Horoscope: ದಿನ ಭವಿಷ್ಯ; ನಿಮ್ಮ ಪ್ರತಿಯೊಂದು ವಿಚಾರವನ್ನು ಟೀಕಿಸಿಯಾರು
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 19 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್ 19) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ. ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪೂರ್ವಾ ಫಲ್ಗುಣೀ, ಯೋಗ: ವೃದ್ಧಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:59 ರಿಂದ 12:32ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:13 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:51 ರಿಂದ 09:25ರ ವರೆಗೆ.
ಸಿಂಹ ರಾಶಿ : ನಿಮ್ಮ ಇಷ್ಟದ ಕಾರ್ಯವನ್ನು ಮಾಡಿ ಸಂತೋಷಗೊಳ್ಳುವಿರಿ. ನಿಮ್ಮ ಶ್ರಮಕ್ಕೆ ಕೂಡಲೇ ಫಲ ಸಿಗುತ್ತದೆ ಎನ್ನುವ ಧಾವಂತ ಬೇಡ. ತಾಳ್ಮೆಯ ಅವಶ್ಯಕತೆ ಇದೆ. ದಾಂಪತ್ಯದಲ್ಲಿ ಮಕ್ಕಳು ನಿಮ್ಮ ಸಂತೋಷವನ್ನು ಹೆಚ್ಚಿಸಬಹುದು. ನಿಮ್ಮ ಜವಾಬ್ದಾರಿಯನ್ನು ಮತ್ತೆ ಪಡೆಯುವಿರಿ. ಇಂದು ಅನಾಯಾಸವಾಗಿ ಆದಾಯ ದೊರೆಯುತ್ತದೆ. ಮಕ್ಕಳು ವಿದ್ಯಾಭ್ಯಾಸದಲ್ಲಿ ಉನ್ನತ ಮಟ್ಟ ತಲುಪುವುದು ನಿಮಗೆ ಖುಷಿ ಕೊಡುವುದು. ಸಂಗಾತಿಯ ಸಹಕಾರದಿಂದ ನೀವು ಗೆಲುವಾಗಿ ಇರುವಿರಿ. ಗೌರವವಿಲ್ಲದೆ ಕಡೆ ಹೋಗಲು ನೀವು ಬಯಸುವುದಿಲ್ಲ. ಇನ್ನೊಬ್ಬರಿಗೆ ಸಹಾಯ ಮಾಡಲು ಕೂಡಿಟ್ಟ ಹಣವನ್ನು ತೆಗೆಯಬೇಕಾದೀತು. ಕಳೆದ ಸಮಯವನ್ನು ಮೆಲುಕು ಹಾಕುವಿರಿ. ಯಾರ ಜೊತೆಯೂ ಅಸಂಬದ್ಧ ಚರ್ಚೆಗೆ ಹೋಗುವುದು ಬೇಡ. ನೀವು ಕುಟುಂಬದಲ್ಲಿ ಸಾಮರಸ್ಯವನ್ನು ಕಾಪಾಡಿಕೊಳ್ಳಲು ಬಯಸುವಿರಿ. ಇನ್ನೊಬ್ಬರ ಬಗ್ಗೆ ಏನೇನೋ ಕಲ್ಪನೆಗಳು ಇರಬಹುದು.
ಕನ್ಯಾ ರಾಶಿ : ನಿಮಗೆ ಏನಾದರೂ ಹೊಸತನ್ನು ಮಾಡಬೇಕು ಎಂದು ಅನ್ನಿಸುವುದು. ಆದರೆ ಯಾವುದು? ಹೇಗೆ ಎನ್ನುವ ಬಗ್ಗೆ ಚಿತ್ರಣವಿಲ್ಲ. ನೀವು ಕುಟುಂಬದ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಿ ಗೊತ್ತಾಗುವುದು. ಬೇಡದ ಕಾರ್ಯಕ್ಕೆ ನಿಮ್ಮನ್ನು ಯಾರಾದರೂ ಪ್ರೋತ್ಸಾಹಿಸಬಹುದು. ಇಂದು ನೀವು ಎಲ್ಲರ ಜೊತೆ ಸ್ನೇಹದಿಂದ ಇರುವಿರಿ. ಕೆಲಸ ಕಾರ್ಯದಿಂದ ಸಮಾಜದಲ್ಲಿ ಗುರುತಿಸುವಿರಿ. ವಿದ್ಯಾರ್ಥಿಗಳ ಬಗ್ಗೆ ಯೋಚಿಸದೆ ಕರ್ತವ್ಯದಲ್ಲಿ ಭ್ರಷ್ಟರಾಗುವಿರಿ. ಸಂತೃಪ್ತಿಯ ಜೀವನವು ನಿಮ್ಮನ್ನು ಹುಡುಕಿಕೊಂಡು ಬರಬಹುದು. ಅಶಿಸ್ತಿನಿಂದ ನಿಮಗೆ ಕೆಟ್ಟ ಹೆಸರು ಬರಬಹುದು. ಸಂಕುಚಿತ ಸ್ವಭಾವವನ್ನು ದೂರ ಮಾಡಿಕೊಳ್ಳುವುದು ಉತ್ತಮ. ವಾಹನ ಸಂಚಾರದಲ್ಲಿ ಅಡಚಣೆ ಆಗಲಿದೆ. ನಿದ್ರೆಯು ಸರಿಯಾಗದೇ ಮನಸ್ಸು ಭಾರವಾಗಬಹುದು. ಇಷ್ಟವಿಲ್ಲದ ವೃತ್ತಿಯನ್ನು ಅವಲಂಬಿಸಿ ಕಷ್ಟಪಡುವಿರಿ. ಯಾರ ಬಳಿ ಏನನ್ನು ಹೇಳಬೇಕು ಎನ್ನುವ ಹಿಡಿತ ಬೇಕಾದೀತು.
ತುಲಾ ರಾಶಿ : ಇಂದು ವಾತಾವರಣದ ವ್ಯತ್ಯಾಸದಿಂದ ನಿಮ್ಮ ಆರೋಗ್ಯವು ಕೆಡುವುದು. ಬೇಗನೆ ಯಶಸ್ಸು ಸಿಗುವುದೆಂದು ದಾರಿ ಬದಲಿಸಬಾರದು. ಪ್ರಯತ್ನಗಳು ಬದಲಾಗಬೇಕು. ನಿಮ್ಮ ಮಕ್ಕಳ ಧೈರ್ಯವನ್ನು ಹೆಚ್ಚು ಮಾಡುವುದು ಅನಿವಾರ್ಯ. ನಿಮ್ಮ ಪ್ರತಿಯೊಂದು ವಿಚಾರವನ್ನು ಟೀಕಿಸಿಯಾರು. ಸ್ವತಂತ್ರವಾಗಿ ಇಂದಿನ ಕಾರ್ಯವನ್ನು ನೀವು ನಿರ್ವಹಿಸುವಿರಿ. ನೂತನ ವಾಹನವನ್ನು ಖರೀದಿಸುವಿರಿ. ಕುಟುಂಬದಲ್ಲಿ ಸಾಮರಸ್ಯವು ಕಾಣಿಸುವುದು. ಮನಸಿಗೆ ಹಿತವಾದ ಕೆಲಸವನ್ನು ಬಹಳ ಶ್ರದ್ಧೆಯಿಂದ ಮಾಡುವಿರಿ. ಉದ್ಯೋಗಕ್ಕಾಗಿ ಪರದಾಡುತ್ತಿರುವವರು ಉತ್ತಮ ಉದ್ಯೋಗವನ್ನು ಪಡೆದುಕೊಳ್ಳುವಿರಿ. ವ್ಯಾಪಾರಸ್ಥರು ಹೊಸತನ್ನು ಮಾಡಲು ಇಚ್ಛಿಸುವಿರಿ. ಈಗಿನ ಪರಿಸ್ಥಿತಿಯಲ್ಲಿ ಬದಲಾವಣೆ ಬೇಕೆನಿಸುವುದು. ನಿಮ್ಮ ಶ್ರಮದ ಬಗ್ಗೆ ಕಹಿಯಾದ ಮಾತುಗಳು ಕೇಳಿಬರಬಹುದು. ಸಾಮಾಜಿಕ ಕಾರ್ಯದಲ್ಲಿ ಅವಮಾನದ ಕಾರಣದಿಂದ ಅದನ್ನು ಮಾಡಲು ಹಿಂದೇಟು ಹಾಕುವಿರಿ. ವೇಗದಲ್ಲಿ ವಾಹನವನ್ನು ಚಲಾಯಿಸುವುದು ಬೇಡ.
ವೃಶ್ಚಿಕ ರಾಶಿ : ನಿಮ್ಮ ವೃತ್ತಿಯಲ್ಲಿ ಸಮಯ ಬದಲಾವಣೆ ಆಗಿ ಕಿರಿಕಿರಿ ಅಗವುದು. ಸೌಂದರ್ಯದ ಸಾಧನಗಳನ್ನು ಸ್ತ್ರೀಯರು ಹೆಚ್ಚು ಖರೀದಿಸುವರು. ಬಹಳದಿನಗಿಂದ ಗಮನ ಕೊಡದೆ ಇರುವ ಕಡೆ ಗಮನ ಹರಿಸಿ. ದುಡುಕಿ ಅಪಯಶಸ್ಸನ್ನು ತಂದುಕೊಳ್ಳಬೇಡಿ. ಉದ್ಯೋಗವನ್ನು ಬದಲಾಯಿಸುವ ಸಾಧ್ಯತೆ ಇದೆ. ಅಗಲವು ದಿನಗಳ ಭೂವಿವಾದಕ್ಕೆ ಅಂತ್ಯ ಸಿಗಲಿದೆ. ಮಕ್ಕಳ ಜೊತೆಯಲ್ಲಿ ಸಂತಸದಿಂದ ಕಾಲಕಳೆಯುವಿರಿ. ಕುಟುಂಬದ ಹಿರಿಯರ ಜೊತೆಯಲ್ಲಿ ವಾಗ್ವಾದ ಇರುತ್ತದೆ. ಆತ್ಮೀಯರಿಗೆ ಆರ್ಥಿಕ ಸಹಾಯ ಮಾಡುವಿರಿ. ಬಹಳ ದಿನಗಳಿಂದ ಸ್ಥಗಿತಗೊಂಡ ಕೆಲಸಗಳೂ ಪೂರ್ಣಗೊಳ್ಳುತ್ತವೆ. ಸಣ್ಣ ವ್ಯಾಪಾರಿಗಳು ವ್ಯವಹಾರ ಹೆಚ್ಚಳದ ಬಗ್ಗೆ ಗಮನಹರಿಸಬೇಕು. ನೌಕರರ ಜೊತೆ ಆಪ್ತ ಸಮಾಲೋಚನೆ ಮಾಡುವಿರಿ. ಬಹಳ ದಿನಗಳಿಂದ ಕಾಣಿಸಿಕೊಳ್ಳದ ನೋವು ಕಾಣಿಸಿಕೊಳ್ಳಬಹುದು. ಚಿಂತಿತ ಕಾರ್ಯವನ್ನು ಪೂರೈಸಲು ನಿಮಗೆ ಬುದ್ಧಿಯು ಸೂಚಿಸದು. ಆಸ್ತಿಯನ್ನು ಪಡೆದುಕೊಳ್ಳಲು ನ್ಯಾಯಾಲಯಕ್ಕೆ ಹೋಗಬೇಕಾದೀತು.




