Horoscope: ಮಾತುಗಳು ನಿಮ್ಮ ಮಿತಿಯಲ್ಲಿ ಇರಲಿ, ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಡಿಸೆಂಬರ್ 25, 2023ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ಮಾತುಗಳು ನಿಮ್ಮ ಮಿತಿಯಲ್ಲಿ ಇರಲಿ, ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Dec 25, 2023 | 12:10 AM

ನಿತ್ಯ ಎದ್ದ ಕೂಡಲೇ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುವ ಅಭ್ಯಾಸ ಕೆಲವರಲ್ಲಿ ಇರುತ್ತದೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ? ಇದೆಯಾ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಇಂದಿನ (ಡಿಸೆಂಬರ್ 25) ನಿಮ್ಮ ರಾಶಿಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಶುಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 55 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 09 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:20 ರಿಂದ 09:44 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:08 ರಿಂದ 12:33ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:57 ರಿಂದ 05:21ರ ವರೆಗೆ.

ಮೇಷ ರಾಶಿ: ಇಂದು ನೀವು ಊಹಿಸದ್ದನ್ನೂ ಪಡೆಯುವ ಅವಕಾಶವು ಸಿಗಲಿದೆ. ಮನೋವಿಕಾರಕ್ಕೆ ಆಸ್ಪದ ಕೊಡುವುದು ಬೇಡ. ನಿಮಗೆ ಸೂಚಿತ ದಿಕ್ಕಿನಲ್ಲಿ ತೆರಳಿ ಕಾರ್ಯವನ್ನು ಸಾಧಿಸಿಕೊಳ್ಳಿ. ಸುಮ್ಮನೇ ಒತ್ತಡವಿದ್ದಂತೆ ತೋರಿಸುವಿರಿ. ಅಪನಂಬಿಕೆಯಿಂದ ಮನಸ್ಸು ಕುಗ್ಗುವುದು. ಯಾರ ಮೇಲೂ ನಂಬಿಕೆ ಇಡುವುದು ಕಷ್ಟವಾದೀತು. ಅತಿಥಿಗಳ ಸತ್ಕಾರವನ್ನು ಮಾಡುವಿರಿ. ಸಂಗಾತಿಯ ಜೊತೆ ಸರಸದಿಂದ ಕಾಲ ಕಳೆಯುವಿರಿ. ಯಾರಿಂದಲೂ ಏನನ್ನೂ ಪಡೆಯುವ ಮನಸ್ಸಾಗದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಏಕಾಂತದಲ್ಲಿ ಇರಲು ನಿಮಗೆ ಅನಿವಾರ್ಯವಾದೀತು. ಕಳೆದ ವ್ಯರ್ಥ ಕಾಲವನ್ನು ಮತ್ತೆ ಸೇರಿಸಲಗಾದು ಎಂದು ವ್ಯಥೆಪಡುವುದು ಬೇಡ. ಭವಿಷ್ಯದ ಬಗ್ಗೆ ಉತ್ತಮವಾದ ಯೋಜನೆಯನ್ನು ರೂಪಿಸಿಕೊಳ್ಳಿ.

ವೃಷಭ ರಾಶಿ: ಕೆಲವು ಹಳೆಯ ವಿಷಯಗಳನ್ನು ಇಟ್ಟುಕೊಂಡು ವಾಗ್ವಾದ ಮಾಡುವಿರಿ. ವೈಯಕ್ತಿಕ ಜೀವನದ ಸಮಸ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳಲು ಮನಸ್ಸಾಗದು. ಸಂಗಾತಿಯನ್ನು ನೀವು ಸರಿಯಾಗಿ ತಿಳಿದುಕೊಳ್ಳಲಾಗದು. ನಿಮ್ಮ ಕೆಲವು ನಿರೀಕ್ಷೆಯು ಹುಸಿಯಾಗಬಹುದು. ಧನಸಂಪಾದನೆಯ ಚಿಂತೆ ನಿಮಗೆ ಕಾಡಲು ಆರಂಭವಾಗಲಿದೆ. ಆಲಸ್ಯದಿಂದ ನಿಮ್ಮ ಸಾಮರ್ಥ್ಯವು ಕಡಿಮೆ ಆಗಲಿದೆ. ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸುವಿರಿ. ಅಧಿಕ ಓಡಾಟದಿಂದ ದಣಿವಾಗಲಿದೆ. ಸಂಗಾತಿಯಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸುವಿರಿ. ತಾಯಿಯ ಪ್ರೀತಿಯು ನಿಮಗೆ ಸಿಗಲಿದೆ. ಏಕಮುಖವಾದ ನಿರ್ಧಾರದಿಂದ ಸಫಲತೆಯು ಇರದು. ಸಣ್ಣ ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿ. ಓದುವಿಕೆಯಲ್ಲಿ ಆಸಕ್ತಿಯು ಹೆಚ್ಚಾಗಬಹುದು. ಮೌನವೇ ನಿಮಗೆ ಹಿತವೆನಿಸಬಹುದು.

ಮಿಥುನ ರಾಶಿ: ನೀವು ಮನೆಯಿಂದ ಹೊರಗೆ ಸುತ್ತಾಡಲು ಇಂದು ಖುಷಿಯಾಗುವುದು. ಸಂಗಾತಿಯ ಜೊತೆ ಎಲ್ಲಿಗಾದರೂ ಹೋಗಬೇಕು ಎಂಬ ಮನಸ್ಸಾದೀತು. ಕೆಲವು ಸಂದರ್ಭದಲ್ಲಿ ನಿಮ್ಮವರನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾದೀತು. ನೀವು ಇಂದು ಸ್ವಂತ ವಾಹನವನ್ನು ಬಾಡಿಗೆ ಕೊಡುವಿರಿ. ಇರುವ ಸಾಲವನ್ನು ತೀರಿಸಿಕೊಳ್ಳಲುಬೇಕಾದ ಯೋಜನೆ ಮಾಡಿ. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ. ನೀವು ಕಾರ್ಯದಲ್ಲಿ ಮಗ್ನರಾಗಿದ್ದು ಯಾವ ವಿಷಯಕ್ಕೂ ಭಾಗಿಯಾಗಲಾರಿರಿ. ಸಂಬಂಧಿಕರನ್ನೇ ಪಾಲುದಾರಿಕೆಯಲ್ಲಿ ಇಟ್ಟಕೊಳ್ಳುವಿರಿ. ಸರ್ಕಾರದಿಂದ ಆಗಬೇಕಾದ ಕಾರ್ಯಕ್ಕೆ ಹೆಚ್ಚು ಓಡಾಟ ಮಾಡಬೇಕಾದೀತು. ಭೂಮಿಯ ವ್ಯವಹಾರದಿಂದ ಲಾಭವಿಲ್ಲದಿದ್ದರೂ ಅದನ್ನೇ ನಡೆಸಲು ಇಷ್ಟಪಡುವಿರಿ. ಯಾರ ಜೊತೆಗೂ ಪಕ್ಷಪಾತವನ್ನು ಇಟ್ಟುಕೊಳ್ಳುವುದು ಬೇಡ.

ಕರ್ಕ ರಾಶಿ: ಮಾತುಗಳು ನಿಮ್ಮ ಮಿತಿಯಲ್ಲಿ ಇರಲಿ. ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ, ಅನಂತರ ಯೋಚಿಸಿ ಪ್ರಯೋಜನವಾಗದು. ಸಹೋದರರ ಹಣಕಾಸಿಗೆ ಕಲಹವಾಗಬಹುದು. ಸ್ತ್ರೀಯರು ಇಂದಿನ ವ್ಯಾಪಾರದಲ್ಲಿ ಅಧಿಕ ಲಾಭವನ್ನು ಗಳಿಸುವರು. ಮನೋರಂಜನೆಯಲ್ಲಿ ಪಾಲ್ಗೊಳ್ಳುವಿರಿ. ಸಮಯಕ್ಕಾಗಿ ಕಾದು ನೋಡಿ. ದಿನಚರಿಯನ್ನು ಬದಲಾಯಿಸಿಕೊಳ್ಳುವುದು ಬೇಕಾಗಬಹುದು. ಇಂದು ಕಡಿಮೆ ಕಾರ್ಯದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುವಿರಿ. ಹಳೆಯ ಕೆಲಸಗಳು ವ್ಯರ್ಥವಾಗಬಹುದು. ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ಜಾಣತನದಿಂದ ಇಂದಿನ ಕಾರ್ಯವನ್ನು ಮಾಡುವಿರಿ. ಹಣಕಾಸಿನ ವ್ಯವಸ್ಥೆಯನ್ನು ಸರಿ ಮಾಡಿಕೊಳ್ಳುವುದು ಸೂಕ್ತ. ಕೆಲವೊಮ್ಮೆ ಸುಮ್ಮನಿರುವುದೂ ದೊಡ್ಡ ಕೆಲಸವನ್ನು ಮಾಡಿಸುತ್ತದೆ. ದೊಡ್ಡ ಯೋಜನೆಯನ್ನು ಸಣ್ಣದಾಗಿ ಆರಂಭಿಸುವಿರಿ.

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ