AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಯವರಿಗೆ ಭವಿಷ್ಯದ ಬಗ್ಗೆ ಅತಿಯಾದ ಚಿಂತೆ ಕಾಡಬಹುದು

2023 ಡಿಸೆಂಬರ್​​​​ 06ರ ರಾಶಿ ಭವಿಷ್ಯ ಹೇಗಿದೆ? ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Horoscope: ರಾಶಿಯವರಿಗೆ ಭವಿಷ್ಯದ ಬಗ್ಗೆ ಅತಿಯಾದ ಚಿಂತೆ ಕಾಡಬಹುದು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Dec 06, 2023 | 12:10 AM

Share

ಇಂದಿನ (2023 ಡಿಸೆಂಬರ್​​ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ ಎಂಬ ಮಾಹಿತಿ ಇಲ್ಲಿದೆ. ಅದೇ ರೀತಿಯಾಗಿ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ ಎಂದು ತಿಳಿಯಲು ಮುಂದೆ ಓದಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನೂರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ನವಮೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಪ್ರೀತಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 45 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:24 ರಿಂದ 01:48 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:10 ರಿಂದ 09:35ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:59 ರಿಂದ 12:24ರ ವರೆಗೆ.

ಮೇಷ ರಾಶಿ: ಸೌಲಭ್ಯಗಳನ್ನು ದುರುಪಯೋಗ ಮಾಡಿಕೊಂಡು ಇತರರ ಕೆಂಗಣ್ಣಿಗೆ ಗುರಿಯಾಗುವಿರಿ. ನಿಮ್ಮ ಆರೋಗ್ಯ ವೃದ್ಧಿಗೆ ಬೇಕಾದ ವಿಧಾನವನ್ನು ಅನುಸರಿಸಿ. ಮನಸ್ಸಿನ ನಿಯಂತ್ರಣವು ಲಯವನ್ನು ತಪ್ಪಬಹುದು. ನೀವು ಇಂದು ವೃತ್ತಿಪರ ರಂಗದಲ್ಲಿ ನಿಮಗೆ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ಮಹಿಳೆಯರು ಯಾವುದೇ ಪಾಕದ ಉತ್ಪನ್ನದ ವ್ಯವಹಾರವನ್ನು ಆರಂಭಿಸಲು ಬಯಸುವಿರಿ. ಸುಮ್ಮನೆ ಕುಳಿತಿರುವುದು ನಿಮಗೆ ಆಗದ ಸಂಗತಿ. ಎಲ್ಲರ ಜೊತೆ ಬೆರೆಯುವುದು ಆಗದು.

ವೃಷಭ ರಾಶಿ: ಕಳೆದುಕೊಂಡಿದ್ದರ‌ ಬಗ್ಗೆ ಅತಿಯಾದ ಶೋಕವು ಅನಗತ್ಯ. ಮುಂದಿನ ಕಾರ್ಯಗಳ ಬಗ್ಗೆ ಗಮನಹರಿಸಿದರೆ ಹಳೆಯದು ಮರೆತುಹೋದೀತು. ಹಣಕಾಸಿನ ವಿಷಯದಲ್ಲಿ ಕೆಲವು ಲಾಭಗಳನ್ನು ನಿರೀಕ್ಷಿಸುವಿರಿ‌‌. ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸವನ್ನು ಮಾಡಲು ಸ್ವಲ್ಪ ಸಮಯವನ್ನು ನೀಡುತ್ತದೆ. ಯಾರನ್ನೋ ಸೋಲಿಸುವುದಕ್ಕೆ ನಿಮ್ಮ ಪ್ರಯತ್ನ ಬೇಡ. ನಿಮ್ಮ ವ್ಯಾಯಾಮದಲ್ಲಿ ಮಿತಿ ಇರಲಿ. ಉತ್ತಮ ಆರೋಗ್ಯದಿಂದ ಆನಂದಿಸುವಿರಿ. ನಿಮ್ಮ ಈ ದಿನವು ಆತ್ಮವಿಶ್ವಾಸದಿಂದ ಇರುತ್ತದೆ. ಕುಟುಂಬದ ಯುವ ಸದಸ್ಯರ ಯಶಸ್ಸಿನಲ್ಲಿ ಹೆಮ್ಮೆ ಪಡುವಿರಿ. ಉದ್ವೇಗದಿಂದ ಕಾರ್ಯಗಳನ್ನು ಮಾಡುವುದಕ್ಕಿಂತ ಚಿತ್ತೈಕಾಗ್ರ್ಯ ಇರಲಿ.

ಮಿಥುನ ರಾಶಿ: ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ನಿಮಗೆ ಕಷ್ಟವಾದೀತು. ಅದೇ ನಿಮ್ಮ ತಲೆಯನ್ನು ದಿನವಿಡೀ ಕೊರೆಯಬಹುದು. ಈ ದಿನ ಕೆಲಸದಲ್ಲಿ, ನಿಮ್ಮ ದಕ್ಷತೆಯಿಂದ ಮುಖ್ಯವಾದವರನ್ನು ನೀವು ಮೆಚ್ಚಿಸಲು ಸಾಧ್ಯವಾಗುತ್ತದೆ. ಆಹಾರದ ಬಗ್ಗೆ ನಿಮ್ಮ ಶಿಸ್ತು ದೈಹಿಕ ಸ್ಥಿತಿಯಲ್ಲಿರಿವುದು. ಆಸ್ತಿ ವ್ಯವಹಾರವು ನಿಮಗೆ ಅನುಕೂಲವಾಗುವ ಸಾಧ್ಯತೆಯಿದೆ. ಸುಲಭದ ಕೆಲಸವನ್ನು ಮೊದಲು ಮಾಡಿ, ಯಾರದ್ದಾದರೂ ಸಹಕಾರವನ್ನು ಪಡೆದುಕೊಳ್ಳಿ. ನೀವು ಎಲ್ಲರ ಜೊತೆ ಸಭ್ಯತೆಯನ್ನು ಮೀರದೇ ಮಾತನಾಡಬೇಕು. ನಿಮ್ಮದೇ ಕೆಲಸದ ಒತ್ತಡಗಳು ನಿಮಗೆ ಬರುವುದು. ಓಡಾಟವು ಹೆಚ್ಚಾಗಿರುವುದು. ಉತ್ಸಾಹವನ್ನು ಕಳೆದುಕೊಂಡು ಸುಮ್ಮನೆ ಕುಳಿತುಕೊಳ್ಳುವಿರಿ. ಮಂಗಲಕಾರ್ಯದಲ್ಲಿ ಭಾಗಿಯಾಗುವಿರಿ.

ಕಟಕ ರಾಶಿ: ಭವಿಷ್ಯದ ಬಗ್ಗೆ ಅತಿಯಾದ ಚಿಂತೆಯು ಕಾಡಬಹುದು. ನಿಮ್ಮ ನಡವಳಿಕೆಯು ಇತರರಿಗೆ ಇಷ್ಟವಾಗದೇ ಇರಬಹುದು. ತಂತ್ರಜ್ಞರಿಗೆ ಈ ದಿನವು ಅನುಕೂಲಕರವಾಗಿರುತ್ತದೆ. ಖರೀದಿಯಲ್ಲಿ ಉತ್ಸಾಹವು ಹೆಚ್ಚಿರುವುದು. ಮಾತು ಅತಿಯಾಗುವುದು ಬೇಡ. ಆದರೆ ಅತಿರೇಕಕ್ಕೆ ಹೋಗುವ ಸಾಧ್ಯತೆ ಇದೆ. ದೈಹಿಕ ದಾರ್ಢ್ಯವನ್ನು ನೀವು ಚೆನ್ನಾಗಿರಿಸಿಕೊಳ್ಳುವಿರಿ. ಸುಲಭವಾಗಿ ಸಿಕ್ಕುವುದನ್ನು ಬಿಟ್ಟಕೊಳ್ಳುವಿರಿ. ನಿಮ್ಮ ತಿಳುವಳಿಕೆ ಮತ್ತು ಸಭ್ಯತೆಯಿಂದ ಎಲ್ಲರೂ ಬಹಳ ಪ್ರಭಾವಿತರಾಗಬಹುದು. ನಿಮ್ಮ ಸಮಯವನ್ನು ಬೇಡದ ಕಾರ್ಯದಿಂದ ವ್ಯರ್ಥಮಾಡಿಕೊಳ್ಳುವಿರಿ. ಆರ್ಥಿಕ ಕ್ಷೇತ್ರಕ್ಕೆ ಸಂಬಂಧಿಸಿದ ಜನರು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಸಂಗಾತಿಯಿಂದ ಅನಿರೀಕ್ಷಿತ ಕೊಡುಗೆಯನ್ನು ಪಡೆಯುವಿರಿ.

ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
"ನನ್ನ ಗಂಡ ಗಂಡಸೇ ಅಲ್ಲ" ಎಂದ ಮೋನಿಕಾ
ಪೆರೇಡ್‌ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೆರೇಡ್‌ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ
ತರಕಾರಿ ಕೊಳ್ಳಲು ಸಿಗ್ನಲ್​​ನಲ್ಲೇ ರೈಲು ನಿಲ್ಲಿಸಿದ ಹೋದ ಲೋಕೋ ಪೈಲಟ್!
ತರಕಾರಿ ಕೊಳ್ಳಲು ಸಿಗ್ನಲ್​​ನಲ್ಲೇ ರೈಲು ನಿಲ್ಲಿಸಿದ ಹೋದ ಲೋಕೋ ಪೈಲಟ್!