ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 13) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು,
ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ವಜ್ರ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 20 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 9:52 ರಿಂದ 11:16ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:06 ರಿಂದ 03:31ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:02 ರಿಂದ 08:27ರ ವರೆಗೆ.
ಮೇಷ ರಾಶಿ: ಮಿತ್ರರ ಸಹಕಾರವನ್ನು ಮರೆಯುವುದು ಬೇಡ. ವಂಚನೆಗೆ ಪ್ರತಿವಂಚನೆಯು ನಿಮ್ಮ ದೃಷ್ಟಿಯಲ್ಲಿ ಸರಿ ಎನಿಸಬಹುದು. ಪ್ರಮಾಣಿಕತೆಯನ್ನು ಹಣಕಾಸಿನ ವ್ಯವಹಾರವನ್ನು ಕೊಡಬಹುದು. ನಂಬಿಕೆಯನ್ನು ಗಳಿಸುವುದು ನಿಮಗೆ ಸವಾಲಾಗಬಹುದು. ನಿರೀಕ್ಷಿತ ಉಡುಗೊರೆಯಿಂದ ಸಂತೋಷವು ಸಿಗುವುದು. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ. ಆಭರಣ ಪ್ರಿಯರಿಗೆ ಸಂತೋಷವಾಗುವುದು. ಸಹೋದರರು ನಿಮ್ಮ ಯೋಜನೆಗೆ ಸಹಕರಿಸಬಹುದು. ಹಳೆಯ ವ್ಯವಹಾರವು ಪುನಃ ಮುನ್ನೆಲೆಗೆ ಬಂದು ಕಲಹದಲ್ಲಿ ಅಂತ್ಯವಾಗಬಹುದು. ಅಶಿಸ್ತಿನ ಕಾರ್ಯಕ್ಕೆ ಅಪಹಾಸ್ಯ ಮಾಡಬಹುದು. ನೌಕರರನ್ನು ಯೋಗ್ಯ ರೀತಿಯಲ್ಲಿ ಕಂಡುಕೊಂಡು ಬೇಕಾದುದನ್ನು ಮಾಡಿಸಿಕೊಳ್ಳುವಿರಿ. ನಿಮ್ಮ ಬಗ್ಗೆ ಯಾರು ಏನೇ ಎಂದರೂ ಸ್ವಭಾವವನ್ನು ಬದಲಿಸಲಾರಿರಿ.
ವೃಷಭ ರಾಶಿ: ನೀವು ಇಂದು ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿ ಇರಲಾರಿರಿ. ಅನುಮಾನದಿಂದ ಹೊರಬರುವುದು ನಿಮಗೆ ಇಷ್ಟವಾಗದು. ಉದ್ಯೋಗದಲ್ಲಿ ಶ್ರಮವಿದ್ದರೂ ಯಶಸ್ಸು ನಿಮ್ಮದಾಗದು. ಕೆಲವು ಸನ್ನಿವೇಶವನ್ನು ನೀವಾಗಿಯೇ ಸೃಷ್ಟಿಸಿಕೊಳ್ಳುವಿರಿ. ಆರ್ಥಿಕತೆಯು ದುರ್ಬಲವಾಗಿದ್ದು ಇದೇ ದೊಡ್ಡ ಚಿಂತೆಯಾಗಬಹುದು. ಏಕಕಾಲಕ್ಕೆ ಹತ್ತಾರು ಚಿಂತನೆಯನ್ನು ಮನಸ್ಸು ಮಾಡಲಿದೆ. ಅಸಭ್ಯ ಮಾತುಗಳನ್ನು ಕಡಿಮೆ ಮಾಡಿ. ನಿಮ್ಮನ್ನು ನೋಡುವ ದೃಷ್ಟಿಕೋನವು ಬದಲಾದೀತು. ಯಾರ ಬೆಂಬಲವನ್ನು ಬಯಸದೇ ಸ್ವತಂತ್ರವಾಗಿ ಕೆಲಸವನ್ನು ಮಾಡುವಿರಿ. ಮನೆಯಲ್ಲಿ ನಿಮಗೆ ಪೂರಕವಾದ ವಾತಾವರಣವಿದ್ದರೂ ಸಂತೋಷವು ಇರದು. ಇಂದು ನಿಮ್ಮ ಬಗ್ಗೆಯೇ ನಿಮಗೆ ಅಸಮಾಧಾನವಿರಬಹುದು. ಬರಬೇಕಿದ್ದ ಹಣವು ಬಹಳ ದಿನವಾದರೂ ಬಾರದೇ ಚಿಂತೆಯಾಗುವುದು. ಅದಕ್ಕಾಗಿ ಖರೀದಿಯನ್ನು ಮುಂದೂಡುವಿರಿ.
ಮಿಥುನ ರಾಶಿ: ಹೂಡಿಕೆಯನ್ನು ಮಾಡಿ ಹೊಸ ಚಿಂತೆಯನ್ನು ತಲೆಯೊಳಗೆ ತಂದುಕೊಳ್ಳುವಿರಿ. ಸರಿಯಾದುದನ್ನು ಆಯ್ಕೆ ಮಾಡುವುದು ನಿಮ್ಮಿಂದಾಗದು. ಸರ್ಕಾರಿ ಉದ್ಯೋಗದ ಕಡೆ ನಿಮ್ಮ ಮನಸ್ಸು ಹೊರಳುವುದು. ನಿಶ್ಚಿತ ಕಾರ್ಯವು ನಿಮ್ಮಿಂದ ಆಗದೇ ಹೋಗಬಹುದು. ಪ್ರಯಾಣದ ಅನಿವಾರ್ಯತೆ ಇದ್ದರೆ ಸ್ವಂತ ವಾಹನದಲ್ಲಿ ಪ್ರಯಾಣ ಮಾಡಿ. ಆದಾಯದಿಂದ ಸಂತೋಷವಿದ್ದರೂ ಅದನ್ನು ರಕ್ಷಿಸುವ ಹೊಣೆಗಾರಿಕೆಯೂ ಇರುವುದು. ಗೊಂದಲವನ್ನು ನೀವು ಮೀರುವುದು ಕಷ್ಟವಾದೀತು. ಶತ್ರುಗಳನ್ನು ಹಿಮ್ಮೆಟ್ಟಿಸುವ ಕಾರ್ಯವು ನಿಮ್ಮ ಕಡೆಯಿಂದ ಆಗುವುದು. ಪುನಃ ಪುನಃ ನಿಮಗೆ ಆಗದ ವಿಚಾರಗಳೇ ನಿಮ್ಮ ಕಿವಿಗೆ ಬೀಳಬಹುದು. ನಿಮ್ಮ ಸಾಮರ್ಥ್ಯದ ಬಗ್ಗೆ ಸರಿಯಾಗಿ ತಿಳಿಯಿರಿ. ಒತ್ತಡಗಳು ನಿಮ್ಮ ಕೆಲಸವನ್ನು ನಿಧಾನ ಮಾಡುವುದು. ಇಂದು ಎಲ್ಲರ ಜೊತೆ ಹೊಂದಾಣಿಕೆಯ ಸ್ವಭಾವವನ್ನು ಬಿಡಬಹುದು.
ಕರ್ಕ ರಾಶಿ: ಉದ್ಯಮವನ್ನು ಬಿಟ್ಟು ಬೇರೆಯ ಕಾರ್ಯವನ್ನು ಮಾಡಲು ಆಗದು. ನಿಮ್ಮ ನಕಾರಾತ್ಮಕ ಚಿಂತನೆಗಳೇ ನಿಮ್ಮನ್ನು ಹಿಂದೆಳೆಯುವುದು. ಮೌನವೂ ಉತ್ತರವಾದೀತು. ಕುಟುಂಬದ ಜವಾಬ್ದಾರಿಯು ನಿಮ್ಮ ಮೇಲೇ ಬರಬಹುದು. ಯಾರನ್ನೋ ಆಡಿಕೊಳ್ಳುವುದು ಪ್ರಿಯವಾಗಬಹುದು. ಇಂದು ನಿಮ್ಮ ಮಾರ್ಗಗಳು ಎಲ್ಲವೂ ಮುಚ್ಚಿದಂತೆ ಅನ್ನಿಸಬಹುದು. ವೇಗದ ನಡಿಗೆಯಿಂದ ಬೀಳುವಿರಿ. ಆರ್ಥಿಕ ನೆರವನ್ನು ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸಿ. ವ್ಯಂಗ್ಯ ಮಾತುಗಳನ್ನು ಆಡಿ ಯಾರಿಂದಲೂ ಏನನ್ನೂ ನಿರೀಕ್ಷಿಸಲಾಗದು. ಸ್ತ್ರೀಯರಿಂದ ನಿಮಗೆ ಬೈಗುಳವು ಸಿಗಬಹುದು. ಅವಿವಾಹಿತರು ವಿವಾಹದ ಬಗ್ಗೆ ಚಿಂತೆಯಾದೀತು. ಉದ್ಯೋಗದಲ್ಲಿ ಪ್ರಾಮಾಣಿಕರಾಗಿದ್ದರೂ ಅಪವಾದವು ಬರಬಹುದು. ಎಲ್ಲದಕ್ಕೂ ಕೋಪವಿಂದೇ ಪರಿಹಾರವಾಗದು.