Horoscope: ನಿತ್ಯ ಭವಿಷ್ಯ; ಇಂದು ಇತರರಿಂದ ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಉಂಟಾಗಬಹುದು

| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 13, 2024 | 12:15 AM

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಏಪ್ರಿಲ್​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಇಂದು ಇತರರಿಂದ ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಉಂಟಾಗಬಹುದು
ದಿನಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ:
ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಸೌಭಾಗ್ಯ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:27  ರಿಂದ 11:00ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:06 ರಿಂದ 03:39 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:21 ರಿಂದ 07:54ರ ವರೆಗೆ.

ಮೇಷ ರಾಶಿ : ಇಂದಿನ‌ ನಿಮ್ಮ ಅವಸರವಸರದ ಕಾರ್ಯಗಳಿಂದ ಯಾವುದೂ ಪೂರ್ಣವಾಗದು. ನಿಮ್ಮ ಮೈಂಡ್ ಹಲವು ಕಡೆಗಳಲ್ಲಿ ಓಡುತ್ತಿರುವುದದಕ್ಕೆ ಹೀಗಾಗುವುದು. ಯಾವುದಾದರೂ ದುರ್ವ್ಯಸನಕ್ಕೆ ತುತ್ತಾಗಿ ಹಣವನ್ನೂ ಆರೋಗ್ಯವನ್ನೂ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಮಾಡದೇ ಉಳಿದ ಕೆಲಸ ಕಾರ್ಯಗಳತ್ತ ಗಮನಹರಿಸಿ. ವ್ಯಾಪರದಲ್ಲಿ ಲಾಭವಾಗಲಿದೆ. ವಿದ್ಯಾರ್ಥಿಗಳು ಪರಿಶ್ರಮದ ಓದಿಗೆ ಫಲಸಿಗಬಹುದು. ಮನೆಯರಿಂದ ಹೊಸ ಸ್ಥಳಕ್ಕೆ ಹೋಗಲು ಒಪ್ಪಿಗೆ ಸಿಗದೇಹೋಗಬಹುದು. ಕಛೇರಿಯಲ್ಲಿ ಉಂಟಾದ ಕೆಲವು ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡುವುದು. ದೌರ್ಬಲ್ಯವನ್ನು ಹೇಳಿಕೊಂಡು ಪರಿಹಾರ ಕಂಡುಕೊಳ್ಳುವುದು ಉತ್ತಮ.ಯಾರನ್ನೂ ಸರಿಯಾಗಿ ಊಹಿಸಲಾರಿರಿ. ವಿಳಂಬವಾಗಿ ಬರುತ್ತದೆ ಎಂದುಕೊಂಡ ಹಣವು ಬೇಗ ನಿಮಗೆ ಬೇಗ ಸಿಗಬಹುದು. ನಿಮ್ಮ ನಿರ್ಧಾರವು ತೂಗುಕತ್ತಿಯಂತೆ ಇರಲಿದೆ. ವಿವಾಹಜೀವನವು ಅತ್ಯಂತ ಸುಖದಂತೆ ತೋರುವುದು.

ವೃಷಭ ರಾಶಿ : ಹೊಂದಾಣಿಕೆಯು ಬೇಸರವಾಗುವುದು. ಹೊಸತನ್ನು ಹುಡುಕಲು ಆರಂಭಿಸುವಿರಿ. ವೈಯಕ್ತಿಕ ವಿಚಾರಕ್ಕೆ ಅನ್ಯರು ಪ್ರವೇಶ ಮಾಡುವುದು ಸರಿಕಾಣದು. ಇಂದು ನಿಮಗೆ ಹಣಕಾಸಿನ ಹರಿವು ಹೆಚ್ಚಾಗುವುದರ ಜೊತೆಗೆ ಆತಂಕವೂ ಇರುವುದು. ಕೊಟ್ಟ ಸಾಲ ಮರಳಿಬರುವ ಆಸೆಯನ್ನು ಬಿಡುವಿರಿ. ನಿಮ್ಮ ಮೇಲೆ ಸಹಾನುಭೂತಿಯು ಉಂಟಾಗುವ ಸಾಧ್ಯತೆ ಇದೆ. ಮೋಸ ಹೋಗುವ ಸಾಧ್ಯತೆ ಇರುತ್ತದೆ. ಜಾಗರೂಕರಾಗಿರಿ. ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ. ಯಾರದೋ ಮಾತನ್ನು ನಿಮಗೆಂದು ಭಾವಿಸಿ ಸಿಟ್ಟಾಗುವಿರಿ. ನಕಾರಾತ್ಮಕ ವಿಚಾರಗಳ ನಡೆಯೂ ನೀವು ಬಲವಾಗಿದ್ದರೆ ಅದು ವಿದ್ಯೆಯ ಕಾರಣದಿಂದ. ಆಪ್ತರಿಗೆ ನಿಮ್ಮ ಬದಲಾದ ನಡವಳಿಕೆಯು ಇಷ್ಟವಾಗದು. ಸಮಯದ ಹೊಂದಾಣಿಕೆಯು ನಿಮಗೆ ಕಷ್ಟವಾಗುವುದು. ಮಹಿಳೆಯರು ಅನುಕೂಲಕರ ಸನ್ನಿವೇಶವು ಇರುವುದನ್ನು ಬಳಸಿಕೊಳ್ಳುವರು.

ಮಿಥುನ ರಾಶಿ : ಕುಟುಂಬದಲ್ಲಿ ಬರುವ ಮಾತಿಗೆ ನೀವು ಪ್ರತಿಕ್ರಿಯೆ ಕೊಡಬಾರದೂ ಎಂದರೂ ಕೊಡುವಿರಿ. ನಂಬಿಕೆ ದ್ರೋಹದಿಂದ ನಿಮಗೆ ಬೇಸರವಾಗಲಿದೆ. ಸಹೋದರ ಜೊತೆ ನಿಮಗೆ ಯೋಗ್ಯ ಸಲಹೆಯು ಸಿಗಬಹುದು. ಸೃಜನಾತ್ಮಕವಾಗಿ ಬದುಕುವ ಸ್ವಭಾವಕ್ಕೆ ಫಲಸಿಗಬಹುದು. ಉತ್ತಮವಾದ ಯೋಜನೆಗಳನ್ನು ರೂಪಿಸಿ. ನಿಮ್ಮ ಸಂಗಾತಿಯು ನಿಮಗೆ ಅನುಕೂಲವನ್ನು ಕಲ್ಪಿಸುವವಳೇ ಆಗಿದ್ದಾಳೆ. ದೈವಭಕ್ತಿಯ ಕಡೆ ಮನಸ್ಸು ಸಾವಧನಾವಾಗಿ ಹೋಗುವುದು. ಅಭಿವೃದ್ಧಿಗೆ ಅವಕಾಶವಿದ್ದರೂ ನಿಮಗೆ ಹಿನ್ನಡೆಯಂತೆ ಎಲ್ಲವೂ ಭಾಸವಾಗುವುದು. ಶ್ರಮಕ್ಕೆ ತಕ್ಕ ಫಲವು ಲಭಿಸಿಲ್ಲ ಎಂದು ನಿಮ್ಮ ಮನಸ್ಸಿಗೆ ಗಾಢವಾಗಿ ತಿಳಿಯುವುದು. ಅತಿಯಾಗಿ ಯಾವುದನ್ನು ಮಾಡಲು ಹೋಗುವುದು ಬೇಡ. ಹೊಸ ಕಲಿಕೆಗೆ ಉತ್ಸಾಹ ಇರಲಿದ್ದು ಶ್ರದ್ಧೆಯಿಂದ ಅದನ್ನು ಅಭ್ಯಾಸ ಮಾಡುವಿರಿ. ನಿಮ್ಮ ತಮಾಷೆಯು ಇಷ್ಟವಾಗದೇ ಇರಬಹುದು. ಪುಣ್ಯಕ್ಷೇತ್ರದಲ್ಲಿ ನಿಮಗೆ ಮನಶ್ಶಾಂತಿ ಸಿಗುವುದು.

ಕಟಕ ರಾಶಿ : ನಿಮ್ಮ ಆದಾಯದ ಮೂಲವನ್ನು ಸರಿಯಾಗಿ ಪರೀಕ್ಷಿಸಿಕೊಳ್ಳಿ. ನಿಮ್ಮ ವೇತನವನ್ನು ಪ್ರಯತ್ನಪೂರ್ವಕವಾಗಿ ಯಾರಾದರೂ ಕೇಳಬಹುದು. ನಿಮ್ಮನ್ನು ನೀವು ಪರಿಚಯ ಮಾಡಿಕೊಳ್ಳುವಿರಿ. ಕಛೇರಿಯ ಕಾರ್ಯಗಳನ್ನು ಮುಂದುವರಿಸಲು ನಿಮಗೆ ಆಗದು. ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯ ಮತ್ತಾವುದೂ ಇಲ್ಲ. ಘಟನೆಗಳು ಉತ್ತಮ ಮತ್ತು ಗೊಂದಲಮಯವಾಗಿರುವ ಒಂದು ದಿನ. ನಿಮ್ಮ ನಿರುದ್ಯೋಗವು ಚಿಂತೆಯಾಗಿ ನಿಮ್ಮ ಬಗ್ಗೆಯೇ ನಿಮಗೆ ನಕಾರಾತ್ಮಕ ಭಾವ ಮೂಡುವುದು. ಯಾವುದೋ ಗಾಢವಾದ ಆಲೋಚನೆಯಲ್ಲಿ ಮುಳುಗಿರುವಿರಿ. ಮಕ್ಕಳಿಂದ ನಿಮಗೆ ಸಂತೃಪ್ತಿಯು ಸಿಗಲಿದೆ. ಬಂಧುಗಳ ಭೇಟಿಯು ನಿಮಗೆ ಅಷ್ಟಾಗಿ ಇಷ್ಟವಾಗದು. ಸರಳವಾದ ಕೆಲಸವನ್ನು ಮನಶ್ಚಾಂಚಲ್ಯದಿಂದ ಸಂಕೀರ್ಣ ಮಾಡಿಕೊಳ್ಳುವಿರಿ. ಇಂದು ಇತರರಿಂದ ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಉಂಟಾಗಬಹುದು.