Horoscope: ಈ ರಾಶಿಯವರಿಗೆ ಅನಿರೀಕ್ಷಿತ ಉದ್ಯೋಗಾವಕಾಶ, ದಾಂಪತ್ಯದಲ್ಲಿ ಮನಸ್ತಾಪ
ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 14, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.
ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 14) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಸಿದ್ಧಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 20 ನಿಮಿಷಕ್ಕೆ, ರಾಹು ಕಾಲ ಸಂಜೆ 04:56 ರಿಂದ 06:21ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:42 ರಿಂದ 02:06ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:31 ರಿಂದ ಸಂಜೆ 4:56ರ ವರೆಗೆ.
ಮೇಷ ರಾಶಿ: ಮಕ್ಕಳಿಂದ ಏನನ್ನಾದರೂ ನಿರೀಕ್ಷಿಸಬಹುದು. ವೇಷಭೂಷಣದಿಂದ ನೀವು ದೊಡ್ಡ ವ್ಯಕ್ತಿಗಳಂತೆ ಕಾಣಿಸಿಬಹುದು. ಕಲಹವನ್ನು ಮಾಡುವಾಗ ವಿವೇಚನೆ ಇರಲಿ. ಬಂಧುಗಳ ಆಗಮನವಾಗಲಿದೆ. ಇಂದಿನ ಪ್ರಯಾಣದಲ್ಲಿ ಅಡೆತಡೆಗಳಿದ್ದರೂ ಅದನ್ನು ಲೆಕ್ಕಿಸದೇ ಮುನ್ನಡೆಯುವಿರಿ. ಶರೀರದಲ್ಲಿ ಅಸಮತೋಲನವು ಇರಲಿದೆ. ಇಂದು ಉಪಾಯದಿಂದ ಕೆಲಸವನ್ನು ಮಾಡುವುದು ಉತ್ತಮ. ಸ್ನೇಹಿತರ ವಿವಾಹ ಸಮಾರಂಭದಲ್ಲಿ ಖುದ್ದಾಗಿ ಭಾಗಿಯಾಗುವಿರಿ. ನಿಮ್ಮ ಅನುಪಸ್ಥಿತಿಯಲ್ಲಿ ಕಾರ್ಯಗಳು ಆಗುವುದು. ಸಂಗಾತಿಯ ಮಾತಿನಂತೆ ಇಂದು ನಡೆದುಕೊಳ್ಳಬೇಕಾಗುವುದು. ನಿಮ್ಮ ಬೇಡಿಕೆಯನ್ನು ಮೇಲಧಿಕಾರಿಗೆ ತಿಳಿಸುವ ವ್ಯವಸ್ಥೆಯನ್ನು ಮಾಡಿಕೊಳ್ಳುವಿರಿ. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ತಯಾರಿರುವುದಿಲ್ಲ. ಕೆಲವರ ಮನೋಗತವನ್ನು ಅರಿತುಕೊಳ್ಳುವಿರಿ.
ವೃಷಭ ರಾಶಿ: ನಿಮ್ಮ ಶತ್ರುಗಳನ್ನು ನಿಗ್ರಹಿಸಲು ಸಮಯದ ಪ್ರತೀಕ್ಷೆಯಲ್ಲಿಬಿರುವಿರಿ. ಅನಿರೀಕ್ಷಿತವಾಗಿ ಬರುವ ಉದ್ಯೋಗಾವಕಾಶ ನಿಮ್ಮದಾಗಿಸುವತ್ತ ಪ್ರಯತ್ನಶೀಲರಾಗುವಿರಿ. ದಾಂಪತ್ಯದಲ್ಲಿ ಮನಸ್ತಾಪವನ್ನು ಶಾಂತಗೊಳಿಸಿಕೊಳ್ಳುವುದು ಒಳ್ಳೆಯದು. ಜವಾಬ್ದಾರಿಯನ್ನು ಒಪ್ಪಿಕೊಳ್ಳುವುದಿಲ್ಲ. ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗುವುದು. ಸಕಾಲಕ್ಕೆ ಭೋಜನವನ್ನು ಸ್ವೀಕರಿಸುವುದು ಸೂಕ್ತ. ಕೆಲವರು ನಿಮ್ಮ ದಾರಿ ತಪ್ಪಿಸಬಹುದು. ಮಿತ್ರರ ಸಹಾನುಭೂತಿಯು ನಿಮಗೆ ಉತ್ಸಾಹವನ್ನು ಕೊಡುವುದು. ಉತ್ತಮವಾದ ಉಡುಗೊರೆಯೊಂದು ನಿಮ್ಮ ಕೈ ಸೇರಬಹುದು. ಪ್ರಮುಖ ಅಂಶಗಳು ದೂರಾಗಿ ಅಪ್ರಧಾನಾಂಶಗಳೇ ಮುನ್ನೆಲೆಗೆ ಬರುವುದು. ಅತಿಯಾದ ನಿರೀಕ್ಷೆಯನ್ನು ಇಟ್ಟುಕೊಂಡು ಹತಾಶರಾಗುವಿರಿ. ಮನೆಯ ಕೆಲಸದಲ್ಲಿ ಅಧಿಕ ಸಮಯವನ್ನು ಕಳೆಯುವಿರಿ.
ಮಿಥುನ ರಾಶಿ: ನಿಮ್ಮ ಅನಿರೀಕ್ಷಿತ ಲಾಭದಿಂದ ಅಹಂಕಾರ ಬರುವ ಸಾಧ್ಯತೆ ಇದೆ. ಮಿತ್ರರ ಸಹಕಾರವನ್ನು ನೀವು ಅಪೇಕ್ಷಿಸುವುದಿಲ್ಲ. ಕಳ್ಳತನದ ಭೀತಿಯಲ್ಲಿ ಇರುವಿರಿ. ಇತರ ಅನುಭವವೂ ನಿಮಗೆ ಪಾಠವಾಗುವುದು. ಹಠದ ಸ್ವಭಾವದಿಂದ ಹೊರಬನ್ನಿ. ನಿಮ್ಮ ಸ್ವೇಚ್ಛಾಚಾರವು ಮನೆಯವರಿಗೆ ಇಷ್ಟವಾಗದು. ಅನಿರೀಕ್ಷಿತ ಧನಾಗಮನದಿಂದ ಸಂತೋಷವು ಇಮ್ಮಡಿಯಾಗಬಹುದು. ವೈದ್ಯರಿಗೆ ಹೆಚ್ಚಿನ ಅವಕಾಶವು ಸಿಗಬಹುದು. ನಿಮಗೆ ಸಿಕ್ಕ ಜವಾಬ್ದಾರಿಯಿಂದ ಬೀಗುವಿರಿ. ಹೊಸ ಪರಿಚಯವು ಅತಿಯಾಗಿ ಆಪ್ತವಾಗಬಹುದು. ಯಾರ ಜೊತೆಗೂ ನೇರವಾದ ಮಾತುಗಳನ್ನು ಆಡದೇ ಕುಹಕವಾಡುವಿರಿ. ಇನ್ನೊಬ್ಬರ ಗೌಪ್ಯತೆಯನ್ನು ಬಿಚ್ಚಿಡುವುದು ಸಂತೋಷದ ವಿಚಾರವಾಗುವುದು. ನಿಮ್ಮ ಬಗ್ಗೆ ನೀವೇ ಹೇಳಕೊಳ್ಳುವುದು ಜಂಭವೆನಿಸುವುದು. ನಿಮ್ಮ ಚಿಂತನೆಗಳು ನಿಮಗೆ ಮಾತ್ರ ಸರಿ ಎನಿಸುವುದು.
ಕರ್ಕ ರಾಶಿ: ಇಂದು ಸಾಧಿಸಬೇಕೆಂದುಕೊಂಡ ವ್ಯವಹಾರದಲ್ಲಿ ಅಡೆತಡೆಗಳು ಬರಬಹುದು. ಪ್ರೀತಿಯ ಭಾವನೆಗಳಿಗೆ ಪೆಟ್ಟುಬೀಳುವ ಸಾಧ್ಯತೆ ಇದೆ. ಉದ್ಯೋಗ ನಷ್ಟದ ಭೀತಿಯು ಇರಬಹುದು. ಎಂದೋ ಪಡೆದ ಸಾಲದ ಮರುಪಾವತಿಯನ್ನು ಮಾಡಬೇಕಾಗಿಬರಬಹುದು. ಶತ್ರುಬಾಧೆಯನ್ನು ನಿವಾರಿಸಿಕೊಳ್ಳಲು ಕಷ್ಟವಾದೀತು. ನಿಮ್ಮನ್ನು ನಿಂದಿಸುವವರಿಗೆ ಉತ್ತರವನ್ನು ಕೊಡುವ ಯೋಚನೆಯಲ್ಲಿಯೇ ಇರುವಿರಿ. ಧನಾಗಮನದ ನಿರೀಕ್ಷೆಯಲ್ಲಿ ಇರುವಿರಿ. ಭಾವುಕರಾಗುವ ಸಂದರ್ಭವು ಬರಬಹುದು. ನಿರಂತರ ಕಾರ್ಯದಿಂದ ವಿಶ್ರಾಂತಿಯನ್ನು ಪಡೆಯುವಿರಿ. ಕೆಲಸದ ಸಮಯವು ವ್ಯತ್ಯಾಸವಾಗಿದ್ದು ನಿಮಗೆ ಹೊಂದಿಕೊಳ್ಳುವುದು ಕಷ್ಟವಾದೀತು. ನಿಮ್ಮ ಮೇಲೆ ಸಹಾನುಭೂತಿ ಇರಬಹುದು. ವಿದೇಶೀ ವ್ಯಾಪಾರದಿಂದ ಆದಾಯವು ಹೆಚ್ಚಾಗಬಹುದು. ನಿಮ್ಮ ಅಜ್ಞಾನವನ್ನು ನೀವೇ ತೋರಿಸಿಕೊಳ್ಳುವಿರಿ. ಕೆಲವು ಸಮಸ್ಯೆಯನ್ನು ನೀವಾಗಿಯೇ ತಂದುಕೊಳ್ಳುವಿರಿ.