Horoscope: ದಿನ ಭವಿಷ್ಯ; ನಿಮ್ಮ ಸಾಮರ್ಥ್ಯವು ಇತರರಿಗೆ ತಿಳಿಯಬಹುದು, ಆಲಸ್ಯ ಬೇಡ
ಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ. ಏಪ್ರಿಲ್ 22 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್ 22) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಹರ್ಷಣ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 15 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:50 ರಿಂದ 09:23ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:31 ರಿಂದ ಮಧ್ಯಾಹ್ನ 12:31 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:05 ರಿಂದ 03:39ರ ವರೆಗೆ.
ತುಲಾ ರಾಶಿ: ಇಂದು ಅನಗತ್ಯ ತಿರುಗಾಟ, ಖರ್ಚುಗಳು ನಿಮ್ಮ ಆಲೋಚನೆಯ ದಿಕ್ಕನ್ನು ಬದಲಿಸಬಹುದು. ಉತ್ಸಾಹವು ಕಡಿಮೆಯಾಗ ಸಂಗೀತವನ್ನು ಕೇಳಿ, ಅದನ್ನು ಹೆಚ್ಚುಗೊಳಿಸಿ. ಚಿತ್ರಗಾರರಿಗೆ ಇಂದು ಪ್ರಶಂಸೆಯನ್ನು ಹೊಂದಬಹುದು. ಯಾರೋ ಆಡಿದ ಮಾತಿನಿಂದ ನಿಮಗೆ ನೋವಾಗಬಹುದು. ಇಂದು ಎಷ್ಟೇ ಒತ್ತಡವಿದ್ದರೂ ಕುಟುಂಬದ ಜೊತೆ ಸಮಯವನ್ನು ಕಳೆಯಬೇಕು ಎನಿಸುವುದು. ಅನುಭವಿ ವ್ಯಕ್ತಿಯಿಂದ ನೀವು ಪ್ರಯೋಜನಕಾರಿ ಸಲಹೆಯು ಸಿಗುವುದು. ಇಷ್ಟವಾದ ಭೂಮಿಯನ್ನು ಖರೀದಿಸಲು ಮುಂದಾಗುವಿರಿ. ಹಣದ ಹರಿವು ಇಂದು ಚನ್ನಾಗಿದ್ದು ಎಷ್ಟೋ ದಿನಗಳಿಂದ ಉಳಿಸಿಕೊಂಡ ಬಯಕೆಯನ್ನು ನೀವು ಪೂರ್ತಿ ಮಾಡಿಕೊಳ್ಳುವಿರಿ. ಮಾರುಕಟ್ಟೆಯಿಂದ ಹೆಚ್ಚಿನ ಲಾಭವನ್ನು ಪಡೆಯಲು ಆಗುವುದು. ನಿಮ್ಮ ವ್ಯಾಪಾರ ವಿಸ್ತರಣೆಯನ್ನು ಮಾಡಲು ನಿರ್ಧಾರ ಮಾಡುವಿರಿ. ಹಳೆಯ ಘಟನೆಯನ್ನು ನೆನಪಿಸಿಕೊಂಡು ಸಂಕಟಪಡುವುದು ಬೇಡ. ಕಳ್ಳರ ಭೀತಿಯು ಇರಲಿದೆ. ದೇಹವು ವಾತದಿಂದ ತೊಂದರೆಗೆ ಸಿಲುಕಬಹುದು.
ವೃಶ್ಚಿಕ ರಾಶಿ: ನಿಮ್ಮ ಇಂದಿನ ಕಾರ್ಯದ ಒತ್ತಡ ನಿಮ್ಮನ್ನು ಒತ್ತಡಕ್ಕೆ, ಉದ್ವೇಗಕ್ಕೆ ಒಯ್ಯಬಹುದು. ಇಂತಹ ಸಂದರ್ಭಗಳಲ್ಲಿ ಸುಮ್ಮನೆ ಸ್ವಲ್ಪ ಹೊತ್ತು ಮಾಡುವ ಕೆಲಸಗಳತ್ತ ಗಮನಹರಿಸಿ. ನೀವು ಮಾಡಲಿರುವ ಕೆಲಸಗಳು ಪರ್ವತದಷ್ಟು ಇರಲಿದೆ. ನಿಮ್ಮ ಸಾಮರ್ಥ್ಯವು ಇತರರಿಗೆ ತಿಳಿಯಬಹುದು. ಅವಕಾಶಗಳನ್ನು ಬಿಟ್ಟುಕೊಡುವುದು ಔದಾರ್ಯವಲ್ಲ. ಆಲಸ್ಯವಾಗುತ್ತದೆ. ನಿಮ್ಮ ವೃತ್ತಿಯಲ್ಲಿ ಕೆಲವರು ನಿಮ್ಮ ಮೇಲೆ ಕಣ್ಣಿಡಬಹುದು. ಸಂಗಾತಿಯನ್ನು ವೃತ್ತಿಯ ಕಡೆಗೆ ತಿರುಗಿಸುವ ಪ್ರಯತ್ನ ಮಾಡುವಿರಿ. ಕಚೇರಿಯ ವಾತಾವರಣವು ಸಕಾರಾತ್ಮಕವಾಗಿ ಇರುವಂತೆ ತೋರುತ್ತದೆ. ವಹಿಸಿಕೊಂಡ ಕೆಲಸವನ್ನು ಸರಿಯಾದ ಸಮಯಕ್ಕೆ ಪೂರ್ಣ ಮಾಡುವಿರಿ. ತೊಂದರೆಗಳನ್ನು ನೀವು ಎದುರಿಸಲು ಸಕ್ಷಮರಾಗಿರುವಿರಿ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಆಸಕ್ತಿ ಕಳೆದುಕೊಳ್ಳಬಹುದು, ಪ್ರೀತಿ ಪಾತ್ರರನ್ನು ನೀವು ಚೆನ್ನಾಗಿ ನೋಡಿಕೊಳ್ಳುವಿರಿ. ನೆರ ಮನೆಯವರ ವರ್ತನೆಯಿಂದ ನೀವು ಸಿಟ್ಟಾಗುವಿರಿ. ಪರೋಪಕಾರದಿಂದ ನಿಮಗೆ ಸಂತೋಷವಾಗಲಿದೆ.
ಧನು ರಾಶಿ; ಅನಾರೋಗ್ಯವನ್ನು ದೂರ ಮಾಡಿಕೊಳ್ಳುವ ಬಗೆ ತಿಳಿಯಿರಿ. ಇಲ್ಲವಾದರೆ ಅಧಿಕವಾದ ಹಣವು ವ್ಯಯವಾದೀತು. ಉತ್ತಮ ಯೋಜನೆ ನಿಮ್ಮ ಉನ್ನತಾಧಿಕಾರಕ್ಕೆ ಪೂರಕವಾಗಬಹುದು. ಸರ್ಕಾರಿ ಉದ್ಯೋಗಿಗಳಿಗೆ ಶುಭವಾರ್ತೆಯು ಇರಲಿದೆ. ಅಪರಿಚಿತ ವ್ಯಕ್ತಿಯೊಡನೆ ಜಗಳಗಳು ಆಗಬಹುದು. ಮಾತಿನ ಮೇಲೆ ಹಿಡಿತವಿರಲಿ. ಇಂದು ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ವಿಚಾರದಲ್ಲಿ ಗೊಂದಲಕ್ಕೆ ಸಿಲುಕಬಹುದು. ಆತುರದಿಂದ ನಿಮ್ಮ ಸರಳವಾದ ಕಾರ್ಯವನ್ನು ವ್ಯತ್ಯಾಸ ಮಾಡಿಕೊಳ್ಳುವಿರಿ. ಎಲ್ಲರೆದುರು ನಿಮಗೆ ಮುಜುಗರವಾಗುವ ಸನ್ನಿವೇಶವು ಬರಬಹುದು. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡುವುದು ಸೂಕ್ತ. ತುರ್ತು ಹಣವು ಬೇಕಿದ್ದರಿಂದ ಸ್ನೇಹಿತರನ್ನು ಕೇಳುವಿರಿ. ಮನೆಯ ಕಾರ್ಯದಲ್ಲಿ ನಿಮ್ಮ ಇಡೀ ದಿನವು ಕಳೆದು ಹೋದುದ್ದು ಗೊತ್ತಾಗದೇ ಹೋಗಬಹುದು. ದುರಭ್ಯಾಸದ ಕಾರಣ ಮರ್ಯಾದಿಯನ್ನು ಕಳೆದುಕೊಳ್ಳಬೇಕಾದೀತು. ಮಹಿಳೆಯರಿಗೆ ಸಹಾಯ ಮಾಡಲು ಹೋಗಿ ಅಪವಾದಕ್ಕೆ ಸಿಕ್ಕುವಿರಿ.
ಮಕರ ರಾಶಿ: ಇಂದು ನಿಮ್ಮ ವ್ಯಾಪಾರದಲ್ಲಿ ಚೇತರಿಕೆ ಕಾಣಿಸುವುದು. ಜನರೊಡನೆ ಬಾಂಧವ್ಯವನ್ನು ಚೆನ್ನಾಗಿಸಿಕೊಳ್ಳಿ. ಆತುರಪಟ್ಟು ಅವಗಢಕ್ಕೆ ಸಿಲುಕಬೇಡಿ. ಮಕ್ಕಳಿಂದ ಸಂತೋಷವು ಸಿಗಲಿದೆ. ನಿಮ್ಮ ವಿರುದ್ಧ ಯಾವುದಾದರೂ ಆರೋಪಗಳು ಬರಬಹುದು. ಇಂದು ನೀವು ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡಲು ಸಮಯವನ್ನು ಹೊಂದಿಸಿಕೊಳ್ಳುವಿರಿ. ವಿದ್ಯೆಯ ಕಾರಣಕ್ಕೆ ನಿಮ್ಮ ಗೌರವ ಹೆಚ್ಚಾಗುವುದು. ಯಾರದೋ ಹಸ್ತಕ್ಷೇಪದಿಂದಾಗಿ ನಿಮ್ಮ ನಡುವೆ ತಪ್ಪು ತಿಳುವಳಿಕೆ ಬರುವುದು. ನೀವು ಪರಸ್ಪರ ನಂಬಿಕೆಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವಿರಿ. ನಿಮ್ಮ ಸಂಗಾತಿಯ ಆರೋಗ್ಯವೂ ವ್ಯತ್ಯಾಸವಾಗಿ ಉದ್ವೇಗಕ್ಕೆ ಒಳಗಾಗುವರು. ಶುಭಕರ್ಮವನ್ನು ಮಾಡುವ ಉತ್ಸಾಹವಗಬಹುದು. ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು. ದೂರಪ್ರಯಾಣವು ಆಯಾಸವನ್ನು ಕೊಡಬಹುದು. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮ್ಮ ಉತ್ಸಾಹಕ್ಕೆ ಭಂಗ ಬರುವುದು.
ಕುಂಭ ರಾಶಿ: ಭರವಸೆಯೇ ನಿಮಗೆ ಭವಿಷ್ಯದ ಬೆಳಕಾಗಲಿದೆ. ಉತ್ತಮರ ಸಹವಾಸ ನಿಮಗೆ ಹೊಸದಾದ ದಿಕ್ಕನ್ನು ತೋರಿಸಬಹುದು. ನಂಬಿಕೆಯನ್ನು ಇಡುವಾಗ ಮುನ್ನೆಚ್ಚರವಿರಲಿ. ಪ್ರಣಯಪ್ರಸಂಗದಲ್ಲಿ ಆಕಸ್ಮಿಕ ತಿರುವುಗಳು ಇರಬಹುದು. ದುಃಖವನ್ನು ಅನುಭವಿಸುವ ಸಂದರ್ಭ ಬರಬಹುದು. ಮನಸ್ಸು, ಬುದ್ಧಿಗಳನ್ನು ನಿಶ್ಚಲಗೊಳಿಸಿ. ಇಂದು ನೀವು ಸೋಮಾರಿತನವನ್ನು ಬೆಳೆಸಿಕೊಳ್ಳುವಿರಿ. ನೀವು ಕುತ್ತಿಗೆಯ ಮಟ್ಟಕ್ಕೆ ಬರುವತನಕವೂ ನೀವು ಜಾಗರೂಕರಾಗಲಾರಿರಿ. ವ್ಯಾಪಾರದಲ್ಲಿ ಪರಿಚಿತರ ಸಹಾಯದಿಂದ ಪ್ರಗತಿ ಕಾಣುವುದು. ಹಣಕ್ಕೆ ಸಂಬಂಧಿಸಿದ ಯಾವುದಾದರೂ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಸುಲಭದ ದಾರಿಯು ನಿಮಗೆ ಕಾಣಿಸುವುದು. ವೃತ್ತಿಶೀಲರು ತಮ್ಮನ್ನು ಅತಿಮಾನುಷರಂತೆ ತೋರ್ಪಡಿಸುವರು. ನೀವು ಉದ್ಯೋಗವನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ನಿಮ್ಮ ಜೀವನಶೈಲಿಯನ್ನು ಸುಧಾರಿಸಿಕೊಳ್ಳಿ.
ಮೀನ ರಾಶಿ; ನೀವು ಅಕಾರಣವಾಗಿ ಚಿಂತೆಗಳನ್ನು ಮಾಡಬೇಡಿ. ಉದ್ವೇಗಕ್ಕೆ ಒಳಗಾಗಬಹುದು. ಎಲ್ಲವೂ ಖಾಲಿ ಖಾಲಿ ಅನ್ನಿಸಬಹುದು. ಹಣಕಾಸಿನ ಸಮಸ್ಯೆಗಳು ಹೆಚ್ಚಾಗಬಹುದು. ಪ್ರೇಮಾಂಕುರವು ಆಗಬಹುದು. ಕಲಾವಿದರು ಪ್ರಶಂಸೆಗೆ ಪಾತ್ರರಾಗುವರು. ಹಿರಿಯ ಕಲಾವಿದರ ಭೇಟಿಯಾಗಬಹುದು. ನಿಮ್ಮೊಳಗೆ ಅಳಿಯದೇ ಉಳಿವ ಘಟನೆಯೊಂದು ನಡೆಯಲಿದೆ. ವೃತ್ತಿಯಲ್ಲಿ ಸಮಾಧಾನ ತರುವ ಸಂಗತಿಗಳು ಇರಲಿದೆ. ಕೆಲವು ನಿರ್ಧಾರವು ಕೈ ಮೀರಿ ಇಂದು ನಡೆಯಬಹುದು. ಹಠದ ಸ್ವಭಾವವು ವೈವಾಹಿಕ ಜೀವನದಲ್ಲಿ ಅಪಶ್ರುತಿ ಬರಬಹುದು. ನಿಮ್ಮ ಪ್ರೀತಿಪಾತ್ರರು ಇಂದು ತುಂಬಾ ದುರ್ಬಲರಾಗುತ್ತಾರೆ. ಆರ್ಥಿಕಸ್ಥಿತಿಯಲ್ಲಿ ಪ್ರಗತಿಯ ಲಕ್ಷಣವಿದೆ. ವ್ಯವಹಾರದಲ್ಲಿ ಇಂದು ನಿಮಗೆ ತುಂಬಾ ಒತ್ತಡದ ದಿನವಾಗಿರುತ್ತದೆ. ನಿಮ್ಮ ಹಣವನ್ನು ಬಲಾತ್ಕಾರದಿಂದ ಪಡೆಯಬೇಕಾಗಬಹುದು. ಸ್ತ್ರೀಯರು ಸಂತೋಷದಿಂದ ದಿನ ಕಳೆಯುವಿರಿ. ನಿಮಗೆ ಇಂದು ಧಾರ್ಮಿಕ ಕಾರ್ಯದಲ್ಲಿ ತೃಪ್ತಿಯು ಸಿಗಲಿದೆ.




