವುದು.

ಮೀನ ರಾಶಿ: ಇಂದು ನಿಮಗೆ ಆಸೆಗಳನ್ನು ಪೂರೈಸಲು ನಿಮಗೆ ಸಾಧ್ಯವಾದರೂ ತೃಪ್ತಿಯು ಮಾತ್ರ ಇಲ್ಲವಾಗುವುದು. ನಿಮಗೆ ಕಛೇರಿಯಲ್ಲಿ ಅನುಕೂಲಕರವಾದ ವಾತಾವರಣವು ಇರಲಿದೆ. ಸ್ನೇಹಿತರ ಜೊತೆಗೆ ದೂರಪ್ರಯಾಣವನ್ನು ಮಾಡುವಿರಿ. ನಿಮ್ಮನ್ನು ನೌಕರರು ಹೋಗಳುವರು. ಎದರುರಾಗು ಅಡ್ಡಿ, ಆತಂಕಗಳನ್ನು ನೀವು ಅನಾಯಾಸವಾಗಿ ದೂರ ಸರಿಸುವಿರಿ. ನಿಮ್ಮನ್ನು ನಗಿಸುವ ಪ್ರಯತ್ನ ಮಾಡಿದರೂ ನೀವು ಯಾವುದೋ ಆಲೋಚನೆಯಲ್ಲಿಯೇ ಇರುವಿರಿ. ನಿಮ್ಮ ಇಂದಿನ ಶ್ರಮಕ್ಕೆ ತಕ್ಕುದಾದ ಫಲವು ಸಿಗಬಹುದು. ಭೂಮಿಯ ವ್ಯಾಪಾರದಲ್ಲಿ ಜಯವಾಗಲಿದೆ. ಇಂದು ಸರ್ಕಾರಿ ಕೆಲಸಕ್ಕೆ ಓಡಾಟ ಮಾಡುವಿರಿ. ನಿಮಗೆ ಕೆಲಸದಲ್ಲಿ ಅನೇಕ ಗೊಂದಲಗಳು ಇರಬಹುದು. ಕುಟುಂಬದ ಹೊಣೆಗಾರಿಕೆಯನ್ನು ನಿರ್ವಹಿಸುವುದು ಕಷ್ಟವಾಗಬಹುದು. ಅಕ್ರಮ ಕೆಲಸಗಳು ಎಲ್ಲರಿಗೂ ತಿಳಿಯಬಹುದು.

ಲೋಹಿತ ಹೆಬ್ಬಾರ್ – 8762924271 (what’s app only)

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ