AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರಿಗೆ ನಿಯಮಿತ ಚೌಕಟ್ಟನ್ನು ಬಿಟ್ಟು ಆಚೆ ಬರಲು ಆಗದು

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಡಿಸೆಂಬರ್ 21, 2023ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Horoscope: ಈ ರಾಶಿಯವರಿಗೆ ನಿಯಮಿತ ಚೌಕಟ್ಟನ್ನು ಬಿಟ್ಟು ಆಚೆ ಬರಲು ಆಗದು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Dec 21, 2023 | 12:10 AM

Share

ನಿತ್ಯ ಎದ್ದ ಕೂಡಲೇ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುವ ಅಭ್ಯಾಸ ಕೆಲವರಲ್ಲಿ ಇರುತ್ತದೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ? ಇದೆಯಾ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಇಂದಿನ (ಡಿಸೆಂಬರ್ 21) ನಿಮ್ಮ ರಾಶಿಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವರಿಯಾನ್, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 53 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:55 ರಿಂದ 03:19 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:04 ರಿಂದ 08:18ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:42 ರಿಂದ 11:06ರ ವರೆಗೆ.

ಮೇಷ ರಾಶಿ: ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ಈಗ ನಿಮಗೆ ಇಂದ್ರಜಾಲದಂತೆ. ಕ್ಷಣಾರ್ಧದಲ್ಲಿ ಪರಿಹಾರವನ್ನು ಕಂಡುಕೊಳ್ಳಬಲ್ಲಿರಿ. ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿಬರಹುದು. ಕಿವಿಗೆ ಹಾಕಿಕೊಳ್ಳುವ ಅವಶ್ಯಕತೆ ಇಲ್ಲ. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು. ಮಕ್ಕಳಿಂದ ಪ್ರೀತಿಯನ್ನು ಪಡೆಯುವಿರಿ.

ವೃಷಭ ರಾಶಿ: ಉನ್ನತ ಅಧಿಕಾರಿಗಳು ನಿಮ್ಮಿಂದ ಅಧಿಕ ನಿರೀಕ್ಷೆಯನ್ನು ಅಪೇಕ್ಷಿಸುವರು. ಉದ್ಯಮಿಗಳ ಕೆಲಸದಲ್ಲಿ ಅಡೆತಡೆಗಳು ಬರಬಹುದು. ಅದನ್ನು ಗಣನೆಗೆ ತೆಗೆದುಕೊಳ್ಳದೇ ಮುಂದುವರಿಯುವಿರಿ. ಕಳೆದುಕೊಂಡಿದ್ದನ್ನು ನೀವು ಪುನಃ ಪಡೆದುಕೊಳ್ಳುವ ಪ್ರಯತ್ನದಲ್ಲಿ ನೀವು ಇರುವಿರಿ. ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳಬೇಕಾಗುವುದು. ಹುಡುಗಾಟಿಕೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ಸೌಂದರ್ಯವರ್ಧನೆಗೆ ಬೇಕಾದ ಸಮಯವನ್ನು ಕೊಡುವಿರಿ. ವ್ಯವಹಾರದಲ್ಲಿ ಗೊಂದಲವಿಟ್ಟುಕೊಳ್ಳುವುದು ಬೇಡ. ನಿಮ್ಮ ಸೋಲನ್ನು ಒಪ್ಪಿಕೊಳ್ಳದೇ ವಾದಿಸುವಿರಿ. ನಿಮ್ಮ ಪರೀಕ್ಷೆಯ ದಿನವು ಇಂದಾಗಿದ್ದು ಫಲಿತಾಂಶವೂ ನಿಮ್ಮ ವರ್ತನೆಯ ಮೇಲಿರುವುದು.

ಮಿಥುನ ರಾಶಿ: ವಿದೇಶದಲ್ಲಿ ಇರುವವರು ತಮ್ಮ ಬದುಕನ್ನು ಸ್ವಾವಲಂಬಿಯಾಗಿಸಿಕೊಳ್ಳಲು ಬಯಸುವರು. ಯಾವುದೋ ಅಸತ್ಯವಾದ ಉದ್ಯೋಗಕ್ಕೆ ಮನಸೋತು ಹಣವನ್ನು ಕಳೆದುಕೊಳ್ಳಬೇಕಾದೀತು. ವ್ಯಾಪಾರದ ನಷ್ಟವನ್ನು ಇನ್ನಾವುದರಿಂದಲೇ ತುಂಬಿಕೊಳ್ಳುವಿರಿ. ಮನೆಯ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವುದಿಲ್ಲ. ಹೂಡಿಕೆಯನ್ನು ನಿಲ್ಲಿಸುವ ಮನಸ್ಸಾಗುವುದು. ನಿಮಗೆ ಆಗದವರ ಮೇಲೆ ಸಲ್ಲದ ದೂರನ್ನು ಕೊಡುವಿರಿ. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗಾರೂಕತೆ ಇರಲಿ. ಕೆಲವರ ತಂತ್ರಕ್ಕೆ ಸಿಲುಕಿ ನೀವು ಒದ್ದಾಡಬೇಕಾಗುವುದು. ನಟರಿಗೆ ಅವಕಾಶವು ಸಿಕ್ಕೂ ಸಿಗದಂತೆ ಆಗಬಹುದು. ಎಲ್ಲ ಸನ್ನಿವೇಶಕ್ಕೂ ಒಂದೇ ಪರಿಹಾರವು ಇರದು. ಒಂದೇ ವಿಚಾರವನ್ನು ಹೆಚ್ಚು ಯೋಚಿಸಿದಷ್ಟೂ ಮನಸ್ಸು ದುರ್ಬಲವಾಗಬಹುದು. ಅಲ್ಪ ಮೊತ್ತವನ್ನು ಸಾಮಾಜಿಕ ಕಾರ್ಯಕ್ಕೆ ಕೊಡುವಿರಿ.

ಕರ್ಕ ರಾಶಿ: ನಿಮ್ಮ ವರ್ತನೆಯನ್ನು ನೀವು ನಿಯಂತ್ರಿಸಿಕೊಳ್ಳಬೇಕು, ಇಲ್ಲದಿದ್ದರೆ ತಮಾಷೆಯ ವಸ್ತುವಾಗಬೇಕಾಗುವುದು. ಚಟುವಟಿಕೆಯಿಂದ ಇದ್ದರೂ ನಿಮ್ಮ ಕೆಲಸ ಮಾತ್ರ ಆಗದೇ ಇರುವುದು. ಪಾಲುದಾರಿಕೆಯನ್ನು ಪಡೆಯುವ ಮೊದಲು ಸಾಧ್ಯಾಸಾಧ್ಯತೆಗಳ ಬಗ್ಗೆ ಗಮನವಿರಲಿ. ನಿಮ್ಮ ಉದ್ಯೋಗಕ್ಕೆ ಯಾರಿಂದಲಾದರೂ ಹೂಡಿಕೆಯನ್ನು ಮಾಡಿಸಿಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರ. ನಿಮ್ಮ ನಿಯಮಿತ ಚೌಕಟ್ಟನ್ನು ಬಿಟ್ಟು ಆಚೆ ಬರಲು ಆಗದು. ನಿಮ್ಮ ನಡತೆಯಿಂದ ಕುಲಕ್ಕೆ ಅವಮಾನವಾಗಬಹುದು. ನಿದ್ರೆಯನ್ನು ಹೆಚ್ಚು ಮಾಡುವಿರಿ. ಜವಾಬ್ದಾರಿಯನ್ನು ಪಡೆದ ಬೆನ್ನಲ್ಲೇ ಹಿತಶತ್ರುಗಳನ್ನೂ ಹೆಚ್ಚಿಸಿಕೊಳ್ಳುವಿರಿ. ಚಂಚಲವಾದ ಮನಸ್ಸು ನಿಮ್ಮ ಸಂಗಾತಿಗೆ ಇಷ್ಡವಾಗದು.

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ