Horoscope: ಅಪರಿಚಿತರ ಬಗ್ಗೆ ಎಚ್ಚರಿಕೆ ಅವಶ್ಯಕ, ಸಣ್ಣ ವಿಚಾರಕ್ಕೆ ದ್ವೇಷ ಸಾಧಿಸುವುದು ಬೇಡ
ಸೆಪ್ಟೆಂಬರ್ 16, 2024ರ ನಿಮ್ಮ ರಾಶಿಭವಿಷ್ಯ: ಅಪರಿಚಿತರ ಬಗ್ಗೆ ಎಚ್ಚರಿಕೆ ಅವಶ್ಯಕ. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು. ಬಂಧುಗಳ ಟೀಕೆಗೆ ನೀವು ಸೊಪ್ಪುಹಾಕಲಾರಿರಿ. ಕಾರ್ಯದಲ್ಲಿ ಇನ್ನೊಬ್ಬರ ಸಹಾಯವನ್ನು ಬಯಸುವಿರಿ. ಹಾಗಾದರೆ ಸೆಪ್ಟೆಂಬರ್ 16ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.
ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಸೆಪ್ಟೆಂಬರ್ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಸುಕರ್ಮ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:32 ಗಂಟೆ, ರಾಹು ಕಾಲ ಬೆಳಿಗ್ಗೆ 07:54 ರಿಂದ 09:25, ಯಮಘಂಡ ಕಾಲ ಬೆಳಿಗ್ಗೆ 10:56 ರಿಂದ ಮಧ್ಯಾಹ್ನ 12:27ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:58 ರಿಂದ ಸಂಜೆ 03:30ರ ವರೆಗೆ.
ಮೇಷ ರಾಶಿ: ಇಂದು ನ್ಯಾಯವನ್ನು ಪಡೆಯಲು ಬೇರೆ ದಾರಿಗಳಿಂದ ಪ್ರಯತ್ನಿಸುವಿರಿ. ಇಂದು ಒಂದೇ ಕಾರ್ಯವನ್ನು ಮತ್ತೆ ಮಾಡಬೇಕಾಗುವುದು. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ವಾಹನದಿಂದ ನಿಮಗೆ ತೊಂದರೆಯಾಗಲಿದೆ. ಆಸ್ತಿಯ ಖರೀದಿಯ ಬಗದಗೆ ಇಂದು ನೀವು ಹೊಸ ಪಾಲುದಾರಿಗೆ ಮನಸ್ಸು ಮಾಡುವಿರಿ. ಅತಿಯಾದ ಆಸೆಯಿಂದ ನಿಮಗೆ ಕೆಲವು ತೊಂದರೆಗಳು ಬರಬಹುದು. ವಿದ್ಯುತ್ ಯಂತ್ರಗಳ ಖರೀಯಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಸಬಲತೆಗೆ ಕ್ರಮವನ್ನು ಕೈಗೊಳ್ಳುವುದು ಉತ್ತಮ. ನಿಮ್ಮ ಭಾವನೆಯನ್ನು ಕುಟುಂಬವು ಗೌರವಿಸುವುದು. ಇಂದಿನ ಹೆಚ್ಚಿನ ಸಮಯವನ್ನು ಧಾರ್ಮಿಕ ಕೆಲಸಕ್ಕೆ ಮೀಸಲಿಡಿ. ಸಂಗಾತಿಯ ವಿಚಾರವನ್ನು ಇನ್ನೊಬ್ಬರ ಬಳಿ ಹೇಳಿ ಸಮಾಧಾನ ಪಡುವಿರಿ. ಉದ್ಯಮದ ವಿಚಾರದಲ್ಲಿ ನೌಕರರಿಂದ ಹಿನ್ನಡೆಯಾಗಲಿದೆ. ಅವಶ್ಯಕತೆ ಇರುವಷ್ಟನ್ನು ಮಾತ್ರ ಖರೀದಿಸಿ. ಉದ್ಯೋಗದಲ್ಲಿ ಸುಲಭದ ಉಪಾಯವನ್ನು ಕಂಡುಕೊಳ್ಳುವಿರಿ.
ವೃಷಭ ರಾಶಿ; ಆತ್ಮಾವಲೋಕನ ಮಾಡಿಕೊಳ್ಳುವುದು ನಿಮಗೆ ಯೋಗ್ಯ. ನಿಮ್ಮ ನಿಶ್ಚಿತವಾದ ಯೋಜನೆಯನ್ನು ಬದಲಾಯಿಸುವಿರಿ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಲಿದೆ. ಕುಟುಂಬದಲ್ಲಿ ನಿಮ್ಮ ಬಗ್ಗೆ ಆತಂಕ ಉಂಟಾಗಬಹುದು. ಪ್ರಯತ್ನಪಟ್ಟು ಮಾಡುವ ಕೆಲಸವು ನಿಮಗೆ ಅನುಕೂಲವನ್ನು ಮಾಡುವುದು. ನಿಮ್ಮ ಕಾರ್ಯದ ಬಗ್ಗೆ ಸಕಾರಾತ್ಮಕ ಭಾವನೆಯು ಕಡಿಮೆ ಆಗಬಹುದು. ಉದ್ವಿಗ್ನತೆಯು ಉಂಟಾಗ ಏನನ್ನಾದರೂ ಮಾಡಿಕೊಳ್ಳುವಿರಿ. ಅವಿವಾಹಿತರು ಯೋಗ್ಯವಾದ ಸಂಗಾತಿಯನ್ನು ಪಡೆಯುವರು. ನೀವು ಇಂದು ಕೆಲಸದಲ್ಲಿ ಬದಲಾವಣೆಯನ್ನು ಇಚ್ಛಿಸುವಿರಿ. ಪ್ರೀತಿಯ ಸುಖದಿಂದ ವಂಚಿತರಾಗುವಿರಿ. ವಿದೇಶಪ್ರಯಾಣದ ಗುಂಗಿನಿಂದ ಹೊರ ಬನ್ನಿ. ನಿಮ್ಮ ಮೇಲೆ ವಿರೋಧಿಗಳ ಆಕ್ರಮಣವು ಆಗಬಹುದು. ಬೇಡದಿದ್ದರೂ ಸಹಾಯವು ನಿಮ್ಮ ಪಾಲಿಗೆ ಬರುವುದು. ಉದ್ಯೋಗದಲ್ಲಿ ಒತ್ತಡವಿರುವ ಕಾರಣ ಉದ್ಯೋಗವನ್ನು ಬದಲಿಸುವಿರಿ.
ಮಿಥುನ ರಾಶಿ: ಏಕಕಾಲಕ್ಕೆ ಹಲವಾರು ಖರ್ಚುಗಳು ಬಂದು ನಿಮಗೆ ತಲೆಬಿಸಿ ಆಗುವುದು. ನಿಮ್ಮ ಬಗ್ಗೆ ಅಪರಿಚಿತರು ಪ್ರೀತಿ ತೋರಿಸಿದರೆ ಮುಜುಗರವಾಗುವುದು. ದಾಂಪತ್ಯದಲ್ಲಿ ಸಲುಗೆಯು ಅತಿಯಾಗಲಿದೆ. ತಂದೆಯಿಂದ ಧನಾಗಮನವಾಗಬಹುದು. ಬೇಸರವನ್ನು ಕಳೆಯಲು ಒಂಟಿಯಾಗಿ ದೂರ ಹೋಗುವಿರಿ. ನಿಮ್ಮ ಆದಾಯವನ್ನು ಅಳೆಯಬಹುದು. ಪ್ರೇಯಸಿಯನ್ನು ದೂರಮಾಡಿಕೊಂಡು ಸಂಕಟಪಡುವ ಸಾಧ್ಯತೆ ಇದೆ. ನಿಮ್ಮ ಸಾಮರ್ಥ್ಯವನ್ನು ಸುಧಾರಿಸಲು ಇಂದು ಒಂದು ಅವಕಾಶ ಸಿಗಲಿದೆ. ಯಾರಾದರೂ ನಿಮಗೆ ಉತ್ತಮ ಮಾರ್ಗದರ್ಶನವನ್ನು ಮಾಡಬಹುದು. ಬಂಧುಗಳ ಜೊತೆ ಬಿಚ್ಚುಮನಸ್ಸಿನಿಂದ ಮಾತನಾಡಲಾರಿರಿ. ನಿಮ್ಮ ಅನುಭವದ ಆಧಾರದ ಮೇಲೆ ಕೆಲಸವು ಇರಲಿದೆ. ಯಂತ್ರೋಪಕರಣಗಳ ವಿಚಾರದಲ್ಲಿ ನೀವು ಜಾಗರೂಕರಾಗಿರುವುದು ಮುಖ್ಯ. ವಿದೇಶಿ ಕಂಪೆನಿ ಉದ್ಯೋಗವನ್ನು ಬಯಸುವಿರಿ. ಸಣ್ಣ ವಿಚಾರಕ್ಕೆ ದ್ವೇಷ ಸಾಧಿಸುವುದು ಸರಿಯಾಗದು. ಹೊಂದಾಣಿಕೆಯ ಕಡೆ ನಿಮ್ಮ ಗಮನವಿರಲಿ. ಕಾರ್ಯದಲ್ಲಿ ದಕ್ಷತೆಯನ್ನು ತೋರಿಸುವಿರಿ.
ಕರ್ಕಾಟಕ ರಾಶಿ: ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳುವುದು ಇಷ್ಟವಾಗುವುದು. ಇಂದು ನಿಮ್ಮ ಪ್ರೇಮವು ಸ್ನೇಹಿತರ ಮೂಲಕ ಸಫಲವಾಗುವುದು. ಕೆಲಸದ ಸ್ಥಳದಲ್ಲಿ ಹಿರಿಯರು ಮಾರ್ಗದರ್ಶನ ಪಡೆಯಿರಿ. ಮಕ್ಕಳು ನಿಮ್ಮ ವರ್ತನೆಯನ್ನು ವಿರೋಧಿಸುವರು. ಸಾಲವನ್ನು ಮುಕ್ತಾಯ ಮಾಡಿಕೊಂಡು ಸಂತೃಪ್ತಿ ಆಗುವುದು. ವ್ಯಾಪಾರದ ಉದ್ದೇಶಕ್ಕೆ ನಿಮ್ಮ ವಿದೇಶ ಪ್ರವಾಸವು ಶುಭವನ್ನು ತರಲಿದೆ. ನಿಮ್ಮ ಸಂಗಾತಿಯಿಂದ ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾದೀತು. ನಿಮ್ಮ ದಾಖಲೆಗಳನ್ನು ಪರಿಶೀಲಿಸಿಕೊಳ್ಳುವುದು ಉತ್ತಮ. ನಿಮ್ಮ ವೃತ್ತಿ, ಹಣಕಾಸಿನ ವಿಚಾರಕ್ಕೆ ಬಂದಾಗ ನೀವು ಬಹಳ ದುರ್ಬಲರಾಗುವಿರಿ. ಅಪರಿಚಿತರ ಬಗ್ಗೆ ಎಚ್ಚರಿಕೆ ಅವಶ್ಯಕ. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು. ಬಂಧುಗಳ ಟೀಕೆಗೆ ನೀವು ಸೊಪ್ಪುಹಾಕಲಾರಿರಿ. ಕಾರ್ಯದಲ್ಲಿ ಇನ್ನೊಬ್ಬರ ಸಹಾಯವನ್ನು ಬಯಸುವಿರಿ.