AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನೀವು ಹಳೆಯ ಯೋಜನೆಗಳಿಗೆ ಪುನಶ್ಚೇತನ ನೀಡುವಿರಿ

2023 ಡಿಸೆಂಬರ್​​​​ 07ರ ರಾಶಿ ಭವಿಷ್ಯ ಹೇಗಿದೆ? ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Horoscope: ನೀವು ಹಳೆಯ ಯೋಜನೆಗಳಿಗೆ ಪುನಶ್ಚೇತನ ನೀಡುವಿರಿ
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ|

Updated on: Dec 07, 2023 | 12:15 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿರುತ್ತದೆ. ಪ್ರತಿಯೊಂದು ರಾಶಿಗಳು ತಮ್ಮದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನಿಮ್ಮ ಕೆಲಸ, ವ್ಯವಹಾರ, ವಹಿವಾಟುಗಳು, ಕುಟುಂಬ, ಸ್ನೇಹಿತರೊಂದಿಗಿನ ಸಂಬಂಧ, ಆರೋಗ್ಯ ಮತ್ತು ದಿನವಿಡೀ ನಡೆಯುವ ಮಂಗಳಕರ ಮತ್ತು ಅಶುಭ ಘಟನೆಗಳ ಬಗ್ಗೆ ಇಂದಿನ (2023 ಡಿಸೆಂಬರ್​​​​ 07) ಭವಿಷ್ಯದಲ್ಲಿ ತಿಳಿಯಿರಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜೇಷ್ಠಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ದಶಮಿ, ನಿತ್ಯನಕ್ಷತ್ರ: ಹಸ್ತಾ, ಯೋಗ: ಆಯುಷ್ಮಾನ್​, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 45 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:48 ರಿಂದ 03:13 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:46 ರಿಂದ 08:11ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:35 ರಿಂದ 10:59ರ ವರೆಗೆ.

ಮೇಷ ರಾಶಿ: ಇಂದು ನಿಮ್ಮ ಮನೋಭಿಲಾಷೆಯನ್ನು ಪ್ರಕಟಿಸುವಿರಿ. ಯಾರನ್ನಾದರೂ ಕಡೆಗಣಿಸುವ ಅವಶ್ಯಕತೆ ಇಲ್ಲ. ಬೇಕಾದಲ್ಲಿಗೆ ಜೋಡಿಸಿ. ಸ್ವಭಾವವು ಬಹಳ ತೀವ್ರವಾಗಿ ಇರಲಿದೆ. ಯಾರ ಮಾತನ್ನೂ ಕೇಳವ ಸಹನೆ ಇರದು.‌ ಪ್ರತಿಸ್ಪರ್ಧಿಗಳಿಗೆ ಸರಿಯಾದ ಸ್ಪರ್ಧೆಯನ್ನು ಕೊಡುವಿರಿ. ಇಷ್ಟದವರ ಮಾತಿನಿಂದ ಮನಸ್ಸಿನ ಭಾರವು ದೂರಾಗುವುದು. ನಿಮ್ಮ ನಿರ್ಧಾರಗಳೇ ಅಂತಿಮವಾಗಬೇಕು ಎನ್ನುವ ಮನಃಸ್ಥಿತಿ ಇರುವುದು. ಮಾನಸಿಕವಾಗಿ ಉತ್ಸಾಹವು ಕಡಿಮೆ ಇರುವುದು. ಕಛೇರಿಯ ಕೆಲಸದಲ್ಲಿ ನಾನಾ ಕಾರಣಗಳಿಂದ ನಿಧಾನವಾಗಲಿದೆ. ಕೃಷಿಯಲ್ಲಿ ನೀವು ಹೆಚ್ಚು ಪ್ರಗತಿಯನ್ನು ಸಾಧಿಸುವ ಮನಸ್ಸು ಇರುವುದು. ನೀವು ಇಂದು ಅತಿಥಿಯಾಗಿ ಭಾಗವಹಿಸುವಿರಿ. ನಿಮ್ಮ ನಡವಳಿಕೆಯನ್ನು ಬದಲಿಸಿಕೊಳ್ಳುವುದು ಉತ್ತಮ. ನಿಮ್ಮಿಂದಾಗಿ ಮನೆಯಲ್ಲಿ‌ ಇಂದು ಸಂತೋಷವು ಇರಲಿದೆ. ‌ಅನುಕಂಪದಿಂದ ಏನನ್ನಾದರೂ ಸಾಧಿಸಿಕೊಳ್ಳುವಿರಿ.

ವೃಷಭ ರಾಶಿ: ಬಿಚ್ಚು ಮನಸ್ಸಿನಿಂದ ನೀವು ಆಡಬಾರದ ಮಾತುಗಳನ್ನು ಆಡುವಿರಿ. ವಸ್ತುಗಳ‌ ರಕ್ಷಣೆಯ ವಿಚಾರದಲ್ಲಿ ನೀವು ಕಾಳಜಿ ಸಾಲದು. ಸಾಹಿತ್ಯಾಸಕ್ತರು ತಮಗೆ ಬೇಕಾದ ವಾತಾವರಣವನ್ನು ಸೃಷ್ಟಿಸಿಕೊಳ್ಳುವರು. ನಿಮ್ಮ ಪ್ರತಿಭೆಗೆ ಯೋಗ್ಯವಾದ ಕಾರ್ಯವು ಸಿಗುವುದು. ನಿಮ್ಮ ಆಕರ್ಷಕ ರೂಪಕ್ಕೆ ಮನವು ಸೋಲಬಹುದು. ಬರುವ ಯೋಜನೆಗಳನ್ನು ಸಕಾರಾತ್ಮಕವಾಗಿ ಪಡೆಯುವಿರಿ. ನಿಮ್ಮ‌ ಜನಪ್ರಿಯತೆಯು ಕಡಿಮೆ ಆದಂತೆ ತೋರುವುದು. ಸಹೋದ್ಯೋಗಿಗಳಿಂದ ಸಹಾಯವನ್ನು ಪಡೆಯುವಿರಿ.‌ ಸ್ವಾರ್ಥವನ್ನು ಬಿಟ್ಟು ಬೇರೆ ಕಡೆ ಯೋಚನೆಯನ್ನು ಮಾಡಲಾರಿರಿ. ಅಭದ್ರತೆಯನ್ನು ನೀವು ದೂರಮಾಡಿಕೊಳ್ಳುವುದು ಉತ್ತಮ. ಆನಂದದಿಂದ ಈ ದಿನವನ್ನು ಕಳೆಯಬೇಕು ಎನಿಸುವುದು.‌ ಅನಿರೀಕ್ಷಿತ ಪ್ರಯಾಣದಿಂದ ಸುಖವಿರಲಿದೆ.‌ ನಿಮ್ಮ ವಿವಾಹದ ಮಾತುಕತೆಯಿಂದ‌ ಸಂತೋಷವಾಗಲಿದೆ.

ಮಿಥುನ ರಾಶಿ: ನಿಮ್ಮ ಮಾತನಾಡುವ ಸ್ವಭಾವವು ಎಲ್ಲರಿಗೂ ಇಷ್ಟವಾಗದೇ ಇದ್ದೀತು. ಹಳೆಯ ಯೋಜನೆಗಳಿಗೆ ಪುನಶ್ಚೇತನವನ್ನು ನೀಡುವಿರಿ. ಪ್ರಭಾವೀ ಶತ್ರುಗಳನ್ನು ನೀವು ಸೋಲಿಸುವಿರಿ. ಅದೃಷ್ಟದ ಪರೀಕ್ಷೆಯು ಆಗಬಹುದು. ಪ್ರತಿಭೆಯ ಪ್ರದರ್ಶನಕ್ಕೆ ಉತ್ತಮ ಅವಕಾಶವು ಸಿಗುವುದು. ಅಜಾಗರೂಕತೆಯಿಂದ ನಿಮಗೆ ನಷ್ಟ ಮಾಡಿಕೊಳ್ಳುವಿರಿ. ಕಳೆದುಕೊಂಡ ವಸ್ತುಗಳನ್ನು ಪುನಃ ಸಂಪಾದಿಸುವ ಮಾನಸಿಕ ಸ್ಥಿತಿಯನ್ನು ಹೊಂದಿರುವಿರಿ. ಕಾಲು ನೋವು ಹೆಚ್ಚಾಗಿದ್ದು ವೈದ್ಯರ ಸಲಹೆಯನ್ನು ಪಡೆಯುವಿರಿ. ನಿಮ್ಮ ದಿನಚರ್ಯೆಯನ್ನು ಬದಲಿಸಿಕೊಳ್ಳಲು ಇಷ್ಟಪಡುವಿರಿ. ಸ್ವಂತ ಉದ್ಯೋಗದಲ್ಲಿ ನಿಮಗೆ ಕೆಲವು ಕಹಿ ವಿಚಾರವು ಗೊತ್ತಾಗುವುದು. ವಿಷಮಸ್ಥಿತಿಯನ್ನು ಸಮಸ್ಥಿಯನ್ನಾಗಿ ಮಾಡಿಕೊಳ್ಳುವ ವಿಧಾನವು ಗೊತ್ತಿದೆ.

ಕರ್ಕಾಟಕ ರಾಶಿ: ವಿವಾಹದ ಮಾತುಕತೆಗಳನ್ನು ನಡೆಸಲು ದೂರದ ಊರಿಗೆ ಪ್ರಯಾಣ ಮಾಡುವಿರಿ. ಚಾಣಾಕ್ಷತನದಿಂದ ನಿಮ್ಮ ಕೆಲಸವನ್ನು ಬೇಗ ಪೂರ್ಣ‌ಮಾಡುವಿರಿ. ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ಇರುವುದು. ಉದ್ಯೋಗದಲ್ಲಿ ಹೊಸ ವಿಚಾರಗಳನ್ನು ನೀವು ಕಲಿಯಬೇಕಾಗುವುದು. ಕಳೆದುಕೊಂಡಷ್ಟು ವೇಗವಾಗಿ ಉಳಿಸಿಕೊಳ್ಳುವುದು ಕಷ್ಟವೆನಿಸುವುದು. ನಿಮ್ಮ ಮಾತಿಗೆ ಇಂದು ವಿರೋಧವು ಉಂಟಾಗುವುದು. ‌ಅಪರಿಚರ ಜೊತೆ ವ್ಯವಹಾರವು ಸರಿಯಾಗಿ ಇರಲಿ. ತಂದೆಯ ಮೇಲೆ‌ ನಿಮಗೆ ಬೇಸರ ಬರಬಹುದು. ಸಂಗಾತಿಯ ಮಾತುಗಳು ನಿಮಗೆ ನೋವನ್ನು ತರಬಹುದು. ನಿಮ್ಮ ಮಾರ್ಯಾದೆಯನ್ನು ಮೀರಿ ವರ್ತಿಸದಿರಿ. ಆಸ್ತಿಯ ವಿಚಾರದಲ್ಲಿ ನಿಮ್ಮರಿಗೆ ಸುಳ್ಳು ಹೇಳಿದ್ದು ಗೊತ್ತಾಗುವುದು. ಗೌಪ್ಯ ಸಂಗತಿಗಳನ್ನು ಹೊರಹಾಕುವಿರಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ