Astrology: ನಿಮ್ಮ ನಿರ್ಲಕ್ಷ್ಯದಿಂದ ವ್ಯಾಪಾರದಲ್ಲಿ ವಂಚನೆ ಸಾಧ್ಯವಾದೀತು

ರಾಶಿ ಭವಿಷ್ಯ ಬುಧವಾರ(ಸೆ. 4): ಮ್ಮ ಹಿಡಿತದಿಂದ ಜವಾಬ್ದಾರಿ ತಪ್ಪಿಹೋಗಬಹುದು. ಸುಮ್ಮನೇ ಇಂದು ಯಾರದೋ ಮೇಲೆ ದ್ವೇಷವನ್ನು ಸಾಧಿಸುತ್ತ ಇರುವುದು ಬೇಡ. ಕಾರ್ಯದಲ್ಲಿ ವಿಳಂಬಗತಿಯಾಗಲಿದೆ. ನಂಬಿಕೆಯನ್ನು ಉಳಿಸಿಕೊಳ್ಳಲು ಬೇಕಾದ ಪ್ರಯತ್ನ ಮಾಡುವಿರಿ. ಹಾಗಾದರೆ ಸೆಪ್ಟೆಂಬರ್​ 4ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Astrology: ನಿಮ್ಮ ನಿರ್ಲಕ್ಷ್ಯದಿಂದ ವ್ಯಾಪಾರದಲ್ಲಿ ವಂಚನೆ ಸಾಧ್ಯವಾದೀತು
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 04, 2024 | 12:30 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 4) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಸಾಧ್ಯ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:41 ಗಂಟೆ, ರಾಹು ಕಾಲ ಮಧ್ಯಾಹ್ನ 12:31 ರಿಂದ ಸಂಜೆ 02:04, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:27ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:59 ರಿಂದ 12:31ರ ವರೆಗೆ.

ಧನು ರಾಶಿ : ಮಾನಸಿಕವಾಗಿ ನಿಮಗೆ ಇಂದು ಏರಿಳಿತಗಳು ಹೆಚ್ಚಾಗುವುದು. ಎಲ್ಲವನ್ನೂ ನಕಾರಾತ್ಮಕವಾಗಿ ಭಾವಿಸುವಿರಿ. ಇಂದು ನಿಮ್ಮ ನಿರ್ಲಕ್ಷ್ಯದಿಂದ ವ್ಯಾಪಾರದಲ್ಲಿ ವಂಚನೆ ಸಾಧ್ಯವಾದೀತು. ತೊಂದರೆಗಳಿಂದ ಮನಸ್ಸು ಕುಗ್ಗಬಹುದು. ನಿಮ್ಮ ಸುಳ್ಳು ಇತರರಿಗೆ ಗೊತ್ತಾಗಲಿದೆ. ಸೃಜನಾತ್ಮಕ ಕಾರ್ಯಗಳಿಗೆ ತಡೆಯಾಗಲಿದೆ. ಯಾವುದನ್ನು ಮಾಡಲು ಬುದ್ಧಿ ಸೂಚಿಸದು. ದೊಡ್ಡ ಕೆಲಸಕ್ಕೆ ಸೇರಲು ಯೋಚಿಸಬಹುದು. ನಿಮ್ಮ ಸರ್ಕಾರಿ‌ ಸಂಬದ್ಧವಾದ ಕೆಲಸವು ಅಂತಿಮ ಘಟ್ಟವನ್ನು ತಲುಪಿದ್ದು ಪೂರ್ಣವಾಗಲು ಸಮಯವನ್ನು ತೆಗೆದುಕೊಳ್ಳಬಹುದು. ಮಾತಿನ‌ ಮೇಲೆ ಯಾರನ್ನೂ ಅಳೆಯಬೇಡಿ. ನಿಮ್ಮನ್ನು ನೀವು ಹೊಗಳಿಕೊಳ್ಳುವಿರಿ. ದೂರದ ಪ್ರಯಾಣವನ್ನು ಅಪೇಕ್ಷಿಸುವಿರಿ. ಸ್ತ್ರೀಯರಿಗೆ ಅಪನಿಂದೆಯಾಗುವ ಸಾಧ್ಯತೆ ಇದೆ. ಧಾರ್ಮಿಕವಾದ ಚಿಂತನೆಯನ್ನು ನಡೆಸಬಹುದು. ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆಯಬಹುದು. ಬಂಧುಗಳ ಎದುರು ಸ್ವಾಭಿಮಾನವನ್ನು ಇಟ್ಟುಕೊಳ್ಳುವಿರಿ.

ಮಕರ ರಾಶಿ : ಆಸ್ತಿ ಹಂಚಿಕೆಯ ಬಗ್ಗೆ ನಿಮಗೆ ಸಮಾಧಾನ ಸಿಗದು. ಯಾವ ಸೋಲಿಗೂ ಹತಾಶರಾಗುವುದು ಬೇಡ. ಮರೆಯಲು ಬೇಕಾದ ಚಟುವಟಿಕೆಗಳನ್ನು ಮಾಡಿ. ಚಂಚಲಸ್ವಭಾವವನ್ನು ನಿಯಂತ್ರಿಸಲು ಕಷ್ಟವಾದೀತು.‌ ಅಲಂಕಾರಿಕಕ್ಕೆ ಹೆಚ್ಚು ಒತ್ತನ್ನು ನೀಡುವಿರಿ. ನಿಮ್ಮೆದರೇ ಮತ್ತಾರನ್ನಾದರೂ ಪ್ರಶಂಸಿಸಿಯಾರು. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಮನಸ್ಸು ಮಾಡುವರು. ತಾಯಿಯ ಸಂಪತ್ತನ್ನು ಪಡೆಯುವ ಸಾಧ್ಯತೆ ಇದೆ. ಹೆಚ್ಚಿನ‌ ಸಮಯವನ್ನು ಮಾತುಕತೆಯಲ್ಲಿ ಕಳೆಯುವಿರಿ. ಯಾರದೋ ಕಾರ್ಯಕ್ಕೆ ನಿಮಗೆ ಲಾಭವಾಗುವುದು. ಸಂಗಾತಿಯನ್ನು ಜೊತೆ ಹೊಸ ಉದ್ಯಮವನ್ನು ಆರಂಭಿಸುವ ಹುನ್ನಾರ ನಡೆಯಲಿದೆ. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ. ಮಾತಿನಿಂದ ಹತ್ತಿರದವರನ್ನು ದೂರಮಾಡಿಕೊಳ್ಳುವಿರಿ. ಕಾರ್ಯವನ್ನು ಹಾಳುಮಾಡಲು ನಿಮ್ಮ ಗಮನವನ್ನು ಬೇರೆ ಕಡೆ ಸೆಳೆಯಬಹುದು.

ಕುಂಭ ರಾಶಿ : ನಿಮ್ಮ ಹಿಡಿತದಿಂದ ಜವಾಬ್ದಾರಿ ತಪ್ಪಿಹೋಗಬಹುದು. ಸುಮ್ಮನೇ ಇಂದು ಯಾರದೋ ಮೇಲೆ ದ್ವೇಷವನ್ನು ಸಾಧಿಸುತ್ತ ಇರುವುದು ಬೇಡ. ಕಾರ್ಯದಲ್ಲಿ ವಿಳಂಬಗತಿಯಾಗಲಿದೆ. ನಂಬಿಕೆಯನ್ನು ಉಳಿಸಿಕೊಳ್ಳಲು ಬೇಕಾದ ಪ್ರಯತ್ನ ಮಾಡುವಿರಿ. ಅಪ್ರಾಮಾಣಿಕ ಪ್ರಯತ್ನವು ನಿಮಗೆ ಯಶಸ್ಸು ಕೊಡದು. ಹಾಗೆಂದು ಯಶಸ್ಸಿಗೆ ಅಡ್ಡದಾರಿಯನ್ನು ಹುಡುಕಬೇಡಿ. ಹಣವನ್ನು ಹೊಂದಿಸುವ ವಿಚಾರದಲ್ಲಿ ಬಹಳ ತೊಂದರೆಪಡುವಿರಿ. ಆಪ್ತರ ಮಾತು ನಿಮ್ಮನ್ನು ಚೇತರಿಸಿಕೊಳ್ಳಲು ಸಹಾಯ ಮಾಡಬಹುದು. ವಿದೇಶದ ಕಡೆಗೆ ನಿಮ್ಮ ಗಮನ ಅಧಿಕವಾಗಿರುವುದು. ಸಂಗಾತಿಯ ಸ್ವಭಾವವನ್ನು ಅರ್ಥಮಾಡಿಕೊಳ್ಳಲು ಬಯಸುವಿರಿ. ಉತ್ತಮವಾದುದನ್ನು ಪಡೆಯಲು ಪ್ರಯತ್ನಿಸಿ. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು. ನಿಮ್ಮ ಬಗೆಗಿನ ಊಹಾಪೋಹಗಳಿಗೆ ಬೆಲೆಯನ್ನು ಕೊಡುವ ಅಗತ್ಯವಿಲ್ಲ. ಕೊಡುವುದನ್ನು ಕೊಟ್ಟು ಅನಂತರ ಸಂಕಟಪಡುವಿರಿ.

ಮೀನ ರಾಶಿ : ದೊಡ್ಡ ಉದ್ಯೋಗವನ್ನು ಪಡೆಯುವ ಆಸೆ ಇರುವುದು.‌ ನೀವು ಬೇಕಾಗಿರುವುದನ್ನು ಮಾಡುವುದಕ್ಕಿಂತ ಬೇರೆಯದನ್ನೇ ಮಾಡುವಿರಿ. ನಿಮಗೆ ಹಣಕ್ಕಿಂತ ಪ್ರತಿಷ್ಠೆಯನ್ನು ತೋರುವ ಮಬಲವಿದೆ. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದೆ ಸಾಗಿರಿ. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯಬಯಸುವಿರಿ. ಮಕ್ಕಳ ವಿಚಾರದಲ್ಲಿ ನೀವು ಅಸ್ವಂತ್ರರು. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕಾರ್ಯವನ್ನೂ ಮಾಡಬೇಕಾದೀತು. ಒಳ್ಳೆಯದರ ನಿರೀಕ್ಷೆಯಲ್ಲಿ ನೀವು ಇದ್ದು, ದಿನಾಂತ್ಯದಲ್ಲಿ ಸಿಗುವ ಸಾಧ್ಯತೆ ಇದೆ. ಧಾರ್ಮಿಕ ಆಚರಣೆಗಳನ್ನು ಮಾಡಲು ಇಷ್ಟಪಡಬಹುದು. ನಿಮ್ಮ ದೃಷ್ಟಿಕೋನವನ್ನು ಬದಲಿಸಿಕೊಳ್ಳಲು ಪ್ರಯತ್ನಿಸಿ. ಉದ್ಯೋಗಾವಕಾಶಗಳನ್ನು ಹುಡುಕುವಿರಿ. ಬಂಧುಗಳ ಭೇಟಿಯು ಖುಷಿ ಕೊಡಬಹುದು. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಅತಿಯಾದ ಓಡಾಟವನ್ನು ನಿಲ್ಲಿಸಿ. ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರತಿ ಗುರಿಯನ್ನು ಸಾಧಿಸುವಿರಿ. ಸಮಾಜ ಸೇವಕರ ಒಡನಾಟ ಸಿಗಲಿದೆ.

-ಲೋಹಿತ ಹೆಬ್ಬಾರ್-8762924271 (what’s app only)

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ