Horoscope: ರಾಶಿಭವಿಷ್ಯ; ಇಂದು ನಿಮ್ಮ ಬಹಳ ದಿನಗಳ ಚಿಂತೆಯಿಂದ ಮುಕ್ತಿ ಸಿಗುವುದು

|

Updated on: Apr 03, 2024 | 12:12 AM

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ; ಇಂದು ನಿಮ್ಮ ಬಹಳ ದಿನಗಳ ಚಿಂತೆಯಿಂದ ಮುಕ್ತಿ ಸಿಗುವುದು
ನಿತ್ಯಭವಿಷ್ಯ
Image Credit source: freepik
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಏಪ್ರಿಲ್ 3) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ನವಮೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಶಿವ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:36 ರಿಂದ 02:08ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:59 ರಿಂದ 09:32ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:04 ರಿಂದ ಮಧ್ಯಾಹ್ನ 12:36ರ ವರೆಗೆ.

ಧನು ರಾಶಿ: ಇಂದು ನಿಮಗೆ ವೃತ್ತಿ ಕ್ಷೇತ್ರದಲ್ಲಿ ಮಾತ್ರವಲ್ಲದೆ, ವೈಯಕ್ತಿಕವಾಗಿಯೂ ಒತ್ತಡ ಹೆಚ್ಚಾಗಲಿದೆ. ಇಂದು, ನಿಮ್ಮ ಪೋಷಕರ ಆರೋಗ್ಯಕ್ಕೆ ಸಂಬಂಧಿಸಿದಂತೆ ವೆಚ್ಚಗಳು ಹೆಚ್ಚಾಗಬಹುದು. ಇದು ನಿಮ್ಮ ಹಣಕಾಸಿನ ಸ್ಥಿತಿಯ ಮೇಲೆ ಪರಿಣಾಮವನ್ನು ಬೀರಬಹುದು. ಇಂದು ನಿಮಗೆ ಅತಿಯಾದ ಕಾರ್ಯದ ಒತ್ತಡವು ದೇಹ ಮತ್ತು ಮನಸ್ಸುಗಳು ದುರ್ಬಲವಾದಂತೆ ಅನ್ನಿಸುವುದು. ಅಮೂಲ್ಯ ವಸ್ತುಗಳನ್ನು ಜೋಪಾನ ಮಾಡಿ. ಸಂಗಾತಿಯ ಜೊತೆ ಗುಟ್ಟನ್ನು ಮುಚ್ಚಿಡಲು ನಿಮಗೆ ಸಾಧ್ಯವಾಗದು. ವಾಹನ ಚಾಲನೆಯನ್ನು ಬಹಳ ಎಚ್ಚರಿಕೆಯಿಂದ ಮಾಡಬೇಕಾಗುವುದು. ಉದ್ವೇಗದಿಂದ ಏನನ್ನಾದರೂ ಮಾಡಲು ಅನೀತಿ ಮಾರ್ಗದಲ್ಲಿ ಹೋಬೇಕಾದೀತು. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು. ಒತ್ತಡಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗುವುದು. ಬಂಧುಗಳಿಂದ ಆದ ಮನಸ್ತಾಪವನ್ನು ಮರೆಯಲಾರಿರಿ.

ಮಕರ ರಾಶಿ; ನಿಮಗೆ ಇಂದು ಹಣದ ಒಳಹರಿವು ಚೆನ್ನಾಗಿದ್ದು ಹಣಕಾಸಿಗೆ ಸಂಬಂಧಿಸಿದ ಸಮಸ್ಯೆಗಳಿಂದ ದೂರವಿರುವಿರಿ. ಕೆಲಸ ಮೇಲೆ ನಿಮ್ಮ ಗಮನ ಕೇಂದ್ರೀಕರಿಸುವುದನ್ನು ಖಚಿತಪಡಿಸಿಕೊಳ್ಳಿ. ವ್ಯಾಪಾರದ ಆದ ಸ್ವಲ್ಪ ಅಜಾಗರೂಕತೆಯೂ ಭಾರೀ ನಷ್ಟವನ್ನು ಉಂಟುಮಾಡಬಹುದು. ಇಂದು ನಿಮ್ಮ ಹೂಡಿಕೆಯ ಬಗ್ಗೆ ಹೆಚ್ಚು ಆಲೋಚನೆಗಳು ಇರುವುದು. ಬಹಳ ದಿನಗಳ ಅನಂತರ ಅತಿಥಿಗಳ ಆಗಮನವಾಗಲಿದ್ದು, ಖುಷಿಯಾಗಲಿದೆ. ವಿವಾಹಕ್ಕೆ ಪೂರಕವಾದ ವಾರ್ತೆಗಳು ಇರಲಿದೆ. ಕಾರ್ಯಕ್ರಮದಲ್ಲಿ ದುಂದುವೆಚ್ಚದಂತೆ ಕೆಲವು ತೋರೀತು. ವಿವಾದಗಳನ್ನು ಮಾಡುವ ಸಂದರ್ಭವು ಬಂದರೂ ಅದರಿಂದ ದೂರವಿರಿ. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು. ಕೃಷಿಯ ವ್ಯವಹಾರದಲ್ಲಿ ಲಾಭವು ಬರವಂತೆ ಆಲೋಚನೆ ಮಾಡುವಿರಿ.

ಕುಂಭ ರಾಶಿ: ದಾಂಪತ್ಯದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ನಿಮ್ಮ ಸ್ನೇಹಿತರು ನಿಮ್ಮ ಸಹಾಯಕ್ಕೆ ಬರಬಹುದು. ಗುಣಮಟ್ಟದ ಹೂಡಿಕೆಯು ನಿಮಗೆ ಲಾಭವನ್ನು ತರಲಿದೆ. ನಿಮ್ಮ ಅನಾರೋಗ್ಯವು ಕಡಿಮೆ ಆಗುವುದು, ನಿಮ್ಮ ಮನಸ್ಸು ಹಗುರಾಗುವುದು. ಆರ್ಥಿಕವಾಗಿ ಸುಧಾರಣೆಯಿಂದ ಧೈರ್ಯವು ಬರಲಿದೆ. ವೃತ್ತಿಯ ಸ್ಥಳದಲ್ಲಿ ನಿಮ್ಮ ಶ್ರಮಕ್ಕೆ ಪ್ರತಿಫಲವು ಪ್ರಾಪ್ತವಾಗುವುದು. ಇಂದು ಅಪಾಯದ ಸೂಚನೆಯು ನಿಮಗಾಗಬಹುದು. ಪ್ರಯಾಣದಿಂದ ಆಯಾಸಗೊಂಡು ವಿಶ್ರಾಂತಿ ಪಡೆಯುವಿರಿ. ಕೋಪವನ್ನು ಕಡಿಮೆ ಮಾಡಿಕೊಳ್ಳಲು ನಿಮ್ಮ ಸತತ ಪ್ರಯತ್ನವು ಫಲಿಸೀತು. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ. ಸಹೋದರರ ಶೀತಲ ಸಮರವು ತಿಳಿಯಾಗಬಹುದು ವ್ಯಾಪಾರದ ನಿರ್ಲಕ್ಷ್ಯದಿಂದ ಅಲ್ಪ ನಷ್ಟವು ಸಂಭವಿಸಬಹುದು. ನೌಕರರನ್ನು ಉದ್ಯಮದಲ್ಲಿ ಕಡಿಮೆ ಮಾಡಿಕೊಳ್ಳಬೇಕಾಗುವುದು.

ಮೀನ ರಾಶಿ: ಇಂದು ನಿಮ್ಮ ಬಹಳ ದಿನಗಳ ಚಿಂತೆಯಿಂದ ಮುಕ್ತಿ ಸಿಗುವುದು. ನೀವು ಜನರ ಆಸೆಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದರೂ, ಇಂದು ಅತಿಯಾಗಿ ಖರ್ಚು ಮಾಡದಿರುವುದು ಒಳ್ಳೆಯದು. ನಿಮ್ಮ ಸಂಗಾತಿಯ ವಿಷಯದಲ್ಲಿ ಅತಿಯಾಗಿ ವರ್ತಿಸದಿರುವುದು ಉತ್ತಮ. ಇಂದು ನಿಮ್ಮ ನಿರಂತರ ಪ್ರಯತ್ನದಿಂದ ಕುಟುಂಬದ ಸದಸ್ಯರ ಬೆಂಬಲವು ನಿಮಗೆ ದೊರೆಯುವುದು. ಇಷ್ಟಫಲವು ಇರಲಿದೆ. ಆರೋಗ್ಯವನ್ನು ಹಾಳು‌ಮಾಡಿಕೊಳ್ಳಲು ಹೋಗಬೇಡಿ. ನಿಮ್ಮ ಆತ್ಮವಿಶ್ವಾಸವು ಹೆಚ್ಚಾಗಿರುವುದು. ಸಾಹಿತಿಗಳಿಗೆ ಅವಕಾಶಗಳು ಸಿಕ್ಕಿದ್ದು ಅದನ್ನು ಉಪಯೋಗಿಸಿಕೊಳ್ಳುವಿರಿ. ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ಅತಿಯಾದ ನಂಬಿಕೆಯು ಹುಸಿಯಾದ ಕಾರಣ ಪಶ್ಚಾತ್ತಾಪಪಡುವಿರಿ. ನಿಮ್ಮೊಳಗೆ ಹೇಳಿಕೊಳ್ಳಲಾಗದ ಭಯವು ಕಾಣಿಸುವುದು.