Astrology: ಸರ್ಕಾರಿ ಉದ್ಯೋಗ ಕಿರಿಕಿರಿ ಎನಿಸಿದರೂ ಈ ರಾಶಿಯವರು ಬಿಡಲಾರರು
ರಾಶಿ ಭವಿಷ್ಯ ಭಾನುವಾರ(ಸೆ. 8): ಬಂಧುಗಳನ್ನು ಕಳೆದುಕೊಳ್ಳುವಿರಿ. ಸಂಗಾತಿಯ ಇಚ್ಛೆಗೆ ಅನುಸಾರವಾಗಿ ನಡೆದುಕೊಳ್ಳುವಿರಿ. ಹಿರಿಯರಿಂದ ನಿಮಗೆ ಸರಿಯಾದ ಮಾರ್ಗದರ್ಶನ ಸಿಗದು. ನಿಮ್ಮವರ ವರ್ತನೆಯು ನಿಮ್ಮ ದುಃಖಕ್ಕೆ ಕಾರಣವಾಗಬಹುದು. ಹಾಗಾದರೆ ಸೆಪ್ಟೆಂಬರ್ 8ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.
ಜ್ಯೋತಿಷ್ಯದಿಂದ ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಸ್ವಾತಿ, ಯೋಗ: ಐಂದ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:38 ಗಂಟೆ, ರಾಹು ಕಾಲ ಮಧ್ಯಾಹ್ನ 05:06 ರಿಂದ ಸಂಜೆ 06:38, ಯಮಘಂಡ ಕಾಲ ಮಧ್ಯಾಹ್ನ 12:30 ರಿಂದ 02:02ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:34 ರಿಂದ 05:06ರ ವರೆಗೆ.
ಧನು ರಾಶಿ: ಕೌಟುಂಬಿಕ ವಿಚಾರವು ಗೌಪ್ಯವಾಗಿರುವುದು. ಉದ್ಯಮಿಗಳು ಬಹಳ ಓಡಾಟದಿಂದ ಲಾಭವನ್ನು ಮಾಡಿಕೊಳ್ಳಬೇಕು. ಸರ್ಕಾರಿ ಉದ್ಯೋಗವು ಕಿರಿಕಿರಿ ಎನಿಸಿದರೂ ನೀವು ಅದನ್ನು ಬಿಡಲಾರಿರಿ. ನಿಮಗೆ ಶತ್ರುಗಳು ಪಾಠಕಲಿಸುವರು. ನಿಮ್ಮನ್ನು ವ್ಯಕ್ತಪಡಿಸಲಾಗದ ಸಮಸ್ಯೆಯೊಂದು ಕಾಡುತ್ತಿದ್ದು ಅದನ್ನು ಪರಿಹಾರ ಮಾಡಿಕೊಳ್ಳುವಿರಿ. ಉದ್ಯೋಗದಲ್ಲಿ ಸಣ್ಣ ಕಿರಿಕಿರಿ ಆರಂಭವಾಗುವುದು. ನಿಮ್ಮ ಇಷ್ಟದವರನ್ನು ಭೇಟಿಯಾಗುವಿರಿ. ದ್ವೇಷಭಾವವನ್ನು ಬಿಟ್ಟು ಮುಂದುವರಿಯುವುದು ಉತ್ತಮ. ಒತ್ತಡದಿಂದ ನಿಮಗೆ ಕೆಲಸಗಳು ಸೂಚಿಸದೇ ಹೋಗಬಹುದು. ಬಂಧುಗಳನ್ನು ಕಳೆದುಕೊಳ್ಳುವಿರಿ. ಸಂಗಾತಿಯ ಇಚ್ಛೆಗೆ ಅನುಸಾರವಾಗಿ ನಡೆದುಕೊಳ್ಳುವಿರಿ. ಹಿರಿಯರಿಂದ ನಿಮಗೆ ಸರಿಯಾದ ಮಾರ್ಗದರ್ಶನ ಸಿಗದು. ನಿಮ್ಮವರ ವರ್ತನೆಯು ನಿಮ್ಮ ದುಃಖಕ್ಕೆ ಕಾರಣವಾಗಬಹುದು. ನಿಮ್ಮಿಂದ ಹೆಚ್ಚು ಉಪಯುಕ್ತವಾದ ಕೆಲಸಗಳು ಆಗಬಹುದು. ನಿಮ್ಮ ಒಳಮನಸ್ಸು ಹೇಳಿದಂತೆ ಆಗುವುದು. ವಯಸ್ಸಿಗೆ ಬಂದ ಮಕ್ಕಳ ವಿವಾಹದ ಚಿಂತೆ ಇರುವುದು.
ಮಕರ ರಾಶಿ: ನಿಮ್ಮ ವ್ಯಕ್ತಿತ್ವವನ್ನು ಬದಲಿಸಿಕೊಳ್ಳುವ ಬಗ್ಗೆ ಆಲೋಚಿಸುವಿರಿ. ಆರ್ಥಿಕ ಕ್ಷೇತ್ರದ ಜನರಿಗೆ ತೊಂದರೆ ಬಾರದೇ ಕಾರ್ಯಗಳು ಮುಗಿಯುವುದು. ಅನಿರೀಕ್ಷಿತ ದ್ರವ್ಯದ ಲಾಭದಿಂದ ನಿಮಗೆ ಸಂತೋಷವಾಗಲಿದೆ. ಫಲಿತಾಂಶಕ್ಕೆ ಮೊದಲೇ ನಿಮಗೆ ಉದ್ಯೋಗ ಪ್ರಾಪ್ತಿಯಾಗಲಿದೆ. ನಿಷ್ಠುರದ ನಿಮ್ಮ ಮಾತಗಳನ್ನು ಕೇಳಿ ನಿಮ್ಮ ಬಗ್ಗೆ ಭಾವವು ಬದಲಾಗಬಹುದು. ಕಳೆದುಕೊಂಡಿದ್ದನ್ನು ಹೆಚ್ಚು ನೆನಪಿಸಿಕೊಳ್ಳುವಿರಿ. ಪುತ್ರೋತ್ಸವದ ಸಂತೋಷವು ಇರಲಿದೆ. ಸಾಮನ್ಯಜ್ಞಾನದ ಕೊರತೆಯು ನಿಮಗೆ ತಿಳಿಯಬಹುದು. ಸಂತೋಷಕ್ಕಾಗಿ ಯಾರನ್ನೋ ಅವಲಂಬಿಸಬೇಕಿಲ್ಲ. ದಾಂಪತ್ಯದಲ್ಲಿ ಪರಸ್ಪರ ವೈರಿಗಳಂತೆ ಕಚ್ಚಾಡುವುದು ಬೇಡ. ದೂರ ಪ್ರಯಾಣವು ನಿಮಗೆ ಇಂದು ಅನಿವಾರ್ಯವಾದೀತು. ಬೇಕಾದ ವಸ್ತುವು ಕಣ್ಮರೆಯಾಗಿ ಹುಡುಕಾಟ ಮಾಡುವಿರಿ. ಪ್ರೀತಿಪಾತ್ರರಿಂದ ನೋವಾಗಬಹುದು.
ಕುಂಭ ರಾಶಿ: ಉನ್ನತ ಸ್ಥಾನಕ್ಕೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಸಣ್ಣ ಪ್ರಯತ್ನವಾದರೂ ಅನುಕೂಲಕರವಾಗುವುದು. ಇಂದು ನಿಮ್ಮ ಪರಿಧಿಯನ್ನು ಮೀರಿ ವರ್ತಿಸುವಿರಿ. ಮನಸ್ಸಿನ ನೆಮ್ಮದಿಯನ್ನು ನೀವು ಹಾಳುಮಾಡಿಕೊಳ್ಳಲಿದ್ದೀರಿ. ಸಂಗಾತಿಯಿಂದ ಸಿಗುವ ಸುಖದಿಂದ ನೀವು ವಂಚಿತರಾಗಬಹುದು. ನಿಮ್ಮ ನಿರೀಕ್ಷೆಯು ಹುಸಿಯಾಗಬಹುದು. ಉತ್ತಮವಾದ ಆಯ್ಕೆಯಲ್ಲಿ ನೀವು ಸೋಲುವಿರಿ. ನೀವು ಇಂದು ಅಸಹಜವಾಗಿ ವರ್ತಿಸುವಿರಿ. ಆಲಸ್ಯದ ಕಾರಣ ಕಾರ್ಯಕ್ಕೆ ನೆಪವನ್ನು ಕೊಡುವಿರಿ. ನಿಮ್ಮ ಬೆಳವಣಿಗೆಗೆ ಕಾರಣರಾದವರನ್ನು ಕೃತಜ್ಞತೆಯಿಂದ ಸ್ಮರಿಸಿ. ಸಂಬಂಧಗಳು ನಿಮ್ಮ ಜೊತೆ ಶಾಶ್ವತವಾಗಿ ಇರಲಾರದು ಎಂಬ ಬೇಸರವೂ ಇರಲಿದೆ. ಮನಸ್ಸನ್ನು ಖಾಲಿ ಬಿಡದೇ ಏನನ್ನಾದರೂ ಆಲೋಚಿಸಿ. ಕುಟುಂಬದ ಭೇದವನ್ನು ಬಹಿರಂಗಪಡಿಸುವುದು ಬೇಡ. ಎಲ್ಲರೂ ಒಂದೇ ಎಂಬ ಭಾವನೆ ಇರಲಿ. ವೃತ್ತಿಯಲ್ಲಿ ಭಡ್ತಿಯನ್ನು ನೀವು ಅಪೇಕ್ಷಿಸುವಿರಿ.
ಮೀನ ರಾಶಿ: ಸಾಮಾಜಿಕ ಕಾರ್ಯದಲ್ಲಿ ಬೆಂಬಲ ಪಡೆಯುವಿರಿ. ನಿಮ್ಮ ವ್ಯಾಪಾರದಲ್ಲಿ ಇಂದು ವೆಚ್ಚಗಳು ಕಡಿಮೆಯಾಗಿ ಆದಾಯವೂ ಎಣಿಕೆಗಿಂತ ಅಧಿಕವಾಗಲಿದೆ. ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮವಿರಲಿ. ವೈವಾಹಿಕ ಜೀವನಕ್ಕೆ ಬಂಧುಗಳಿಂದ ಒತ್ತಡ ಬರಬಹುದು. ಆತುರದಿಂದ ಏನ್ನಾದರೂ ಮಾಡಿಕೊಳ್ಳಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳಲು ಹೋಗಬೇಡಿ. ದೂರ ಪ್ರಯಾಣದಲ್ಲಿ ದಾರಿ ತಪ್ಪಬಹುದು. ನಿಮ್ಮ ದಾರಿಯು ಸರಿಯಾಗಿದೆಯೇ ಎಂದು ಪರೀಕ್ಷಿಸಿಕೊಳ್ಳಿ. ವಸ್ತುಗಳ ವಿಚಾರದಲ್ಲಿ ನೀವು ಮೋಸ ಹೋಗಬಹುದು. ಖರೀದಿಯನ್ನು ಬಹಳ ಸಂತೋಷದಿಂದ ಮಾಡುವಿರಿ. ಸಂಗಾತಿಗೆ ಬೇಕಾದ ವಸ್ತುಗಳನ್ನು ಕೊಡುವಿರಿ. ಇನ್ನೊಬ್ಬರ ಬಗ್ಗೆ ಇಂದು ನಿಮಗೆ ಹೆಚ್ಚು ಕುತೂಹಲ ಇರಲಿದೆ. ಅನಪೇಕ್ಷಿತ ಚರ್ಚೆಯಿಂದ ನೀವು ದೂರವಿರುವಿರಿ. ಇಂದು ನೀವು ಅಂದುಕೊಂಡಂತೆ ಆಗಿದ್ದು ಖುಷಿಯಿಂದ ಇರುವಿರಿ. ವಾಹನ ಖರೀದಿಯ ಆಲೋಚನೆಯನ್ನು ಸದ್ಯ ಕೈ ಬಿಡುವಿರಿ.