Horoscope: ದಿನಭವಿಷ್ಯ; ಈ ರಾಶಿಯವರಿಗೆ ವೈವಾಹಿಕ ಜೀವನದ ಚಿಂತೆ ಅತಿಯಾಗಿ ಕಾಡಬಹುದು

| Updated By: ಆಯೇಷಾ ಬಾನು

Updated on: Feb 28, 2024 | 7:02 AM

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಇಂದಿನ (ಫೆಬ್ರವರಿ​​​​ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ; ಈ ರಾಶಿಯವರಿಗೆ ವೈವಾಹಿಕ ಜೀವನದ ಚಿಂತೆ ಅತಿಯಾಗಿ ಕಾಡಬಹುದು
ಪ್ರಾತಿನಿಧಿಕ ಚಿತ್ರ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಚತುರ್ಥಿ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 51 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:45 ರಿಂದ 02:14ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 08:20 ರಿಂದ 09:48ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:17 ರಿಂದ 12:45ರ ವರೆಗೆ.

ಧನು ರಾಶಿ: ಇಂದು ಅನ್ಯ ಕಾರ್ಯದ ಒತ್ತಡದಿಂದ ಮುಖ್ಯ ಕೆಲಸವು ಮರೆಯಾಗಬಹುದು. ಇನ್ನೊಬ್ಬರ ಪ್ರೇರಣೆಯಿಂದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಗುವಿರಿ. ಸಾಲದಿಂದ ಮುಕ್ತರಾಗಲು ಮಿತ್ರರ ಸಹಾಯವನ್ನು ಒಡೆಯುವಿರಿ. ಯಾರದೋ ಮಾತಿನಿಂದ ನೀವು ದುಃಖಪಡುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಧಿಕ ಖರ್ಚನ್ನು ನೀವು ಮಾಡಬೇಕಾಗುವುದು. ಅನಾರೋಗ್ಯದಿಂದ ಇದ್ದರೂ ನಿಮ್ಮ ಕರ್ತವ್ಯವನ್ನು ಮಾಡುವಿರಿ. ಉದ್ಯೋಗದಲ್ಲಿ ಒತ್ತಡಗಳು ಇರುವುದುರಿಂದ ಕುಟುಂಬಕ್ಕೆ ಸಮಯವನ್ನು ಕೊಡಲಾಗದು. ಶಿಸ್ತಿನಿಂದ ನೀವು ವ್ಯವಹಾರವನ್ನು ಇಟ್ಟುಕೊಳ್ಳುವಿರಿ. ವೈವಾಹಿಕ ಜೀವನದ ಚಿಂತೆ ಅತಿಯಾಗಿ ಕಾಡಬಹುದು. ಪಾಲುದಾರಿಕೆಯಲ್ಲಿ ಉಂಟಾದ ವಿವಾದವನ್ನು ದೊಡ್ಡ ಮಾಡಿಕೊಳ್ಳುವಿರಿ. ಆಲಸ್ಯದಿಂದ ಎಲ್ಲ ಕಾರ್ಯದಲ್ಲಿಯೂ ನಿರಾಸಕ್ತಿ ಇರಲಿದೆ. ವಿದ್ಯಾಭ್ಯಾಸದ ಹಿನ್ನಡೆಯು ನಿಮಗೆ ಅವಮಾನ ಎನಿಸುವುದು.

ಮಕರ ರಾಶಿ: ಇಂದು ನೀವು ಅನಗತ್ಯ ವಿಚಾರಗಳಿಗೆ ಸಮಯವನ್ನು ಕೊಡುವಿರಿ. ಉದ್ಯೋಗದ ಸ್ಥಾನದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ. ಯಾರಿಂದಲಾದರೂ ಅಪಮಾನವಾಗಬಹುದು. ತುರ್ತು ಹಣಕಾಸಿನ ಸಮಸ್ಯೆಯು ಎದುರಾದ ಸ್ನೇಹಿತರಿಂದ ಸಂಪತ್ತನ್ನು ಪಡೆದುಕೊಳ್ಳುವಿರಿ. ನ್ಯಾಯಾಲಯದಲ್ಲಿ ನಿಮಗೆ ಜಯ ಸಿಗುವ ಸಂಭವವು ಅಸಾಧ್ಯ. ವ್ಯಾಪಾರದಲ್ಲಿ ಹಿನ್ನಡೆಯನ್ನು ಪಡೆಯಬೇಕಾಗುವುದು. ವಿದ್ಯಾಭ್ಯಾಸದ ಗಮನವು ಬೇರೆ ಕಡೆಗೆ ಹೋಗಬಹುದು. ಆತುರದ ನಡಿಗೆಯಿಂದ ನೀವು ಎಡವುವಿರಿ. ದೀರ್ಘಕಾಲದ ರೋಗದಿಂದ ಬಳಲಿಕೆಯು ನಿಮಗೆ ಅಭ್ಯಾಸವಾಗಲಿದೆ. ಶತ್ರುಗಳ ಕಾಟಗಳು ನಿಮ್ಮ ಉತ್ಸಾಹವನ್ನು ಭಂಗ ಮಾಡಬಹುದು. ದೈವದ ಭೀತಿಯು ನಿಮ್ಮನ್ನು ಕಾಡಬಹುದು. ರಾಜಕಾರಣಿಗಳಿಂದ ನಿಮ್ಮ ಕೆಲಸವು ಪೂರ್ಣವಾಗಲಿದೆ. ದುಃಸ್ವಪ್ನಗಳು ಬೀಳಬಹುದು. ಈ ದಿನ ನೀವು ಶಾರೀರಿಕ ಕಾಳಜಿಯನ್ನು ಹೆಚ್ಚು ಮಾಡಬೇಕಾದೀತು. ಸಂಗಾತಿಯ ಎದುರು ಏನನ್ನೂ ಹೇಳದೇ ಸುಮ್ಮನಿರುವಿರಿ.

ಕುಂಭ ರಾಶಿ: ನಿಮ್ಮ ನಂಬಿಕೆಗೆ ಮೋಸವಾಗಬಹುದು. ಯಾರನ್ನೋ ನಿಮ್ಮವರನ್ನಾಗಿ ಮಾಡಿಕೊಳ್ಳುವಿರಿ. ಅಪರಿಚಿತರ ಮಾತಿಗೆ ಮರುಳಾಗಿ ಹಣವನ್ನು ಕೊಡುವಿರಿ. ನಿಮ್ಮದಾದ ಕೆಲಸವನ್ನು ನೀವು ಇಟ್ಟುಕೊಳ್ಳುವುದು ಮುಖ್ಯವಾಗಿರಲಿ. ಹೆಚ್ಚು ಖರೀದಿಯ ಆರ್ಡರ್ ಗಳು ಬರಲಿದೆ. ದೈನಂದಿನ ಕೆಲಸದಲ್ಲಿ ಬದಲಾವಣೆಯನ್ನು ನೀವು ಅಪೇಕ್ಷಿಸುವಿರಿ. ಕಾರ್ಯ ಕ್ಷೇತ್ರದಲ್ಲಿ ಒತ್ತಡವಿರುವ ಕಾರಣ ಮನಸ್ಸಿಗೆ ಸಿಗಬೇಕಾದ ಶಾಂತಿಯ ಕೊರೆತೆಯೂ ಇರಲಿದೆ. ದಾಂಪತ್ಯದಲ್ಲಿ ನಿರಾಸಕ್ತಿ ಉಂಟಾಗಬಹುದು. ಮನಸ್ಸಿಗೆ ಹಿಡಸದ್ದನ್ನು ನೀವು ಮಾಡಲಾರಿರಿ. ಪಾಲುದಾರಿಕೆಯಲ್ಲಿ ಸಮಸ್ಯೆ ಕಾಣಿಸುವುದು. ಉದ್ಯಮದಲ್ಲಿ ಪ್ರಗತಿಯನ್ನು ಕಂಡು ಖುಷಿಯಾಗುವುದು. ನಿಮಗೆ ಯಾರಿಂದಲೋ ರಕ್ಷಣೆ ಇದೆ ಎನ್ನಿಸಬಹುದು. ಮನೆಯಲ್ಲೂ ತಾಳ್ಮೆಯನ್ನು ಇಟ್ಟುಕೊಳ್ಳಿ. ಯಾರೊಬ್ಬರ ಮಾತುಗಳಿಗೆ ತ್ವರಿತ ಪ್ರತಿಕ್ರಿಯೆ ಕೊಡುವುದು ಬೇಡ. ಶುಭ ಸುದ್ದಿಯು ನಿಮ್ಮನ್ನು ಪ್ರೋತ್ಸಾಹಿಸಬಹುದು. ನಿಮ್ಮ ಗುಣವನ್ನು ಅಪಾರ್ಥ ಮಾಡಿಕೊಂಡಾರು.

ಮೀನ ರಾಶಿ: ಇಂದು ಯಾವುದಾದರೂ ದುರಭ್ಯಾಸವನ್ನು ಬೆಳೆಸಿಕೊಳ್ಳುವಿರಿ. ಆರೋಗ್ಯದ ಸ್ಥಿತಿ ಏರುಪೇರಾಗಬಹುದು. ಅಲ್ಪ ಧನ ಲಾಭದಿಂದ ಸಂತೋಷ ಸಿಗುವುದು. ಇಷ್ಟವಿಲ್ಲದಿದ್ದರೂ ತಿರುಗಾಟ ಮಾಡಬೇಕಾಗುವುದು. ಶತ್ರುಗಳನ್ನು ನಿಶ್ಶೇಷ ಮಾಡುವಿರಿ. ನಿಮ್ಮದೇ ಸ್ಥಿರಾಸ್ತಿ ವ್ಯವಹಾರದಲ್ಲಿ ನಿಮಗೆ ಅನುಕೂಲವಾಗುವಂತೆ ಆಗುವುದು. ಮಾನಸಿಕ ನೆಮ್ಮದಿಯು ನಿಮ್ಮ ಹಲವು ಕೆಲಸಗಳನ್ನು ಮಾಡಲು ಸಹಾಯಕವಾಗುವುದು. ವಾಹನದ ತೊಂದರೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆ. ಸ್ವಂತ ವ್ಯಾಪಾರದಲ್ಲಿ ಹಿನ್ನಡೆಯಾಗುವುದು‌. ಹೇಗಾದರೂ ಮಾಡಿ ಭಯವನ್ನು ದೂರ ಮಾಡಿಕೊಳ್ಳುವಿರಿ. ತೆಗಳಿಕೆಯನ್ನು ಛಲವಾಗಿ ತೆಗೆದುಕೊಳ್ಳುವಿರಿ. ಯಾರ ಮೇಲೂ ಅವಮಾನ ಬೇಡ. ವಾಣಿಜ್ಯದಲ್ಲೂ ಕೆಲಸ ಸುಗಮವಾಗಿ ನಡೆಯುವುದು.‌ ಹಿಂದಿನ ತಪ್ಪುಗಳು ಪಾಠವಾಗುವುದು. ಹಳೆಯ ಸಾಲವನ್ನು ಮರುಪಡೆಯಲು ಸಾಧ್ಯವಾಗದು. ಹಳೆಯ ಸ್ನೇಹವು ಮತ್ತೆ ಒಂದಾಗಬಹುದು.