AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಹೊಸ ಉದ್ಯೋಗದ ಹುಡುಕಾಟ ಮಾಡುವಿರಿ, ಸಂಗಾತಿಯಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಡಿಸೆಂಬರ್ 23, 2023ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ಹೊಸ ಉದ್ಯೋಗದ ಹುಡುಕಾಟ ಮಾಡುವಿರಿ, ಸಂಗಾತಿಯಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Dec 23, 2023 | 12:10 AM

Share

ನಿತ್ಯ ಎದ್ದ ಕೂಡಲೇ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುವ ಅಭ್ಯಾಸ ಕೆಲವರಲ್ಲಿ ಇರುತ್ತದೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ? ಇದೆಯಾ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಇಂದಿನ (ಡಿಸೆಂಬರ್ 23) ನಿಮ್ಮ ರಾಶಿಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಶಿವ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 54 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 08 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:43 ರಿಂದ 11:07 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:56 ರಿಂದ 03:20ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:55 ರಿಂದ 08:19ರ ವರೆಗೆ.

ಮೇಷ ರಾಶಿ: ಇಂದು ನೀವು ಭಾವನಾತ್ಮಕ ವಿಚಾರಗಳಿಂದ ಕುಗ್ಗುವಿರಿ. ಅತಿಯಾದ ಜಾಣ್ಮೆಯಿಂದ ನಿಮಗೇ ತೊಂದರೆಯಾಗಬಹುದು. ತಂದೆಯು ನಿಮ್ಮ ಪ್ರಗತಿಯನ್ನು ನಿರೀಕ್ಷಿಸುವರು. ಯೋಜನೆಯು ಮಸುಕಾಗಿದ್ದು ಮುಂದಿನ ದಾರಿ ಸರಿಯಾಗಿ ಗೊತ್ತಾಗದೇ ಇರಬಹುದು. ಪ್ರೇಮಿಯನ್ನು ಭೇಟಿಯಾಗಲು ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು. ಹೂಡಿಕೆಯ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಮುಂದುವರಿಯಿರಿ. ಸಾಮಾಜಿಕ ಮುಖಂಡರು ಸಂಘಟನೆಯಲ್ಲಿ ತೊಡಗುವರು. ಸಣ್ಣ ಕಾರಣಕ್ಕೆ ನೆರೆಯವರ ಜೊತೆ ಕಲಹವಾಗಬಹುದು. ಮಕ್ಕಳಿಂದ ಹಣವನ್ನು ಪಡೆಯುವಿರಿ. ಇಂದು ಮಾತುಗಳನ್ನು ಕಡಿಮೆ ಆಡುವಿರಿ. ಸಂಪತ್ತಿನ ನಿರ್ವಹಣೆಯಲ್ಲಿ ಸೋಲಬಹುದು. ಅಪರಿಚಿತರು ನಿಮ್ಮನ್ನು ಭೇಟಿಯಾಗಬಹುಸು. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸುವಿರಿ.

ವೃಷಭ ರಾಶಿ: ನೂತನ ಉದ್ಯೋಗದ ಅನ್ವೇಷಣೆಯನ್ನು ನೀವು ಮಾಡಬೇಕಾಗುವುದು. ಸಾಲವನ್ನು ದಿನದ ಮೊದಲೇ ತೀರಿಸಿ ಪ್ರಶಂಸೆ ಗಳಿಸುವಿರಿ. ಎರಡೆರಡು ಕಾರ್ಯವನ್ನು ಮಾಡುವ ಸಂದರ್ಭವು ಬರಬಹುದು. ಕುಟುಂಬವು ನಿಮಗೆ ಕೊಡುವ ಕಿಮ್ಮತ್ತು ಕಡಿಮೆ ಆಗಿದೆ ಎಂದು ಅನ್ನಿಸುವುದು. ಮನಸ್ಸಿನಲ್ಲಿ ಯಾವುದೋ ಆತಂಕವು ಇರಲಿದ್ದು ಹೊರಹಾಕಲು ಪ್ರಯತ್ನಿಸುವಿರಿ. ಸಂಗಾತಿಯಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಬಂಗಾರದ ಖರೀದಿಗೆ ಉತ್ಸಾಹವನ್ನು ತೋರುವಿರಿ. ಸದಾ ಉತ್ಸಾಹದಿಂದ ಇರಲು ನೀವು ನಿಮ್ಮದೇ ಆದ ಯೋಜನೆಗಳನ್ನು ರೂಪಿಸಿಕೊಳ್ಳುವುದು ಉತ್ತಮ. ಕುಟುಂಬದ ಪ್ರೀತಿಯು ಸಿಗಲಿದೆ. ಕಾರ್ಯದ ನಿಮಿತ್ತ ಓಡಾಟವು ಹೆಚ್ಚಾಗುವುದು. ಬಂಧುಗಳಿಂದ ಸಲ್ಲದ ಮಾತುಗಳನ್ನು ಕೇಳುವಿರಿ. ಆಲಸ್ಯದಿಂದ ನಿಮ್ಮ ಎಲ್ಲ ಕಾರ್ಯಗಳೂ ಉಳಿಯಬಹುದು. ಯಾವುದನ್ನೂ ನೀವು ಅತಿಯಾಗಿ ಆಸೆ ಪಡುವುದು ಬೇಡ.

ಮಿಥುನ ರಾಶಿ: ನಿಮ್ಮ ಸಂಗಾತಿಯ ಜೊತೆ ಉತ್ತಮ ಬಾಂಧವ್ಯವು ಇರಲಿದ್ದು ಎಲ್ಲ ರೀತಿಯ ಸಹಕಾರವೂ ಇದರಿಂದ ಸಿಗಲ್ಲಿದೆ. ನಿಮ್ಮ ಮಾತು ಹಲವರ ಬಾಯಿಗೆ ಆಹಾರವಾದೀತು. ಹಣದ ವಿಚಾರದಲ್ಲಿ ಅತಿಯಾದ ಮುಂದಾಲೋಚನೆಯನ್ನು ಮಾಡುವಿರಿ. ಹೊಸ ಕಲಿಕೆಯ ಬಗ್ಗೆ ಆಸಕ್ತಿ ಉಂಟಾಗಬಹುದು. ಒಂದೇ ರೀತಿಯ ಕೆಲಸವನ್ನು ಮಾಡಿ ಬೇಸರವಾದೀತು. ಹೊಸ ವಸ್ತುಗಳನ್ನು ಕಳೆದುಕೊಳ್ಳುವಿರಿ. ಕುಟುಂಬದಲ್ಲಿ ಸಂತೋಷದ ವಾತಾವರಣವು ಇದ್ದು ಉತ್ಸಾಹದಿಂದ ಇರುವಿರಿ. ವಾಹನವನ್ನು ಚಲಾಯಿಸುವ ಬೇರೆಯ ಯಾವ ಚಟುವಟಿಕೆಗಳನ್ನು ಮಾಡುವುದು ಬೇಡ. ಆಹಾರದಿಂದ ಆರೋಗ್ಯವು ಕೆಡಲಿದೆ. ವೇತನವು ಹೆಚ್ಚಾಗುವ ಸಾಧ್ಯತೆ ಇದೆ. ತಾಯಿಗೆ ಅಮೂಲ್ಯವಾದ ಉಡುಗೊರೆಯನ್ನು ಕೊಡುವಿರಿ. ನಿಮ್ಮ ಬಗ್ಗೆ ನೀವು ಹೇಳಿಕೊಳ್ಳದೇ ಇರುವ ಹಲವು ವಿಚಾರಗಳು ಸ್ನೇಹಿತರು ಹೇಳುವರು. ಸಂಗಾತಿಗೆ ನೀವು ಸಹಾಯವನ್ನು ಮಾಡುವಿರಿ. ಕಾರ್ಯ ಮಾಡುವ ಸುಲಭದ ಉಪಾಯಗಳು ನಿಮ್ಮ ಬುದ್ಧಿಗೆ ತೋಚದೇ ಹೋಗಬಹುದು.

ಕರ್ಕ ರಾಶಿ: ನೀವು ನಿಮ್ಮವರನ್ನು ಗ್ರಹಿಸುತ್ತ ಇರುವಿರಿ. ನಿಮಗೆ ಯಾರಿಂದಲಾದರೂ ಪ್ರಶಂಸೆಯನ್ನು ಪಡೆಯಬೇಕೆನ್ನಿಸಬಹುದು. ಅತಿವೇಗದ ಮಾತು ಇತರರಿಗೆ ಸ್ಪಷ್ಟವಾಗದೇ ಹೋಗಬಹುದು. ನಿಮ್ಮ ಅದೃಷ್ಟದ ನಿರೀಕ್ಷೆಯಲ್ಲಿ ನೀವು ಇರುವಿರಿ. ಬಂಧುಗಳ ಆಗಮನವು ನಿಮಗೆ ಸಂತೋಷವನ್ನು ಕೊಡುವುದು. ತಾಯಿಯ ಮೇಲೆ ನಿಮ್ಮ ಕೋಪವನ್ನು ತೋರಿಸುವಿರಿ. ಇಕ್ಕಟ್ಟಿನಿಂದ ಹೊರಬರಲು ಮನಸ್ಸು ಮಾಡುವಿರಿ. ಆದರೂ ಕಷ್ಟವಾದೀತು. ಕುಟುಂಬದ ಸದಸ್ಯರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಆಪ್ತರ ಒಡನಾಟವು ಖುಷಿಯನ್ನು ಕೊಡಬಹುದು. ವಿದ್ಯಾರ್ಥಿಗಳ ಪ್ರಗತಿಯಲ್ಲಿ ಮಂದಗತಿ ಇರುವುದು. ನಂಬಿಕೆಯನ್ನು ಉಳಿಸಿಕೊಳ್ಳಲು ಕಷ್ಟವಾದೀತು. ಹಿತಶತ್ರುಗಳನ್ನು ಅವರಿಗೆ ಗೊತ್ತಾಗದಂತೆ ದೂರವಿಡಿ. ಸಿಟ್ಟಿನಿಂದ ಯಾವ ನಿರ್ಧಾರವನ್ನೂ ತೆಗೆದುಕೊಳ್ಳುವುದು ಬೇಡ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ