AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope:ಮಿತ್ರರಿಂದ ಹಣದ ವಿಚಾರದಲ್ಲಿ ಮೋಸವಾಗಬಹುದು-ಎಚ್ಚರ

ಇಲ್ಲಿ ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ,  ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಇಂದಿನ (ಮಾರ್ಚ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope:ಮಿತ್ರರಿಂದ ಹಣದ ವಿಚಾರದಲ್ಲಿ ಮೋಸವಾಗಬಹುದು-ಎಚ್ಚರ
ರಾಶಿ ಭವಿಷ್ಯ
TV9 Web
| Edited By: |

Updated on: Mar 02, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ವ್ಯಾಘಾತ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 49 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:47 ರಿಂದ 11:16ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:14 ರಿಂದ 03:42ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:50 ರಿಂದ 08:19ರ ವರೆಗೆ.

ಸಿಂಹ ರಾಶಿ : ನಿಮಗೆ ಇಂದು ಯಾವುದೇ ಅನ್ಯ ಆಲೋಚನೆಗೆ ಅವಕಾಶವಿಲ್ಲದೇ ಇರಬಹುದು. ಒಂದೊಂದೇ ಕೆಲಸಗಳು ನಿಮಗೆ ಹೊರೆಯಾಗುತ್ತಾ ಹೋಗಬಹುದು. ಬೇರೆಯವರ‌ ಮಾತು ನಿಮಗೆ ಮನಸ್ಸಿಗೆ ನಾಟದೇ ನಿಮ್ಮದೇ ಆದ ವರ್ತನೆಯನ್ನು ಮುಂದುವರಿಸುವಿರಿ. ಉನ್ನತ ಶಿಕ್ಷಣವನ್ನು ಪಡೆಯುವ ವಿದ್ಯಾರ್ಥಿಗಳಿಗೆ ರಾಜಕೀಯದತ್ತ ಒಲವು ಉಂಟಾದೀತು. ಮಕ್ಕಳಿಗೆ ನಿಮ್ಮ ಪ್ರೀತಿಯ ಕೊರತೆಯು ಆದೀತು. ಅಧಿಕ ಲಾಭದ ನಿರೀಕ್ಷೆಯಲ್ಲಿ ಹೊರಟ ನಿಮಗೆ ಅಲ್ಪ ಲಾಭವಾಗಬಹುದು. ಜಾಣ್ಮೆಯಿಂದ ಸರ್ಕಾರದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ಇಂದು ಸ್ಥೈರ್ಯವನ್ನು ಕಳೆದುಕೊಳ್ಳುವಿರಿ. ನಿಮ್ಮಲ್ಲಿ ವಿದ್ಯೆ ಇರುವ ಕಾರಣ ಯಾವ ಸಂದರ್ಭಕ್ಕೂ ಹೆದರುವುದಿಲ್ಲ. ಬಂಧುಗಳ‌ ವಿಚಾರದಲ್ಲಿ ಇರುವ ಪೂರ್ವಾಗ್ರಹವು ದೂರಾಗುವುದು.

ಕನ್ಯಾ ರಾಶಿ : ನೀವು ಎಲ್ಲವನ್ನೂ ದಾನ ಮಾಡುವ ಮನಃಸ್ಥಿತಿಯನ್ನು ಹಿಂದಿರುವಿರಿ. ನಿಮ್ಮನ್ನು ಯಾರೂ ಏನನ್ನೂ ಪ್ರಶ್ನಿಸಲಾರರು ಎಂಬ ಮನೋಭಾವವು ನಿಮ್ಮಲ್ಲಿ ಇರುವುದು. ಇಂದು ಆದ ಖರ್ಚನ್ನು ಗೌಪ್ಯವಾಗಿ ಇಡುವಿರಿ. ಯಾರನ್ನೂ ನಕಾರಾತ್ಮಕವಾಗಿ ತಿಳಿಯುವುದು ಬೇಡ. ಸಮಯವು ನಿಮಗೆ ಎಲ್ಲವನ್ನೂ ತಿಳಿಸುವುದು. ಮಿತ್ರನ ಬಗ್ಗೆ ಯಾರಾದರೂ ಸಲ್ಲದ ಮಾತನಾಡಬಹುದು. ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ಲೆಕ್ಕ ಪರಿಶೋಧಕರು ಒತ್ತಡದಲ್ಲಿ ಇರುವರು. ನಾಜೂಕಿನಿಂದ ಇಂದಿನ ಕಾರ್ಯವನ್ನು ಮಾಡಿಕೊಳ್ಳುವಿರಿ. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು. ವಿದ್ಯಾರ್ಥಿಗಳು ವಿಶೇಷ ತರಬೇತಿಯನ್ನು ಪಡೆಯಬೇಕಾಗಬಹುದು. ನಿಮ್ಮ ಉತ್ಸಾಹವನ್ನು ಯಾರಾದರೂ ಭಂಗಪಡಿಸಿಯಾರು. ಅದನ್ನು ಗಂಭೀರವಾಗಿ ಪರಿಗಣಿಸದೇ ದೂರೀಕರಿಸಿ.

ತುಲಾ ರಾಶಿ : ಇಂದು ನಿಮ್ಮ ಸೃಜನಶೀಲತೆಗೆ ಸರಿಯಾದ ಸ್ಥಾನವು ಸಿಗಲಿದೆ. ಯಾವುದನ್ನೂ ಪರೀಕ್ಷಿಸದೇ ನೀವು ಒಪ್ಪುವುದು ಕಷ್ಟವಾಗುವುದು. ಕೈ ಸುಟ್ಟುಕೊಂಡ ಕಾರ್ಯದಲ್ಲಿ ಮತ್ತೆ ಮನಸ್ಸು ಇರಲಾರದು. ಬೆಳಗಿನಿಂದಲೇ ಮನಸ್ಸು ಸರಿ ಇಲ್ಲದ ಕಾರಣ ಎಲ್ಲದಕ್ಕೂ ಸಿಟ್ಟು ಮಾಡುವಿರಿ. ಇಲ್ಲವೇ ಸುಮ್ಮನೆ ಇರುವಿರಿ. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳುವ ಹಂಬಲವಿರುವುದು. ಮಕ್ಕಳಿಗಾಗಿ ಹಣವನ್ನು ಇಡುವಿರಿ. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಬರಲಿದ್ದು ಹಿರಿಯರಿಂದ ಕೇಳಿಪಡೆಯುವಿರಿ.

ವೃಶ್ಚಿಕ ರಾಶಿ : ನಿಮ್ಮ ಪಾಲುದಾರಿಕೆಯ ವ್ಯವಹಾರದಲ್ಲಿ ಯಾರಾದರೂ ಅನಗತ್ಯ ಗೊಂದಲವನ್ನು ಸೃಷ್ಟಿಸಬಹುದು. ಪ್ರೋತ್ಸಾಹದಿಂದ ನೀವು ನಿಮ್ಮ ಕಾರ್ಯವನ್ನು ಯಶಸ್ವಿಯಾಗಿ ಪೂರೈಸುವಿರಿ. ಭೂಮಿಯ ವ್ಯವಹಾರವು ನಿಮಗೆ ಶಕ್ತಿಯನ್ನು ತಂದೀತು. ಆತುರದ ತೀರ್ಮಾನದಿಂದ ಹಣವನ್ನು ನಷ್ಟ ಮಾಡಿಕೊಳ್ಳುವಿರಿ. ಎಲ್ಲಿಗಾದರೂ ಮಕ್ಕಳನ್ನು ಕರೆದುಕೊಂಡು ಹೋಗಲಿದ್ದೀರಿ. ಅವರ ಬಗ್ಗೆ ಅತಿಯಾದ ಕಾಳಜಿ ಬೇಕು. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು. ಉದ್ಯೋಗದಲ್ಲಿ ನಿರಂತರ ಯಾವುದಾದರೂ ಸಮಸ್ಯೆಯು ಬಾಧಿಸುತ್ತಿದ್ದು ದೈವಜ್ಞರಿಂದ ಸೂಕ್ತ ಪರಿಹಾರವನ್ನು ಕಂಡುಕೊಳ್ಳಬೇಕಾಗಬಹುದು. ಯಾರ ಬಗ್ಗೆಯಾದರೂ ನಿಮಗೆ ಅಸೂಯೆ ಬರಬಹುದು. ಯಾರ ಬಗ್ಗೆಯೂ ನಿಮಗೆ ಪೂರ್ಣ ನಂಬಿಕೆ‌ ಇರದು.

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ