Job Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ 12 ರಿಂದ 18ರ ವರೆಗಿನ ಉದ್ಯೋಗ ಭವಿಷ್ಯ ತಿಳಿಯಿರಿ
ಏಪ್ರಿಲ್ 12 ರಿಂದ 18 ರ ಅವಧಿಯಲ್ಲಿ ಮೀನ ರಾಶಿಯಲ್ಲಿ ಶನಿ ಮತ್ತು ಮಿಥುನ ರಾಶಿಯಲ್ಲಿ ಗುರು ಗ್ರಹಗಳ ಸಂಚಾರವು ನಿಮ್ಮ ಉದ್ಯೋಗ ಮತ್ತು ವೃತ್ತಿಜೀವನದ ಮೇಲೆ ಗಣನೀಯ ಪರಿಣಾಮ ಬೀರಲಿದೆ. ಬಡ್ತಿ, ಹೊಸ ಅವಕಾಶಗಳು, ಆರ್ಥಿಕ ಲಾಭಗಳು, ಸವಾಲುಗಳು ಮತ್ತು ನಿರ್ಧಾರಗಳ ಕುರಿತು ಪ್ರತಿಯೊಂದು ರಾಶಿಗೂ ವಿಭಿನ್ನ ಫಲಿತಾಂಶಗಳಿವೆ. ನಿಮ್ಮ ವೃತ್ತಿ ಪ್ರಗತಿಗೆ ಈ ಗ್ರಹಸ್ಥಿತಿಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದರ ಕುರಿತು ವಿವರವಾದ ಭವಿಷ್ಯ ಇಲ್ಲಿದೆ.

ಏಪ್ರಿಲ್ 12ರಿಂದ 18ರ ಅವಧಿಯಲ್ಲಿ ಸಾಡೇ ಸಾಥ್ ಶನಿ ಮೀನ ರಾಶಿಯಲ್ಲಿ ಹಾಗೂ ಗುರು ಮಿಥುನ ರಾಶಿಯಲ್ಲಿದ್ದಾನೆ. ಈ ಗ್ರಹಸ್ಥಿತಿಗಳು ಉದ್ಯೋಗದ ಮೇಲೆ ಬೀರುವ ಅನೇಕ ಪ್ರಭಾವಗಳನ್ನು ಬೀರಲಿವೆ.
ಮೇಷ:
ಉದ್ಯೋಗದಲ್ಲಿ ಹಠಾತ್ ಬದಲಾವಣೆ ಸಾಧ್ಯತೆ. ಹಿರಿಯ ಅಧಿಕಾರಿಗಳಿಂದ ಒತ್ತಡ ಬರಬಹುದು. ಆದರೆ ನಿಮ್ಮ ಸಂವಹನ ಕಲೆ ಮತ್ತು ಶ್ರಮದಿಂದ ವಾರದ ಕೊನೆಯಲ್ಲಿ ಉತ್ತಮ ಲಾಭ ಹಾಗೂ ಕಚೇರಿಯಲ್ಲಿ ಸ್ಥಾನಮಾನ ಪಡೆಯುವಿರಿ.
ವೃಷಭ:
ವೃತ್ತಿಯಲ್ಲಿ ಬಹಳ ಸಮಯದಿಂದ ನಿರೀಕ್ಷಿಸುತ್ತಿದ್ದ ಬಡ್ತಿ ಸಿಗುವ ಸಮಯ. ಆರ್ಥಿಕವಾಗಿ ಲಾಭದಾಯಕ ದಿನಗಳು. ಹೊಸ ಉದ್ಯೋಗದ ಆಫರ್‌ಗಳು ನಿಮ್ಮನ್ನು ಹುಡುಕಿ ಬರಲಿವೆ. ಆತ್ಮವಿಶ್ವಾಸದಿಂದ ಹೆಜ್ಜೆ ಇಡಿ, ಯಶಸ್ಸು ನಿಮ್ಮದಾಗಲಿದೆ.
ಮಿಥುನ:
ನಿಮ್ಮ ರಾಶಿಯಲ್ಲೇ ಗುರು ಇರುವುದರಿಂದ ಉದ್ಯೋಗದಲ್ಲಿ ಹೊಸ ಆಯಾಮ ತೆರೆದುಕೊಳ್ಳಲಿದೆ. ಸೃಜನಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ವ್ಯಾಪಾರಸ್ಥರಿಗೆ ಲಾಭದಾಯಕ ವಾರವಿದು. ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಕಾಪಾಡಿಕೊಳ್ಳಿ.
ಕರ್ಕಾಟಕ:
ದೂರದ ಪ್ರಯಾಣದಿಂದ ವೃತ್ತಿಜೀವನದಲ್ಲಿ ಲಾಭವಾಗಲಿದೆ. ಧಾರ್ಮಿಕ ಅಥವಾ ಶಿಕ್ಷಣ ಕ್ಷೇತ್ರದಲ್ಲಿರುವವರಿಗೆ ಇದು ಅತ್ಯಂತ ಶುಭ ಕಾಲ. ಭಾಗ್ಯೋದಯವಾಗುವ ಸೂಚನೆಗಳಿದ್ದು, ಮೇಲಧಿಕಾರಿಗಳ ಸಂಪೂರ್ಣ ಸಹಕಾರ ನಿಮಗಿರುತ್ತದೆ.
ಸಿಂಹ:
ಕೆಲಸದ ಸ್ಥಳದಲ್ಲಿ ಶತ್ರುಗಳ ಕಾಟವಿರಬಹುದು, ಜಾಗರೂಕರಾಗಿರಿ. ಹಠಾತ್ ವರ್ಗಾವಣೆಯ ಯೋಗವಿದೆ. ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಹಿರಿಯರ ಸಲಹೆ ಪಡೆಯಿರಿ. ಆರೋಗ್ಯದ ಕಡೆಗೂ ಸ್ವಲ್ಪ ಗಮನ ನೀಡುವುದು ಅನಿವಾರ್ಯ.
ಕನ್ಯಾ:
ಪಾಲುದಾರಿಕೆ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರುತ್ತದೆ. ಸಾರ್ವಜನಿಕ ಸಂಪರ್ಕ ಹೊಂದಿರುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ನಿಮ್ಮ ಕಾರ್ಯಕ್ಷಮತೆ ಹೆಚ್ಚಾಗಲಿದ್ದು, ಹೊಸ ಒಪ್ಪಂದಗಳಿಗೆ ಸಹಿ ಹಾಕಲು ಇದು ಅತ್ಯಂತ ಸೂಕ್ತವಾದ ಸಮಯವಾಗಿದೆ.
ತುಲಾ:
ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಶುಭ ವಾರ್ತೆ ಇದೆ. ಉದ್ಯೋಗದಲ್ಲಿರುವ ಸಣ್ಣಪುಟ್ಟ ಸಮಸ್ಯೆಗಳು ಬಗೆಹರಿಯಲಿವೆ. ಕಠಿಣ ಪರಿಶ್ರಮದಿಂದ ಮಾತ್ರ ಗುರಿ ತಲುಪಲು ಸಾಧ್ಯ. ಸಾಲದ ಬಾಧೆಗಳಿಂದ ಮುಕ್ತಿ ಪಡೆಯಲು ದಾರಿ ಗೋಚರಿಸಲಿದೆ.
ವೃಶ್ಚಿಕ:
ಬುದ್ಧಿವಂತಿಕೆಯಿಂದ ಕಠಿಣ ಸವಾಲುಗಳನ್ನು ಎದುರಿಸುವಿರಿ. ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಉತ್ತಮ ವೇದಿಕೆ ಸಿಗಲಿದೆ. ಉದ್ಯೋಗ ಬದಲಾವಣೆಗೆ ಇದು ಪೂರಕ ಸಮಯವಲ್ಲ, ಇರುವ ಕಡೆಯೇ ನಿಮ್ಮ ಶಕ್ತಿ ಪ್ರದರ್ಶಿಸಿ ಜಯಿಸಿ.
ಧನು:
ವೃತ್ತಿ ಕ್ಷೇತ್ರದಲ್ಲಿ ಸುಧಾರಣೆ ಕಂಡುಬರುತ್ತದೆ. ಭೂಮಿ ಅಥವಾ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿರುವವರಿಗೆ ಹೆಚ್ಚಿನ ಲಾಭ. ಮನೆಯಿಂದಲೇ ಕೆಲಸ ಮಾಡುವವರಿಗೆ ಕೆಲಸದ ಒತ್ತಡ ಹೆಚ್ಚಿರಬಹುದು. ಸ್ಥಿರವಾದ ಮನಸ್ಥಿತಿ ಕಾಪಾಡಿಕೊಳ್ಳಿ.
ಮಕರ:
ನಿಮ್ಮ ಪರಾಕ್ರಮದಿಂದ ಕಷ್ಟದ ಕೆಲಸಗಳನ್ನು ಸುಲಭವಾಗಿ ಮುಗಿಸುವಿರಿ. ಲೇಖಕರು ಮತ್ತು ಪತ್ರಕರ್ತರಿಗೆ ಶುಭ ಕಾಲ. ಕಿರಿಯ ಸಹೋದ್ಯೋಗಿಗಳಿಂದ ಉತ್ತಮ ಸಹಕಾರ ಸಿಗಲಿದೆ. ಆರ್ಥಿಕವಾಗಿ ಈ ವಾರ ಧನ ಲಾಭದ ಸೂಚನೆಗಳಿವೆ.
ಕುಂಭ:
ಮಾತಿನ ಮೇಲೆ ನಿಗಾ ಇರಲಿ, ಕಚೇರಿಯಲ್ಲಿ ವಾದಗಳನ್ನು ತಪ್ಪಿಸಿ. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರ ಅಗತ್ಯ. ಕುಟುಂಬದ ವ್ಯವಹಾರಗಳನ್ನು ವೃತ್ತಿಯೊಂದಿಗೆ ಬೆರೆಸಬೇಡಿ. ತಾಳ್ಮೆಯಿಂದ ಕೆಲಸ ಮಾಡಿದರೆ ವಾರಾಂತ್ಯಕ್ಕೆ ಶುಭ ಫಲ ದೊರೆಯಲಿದೆ.
ಮೀನ:
ರಾಶಿಯಲ್ಲಿ ಶನಿ ಇರುವುದರಿಂದ ಕೆಲಸದಲ್ಲಿ ಗೊಂದಲವಿರಬಹುದು. ಶಿಸ್ತುಬದ್ಧವಾಗಿ ಕೆಲಸ ಮಾಡುವುದು ಅನಿವಾರ್ಯ. ಅತಿಯಾದ ಆಲೋಚನೆ ಬಿಟ್ಟು ಕರ್ತವ್ಯದ ಮೇಲೆ ಗಮನವಿಡಿ. ಧೈರ್ಯದಿಂದ ಕೆಲಸ ಮಾಡಿದರೆ ಅಡೆತಡೆಗಳು ದೂರವಾಗುತ್ತವೆ.
– ಲೋಹಿತ ಹೆಬ್ಬಾರ್ – 8762924271




