AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಈ ರಾಶಿಯವರ ಹಣಕಾಸಿನ ವ್ಯವಹಾರದಲ್ಲಿ ಇಂದು ಜಾಗರೂಕತೆ ಇರಲಿ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಫೆಬ್ರವರಿ​​​​ 08ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Nitya Bhavishya: ಈ ರಾಶಿಯವರ ಹಣಕಾಸಿನ ವ್ಯವಹಾರದಲ್ಲಿ ಇಂದು ಜಾಗರೂಕತೆ ಇರಲಿ
ರಾಶಿ ಭವಿಷ್ಯ
TV9 Web
| Edited By: |

Updated on: Feb 08, 2024 | 12:45 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ವಜ್ರ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 00 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 33 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:14 ರಿಂದ 03:40ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:01 ರಿಂದ 08:27 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:54 ರಿಂದ 11:20ರ ವರೆಗೆ.

ಧನು ರಾಶಿ : ನಿಮ್ಮ ಬಂಧುಗಳ ಆಗಮನದಿಂದ ಮನೆಯಲ್ಲಿ ಆಹ್ಲಾದಕರ ವಾತಾವರಣ ಇರುವುದು. ನಿಮ್ಮ ಸಾಮರ್ಥ್ಯವನ್ನು ಸಮಾಜದ ಎದುರು ತೆರೆದಿಡುವಿರಿ. ಉಳಿತಾಯಕ್ಕೆ ಬೇಕಾದ ಅನುಕೂಲವು ಸೃಷ್ಟಿಯಾಗುವುದು. ಧಾರ್ಮಿಕ ಕ್ಷೇತ್ರದಲ್ಲಿ ಹೆಸರು ಗಳಿಸುವಿರಿ. ದಿನಚರಿಯ ಕೆಲವು ಭಾಗವನ್ನು ಬದಲಿಸುವಿರಿ. ಸಂಬಂಧಿಕರಿಂದ ನಿಮ್ಮ ಬಗ್ಗೆ ದೂರುಗಳು ಬರಬಹುದು. ಆದರೆ ಉತ್ತಮ ಸಂಬಂಧಗಳನ್ನು ಕಾಪಾಡಿಕೊಳ್ಳಲು ಪ್ರಯತ್ನವೂ ಅಗತ್ಯ. ಇನ್ನೊಬ್ಬರ ನಿರಾಕರಣೆಗಳನ್ನು ನಿರ್ಲಕ್ಷಿಸಿ. ವಿದ್ಯಾರ್ಥಿಗಳು ಅಧ್ಯಯನದಿಂದ ದೂರವಾಗುತ್ತಾರೆ. ವ್ಯಾಪಾರವನ್ನು ಹೆಚ್ಚಿಸಲು ಸೂಕ್ತ ವಿಧಾನಗಳನ್ನು ಅಳವಡಿಸಿಕೊಳ್ಳಿ. ನಿಮ್ಮ ಕೆಲಸದಲ್ಲಿ ಗೌಪ್ಯತೆ ಇರಲಿ. ಸ್ಪರ್ಧಾತ್ಮಕ ವಿಚಾರದಲ್ಲಿ ಸಂಪೂರ್ಣವಾಗಿ ಎಚ್ಚರವಾಗಿರುವುದು ಅಗತ್ಯ. ಭೂಮಿಯ ವ್ಯವಹಾರಕ್ಕೆ ಸಂಬಂಧಿಸಿದ ಜನರಿಗೆ ಲಾಭವಾಗಲಿದೆ. ನಿಮ್ಮ ಸಂಗಾತಿಯ ಭಾವನೆಯನ್ನು ಗೌರವಿಸಿ. ಪ್ರೇಮ ಸಂಬಂಧವನ್ನು ಸಂತೋಷದಿಂದ ಅನುಭವಿಸುವಿರಿ.

ಮಕರ ರಾಶಿ : ಇಂದು ನೀವು ಸಂಬಂಧಗಳನ್ನು ಬಲಪಡಿಸುವುದಕ್ಕೆ ಪ್ರಯತ್ನಿಸುವಿರಿ. ವಿದ್ಯಾರ್ಥಿಗಳು ಅಧ್ಯಯನ ಮಾಡುವುದರ ಕಡೆ ಇರುವುದು. ವ್ಯಯಿಸುವ ಸಂಪತ್ತನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡುವುದು ಸೂಕ್ತ. ಕಛೇರಿಯಲ್ಲಿ ನೀವು ಬಹಳ ಚಿಂತನಶೀಲವಾಗಿ ಕೆಲಸ ಮಾಡುವಿರಿ. ನಿಮ್ಮ ಮೇಲೆ ಯಾರಾದರೂ ಪಿತೂರಿ ಮಾಡಬಹುದು. ಇಂದಿನ ನಿಮ್ಮ ಪ್ರಯಾಣದಿಂದ ಕಷ್ಟವಾಗಬಹುದು. ಕಠಿಣ ಪರಿಶ್ರಮದ ಹೊರತಾಗಿ ಸರಿಯಾದ ಫಲಿತಾಂಶವನ್ನು ಸಾಧಿಸಲಾಗುವುದಿಲ್ಲ. ಯುವಕರು ಸಂಶೋಧನೆಯ ಚಟುವಟಿಕೆಗಳಲ್ಲಿ ಯಶಸ್ಸನ್ನು ಸಾಧಿಸುವರು. ವ್ಯಾಪಾರದ ಏರುಪೇರುಗಳಿಂದ ಅಲ್ಪ ಅಸಮಾಧಾನ ಇರುವುದು. ಕುಟುಂಬದೊಂದಿಗೆ ಮೋಜಿನಲ್ಲಿ ದಿನ ಕಳೆಯುವುದು. ಪ್ರಣಯ ವ್ಯವಹಾರಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಮಾನಸಿಕ ಸ್ಥಿತಿಯನ್ನು ಧನಾತ್ಮಕವಾಗಿ ಇರಿಸಿಕೊಳ್ಳಲು ಧ್ಯಾನ ಅವಶ್ಯಕ.

ಕುಂಭ ರಾಶಿ : ನಿಮ್ಮ ಪ್ರತಿಭೆಯನ್ನು ಗುರುತಿಸಿ, ಅವುಗಳನ್ನು ನಿರ್ದಿಷ್ಟ ಕಾರ್ಯಕ್ಕೆ ಬಳಸಿ. ನೀವು ಉತ್ತಮ ಫಲಿತಾಂಶಗಳನ್ನು ಪಡೆಯುವಿರಿ. ಗೃಹಾಲಂಕಾರದ ಬಗ್ಗೆ ಹೆಚ್ಚು ಚಟುವಟಿಕೆಯಿಂದ ಇರುವಿರಿ. ಹೆಚ್ಚಿನ ಕೆಲಸದ ಕಾರಣದಿಂದ ನೀವು ದೈಹಿಕ ಮತ್ತು ಮಾನಸಿಕ ಆಯಾಸವನ್ನು ಅನುಭವಿಸಬೇಕಾಗಬಹುದು. ಆದ್ದರಿಂದ ನಿಮ್ಮ ಕೆಲಸವನ್ನು ಇತರರ ಜೊತೆ ಹಂಚಿಕೊಳ್ಳಲು ಕಲಿಯಿರಿ. ಅದು ನಿಮ್ಮ ಕೆಲಸದ ಹೊರೆಯನ್ನು ತಗ್ಗಿಸುತ್ತದೆ. ವ್ಯವಹಾರಕ್ಕೆ ಸಂಬಂಧಿಸಿದಂತೆ ಯಾವುದಾದರೂ ನಿರ್ಧಾರವನ್ನು ತೆಗೆದುಕೊಳ್ಳುವಾಗ, ಉತ್ತಮ ಅನುಭವಿ ವ್ಯಕ್ತಿಯನ್ನು ಸಂಪರ್ಕಿಸಿ. ಇಂದು ಹಣಕಾಸಿನ ವಿಚಾರದಲ್ಲಿ ಯಾರನ್ನೂ ಅತಿಯಾಗಿ ನಂಬಬೇಡ. ರಾಜಿಯೂ ಬೇಡ. ಕುಟುಂಬದ ಎಲ್ಲ ಸದಸ್ಯರಿಗೆ ಸಂತೋಷವನ್ನು ನೀವು ಕೊಡುವಿರಿ. ನಿಮ್ಮ ಪ್ರೀತಿಯ ಸಂಗಾತಿಯನ್ನು ನೀವು ಭೇಟಿಯಾಗಲು ಬಯಸುವಿರಿ. ವಾತಾವರಣದ ಬದಲಾವಣೆಯಿಂದ ಆರೋಗ್ಯ ಕೆಡುವುದು.

ಮೀನ ರಾಶಿ : ಇಂದು ನಿಮ್ಮ ನಿಕಟ ಸಂಬಂಧಿಕರು ಮನೆಗೆ ಬರಬಹುದು. ಪರಸ್ಪರ ಚರ್ಚೆಯ ಮೂಲಕ ಹಳೆಯ ಹಲವು ಸಮಸ್ಯೆಗಳು ಬಗೆಹರಿಯಲಿವೆ. ನಿಮ್ಮ ವಿಶೇಷ ಪ್ರತಿಭೆಯು ಜನರಗೆ ಗೊತ್ತಾದೀತು. ಇಂದು ನೀವು ಉತ್ಸಾಹೀ ಇರುವಿರಿ. ಮಕ್ಕಳ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸುವುದು ಅವಶ್ಯಕ. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಎಚ್ಚರಿಕೆಯಿಂದ ಯೋಚಿಸಿ ಮುಂದುವರಿಯಿರಿ. ಪ್ರೀತಿಯಲ್ಲಿ ಪಾರದರ್ಶಕತೆ ಇರುವುದು ಬಹಳ ಮುಖ್ಯ. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಹಣಕಾಸಿನ ವಹಿವಾಟಿನ ಜೊತೆ ವ್ಯವಹರಿಸುವಾಗ ಜಾಗರೂಕತೆ ಇರಲಿ. ಆರೋಗ್ಯದಲ್ಲಿ ಜಾಗರೂಕತೆ ಅವಶ್ಯಕ. ದೂರಪ್ರಯಾಣಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳಿ. ನಿಮ್ಮ ವಿವಾಹವು ಮುಂದೆ ಅನ್ಯಾನ್ಯ ಕಾರಣಗಳು ಇರಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗುವರು. ನೀವು ಆಡಿದ ಮಾತೇ ನಿಮಗೆ ಬೇರೆಯವರ ಮೂಲಕ ಬರಬಹುದು.

-ಲೋಹಿತ ಹೆಬ್ಬಾರ್-8762924271 (what’s app only)

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್