AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಂತ ಉದ್ಯೋಗವಿದ್ದರೆ ಲಾಭವನ್ನು ಕಾಣುವಿರಿ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಕೃಷ್ಣ ಪಕ್ಷದ ಏಕಾದಶೀ ತಿಥಿ, ಗುರುವಾರ ಅನ್ಯ ಕ್ಷೇತ್ರದಿಂದ ನೆರವು, ಹಣಕಾಸಿನ ಹರಿವು, ಆಗಬೇಕಾದ ಕೆಲಸದ ಮರೆವು, ಹೊಸ ಯೋಜನೆಯ ಅರಿವು ಇರುವುದು. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಸ್ವಂತ ಉದ್ಯೋಗವಿದ್ದರೆ ಲಾಭವನ್ನು ಕಾಣುವಿರಿ
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 24, 2025 | 1:34 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ : ಚೈತ್ರ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಬ್ರಹ್ಮ, ಕರಣ: ಭದ್ರ, ಸೂರ್ಯೋದಯ – 06:14 am, ಸೂರ್ಯಾಸ್ತ – 06 : 46 pm, ಇಂದಿನ ಶುಭಾಶುಭಕಾಲ: ರಾಹು ಕಾಲ 14:05 – 15:39, ಯಮಘಂಡ ಕಾಲ 06:15 – 07:49, ಗುಳಿಕ ಕಾಲ 09:23 – 10:57

ಮೇಷ ರಾಶಿ: ಒಮ್ಮೊಮ್ಮೆ ವೈಯಕ್ತಿಕ ಹಿತಾಸಕ್ತಿಯನ್ನು ಪಕ್ಕಕ್ಕಿರಿಸಿ ಕೆಲಸ ಮಾಡಬೇಕಾಗುವುದು. ವೇಗವಾಗಿ ಹಣವನ್ನು ಗಳಿಸುವ ವಿಧಾ‌ನಕ್ಕೆ ಕೈ ಹಾಕುವ ಮೊದಲು ಆಪ್ತರ ಸಲಹೆ ಬೇಕು. ನಿಮ್ಮಿಂದ ಕುಟುಂಬಕ್ಕೆ ಉತ್ತಮವಾದ ಹೆಸರು ಬರಲಿದೆ. ಇಂದು ನಿಮ್ಮನ್ನು ಹುಡುಕಿಕೊಂಡು ಬರುವರಿಂದ ನಿಮ್ಮ ವಿವಾಹವು ನಿಶ್ಚಯವಾಗಲಿದೆ. ಬೇರೆಯವರನ್ನು ಗೊಂದಲಕ್ಕೆ ಸಿಕ್ಕಿ ಹಾಕಿಸುವುದು ಬೇಡ. ಹೂಡಿಕೆಯ ಹೊಸ ವಿಧಾನದಿಂದ ಸಂತೋಷ. ನಿಮ್ಮ‌‌ ಸ್ನೇಹವನ್ನು ಬಯಸಲು ಇಂದು ಅನೇಕರು ಇರಲಿದ್ದಾರೆ. ಅಮುಖ್ಯವಾದ ಕಾರ್ಯಗಳಿಗೆ ಓಡಾಟವನ್ನು ಮಾಡಬೇಕಾದೀತು. ಪಾಲುದಾರಿಕೆಯು ನಿಮಗೆ ಮೋಸದಂತೆ ಕಾಣುವುದು. ಶತ್ರುಗಳ ಬಗ್ಗೆ ಯಾರಾದರೂ ಕಿವಿಚುಚ್ಚುವರು. ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎನ್ನುವುದು ನಿಮ್ಮ ಉದ್ದೇಶವಾದರೂ ಅದು ಆಗದು. ಆಪಾಯದ ಸೂಚನೆಯನ್ನು ಗಮನಿಸಿಕೊಳ್ಳಿ. ವ್ಯಾಪಾರವನ್ನು ಅಚ್ಚುಕಟ್ಟಾಗಿ ಮುಗಿಸುವ ಕೌಶಲವು ನಿಮ್ಮಲ್ಲಿರುವುದು. ಹೂಡಿಕೆಯ ವಿಚಾರದಲ್ಲಿ ಯಾರಾದರೂ ದಾರಿಯನ್ನು ತಪ್ಪಿಸಿಯಾರು. ಉದ್ಯಮಿಗಳ ಭೇಟಿ ಮಾಡುವಿರಿ. ಜವಾಬ್ದಾರಿಯನ್ನು ಪೂರೈಸಿ ಕೈಬಿಡಿ.

ವೃಷಭ ರಾಶಿ: ಯಾರದೋ ಕಾರ್ಯಕ್ಕೆ ಮತ್ತಾರಮೇಲೋ ಕೋಪಗೊಳ್ಳುವಿರಿ. ಅಮೂಲ್ಯವಾದ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಮುಂಗೋಪಿಯಾಗಿ ಕಾರ್ಯಗಳನ್ನು ಮಾಡಬೇಡಿ.‌ ಪ್ರೀತಿಗೆ ಬೆಲೆಯನ್ನು ಕೊಡುವ ನಿಮ್ಮ ಹವ್ಯಾಸವು ಮುಂದುವರಿಯಲಿ. ರಾಜಕೀಯದ ನಿಮ್ಮ ರಹಸ್ಯ ನಡೆಯು ಬಯಲಾಗಬಹುದು. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು. ತುರ್ತು ಚಿಕಿತ್ಸೆಯ ಅವಶ್ಯಕತೆ ಎದುರಾಗುವುದು. ಅನಗತ್ಯ ಅಲೆದಾಟವನ್ನು ನಿಲ್ಲಿಸಿ ಕಾರ್ಯದಲ್ಲಿ ಮಗ್ನರಾಗಿ. ನಿಮ್ಮ ಸಂಗತಿ ಇಂದು ಸ್ವರ್ಗದ ಮೇಲೆ ಇದೆ, ಇಂದು ಅದು ನಿಮಗೆ ಅರ್ಥವಾಗುತ್ತದೆ. ನಿಮ್ಮ ಪ್ರಯತ್ನಕ್ಕೆ ಸರಿಯಾದ ಫಲವು ಸಿಗುವುದು. ಆದಾಯವನ್ನು ನಿರೀಕ್ಷಿತ ಖರ್ಚಿನ ಬಗ್ಗೆ ನಿಯಂತ್ರಣ ಬೇಕು. ನಿಮ್ಮ ಗುರಿಯನ್ನು ಬದಲಾಯಿಸುವುದು ಬೇಡ. ಇಂದು ಖರ್ಚಿನ ಬಗ್ಗೆ ಊಹೆಗೂ ಸಿಗದು. ಶ್ರಮಕ್ಕೆ ಯೋಗ್ಯವಾದ ಆದಾಯವನ್ನು ನಿರೀಕ್ಷಿಸುವಿರಿ. ಹೇಳಬೇಕಾದ‌ ವಿಷಯದಲ್ಲಿ ಮುಚ್ಚು ಮರೆ ಇಲ್ಲದೇ ಸರಿಯಾಗಿ ಹೇಳಿ.‌ ಆದುದರ ಬಗ್ಗೆ ನಿಮಗೆ ಯಾವುದೇ ಬೇಸರವನ್ನು ಮಾಡಿಕೊಳ್ಳುವುದಿಲ್ಲ.

ಮಿಥುನ ರಾಶಿ: ದೀರ್ಘಕಾಲದ ಖರ್ಚು ಕಡಿಮೆಯಾಗುವ ಸಂಭವವಿದೆ. ಉಪಯೋಗವಿಲ್ಲದ ವಸ್ತುಗಳನ್ನು ಬೇರೆ ಮಾಡುವಿರಿ. ಮೌನದಲ್ಲಿಯೂ ಅದು ಬಗೆಹರಿಯಬಹುದು ಎನ್ನುವ ಚಿಂತನೆಯನ್ನು ಮೊದಲು ಮಾಡಿಕೊಂಡು ಕಲಹಾದಿಗಳು ಬೇಕೇ ಎನ್ನುವ ತೀರ್ಮಾನಕ್ಕೆ ಬನ್ನಿ. ಮನಸ್ಸಿಗೆ ಯಾವುದನ್ನಾದರೂ ತಂದುಕೊಂಡು ಅನಂತರ ಮುಂದುವರಿಯುವಿರಿ. ಪ್ರಯಾಣದ ಆಯಾಸವು ನಿಮ್ಮನ್ನು ದುರ್ಬಲಗೊಳಿಸುತ್ತದೆ‌. ನಿಮ್ಮ ಯೋಜನೆಗೆಳಿಗೆ ಪುರಸ್ಕಾರಗಳು ಸಿಗಬಹುದು. ಅಮೂಲ್ಯ ಸಮಯವನ್ನು ಆಲಸ್ಯದಿಂದ ಕಳೆಯುವಿರಿ. ಚಿತ್ರಕಾರರಿಗೆ ಅವಕಾಶಗಳು ಬರಬಹುದು. ಜೀವನದಲ್ಲಿ ಅನೇಕರಿಂದ ನೀವು ಹಿಂದೆ ಬೀಳುತ್ತೀರಿ. ಇದು ನಿಮ್ಮ ಜೀವನಸಂಗಾತಿಯೊಂದಿಗಿನ ಅದ್ಭುತ ದಿನವಾಗಿದೆ. ನಿಮ್ಮ ಕಾಳಜಿಯು ಇತರರಿಗೆ ಮುಜುಗರವನ್ನು ತಂದೀತು. ಕಟ್ಟಡ ನಿರ್ಮಾಣದವರಿಗೆ ಹೆಚ್ಚು ಲಾಭವಾಗಲಿದೆ. ಹೊಸ ಯೋಜನೆಗಳೂ ಅವರಿಗೆ ಸಿಗಲಿದೆ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರಲಿದೆ.

ಕರ್ಕಾಟಕ ರಾಶಿ: ಸಹೋದ್ಯೋಗಿಗಳ‌ ಜೊತೆ ಸಾಮರಸ್ಯ ಕಷ್ಟವಾಗುವುದು. ಇಂದು ವಿವಾಹಕ್ಕೆ ಸಂಬಂಧಿಸಿದಂತೆ ನಿಮಗೆ ಕೆಲವು ವಿಘ್ನಗಳು ಬರಲಿವೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ಸಂತಾನದ ವಿಚಾರದಲ್ಲಿ ಅಶಾಂತಿ ಮೂಡಬಹುದು. ನಿಯಮ ಭಂಗದಿಂದ ನಿಮಗೆ ಕಷ್ಟ. ನಿಮ್ಮವರೆಂದುಕೊಂಡವರು ನಿಮ್ಮವರಾಗದೇ ಇರಬಹುದು. ಸಂಗಾತಿಗಳ ಕಲಹವು ಮಕ್ಕಳ ಕಾರಣದಿಂದ ತಣ್ಣಗಾಗುತ್ತದೆ. ಧಾರ್ಮಿಕ ಕಾರ್ಯಗಳಿಗೆ ಸಂಪತ್ತು ಬಳಕೆಯಾಗಲಿದೆ. ದಾಖಲೆಗಳು ನಿಮ್ಮ ಬಗ್ಗೆ ಸರಿಯಾದ ಮಾಹಿತಿ ಕೊಡುವುದು. ಅಪರೂಪದ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ. ಕೃಷಿಯ ಉತ್ಪನ್ನದಿಂದ ಅಧಿಕ‌ಲಾಭವಿರಲಿದೆ. ನಿಮ್ಮನ್ನು ವಿರೋಧಿಸುವವರು ಹೆಚ್ಚಾದಾರು. ಕಲಾವಿದರಿಗೆ ವಿದೇಶಪ್ರವಾಸಕ್ಕೆ ಅವಕಾಶ ಲಭಿಸಲಿದೆ. ನಿಂತ ಕಾರ್ಯಕ್ಕೆ ಚಾಲನೆ ನೀಡುವಿರಿ. ಆಶ್ರಯದಾತರನ್ನು ಅಪಮಾನ ಮಾಡುವಿರಿ. ಸ್ಪರ್ಧೆಗಾಗಿ ನಡೆಸಿದ ನಿಮ್ಮ ಶ್ರಮವು ವ್ಯರ್ಥವಾದೀತು. ನಿಮ್ಮ‌ ಮೇಲಿರುವ ಭಾವನೆಯು ದೂರಾಗಬಹುದು.

ಸಿಂಹ ರಾಶಿ: ವ್ಯವಹಾರದಲ್ಲಿ ಮಗ್ನರಾಗಿ ಹಲವು ತಿರುಗಾಟ ಮಾಡಬೇಕಾಗುವುದು, ಅಕಾಲದಲ್ಲಿ ಭೋಜನ ವಿಶ್ರಾಂತಿಗಳು ಆರೋಗ್ಯದಲ್ಲಿ ವ್ಯತ್ಯಾಸವನ್ನು ಮಾಡುವುದು. ಪಿರ್ತಾರ್ಜಿತ ಆಸ್ತಿಯನ್ನು ಅನುಭವಿಸುವ ಕ್ಷಣ ನಿಮ್ಮದಾಗಿದೆ. ಶತ್ರುಗಳು ನಿಮ್ಮ ಚಲನವಲನಗಳನ್ನು ಗಮನಿಸುತ್ತ ಇರುವರು. ತುಂಬಾ ದಿನಗಳಿಂದ ಕಾಡುವ ಸಮಸ್ಯೆಗೆ ಇಂದು ಪರಿಹಾರ ದೊರಕಲಿದೆ. ಅಶುಭವಾರ್ತೆಯಿಂದ ಉತ್ಸಾಹಕ್ಕೆ ಭಂಗ. ಜಾಣ್ಮೆಯಿಂದ ಅದನ್ನು ದೂರಮಾಡಿಕೊಳ್ಳಿ. ಪ್ರತ್ಯಕ್ಷವಾಗಿ ಕಂಡಿದ್ದು ಪ್ರಮಾಣೀಕರಿಸಿ ನೋಡುವುದು ಉತ್ತಮ. ಪ್ರಯಾಣವನ್ನು ಅನಿವಾರ್ಯ ಮಾಡಿಕೊಳ್ಳಬೇಡಿ. ಸಮಯದ ಚಕ್ರವು ವೇಗವಾಗಿ ಸುತ್ತಿದಂತೆ ಕಾಣಿಸುವುದು. ನಿಮ್ಮಿಂದ ಬದಲಾವಣೆಯನ್ನು ನಿರೀಕ್ಷಿಸುವವರಿಗೆ ಯೋಗ್ಯ ಉತ್ತರ ಕೊಡುವಿರಿ. ಇಂದು ಹಲವು ಕಾರ್ಯಗಳನ್ನು ಒಂದೇ ಸಲ ಮಾಡಬೇಕಾಗಬಹುದು. ಎಲ್ಲವೂ ಆಗಿಹೋದಂತೆ ನಿಮಗೆ ಅನ್ನಿಸಬಹುದು. ನಿಮ್ಮವರನ್ನು ಬಿಟ್ಟು ಹೋದವರ ಬಗ್ಗೆ ಆಲೋಚನೆ ಬೇಡ. ವಸತಿಯಲ್ಲಿ ತೊಂದರೆ ಬಂದ ಕಾರಣ ಬದಲಾಯಿಸುವ ಸಂದರ್ಭವೂ ಬರಬಹುದು.

ಕನ್ಯಾ ರಾಶಿ: ಯಾವುದೇ ಕೆಲಸಕ್ಕೆ ಹೋಗುವಾಗಲೂ ದೈವ ಬಲವನ್ನು ಪ್ರಾರ್ಥಿಸಿಕೊಳ್ಳುವಿರಿ. ನಿಮ್ಮ ಸ್ವಂತ ಉದ್ಯೋಗವಿದ್ದರೆ ಲಾಭವನ್ನು ಕಾಣುವಿರಿ. ಧಾರ್ಮಿಕ ಕಾರ್ಯಗಳನ್ನು ಮಾಡುವವರಿಗೆ ಇಂದು ಹೆಚ್ಚಿನ ಲಾಭವನ್ನು ನಿರೀಕ್ಷಿತ ಲಾಭವನ್ನು ಕಾಣಬಹುದಾಗಿದೆ. ಮನಸ್ಸು ಶಾಂತವಾದಷ್ಟು ಕಾರ್ಯದಲ್ಲಿ ಪ್ರಗತಿ ಹೆಚ್ಚು. ಉಕರಣಗಳಿಗೆ ಕಾರಣಾಂತರಗಳಿಂದ ಧನವ್ಯಯವಾದೀತು. ನಂಬಿಕೆಯನ್ನು ಉಳಿಸಿಕೊಳ್ಳಲು ಬಹಳ ಪ್ರಯತ್ನವನ್ನು ಮಾಡಬೇಕಾದೀತು. ಉತ್ತಮರ ಸಹವಾಸ ನಿಮ್ಮ ಜೀವನಕ್ಕೆ ತಿರುವನ್ನು ಕೊಟ್ಟೀತು. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ನಿಮ್ಮನ್ನು ಮಾರ್ಗಭ್ರಷ್ಟರನ್ನಾಗಿ ಮಾಡುವ ಕೆಲಸವು ನಿಮಗೆ ಗೊತ್ತಿಲ್ಲದೇ ನಡೆಯುವುದು. ಇಂದು ಹಿರಿಯರಿಂದ ಕೆಲವು ಹಿತೋಪದೇಶವನ್ನು ಕೇಳಬೇಕಾದೀತು. ವ್ಯಾಪಾರದ ಸ್ಥಳದಲ್ಲಿ ಇಕ್ಕಟ್ಟು ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವುದು ಬೇಡ. ನಿಮ್ಮನ್ನು ಅರಿತವರು ಬಿಡಲಾರರು. ಅನಾರೋಗ್ಯದ ಕಾರಣ ಉತ್ಸಾಹದ ಯಾವ ಕಾರ್ಯವನ್ನೂ ಮಾಡಲಾಗದು. ದಿನದ ಕೆಲಸವನ್ನು ಮಾಡುವಷ್ಟರಲ್ಲಿ ನಿಮ್ಮ ಸಮಯವು ಕಳೆದುಹೋಗುವುದು.