Horoscope: ಈ ರಾಶಿಯವರನ್ನು ಸುಖಾಸುಮ್ಮನೆ ವಿರೋಧಿಗಳು ಕೆಣಕಬಹುದು, ತಾಳ್ಮೆ ಇರಲಿ
ಭವಿಷ್ಯದ ಬಗ್ಗೆ ಚಿಂತೆ ಎಲ್ಲರು ಮಾಡುತ್ತಾರೆ. ಹೀಗಾಗಿ ಒಂದಷ್ಟು ಮಂದಿ ನಿತ್ಯಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಫೆಬ್ರವರಿ 18, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

ರಾಶಿ ಭವಿಷ್ಯ (Horoscope) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ನವಮೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ: ವೈಧೃತಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 56 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 6 ಗಂಟೆ 36 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 05:09 ರಿಂದ 06:37ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:47 ರಿಂದ 02:14ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:42 ರಿಂದ 05:09ರ ವರೆಗೆ.
ಮೇಷ ರಾಶಿ: ಇಂದು ಮೋಜಿಗಾಗಿ ಹೆಚ್ಚು ಖರ್ಚು ಮಾಡಬೇಕಾಗುತ್ತದೆ. ನಿಮ್ಮ ಜೀವನದಲ್ಲಿ ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲು ಹಲವು ಗೊಂದಲಗಳು ಬರಬಹುದು. ಹಿರಿಯ ಸದಸ್ಯರು ನಿಮ್ಮ ಮಾತಿನಿಂದ ಸಂತೋಷಪಡುತ್ತಾರೆ. ನಿಮ್ಮ ಸಂಗಾತಿಯಿಂದ ವಿಶೇಷ ಉಡುಗೊರೆಯನ್ನು ಪಡೆಯಬಹುದು. ಉದ್ಯೋಗಿಗಳಿಗೆ ಇಂದು ಹೆಚ್ಚಿನ ಕೆಲಸದ ಹೊರೆ ಬರಬಹುದು. ಹಿರಿಯರ ಸಹಕಾರದಿಂದ ಸಮಯಕ್ಕೆ ಸರಿಯಾಗಿ ಮಾರ್ಗವು ತೆರೆಯುವುದು. ಮೋಹದ ಕಾರಣದಿಂದ ನಿಮ್ಮವರ ತಪ್ಪನ್ನು ಹೇಳಲು ನೀವು ತಯಾರಿರುವುದಿಲ್ಲ. ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ಗೌಪ್ಯತೆಯ ವಿಚಾರದಲ್ಲಿ ವರ್ತನೆಯು ಎಲ್ಲರೂ ಮೆಚ್ಚುವಂಥದ್ದಾಗಿರಲಿದೆ. ಸ್ತ್ರೀಯರಿಂದ ಸಹಕಾರ ದೊರೆತರೂ ಕೆಲಸ ಪೂರ್ಣವಾಗದು. ನಿಮ್ಮ ಮನೋಬಲವನ್ನು ಕುಗ್ಗಿಸುಲು ಸಹೋದ್ಯೋಗಿಗಳ ಪ್ರಯತ್ನ ಇರಲಿದೆ. ನಿಮ್ಮ ಬಗ್ಗೆ ನಿಮಗೇ ಬೇಕೆಂದು ಏನಾದರೂ ಹೇಳಿಯಾರು.
ವೃಷಭ ರಾಶಿ: ಇಂದು ಅನೇಕ ವಿಷಯಗಳಲ್ಲಿ ಉತ್ತಮ ಫಲಿತಾಂಶವು ನಿಮ್ಮ ಉತ್ಸಾಹವನ್ನು ದುಪ್ಪಟ್ಟು ಮಾಡೀತು. ವ್ಯಾಪಾರಿಗಳು ತಮ್ಮ ಯೋಜನೆಗಳಿಂದ ಉತ್ತಮ ಲಾಭವನ್ನು ಪಡೆಯಬಹುದು. ದೀರ್ಘಾವಧಿಯ ಯಾವುದೇ ಕೆಲಸವು ನಿಮಗೆ ತೊಂದರೆ ನೀಡುತ್ತಿದ್ದರೆ, ಇಂದು ಪರಿಹಾರವಾಗಲಿದೆ. ಆರೋಗ್ಯದ ವಿಷಯದಲ್ಲಿ ಸ್ವಲ್ಪ ತೊಂದರೆ ಇರುತ್ತದೆ. ವಿದ್ಯಾರ್ಥಿಗಳು ಯಾವುದೇ ಸಮಸ್ಯೆಗಳಿದ್ದಲ್ಲಿ ಶಿಕ್ಷಕರಿಂದ ಪರಿಹಾರವು ಲಭ್ಯ.. ಇಂದು ನೀವು ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ಸದುಪಯೋಗವಾಗುವಂತಹ ಕೆಲಸದ ಕಡೆ ಗಮನವಿರಲಿ. ಸುಲಭದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಚಿಂತಿಸುವಿರಿ. ಖರೀದಿಯ ವಸ್ತುಗಳು ಕಳೆದುಹೋಗುವ ಸಂಭವವಿದೆ. ಕಾರಣಾಂತರಗಳಿಂದ ಬೇರೆ ಕಡೆ ವಾಸ ಮಾಡುವ ಸಂದರ್ಭವು ಬರಬಹುದು. ಒತ್ತಡವನ್ನು ನೀವಾಗಿಯೇ ತಂದುಕೊಳ್ಳುವ ಸಾಧ್ಯತೆ ಇದೆ. ದುಂದುವೆಚ್ಚವು ನಿಮಗೆ ಆಗಿಬರದು. ಎಲ್ಲರ ಜೊತೆ ಬೆರೆಯುವ ಅವಕಾಶಗಳು ಇಂದು ಕಡಿಮೆ ಇರಲಿದೆ.
ಮಿಥುನ ರಾಶಿ: ಇಂದು ಕೆಲವು ಕೆಲಸದಲ್ಲಿ ಸಮಯಪ್ರಜ್ಞೆಯ ಕೊರತೆಯಿಂದ ಸಮಸ್ಯೆಗಳನ್ನು ಎದುರಿಸಬಹುದು. ಈ ಸಮಯದಲ್ಲಿ ನಿಮ್ಮ ಮನಸ್ಸಿನಲ್ಲಿ ಏನಾದರೂ ಹೊಸ ತಂತ್ರಗಳು ಬರಬಹುದು. ಕುಟುಂಬ ಸದಸ್ಯರಿಂದ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಲು ಬಯಸುವಿರಿ. ನಿಮ್ಮ ವ್ಯವಹಾರದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲು ನೀವು ಪರಿಗಣಿಸುತ್ತಿದ್ದರೆ, ಅವರು ಯಶಸ್ವಿಯಾಗುವ ಸಾಧ್ಯತೆಗಳಿವೆ. ನೀವು ಕೆಲವು ನಷ್ಟಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಮದುವೆಗೆ ಸಂಬಂಧಿಸಿದ ಎಲ್ಲ ಅಡೆತಡೆಗಳು ನಿವಾರಣೆಯಾಗುತ್ತವೆ. ಸಂಗಾತಿಯ ಜೊತೆಗಿನ ವೈಮನಸ್ಯವು ದೂರಾಗಿ ಸಂತೋಷವು ಇಂದು ನೆಲೆಸುವುದು. ಮನೆಯಲ್ಲಿ ನಿಮಗೆ ಪೂರಕವಾದ ವಾತಾವರಣ ಇರಲಿದೆ. ಅಪ್ರಾಮಾಣಿಕತೆಯು ನಿಮಗೆ ಇಷ್ಟವಾಗದು. ಅಸಾಧ್ಯವಾದ ಕಾರ್ಯವನ್ನು ಮಾಡಿ ಸಮಯವನ್ನು ವ್ಯರ್ಥ ಮಾಡುವುದು ಬೇಡ. ಶರೀರಪೀಡೆಯನ್ನು ನೀವು ಅನುಭವಿಸುವುದು ಕಷ್ಡವಾಗಬಹುದು. ಸಂಗಾತಿಯ ಸ್ವಭಾವವು ಇಂದು ಸ್ಪಷ್ಟವಾಗಿ ತಿಳಿಯಿತು ಎಂದು ಅಂದುಕೊಂಡಿರುವಿರಿ.
ಕರ್ಕ ರಾಶಿ: ಇಂದು ನಿಮ್ಮ ವಿರೋಧಿಗಳು ನಿಮ್ಮನ್ನು ಕೆಣಕಬಹುದು. ತಾಳ್ಮೆಯನ್ನು ಬಿಡುವುದು ಬೇಡ. ಇಲ್ಲದಿದ್ದರೆ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಆರೋಗ್ಯವು ಹದಗೆಡುವ ಸಾಧ್ಯತೆಯಿದೆ. ನೀವು ವ್ಯಾಪಾರ ತಂಡಕ್ಕಾಗಿ ಯೋಜಿಸಬಹುದು. ನೌಕರರು ಹೊರಗಡೆಯೂ ಎಚ್ಚರಿಕೆಯಿಂದ ಇರಬೇಕಾಗುವುದು. ನಿಮ್ಮ ಎಲ್ಲ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ನಿರೀಕ್ಷೆಯು ಹುಸಿಯಾಗಿ ಬೇಸರವಾಗಬಹುದು. ಸಂಗಾತಿಗೆ ಉದ್ಯೋಗವನ್ನು ಕೊಡಿಸಲು ಓಡಾಟ ಮಾಡುವಿರಿ. ನಿಮ್ಮ ಬಳಿಯೇ ಎಲ್ಲವೂ ಇದ್ದರೂ ಇನ್ನೊಬ್ಬರ ಸ್ವತ್ತಿಗೆ ಕಣ್ಣು ಹಾಕುವಿರಿ. ನಿಮ್ಮ ವ್ಯವಹಾರದಲ್ಲಿ ಲೆಕ್ಕವು ತಪ್ಪಾಗಿ ನೀವು ಹಣವನ್ನು ಕಳೆದುಕೊಳ್ಳಬಹುದು. ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗಬೇಕು ಎನಿಸುವುದು. ವಿದ್ಯಾರ್ಥಿಗಳಿಗೆ ಮುಖ್ಯಘಟ್ಟದಲ್ಲಿ ಸೋಲಾಗಬಹುದು. ಉದ್ಯೋಗದಲ್ಲಿ ನೀವು ಜಾಣತನವನ್ನು ತೋರಿಸುವ ಅವಶ್ಯಕತೆ ಇಲ್ಲ. ಪ್ರಯಾಣದಲ್ಲಿ ಜಾಗರೂಕತೆ ಮುಖ್ಯವಾಗಿರಲಿ.




