Horoscope 24 Dec: ಆಸ್ತಿ ಮಾರಾಟಕ್ಕೆ ತಿರುಗಾಟ, ಆರ್ಥಿಕವಾಗಿ ಹಿನ್ನಡೆ ಸಾಧಿಸುವ ಸಾಧ್ಯತೆ
ತಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ಹಲವರು ದಿನದಿಂದ ರಾಶಿಭವಿಷ್ಯವನ್ನು ಓದುತ್ತಾರೆ. ಒಂದಷ್ಟು ಮಂದಿ ಯಾವುದೇ ಕಾರ್ಯವನ್ನು ಪ್ರಾರಂಭಿಸಬೇಕಾದರೆ ಇಂದಿನ ದಿನ ಹೇಗಿದೆ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಇದರ ಜೊತೆಗೆ ನಿತ್ಯಪಂಚಾಂಗವನ್ನೂ ನೋಡುತ್ತಾರೆ. ಹಾಗಿದ್ದರೆ, ಇಂದಿನ ಶುಭಾಶುಭಕಾಲ ಹೇಗಿದೆ? 12 ರಾಶಿಗಳ ರಾಶಿಫಲ ಹೇಗಿದೆ ಎಂಬುದು ಇಲ್ಲಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (2023 ಡಿಸೆಂಬರ್ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಸಾಧ್ಯ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 54 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 08 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:43 ರಿಂದ 11:07 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:56 ರಿಂದ 03:20ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:55 ರಿಂದ 08:19ರ ವರೆಗೆ.
ಮೇಷ ರಾಶಿ: ನಿಮಗೆ ಆಕಸ್ಮಿಕವಾಗಿ ಸಿಕ್ಕ ವಸ್ತುಗಳನ್ನು ನೀವು ಜೋಪಾನ ಮಾಡಿಕೊಳ್ಳುವಿರಿ. ವಿವಿಧ ವೃತ್ತಿಗಳು ನಿಮ್ಮನ್ನು ಕರೆಯಬಹುದು. ಪಾಲುದಾರಿಕೆಯು ನಿಮಗೆ ಮೋಸದಂತೆ ಕಾಣುವುದು. ಶತ್ರುಗಳ ಬಗ್ಗೆ ಯಾರಾದರೂ ಕಿವಿಚುಚ್ಚುವರು. ನೀರಿನ ಸ್ಥಳದಲ್ಲಿ ಎಚ್ಚರಿಕೆಯಿಂದ ಇರಿ. ಆಪಾಯದ ಸೂಚನೆಯನ್ನು ಗಮನಿಸಿಕೊಳ್ಳಿ. ವ್ಯಾಪಾರವನ್ನು ಅಚ್ಚುಕಟ್ಟಾಗಿ ಮುಗಿಸುವ ಕೌಶಲವು ನಿಮ್ಮಲ್ಲಿರುವುದು. ಹೂಡಿಕೆಯ ವಿಚಾರದಲ್ಲಿ ಯಾರಾದರೂ ದಾರಿಯನ್ನು ತಪ್ಪಿಸಿಯಾರು. ಉದ್ಯಮಿಗಳ ಭೇಟಿ ಮಾಡುವಿರಿ. ಭೂಮಿಯ ಖರೀದಿಗೆ ಸೂಕ್ತ ಸಮಯವಿದ್ದು ಇಷ್ಟಪಟ್ಟ ಭೂಮಿಯು ಸಿಗುವುದು. ಕೆಲವರಿಂದ ದೂರವಿರುವ ಪ್ರಯತ್ನವನ್ನು ಮಾಡುವಿರಿ. ಸಂಗಾತಿಯ ಮಾತಿನಿಂದ ನೀವು ನೆಮ್ಮದಿಯನ್ನು ಕಳೆದುಕೊಳ್ಳಬಹುದು. ಮನಸ್ಸಿನ ಚಾಂಚಲ್ಯವನ್ನು ನಿವಾರಿಸಲು ಯೋಗವೇ ಮದ್ದಾಗಲಿದೆ.
ವೃಷಭ ರಾಶಿ: ಗೊತ್ತಿಲ್ಲದ ವಿಚಾರಗಳನ್ನು ಹಂಚಿಕೊಳ್ಳುವುದು ಬೇಡ. ಎಲ್ಲರ ಸಹಕಾರದಿಂದ ಮನೆಯ ಕೆಲಸವನ್ನು ಮಾಡುವಿರಿ. ನಿಮ್ಮ ಪ್ರಯತ್ನಕ್ಕೆ ಸರಿಯಾದ ಫಲವು ಸಿಗುವುದು. ಆದಾಯವನ್ನು ನಿರೀಕ್ಷಿತ ಖರ್ಚಿನ ಬಗ್ಗೆ ನಿಯಂತ್ರಣ ಬೇಕು. ನಿಮ್ಮ ಗುರಿಯನ್ನು ಬದಲಾಯಿಸುವುದು ಬೇಡ. ಇಂದು ಖರ್ಚಿನ ಬಗ್ಗೆ ಊಹೆಗೂ ಸಿಗದು. ಹೇಳಬೇಕಾದ ವಿಷಯದಲ್ಲಿ ಮುಚ್ಚು ಮರೆ ಇಲ್ಲದೇ ಸರಿಯಾಗಿ ಹೇಳಿ. ಆದುದರ ಬಗ್ಗೆ ನಿಮಗೆ ಯಾವುದೇ ಬೇಸರವನ್ನು ಮಾಡಿಕೊಳ್ಳುವುದಿಲ್ಲ. ಬೇರೆಯವರನ್ನು ಗೊಂದಲಕ್ಕೆ ಸಿಕ್ಕಿ ಹಾಕಿಸುವುದು ಬೇಡ. ನಿಮ್ಮ ಕಾರ್ಯದಲ್ಲಿನ ಶಿಸ್ತು ಉಳಿದವರಿಗೆ ಕಷ್ಟವಾದೀತು. ಮಿತಿಮೀರಿದ ಆಸೆಗೆ ಕಡಿವಾಣದ ಅಗತ್ಯವಿದೆ. ನೀವು ಹೋದಕಡೆ ನಿಮಗೆ ಬೇಕಾದ ಹಾಗೆ ವಾತಾವರಣವನ್ನು ಸೃಷ್ಟಿಸಿಕೊಳ್ಳುವಿರಿ. ಕೇಳಿ ಬಂದವರಿಗೆ ನೀವು ಇಂದು ಧನ ಸಹಾಯವನ್ನು ಮಾಡುವಿರಿ.
ಮಿಥುನ ರಾಶಿ: ನಿಮ್ಮ ಕಾಳಜಿಯು ಇತರರಿಗೆ ಮುಜುಗರವನ್ನು ತಂದೀತು. ಕಟ್ಟಡ ನಿರ್ಮಾಣದವರಿಗೆ ಹೆಚ್ಚು ಲಾಭವಾಗಲಿದೆ. ಹೊಸ ಯೋಜನೆಗಳೂ ಅವರಿಗೆ ಸಿಗಲಿದೆ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರಲಿದೆ. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು. ಅನಗತ್ಯ ಅಲೆದಾಟವನ್ನು ನಿಲ್ಲಿಸಿ ಕಾರ್ಯದಲ್ಲಿ ಮಗ್ನರಾಗಿ. ನಿಮ್ಮ ಸುಳ್ಳು ಮಾತುಗಳನ್ನು ಯಾರೂ ಕೇಳಲು ಇಷ್ಟ ಪಡರು. ಅಲ್ಪ ಕಾರ್ಯದಿಂದ ಎಲ್ಲವೂ ಸಿದ್ಧಿಸುವುದಾದರೂ ಅಧಿಕ ಶ್ರಮವಿರುವುದು. ಕಲಾವಿದರು ಹೆಚ್ಚಿನ ಪ್ರಶಂಸೆಗೆ ಪಾತ್ರರಾಗಲಿದ್ದಾರೆ. ಯಾರೋ ಮಾಡಬೇಕಾದ ಕೆಲಸಕ್ಕೆ ನೀವು ಹೋಗಬೇಕಾದೀತು. ಹಣವಿದ್ದರೂ ಸಮಯಕ್ಕೆ ಸರಿಯಾಗಿ ಸಿಗದ ಕಾರಣ ತುರ್ತಾಗಿ ಸಾಲವನ್ನು ಮಾಡಬೇಕಾಗುವುದು. ನಿಮ್ಮನ್ನು ಆಡಿಕೊಳ್ಳುವುದು ನಿಮಗೆ ಇಷ್ಟವಾಗದು.
ಕಟಕ ರಾಶಿ: ಮನೆಯ ಕೆಲವು ವಿಚಾರದಲ್ಲಿ ಮನೆಯವರಿಂದ ಕಿರಿಕಿರಿ ಆಗಬಹುದು. ಕೃಷಿಯ ಉತ್ಪನ್ನದಿಂದ ಅಧಿಕಲಾಭವಿರಲಿದೆ. ನಿಮ್ಮನ್ನು ವಿರೋಧಿಸುವವರು ಹೆಚ್ಚಾದಾರು. ವಿರೋಧಿಗಳನ್ನು ಲೆಕ್ಕಿಸದೇ ನಿಮ್ಮಷ್ಟಕ್ಕೆ ಇರುವಿರಿ. ನಿಂತ ಕಾರ್ಯಕ್ಕೆ ಚಾಲನೆ ನೀಡುವಿರಿ. ನಿದ್ರೆ ಇಲ್ಲದೇ ಮಾನಸಿಕವಾಗಿ ಕುಗ್ಗುವಿರಿ. ಸ್ಪರ್ಧೆಗಾಗಿ ನಡೆಸಿದ ನಿಮ್ಮ ಶ್ರಮವು ವ್ಯರ್ಥವಾದೀತು. ನಿಮ್ಮ ಮೇಲಿರುವ ಭಾವನೆಯು ದೂರಾಗಬಹುದು. ಅಮೂಲ್ಯ ಸಮಯವನ್ನು ಆಲಸ್ಯದಿಂದ ಕಳೆಯುವಿರಿ. ಆಸ್ತಿಯ ವಿಚಾರಕ್ಕೆ ನೆರಮನೆಯವರ ಜೊತೆ ಕಲಹವಾಗಲಿದೆ. ಸಂಗಾತಿಯಿಂದ ನಿರೀಕ್ಷಿತ ಬೆಂಬಲವು ಸಿಗದು. ಧಾರ್ಮಿಕ ವಿಷಯದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗಲಿದೆ. ಸಕಾರಾತ್ಮಕ ಚಿಂತನೆಯನ್ನು ದೂರ ಮಾಡಿಕೊಳ್ಳುವಿರಿ. ಸದಾ ಯಾರ ಮೇಲಾದರೂ ಅನುಮಾನದಿಂದಲೇ ಇರುವಿರಿ. ನಿಮ್ಮ ಗೌರವಕ್ಕೆ ತೊಂದರೆಯಾಗುವ ಕಡೆ ನೀವು ಹೋಗಲು ಇಷ್ಟ ಪಡುವುದಿಲ್ಲ.
ಸಿಂಹ ರಾಶಿ: ಮಾಧ್ಯಮದಲ್ಲಿ ಕಾರ್ಯ ಮಾಡುವವರಿಗೆ ಒತ್ತಡಗಳು ಎಂದಿಗಿಂತ ಹೆಚ್ಚು ಇರುವುದು. ಅಪರಿಚಿತರ ಜೊತೆ ಅತಿಯಾದ ಸ್ನೇಹವು ಬೆಳೆಯಬಹುದು. ನಂಬಿಕೆಯಲ್ಲಿ ದ್ರೋಹವಾಗಿದ್ದು ಯಾರನ್ನು ನಂಬಬೇಕು ಎನ್ನುವ ಗೊಂದಲ, ಹತಾಶೆಗಳು ಕಾಣಿಸುವುದು. ಎಲ್ಲವೂ ಆಗಿಹೋದಂತೆ ನಿಮಗೆ ಅನ್ನಿಸಬಹುದು. ನಿಮ್ಮವರನ್ನು ಬಿಟ್ಟು ಹೋದವರ ಬಗ್ಗೆ ಆಲೋಚನೆ ಬೇಡ. ವಸತಿಯಲ್ಲಿ ತೊಂದರೆ ಬಂದ ಕಾರಣ ಬದಲಾಯಿಸುವ ಸಂದರ್ಭವೂ ಬರಬಹುದು. ಸಂತಾನದ ವಿಚಾರದಲ್ಲಿ ಅಶಾಂತಿ ಮೂಡಬಹುದು. ನಿಮ್ಮವರೆಂದುಕೊಂಡವರು ನಿಮ್ಮವರಾಗದೇ ಇರಬಹುದು. ಅನಾರೋಗ್ಯವನ್ನೂ ನೀವು ಲೆಕ್ಕಿಸದೇ ಕಾರ್ಯದಲ್ಲಿ ಪ್ರವೃತ್ತರಾಗುವಿರಿ. ನಿಮ್ಮ ಬಯಕೆಗಳನ್ನು ಯಾರ ಬಳಿಯೂ ಪ್ರಕಟಪಡಿಸುವುದಿಲ್ಲ. ಮನಸ್ಸಿನಲ್ಲಿಯೇ ಮಂಡಿಗೆ ತಿನ್ನುವಿರಿ. ಸಣ್ಣ ವಿಚಾರಕ್ಕೆ ಯಾರನ್ನೋ ದ್ವೇಷ ಮಾಡುವುದು ಸರಿಯಲ್ಲ. ಸ್ಪರ್ಧಾತ್ಮಕ ಪರೀಕ್ಷೆಗೆ ಇನ್ನೂ ಹೆಚ್ಚಿನ ಶ್ರಮವು ಬೇಕು.
ಕನ್ಯಾ ರಾಶಿ: ಹೊಸ ಸ್ನೇಹಿತರ ಬಳಗದಿಂದ ನಿಮಗೆ ಸಂತೋಷವು ಸಿಗುವುದು. ಉದ್ಯೋಗದ ಮಿತ್ರರು ಎಲ್ಲಿಗಾದರೂ ಹೋಗುವ ಯೋಜನೆಯನ್ನು ಮಾಡಿಕೊಂಡು ಹೊರಡುವಿರಿ. ಇಂದು ಹಿರಿಯರಿಂದ ಕೆಲವು ಹಿತೋಪದೇಶವನ್ನು ಕೇಳಬೇಕಾದೀತು. ವ್ಯಾಪಾರದ ಸ್ಥಳದಲ್ಲಿ ಇಕ್ಕಟ್ಟು ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವುದು ಬೇಡ. ಅನಾರೋಗ್ಯದ ಕಾರಣ ಉತ್ಸಾಹದ ಯಾವ ಕಾರ್ಯವನ್ನೂ ಮಾಡಲಾಗದು. ದಿನದ ಕೆಲಸವನ್ನು ಮಾಡುವಷ್ಟರಲ್ಲಿ ನಿಮ್ಮ ಸಮಯವು ಕಳೆದುಹೋಗುವುದು. ರಾಜಕೀಯ ಏರಿಳಿತವನ್ನು ನೀವು ಊಹಿಸುವುದು ಕಷ್ಟವಾದೀತು. ಸಾಲದಿಂದ ಬಿಡುಗಡೆ ಸಿಕ್ಕ ಕಾರಣ ಕುಟುಂಬದಲ್ಲಿ ಸೌಖ್ಯವಿರುವುದು. ಎಲ್ಲ ಕೆಲಸಗಳೂ ಅಪೂರ್ಣವಾಗಿದ್ದು ನಿಮಗೆ ಅಸಮಾಧನ ಇರುವುದು. ಸಮಾಜಿಕ ಕಾರ್ಯವನ್ನೂ ಪರಿಚಿತರ ಜೊತೆ ಭಾಗವಹಿಸಿ ಮಾಡುವಿರಿ.
ತುಲಾ ರಾಶಿ: ಸ್ತ್ರೀಯರು ತಮ್ಮ ಕೌಶಲವನ್ನು ತೋರಿಸುವರು. ಸಮಯಸ್ಫೂರ್ತಿಯಿಂದ ಕೆಲಸವನ್ನು ಮಾಡುವಿರಿ. ಪಾಲುದಾರಿಕೆಯ ಭೂ ಸಂಬಂಧದ ಕಾರ್ಯದಿಂದ ಲಾಭವಾಗಲಿದೆ. ದಾಂಪತ್ಯವು ಪರಸ್ಪರ ಸೌಹಾರ್ದದ ಮಾತುಗಳಿಂದ ನೆಮ್ಮದಿ ಸಿಗುವುದು. ಮಕ್ಕಳ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ. ಅವಶ್ಯಕತೆಯನ್ನು ನೋಡಿ. ಯಾರಸದರೂ ಅಸತ್ಯವನ್ನು ಆಡಿದರೆ ಅದನ್ನು ಸರಳವಾಗಿ ಕಂಡು ಹಿಡಿಯುವಿರಿ. ಅನಿಶ್ಚಿತ ಕೆಲಸದಲ್ಲಿ ಆದಾಯವನ್ನು ಹೆಚ್ಚು ಪಡೆಯುವಿರಿ. ವೈದ್ಯರು ಇಂದು ತಮ್ಮ ಕೆಲಸಗಳನ್ನು ಬದಲಾಯಿಸಿಕೊಳ್ಳುವ ಸ್ಥಿತಿಯು ಬರಬಹದು. ನೀವು ಮೌನದಿಂದ ಇದ್ದರೆ ಒಪ್ಪಿಗೆ ಕೊಟ್ಟಿದ್ದೀರಿ ಎಂದಾಗುವುದು. ಸಮಯಕ್ಕೆ ಬೆಲೆ ಕೊಟ್ಟು ಎಲ್ಲವನ್ನೂ ಸಕಾಲಕ್ಕೆ ಮುಗಿಸುವುದು ಉತ್ತಮ. ಸಂಶೋದನೆಯ ಅಂಶಗಳು ನಿಮಗೆ ಇಷ್ಟವಾಗಬಹುದು.
ವೃಶ್ಚಿಕ ರಾಶಿ: ಖಾಸಗೀ ಉದ್ಯೋಗಿಗಳು ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗುವರು. ನಿಮ್ಮ ಅಪನಂಬಿಕೆಗಳನ್ನು ಯಾರ ಮೇಲೂ ಹೇರುವುದು ಬೇಡ. ಇಷ್ಟದ ಕಾರ್ಯವು ಸಿದ್ಧಿಯಾಗಿ ನಿಮಗೆ ಉತ್ಸಾಹವು ಹೆಚ್ಚಾಗುವುದು. ನಿಮ್ಮ ಕೆಲವು ವರ್ತನೆಯನ್ನು ಮಿತ್ರರು ವಿರೋಧಿಸುವರು. ಅಮೂಲ್ಯ ವಸ್ತುಗಳನ್ನು ಖರೀದಿಸುವುದು ಕಷ್ಟವಾದರೂ ಮಾಡುವಿರಿ. ನಿಮ್ಮ ಸಾಮರ್ಥ್ಯಕ್ಕೆ ಕೊಟ್ಟ ಜವಾಬ್ದಾರಿಯು ಸಣ್ಣದಾಗಿರುವುದು. ನಿಮ್ಮ ಬಂಧುಗಳ ಸಹಾಯದಿಂದ ವಿವಾಹದ ಮಾತುಕತೆಯು ಘಟಿಸುವುದು. ಪರಿಶ್ರಮಕ್ಕೆ ತಕ್ಕ ಫಲವನ್ನೂ ನೀವು ಅಪೇಕ್ಷಿಸಿ ಪಡೆದುಕೊಳ್ಳುವಿರಿ. ಬಂಧುಗಳ ಮೇಲೆ ಊಹಾಪೋಹಗಳನ್ನು ಇಟ್ಟುಕೊಳ್ಳುವಿರಿ. ನೀವು ಮಾಡುವ ವೃತ್ತಿಯಲ್ಲಿ ಗೊಂದಲವಿದ್ದರೆ ಅನುಭವಗಳನ್ನು ಕೇಳಿ ಮಂದುವರೆಯಿರಿ. ಸಂಗಾತಿಯ ಕೆಲವು ಮಾತುಗಳಿಂದ ನಿಮಗೆ ಬೇಸರವಾಗುವುದು.
ಧನು ರಾಶಿ: ಜೀವನವನ್ನು ಸಂತೋಷದಿಂದ ಕಳೆಯುವ ವಿಧಾನವು ನಿಮಗೆ ಗೊತ್ತಿದೆ. ವಾಹನದಲ್ಲಿ ದೂರ ಸಂಚಾರವು ನಿಮಗೆ ಖುಷಿಯನ್ನು ಕೊಡುವುದು. ಇಂದು ಆಸ್ತಿಯ ಮಾರಾಟಕ್ಕೆ ಸಂಬಂಧಿಸಿದಂತೆ ಹೆಚ್ಚು ತಿರುಗಾಟ ಮಾಡಬೇಕಾಗುವುದು. ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ನೋಡಿಕೊಳ್ಳಲು ಹೋಗಿ ನಿಮ್ಮ ಆರ್ಥಿಕತೆಯು ಹಿಂದಡಿ ಇಡಬಹುದು. ಸಮಾರಂಭದಲ್ಲಿ ಹಳೆಯ ಸ್ನೇಹಿತರ ಭೇಟಿಯಾಗುವುದು. ಆಕಸ್ಮಿಕ ಧನಪ್ರಾಪ್ತಿಯಿಂದ ಹರ್ಷಗೊಳ್ಳುವಿರಿ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ವಿದ್ಯಾರ್ಥಿಗಳು ಯಾರ ಬೆಂಬಲಕ್ಕೂ ಕಾಯದೇ ನಿಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಮುನ್ನುಗ್ಗುವುದು ಸೂಕ್ತ. ನಿಮ್ಮ ಮನಸ್ಸಿಗೆ ಪೂರ್ಣವಾಗಿ ಒಪ್ಪಿಗೆ ಆದರೆ ಮಾತ್ರ ಯಾವ ಕೆಲಸಕ್ಕಾದರೂ ಮುಂದುವರಿಯಿರಿ. ನಿಮಗೆ ಇಷ್ಟವಾದ ವಿಚಾರವನ್ನು ತಕ್ಷಣ ಪಡೆಯುವಿರಿ. ಉದ್ಯೋಗವಿಲ್ಲವೆಂಬುದು ನಿಮಗೆ ಅವಮಾನದ ಸಂಗತಿಯಾಗಲಿದೆ.
ಮಕರ ರಾಶಿ: ಎಲ್ಲರ ಜೊತೆಗಿದ್ದರೂ ಒಂಟಿಯಂತೆ ಅನ್ನಿಸುವುದು. ಸ್ಪರ್ಧೆಯಲ್ಲಿ ಹಿನ್ನಡೆಯಾಗಬಹುದು. ಯಾರನ್ನೂ ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ. ಇಂದು ಸ್ತ್ರೀಯರಿಗೆ ಮಾನಿಸಿಕವಾದ ಕಿರಿಕಿರಿ ಇರಲಿದ್ದು ತೊಂದರೆಯಾಗಬಹುದು. ಯಂತ್ರೋತ್ಪನ್ನಗಳ ತಯಾರಿಯಲ್ಲಿ ಹಿನ್ನಡೆಯಾಗಬಹುದು. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಪಡೆಯುವಿರಿ. ನಿಮ್ಮ ವಸ್ತುಗಳ ಮೇಲೆ ಅತಿಯಾದ ಮೋಹವು ಇರುವುದು. ವೈಯಕ್ತಿಕ ಕೆಲಸಗಳು ಬಹಳಷ್ಟು ಇದ್ದು, ಮಾಡಲು ಸಮಯ ಸಾಲದು. ಮಿತ್ರರ ಸಹಾಯದಿಂದ ನಿಮಗೆ ಧನ ಸಹಾಯವು ಸಿಗಬಹುದು. ಸಾರ್ವಜನಿಕವಾಗಿ ಅವಮಾನವಾಗುವ ಸಾಧ್ಯತೆ ಇದೆ. ನಿಮಗೆ ಪರಿಚಿತರನ್ನು ಆಪ್ತರನದನಾಗಿ ಮಾಡಿಕೊಳ್ಳುವಿರಿ. ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಆದೀತು. ಸಂಗಾತಿಯ ಭಾವನೆಗಳಿಗೆ ಸ್ಪಂದಿಸದೇ ಇರುವುದರಿಂದ ನಿಮ್ಮ ಮೇಲೆ ಕೋಪಗೊಳ್ಳುವರು.
ಕುಂಭ ರಾಶಿ: ನಿಮ್ಮ ಅಮೂಲ್ಯ ವಿಚಾರಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವ ಅಗತ್ಯವಿಲ್ಲ. ಮನೆಯಲ್ಲಿ ನಡೆಯುವ ಶುಭ ಕಾರ್ಯಕ್ಕೆ ಹೆಚ್ಚು ಖರ್ಚಾಗಬಹುದು. ನಿಮ್ಮ ಅಂದಾಜು ಮೀರಬಹುದು. ಮಕ್ಕಳಿಗೆ ಇರುವ ಗೊಂದಲವನ್ನು ದೂರ ಮಾಡುವಿರಿ. ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು. ನಿಮ್ಮನ್ನು ನೀವು ಬದಲಿಸಿಕೊಳ್ಳಬೇಕಾಗುವುದು. ವಿದೇಶದ ವ್ಯವಹಾರದಲ್ಲಿ ಪಾಲುದಾರಿಕೆ ಇರಲಿದೆ. ವೃತ್ತಿಯನ್ನು ಹೊರತುಪಡಿಸಿದ ಅವಕಾಶಗಳು ನಿಮ್ಮನ್ನು ಹುಡುಕಿ ಬರಬಹುದು. ಕಾರ್ಯದ ಸ್ಥಳವು ಬದಲಾಗುವ ಸಾಧ್ಯತೆ ಇದೆ. ಉತ್ತಮ ಸಮಯದ ನಿರೀಕ್ಷೆಯಲ್ಲಿ ಸಮಾಧಾನ ಇರುವುದು. ನಿಮ್ಮಲ್ಲಿ ಇರುವ ವಸ್ತುಗಳನ್ನು ನೀವು ಯಾರಿಗಾದರೂ ಕೊಡುವುದು ಬೇಡ. ನಿಮ್ಮ ಕೋಪವು ವ್ಯರ್ಥವಾದೀತು.
ಮೀನ ರಾಶಿ: ಆರ್ಥಿಕ ಭದ್ರೆತೆಯ ಬಗ್ಗೆ ನಿಮಗೆ ತೊಂದರೆಗಳು ಆಗಬಹುದು. ಇಲ್ಲವಾದರೆ ಯಾವ ಪ್ರಯೋಜನವೂ ಇಲ್ಲದೇ ನಷ್ಟವಾಗುವುದು. ವೈವಾಹಿಕ ಜೀವನವನ್ನು ನಡೆಸುವ ಬಗ್ಗೆ ನಿಮಗೆ ಸಲಹೆಗಳು ಸಿಗುವುದು. ಭೂಮಿಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ. ನಿಮ್ಮ ಕೆಲಸವು ಬದಲಾವಣೆಯಾಗಬಹುದು. ಅನಾರೋಗ್ಯದ ನಡುವೆಯೂ ಉತ್ಸಾಹದಿಂದ ಇರುವಿರಿ. ಶತ್ರುಗಳ ಮುಖಾಮುಖಿ ಭೇಟಿಯ ಸಂದರ್ಭವು ಬರುವುದು. ನೀವು ಇಂದು ಯಾವ ವಿಚಾರವನ್ನು ಮಾತನಾಡುವುದಿದ್ದರೂ ಎಚ್ಚರವಿರಲಿ. ಒತ್ತಾಯದ ಕಾರಣ ಸಮಾರಂಭಗಳಿಗೆ ಹೋಗುವಿರಿ.
ಲೋಹಿತ ಹೆಬ್ಬಾರ್ – 8762924271 (what’s app only)