AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನ ಭವಿಷ್ಯ; ಇಂದು ವಾಹನ ಚಾಲನೆ ಮಾಡುವಾಗ ಜಾಗರೂಕರಾಗಿರಿ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 27 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನ ಭವಿಷ್ಯ; ಇಂದು ವಾಹನ ಚಾಲನೆ ಮಾಡುವಾಗ ಜಾಗರೂಕರಾಗಿರಿ
ದಿನಭವಿಷ್ಯ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: May 27, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಶುಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 55 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:41 ರಿಂದ 09:17 ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:54 ರಿಂದ 12:30ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:06 ರಿಂದ 03:43ರ ವರೆಗೆ.

ಸಿಂಹ ರಾಶಿ: ಉದ್ಯೋಗವನ್ನು ಅರಸುತ್ತ ಇದ್ದರೆ ಇಂದು ಉತ್ತಮ ಉದ್ಯೋಗವು ಅನಿರೀಕ್ಷಿತವಾಗಿ ಸಿಗಲಿದೆ. ಸಿಕ್ಕ ಉದ್ಯೋಗವು ಮುಂದೆ ಅನೇಕ ಲಾಭವನ್ನು ಮಾಡಿ ಕೊಡಲಿದೆ. ವಾಹನಚಾಲನೆ ಮಾಡುವಾಗ ಜಾಗರೂಕರಾಗಿರಿ. ಇನ್ನೊಬ್ಬರಿಂದ ನಿಮ್ಮ ವಾಹನಕ್ಕೆ ಅಪಘಾತವಾಗಬಹುದು. ಭಯದ ವಾತಾವರಣದಲ್ಲಿ ಹೊರಬರಲು ಕಷ್ಟವಾಗದು. ಕೆಲಸವು ನಿಧಾನವಾದುದರಿಂದ ನಿಮಗೆ ನಿರಾಸೆಯಾಗಬಹುದು. ವಿನಾಕಾರಣ ಮನೆಯವರನ್ನು ದೂರುತ್ತ ಕುಳಿತುಕೊಳ್ಳಬೇಡಿ. ನಿಮ್ಮ ಕರ್ತವ್ಯವೇನು ಎಂಬುದು ನೀವೇ ನೆನಪಿಗೆ ತಂದುಕೊಂಡು ಮಾಡಿ. ಅತಿಯಾಸೆಯಿಂದ ದುಃಖವು ಬರಬಹುದು. ಸಂತಾನದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣದ ಬಗ್ಗೆ ಸರಿಯಾದ ನಿರ್ಧಾರವಿರಲಿ. ಕುಟುಂಬದವರ ಜೊತೆ ನಿಮ್ಮ ಸಮಯವನ್ನು ನೀಡಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ. ಕೆಲವರ ಸ್ವಭಾವು ಇಷ್ಟವಾಗದೇ ಅವರಿಂದ ದೂರವಿರಲು ಪ್ರಯತ್ನಿಸುವಿರಿ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ.

ಕನ್ಯಾ ರಾಶಿ: ಇಂದು ಹಲವಾರು ದಿನಗಳಿಂದ ವಾಹನ ಖರೀದಿಯ ಆಸೆಯನ್ನು ಪೂರ್ಣಮಾಡಿಕೊಳ್ಳುವಿರಿ. ವಿನಾಕಾರಣ ವಾಗ್ವಾದಗಳು ನಡೆಯಬಹುದು. ನ್ಯಾಯಾಲಯದಲ್ಲಿ ನಿಮಗೆ ಜಯವು ಸಿಗಲಿದೆ. ಭೂಮಿಯ ವ್ಯವಹಾರದಲ್ಲಿ ನೀವು ಹಣವನ್ನು ಸಂಪಾದಿಸಲಿದ್ದೀರಿ. ಭೂಮಿಗೆ ಸಂಬಂಧಿಸಿದಂತೆ ಸಣ್ಣ ಕಲಹಗಳು ಆಗಬಹುದು. ವ್ಯಾಪಾರವನ್ನು ಬಹಳ ಜಾಣ್ಮೆಯಿಂದ ಮಾಡುವಿರಿ. ಕೈಯ್ಯಲ್ಲಿರುವ ಹಣವನ್ನು ಪೂರ್ತಿಯಾಗಿ ಖಾಲಿ ಮಾಡಿಕೊಳ್ಳುವಿರಿ. ಹೊರದೇಶದಲ್ಲಿ ಇರುವವರಿಗೆ ಕಷ್ಟವಾಗುವ ಸಾಧ್ಯತೆ ಇದೆ. ನಿಮ್ಮ ಬಗ್ಗೆ ಪ್ರಚಾರದ ಗೀಳು ಇರಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ಯಾರದೋ ಮೂಲಕ ಸರ್ಕಾರಿ ಕೆಲಸದಲ್ಲಿ ಯಶಸ್ಸನ್ನು ಕಾಣುವಿರಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು ಶ್ರಮವು ಅಪೇಕ್ಷಿತವಾಗಬಹುದು. ಅಚಾತುರ್ಯದಿಂದ ನಡೆದ ಘಟನೆಯು ನಿಮ್ಮನ್ನು ಕಾಡಬಹುದು. ಅಧ್ಯಯನ ವಿಧಾನವನ್ನು ಬದಲಿಸಿಕೊಳ್ಳಿ.

ತುಲಾ ರಾಶಿ: ನೀವು ಇಂದು ಉದ್ಯೋಗದ ಸ್ಥಳದಲ್ಲಿ ಏನನ್ನಾದರೂ ಹೇಳಿಬಿಡಬೇಡಿ. ನಿಮಗೆ ಕಾರ್ಯದಿಂದ ತೃಪ್ತಿ ಮಹತ್ತ್ವಪೂರ್ಣಗ್ರಂಥವನ್ನು ರಚಿಸಲು ಇಂದು ಮುಂದಾಗಬಹುದು‌. ನಿಮ್ಮನ್ನು ಇಷ್ಟಪಡುವವರ ಜೊತೆ ನೀವು ಕೆಲವು ಸಮಯವಿರಬೇಕಾಗುತ್ತದೆ. ರಾಜಕೀಯ ವ್ಯಕ್ತಿಗಳಿಂದ ಪ್ರೇರಿತರಾಗಿ ಕಾರ್ಯವನ್ನು ಮಾಡುವಿರಿ. ಉದ್ಯೋಗವನ್ನು ಬದಲಿಸುವ ನಿರೀಕ್ಷೆಯಲ್ಲಿರುವಿರಿ. ಸರಳ ಸಮಾರಂಭದಲ್ಲಿ ಭಾಗಿಯಾಗಬಹುದು. ಸಮಯವನ್ನು ದುರುಪಯೋಗ ಮಾಡಿಕೊಳ್ಳಿದ್ದೀರಿ. ಸಂತಾನದಿಂದ ಒಳ್ಳೆಯ ಸುದ್ದಿಯನ್ನು ಪಡೆಯುವಿರಿ. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು. ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದಲ್ಲಿ ತೊಡಕಾಗಬಹುದು. ದಾಂಪತ್ಯದಲ್ಲಿ ಮುಸುಕಿನ ಸಮರ ನಡೆಯುತ್ತಿರುವುದು.

ವೃಶ್ಚಿಕ ರಾಶಿ: ಬಲವಂತದ ಪ್ರೇಮ ತಪ್ಪಿಹೋಗಬಹುದು. ನಿಮಗಿಷ್ಟವಾದವರ ಜೊತೆ ನಿಮ್ಮ ವಿಹಾರ ಇರುವುದು. ಇಂದು ಬಾಯಿ ಚಪಲಕ್ಕೆ ಅಹಿತಕರಚಮವಾದ ಆಹಾರವನ್ನು ಸೇವಿಸುವಿರಿ. ಇಲ್ಲವಾದರೆ ನಿಮಗೇ ಕಂಟಕವಾದೀತು. ನಿರಂತರವಾದ ಶ್ರಮದಿಂದ ಬಳಲಲಿದ್ದೀರಿ. ಪಿತ್ರಾರ್ಜಿತ ಆಸ್ತಿಯ ಅನುಭವಿಸುವ ಬಯಕೆಯನ್ನು ಇಟ್ಟಿಕೊಂಡಿದ್ದೀರಿ. ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ಕಲೆಯನ್ನು ಕರಗತ ಮಾಡಿಕೊಳ್ಳಿ. ಕಾನೂನಿನ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು. ನಿಮ್ಮ ನಡವಳಿಕೆಯು ವಿವೇಕಯುತವಾಗಿರಲಿ. ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ಬೇಡ. ಆರೋಗ್ಯದ ಸುಧಾರಣೆಗೆ ಖರ್ಚಾಗುವುದು. ಇನ್ಮೊಬ್ಬರನ್ನು ದೂರುವುದರಿಂದ ನೀವು ಸಜ್ಜನರಾಗಲಾರಿರಿ. ಅಸಭ್ಯ ಮಾತುಗಳು ನಿಮಗೆ ಸರಿಯಾಗದು. ಇಂದು ನಿಮಗೆ ಬಂಧನದಂತೆ ಅನ್ನಿಸಬಹುದು.‌ ಭಯದಿಂದ ಕೆಲಸ ಮಾಡಿಸಿಕೊಳ್ಳುವಿರಿ.