Horoscope: ಈ ರಾಶಿಯವರು ಪ್ರೀತಿಯ ವಿಷಯದಲ್ಲಿ ಪರಿಚಿತರ ಜೊತೆ ಚರ್ಚಿಸುವಿರಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 20, 2023 | 12:15 AM

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಡಿಸೆಂಬರ್ 20, 2023ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ಈ ರಾಶಿಯವರು ಪ್ರೀತಿಯ ವಿಷಯದಲ್ಲಿ ಪರಿಚಿತರ ಜೊತೆ ಚರ್ಚಿಸುವಿರಿ
ರಾಶಿ ಭವಿಷ್ಯ
Follow us on

ನಿತ್ಯ ಎದ್ದ ಕೂಡಲೇ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುವ ಅಭ್ಯಾಸ ಕೆಲವರಲ್ಲಿ ಇರುತ್ತದೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ? ಇದೆಯಾ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಇಂದಿನ (ಡಿಸೆಂಬರ್ 20) ನಿಮ್ಮ ರಾಶಿಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ರೇವತೀ, ಯೋಗ: ಸಿದ್ಧಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 53 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:30 ರಿಂದ 01:54 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 08:17 ರಿಂದ 09:42ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:06 ರಿಂದ 12:30ರ ವರೆಗೆ.

ಮೇಷ ರಾಶಿ : ಉತ್ತಮ ವ್ಯಕ್ತಿಗಳನ್ನು ಸಂಪಾದಿಸಲು ನೀವು ಸೋಲುವಿರಿ. ಆದಾಯದ ಕಡೆಗೆ ವಿಶೇಷಗಮನವು ಇರಲಿದೆ. ನಿಮ್ಮಲ್ಲಿರುವ ಒಳ್ಳೆಯದನ್ನು ನಿಜವಾಗಿಯೂ ಪ್ರಶಂಸಿಸಲು ನಿಮ್ಮಿಬ್ಬರಿಗೂ ಸ್ವಲ್ಪ ಅಂತರದ ಅಗತ್ಯವಿದೆ. ಒಂದೇ ಕೆಲಸವನ್ನು ನಿರಂತರ ಮಾಡಿ ಶಿಸ್ತನ್ನು ರೂಢಿಸಿಕೊಳ್ಳುವಿರಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತವಾಗಬಹುದು. ಇತರರ ಧಾರ್ಮಿಕ ನಂಬಿಕೆಯನ್ನು ನೀವು ಘಾಸಿಮಾಡುವಿರಿ. ಅನಂತರದ ಹತಾಶೆಯಿಂದ ಕಷ್ಟವಾದೀತು. ದೂರದ ಬಂಧುವಿನ ಭೇಟಿಯಾಗಿ ಪರಿಚಯ ಮಾಡಿಕೊಳ್ಳುವಿರಿ. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ್ದು ಬೇಸರಕ್ಕೆ ಕಾರಣವಾಗಬಹುದು. ನೀವು ಸ್ವತಂತ್ರವಾಗಿದ್ದರೂ ಬೆರೆಯಲು ಮನಸ್ಸಾಗದು. ಭೂಮಿಯ ವ್ಯವಹಾರದಿಂದ ಲಾಭವು ಕಡಿಮೆ ಇರಲಿದೆ. ನಿಮ್ಮದಾದ ಸ್ವಂತ ನಿಲುವಿನಲ್ಲಿ ಜೀವಿಸುವುದನ್ನು ಕಲಿಯಬೇಕಿದೆ.

ವೃಷಭ ರಾಶಿ : ಖಾಲಿಯಾಗಿ ಇರುವ ಬದಲು ಏನನ್ನಾದರೂ ಮಾಡಿ. ಭವಿಷ್ಯಕ್ಕೆ ಉಪಯೋಗವಾಗಬಹುದು. ಸಂಬಂಧಗಳಲ್ಲಿ ಒಡಕು ಬರಬಹುದು. ಪ್ರೀತಿಯ ವಿಷಯದಲ್ಲಿ ಪರಿಚಿತರ ಜೊತೆ ಚರ್ಚಿಸುವಿರಿ. ಮಕ್ಕಳ ವಿಚಾರದಲ್ಲಿ ನೀವು ಮೃದುವಾಗುವಿರಿ. ಇನ್ನೊಬ್ಬರ ವಸ್ತುವನ್ನು ನೀವು ಇಟ್ಟುಕೊಳ್ಳಲಿದ್ದೀರಿ. ವಿದೇಶದಲ್ಲಿ ಇರುವವರಿಗೆ ಆರೋಗ್ಯವು ಕೆಡಬಹುದು. ವ್ಯಾಪಾರಸ್ಥರು ಲಾಭವನ್ನು ಗಳಿಸುವತ್ತ ಯೋಜನೆ ರೂಪಿಸಿಕೊಳ್ಳುವುದು. ಬಂಧುಗಳ ಕಿರಿಕಿರಿಯನ್ನು ಸಹಿಸುವುದು ನಿಮಗೆ ಕಷ್ಟವಾದೀತು. ಮನಸ್ಸಿಗೆ ಭಾರವಾದ ವಿಚಾರವನ್ನು ನೀವು ಹೇಗಾದರೂ ಮಾಡಿ ತಲೆಯಿಂದ ತೆಗೆಯಿರಿ. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆ ಇರುವುದು. ಆಹಾರದಿಂದ ಆರೋಗ್ಯವನ್ನು ಕೆಡಿಸಿಕೊಳ್ಳುವಿರಿ. ನಿಮಗೆ ಬೇಕಾದ ವಸ್ತುವೇ ಆದರೂ ಯಾರು ಕೇಳಿದರೂ ಕೊಡುವಿರಿ. ನಿಮ್ಮ ನಂಬಿಕೆಗೆ ಘಾಸಿಯಾಗಬಹುದು. ನಿಮಗೆ ಬರುವ ಆಸ್ತಿಯಲ್ಲಿ ಕಿರಿಕಿರಿ ಮಾಡುವಿರಿ.

ಮಿಥುನ ರಾಶಿ : ಸಂಗಾತಿಯ ಜೊತೆ ಕಾಲ ಕಳೆಯಲು ಹವಣಿಸುವಿರಿ. ಚಿತ್ತಚಾಂಚಲ್ಯವು ಕಾರ್ಯದ ಗತಿಯನ್ನು ತಗ್ಗಿಸೀತು. ಕಾರ್ಯದ ನಿರುತ್ಸಾಹವನ್ನು ನಿಮ್ಮದೇ ಆದ ವಿಧಾನದಿಂದ ಸರಿ ಮಾಡಿಕೊಳ್ಳುವಿರಿ. ಜನರ ಜೊತೆ ಮಾತನಾಡುವಾಗ ನಿಮ್ಮ ಮಾತುಗಳು ಸ್ಪಷ್ಟವಾಗಿ ಇರಲಿ. ಭವಿಷ್ಯದ ಬಗ್ಗೆ ಏನೇನೋ ಕಲ್ಪನೆಯನ್ನು ಇಟ್ಟುಕೊಂಡು ಹತಾಶರಾಗಬೇಕಾಗುವುದು. ನಿಮ್ಮ ಮನಸ್ಸಿಗೆ ಬಾರದೇ ಇರುವ ಯಾವುದನ್ನೂ ನೀವು ಒಪ್ಪಿಕೊಳ್ಳಲಾರಿರಿ. ವಿದ್ಯಾರ್ಥಿಗಳಿಗೆ ಅಧ್ಯಯನದ ವಿಚಾರದಲ್ಲಿ ಏಕಾಗ್ರತೆಯ ಕೊರತೆ ಇರಲಿದ್ದು ಧ್ಯಾನ, ಯೋಗಾಭ್ಯಾಸವನ್ನು ಮಾಡಬೇಕಾಗಬಹುದು. ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸ್ವಲ್ಪಮಟ್ಟಿನ ಲಾಭವಾಗುವುದು. ನಿತ್ಯಕರ್ಮದಲ್ಲಿ ವ್ಯತ್ಯಾಸವಾದ ಕಾರಣ ಎಲ್ಲವೂ ವೇಗವಾಗಿ ಮಾಡಬೇಕಾದೀತು. ಕೆಲವು ವಿಚಾರಗಳನ್ನು ನಿರ್ಲಕ್ಷ್ಯಿಸದಿದ್ದರೆ ದೊಡ್ಡದಾಗಬಹುದು. ಆಪ್ತರಿಂದ ಸಲಹೆಯನ್ನು ಕೇಳಲು ನಿಮಗೆ ಮುಜುಗರವಾಗಬಹುದು.

ಕರ್ಕ ರಾಶಿ : ಮೇಲಧಿಕಾರಿಗಳಿಗೆ ನೀವು ವರದಿಯನ್ನು ನೀಡಬೇಕಾಗುವುದು. ಹಳೆಯದನ್ನು ನೀವು ನೆನೆದು ಸಂಕಟಪಡುವಿರಿ. ವಿನಾಕಾರಣ ಮಿತ್ರರನ್ನು ದೂರ ಮಾಡಿಕೊಳ್ಳುವಿರಿ. ನಿಮ್ಮ ಬಗ್ಗೆ ನೀವೇ ಪ್ರಶಂಸೆ ಮಾಡಿಕೊಳ್ಳುವಿರಿ. ಕೃಷಿಯಲ್ಲಿ ಆಸಕ್ತಿ ಉಂಟಾಗಬಹುದು. ರಮಣೀಯ ಸ್ಥಳಕ್ಕೆ ಸಂಗಾತಿಯ ಜೊತೆ ಹೋಗಲಿದ್ದೀರಿ. ಒಂದೇ ರೀತಿ ಜೀವನ ಶೈಲಿಯಿಂದ ಆಚೆ ಬರುವುದು ನಿಮಗೆ ಮುಖ್ಯವಾದೀತು. ಇಂದಿನ ಕನಸು ನಿಮಗೆ ಭೀತಿಯನ್ನು ತಂದೀತು. ನಿಮ್ಮ ನೋವನ್ನು ಕೇಳಲು ಯಾರೂ ಇಲ್ಲವೆಂದು ಬೇಸರವಾಗಬಹುದು. ಕೋಪದ ವಿಚಾರದಲ್ಲಿ ನೀವು ಬದಲಾಗಬೇಕಾದ ಅವಶ್ಯಕತೆ ಇರಲಿದೆ. ಕಳೆದುಕೊಂಡ ಸಂಬಂಧವನ್ನು ಮತ್ತೆ ಕೂಡಿಸಿಕೊಳ್ಳಲು ಪ್ರಯತ್ನಶೀಲರಾಗುವಿರಿ. ಹೂಡಿಕೆಯನ್ನು ಮಾಡಲು ಎಲ್ಲರಿಂದ ಮಾಹಿತಿಯನ್ನು ಸಂಗ್ರಹಿಸುವಿರಿ. ಅಪರೂಪದ ಆಹಾರದಿಂದ ನಿಮಗೆ ಆರೋಗ್ಯವು ಕೆಡಬಹುದು. ದೇವಾಲಯಕ್ಕೆ ಹೋಗಿ ಸ್ವಲ್ಪ ಸಮಯವನ್ನು ಕಳೆದು ಬನ್ನಿ.

-ಲೋಹಿತ ಹೆಬ್ಬಾರ್ – 8762924271 (what’s app only)