AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನ ಭವಿಷ್ಯ; ಅಪರಿಚಿತರ ಜೊತೆ ವಿವಾದ ಬೇಡ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 26 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನ ಭವಿಷ್ಯ; ಅಪರಿಚಿತರ ಜೊತೆ ವಿವಾದ ಬೇಡ
ರಾಶಿಭವಿಷ್ಯ
TV9 Web
| Edited By: |

Updated on: Apr 26, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ವರಿಯಾನ್, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 13 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 47 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:56 ರಿಂದ 12:31ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:13 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:48 ರಿಂದ  09:22ರ ವರೆಗೆ.

ಸಿಂಹ ರಾಶಿ : ನಿಮಗೆ ಉದ್ಯೋಗದಲ್ಲಿ ಬಡ್ತಿ ಸಿಗುವ ವಾರ್ತೆಯು ಬರಬಹುದು. ಗೃಹ ನಿರ್ಮಾಣದ ಕಡೆಗೆ ಗಮನವಾಗಬೇಕಾಗುವುದು. ಕಛೇರಿಯ ಕೆಲಸಗಳ ಕಡೆ ವೈಯಕ್ತಿಕ ವಿಚಾರದ ಕಡೆ ಗಮನ ನೀಡಿಲಾಗದು. ತಪ್ಪನ್ನು ಮಾಡಿ ಅನಂತರ ಅದನ್ನು ಸರಿ ಮಾಡಿಕೊಳ್ಳಲು ವಿವಿಧ ಪ್ರಯತ್ನವನ್ನು ಮಾಡುವಿರಿ. ನೀರಿನಿಂದ ಭಯವು ಉಂಟಾಗುವುದು. ಮನೆಯಲ್ಲಿ ಹಬ್ಬದ ವಾತಾವರಣ ಇರಲಿದ್ದು ನೀವೂ ಬಹಳ ದಿನಗಳ ಅನಂತರ ಇಂತಹ ಸಂತೋಷವನ್ನು ಪಡೆಯುವಿರಿ. ಕೆಲವು ವಿಚಾರಗಳಿಗೆ ಮತ್ತೆ ಮತ್ತೆ ಹೇಳಿಕೊಳ್ಳಬೇಕಾದೀತು. ಕಛೇರಿಯ ಕಾರ್ಯವನ್ನು ಮನೆಯಲ್ಲಿ ಇದ್ದು ಮಾಡಬೇಕಾಗಬಹುದು. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ನಿಮಗೆ ಬೇಕಾದ ವ್ಯವಸ್ಥೆಯನ್ನು ನೀವು ಮಾಡಿಕೊಳ್ಳುವಿರಿ.

ಕನ್ಯಾ ರಾಶಿ : ಇಂದು ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವು ವ್ಯಯವಾಗಬಹುದು. ವಿವಾದಗಳಿಂದ ಸಮಯವು ಹಾಳಾಗಬಹುದು.‌ ಆರ್ಥಿಕವಾಗಿ ನಿಮ್ಮ ನಡೆಯು ಅರ್ಥವಾಗದೇ ಇರುವುದು. ಹಿರಿಯರಿಗೆ ಎದುರು ಮಾತನಾಡಿ ಅನಂತರ ಪಶ್ಚಾತ್ತಾಪಪಡುವಿರಿ. ನೆನಪಿನ ಶಕ್ತಿಗೆ ಸೂಕ್ತವಾದ ಪರಿಹಾರವನ್ನು ಮೊದಲು ಮಾಡಿಕೊಳ್ಳಬೇಕಾಗುವುದು. ಯಾರನ್ನಾದರೂ ದೂಷಿಸಿ ಅವರ ವಿರೋಧವನ್ನು ಕಟ್ಟಿಕೊಳ್ಳುವಿರಿ. ಮಾತುಗಾರರು ಎಂದಿನ ವಾಚಾಳಿತನವನ್ನು ಕಡಿಮೆಮಾಡುವರು. ಸಿಟ್ಟಿನ‌ ಸ್ವಭಾವವನ್ನು ಬದಲಿಸಿಕೊಳ್ಳುವುದು ಸೂಕ್ತ. ಮನೆಯ ಕಾರ್ಯದಲ್ಲಿ ಸಮಯವು ಕಳೆದುಹೋಗುವುದು. ನಿಮಗೆ ಗೊತ್ತೇ ಇರದ ಕೆಲಸವನ್ನು ನೀವು ಮಾಡಬೇಕಾದೀತು. ಮಾನಸಿಕ ತೊಳಲಾಟವನ್ನು ಪ್ರಯತ್ನಪೂರ್ವಕವಾಗಿ ಕಡಿಮೆ ಮಾಡಿಕೊಳ್ಳಿ.

ತುಲಾ ರಾಶಿ : ಮಾನಸಿಕ ಒತ್ತಡವನ್ನು ಮಾಡಿಕೊಳ್ಳುವ ಸನ್ನಿವೇಶವು ಬರುವುದು. ವಾಸಸ್ಥಳದ ಬದಲಾವಣೆಯಿಂದ‌ ನೆಮ್ಮದಿ ಇರುವುದು. ಪ್ರಭಾವಿ ಜನರ ಭೇಟಿಯಿಂದ ಹೊಸ ದಿಕ್ಕು ಲಭಿಸುವುದು. ಭೂಮಿಯ ಲಾಭಕ್ಕಾಗಿ ಓಡಾಟ ಮಾಡಬೇಕಾಗುವುದು. ಉನ್ನತ ಅಧಿಕಾರಿಗಳ ಜೊತೆ ಹೆಚ್ಚು ವ್ಯವಹಾರವನ್ನು ಮಾಡಬೇಕಾಗಿರುವ ಕಾರಣ ಅವರ ಜೊತೆ ಓಡಾಡುವಿರಿ. ಹಣಕಾಸಿನ ವೆಚ್ಚಗಳ ಬಗ್ಗೆ ವಿಶೇಷವಾಗಿ ಕಾಳಜಿ ಬೇಕು. ಸ್ನೇಹತರ ಜೊತೆ ಮೋಜಿನಲ್ಲಿ ದಿನವನ್ನು ಮುಗಿಸುವಿರಿ. ಎಲ್ಲವನ್ನೂ ಒಮ್ಮೆಲೇ ಪಡೆಯಬೇಕು ಎಂಬ ಮನೋಭಾವವು ಸದ್ಯಕ್ಕೆ ಬೇಡ. ಅಪರಿಚಿತರ ಜೊತೆ ವಿವಾದ ಬೇಡ. ಸಂಪ್ರದಾಯದ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಬಹುದು. ನಿಮ್ಮ ಉಪಕಾರಕ್ಕೆ ಪ್ರತ್ಯುಪಕಾರವು ಸಿಗದೇ ಇರಬಹುದು. ಮನೆಗೆ ಅತಿಥಿಗಳ ಆಗಮನವಾಗಲಿದ್ದು ನಿಮ್ಮ ಇಂದಿನ ಕಾರ್ಯವು ಬದಲಾಗಬಹುದು.

ವೃಶ್ಚಿಕ ರಾಶಿ : ನಿಮ್ಮ ನ್ಯಾಯಾಲಯದ ಕೆಲಸಗಳು ವಿಳಂಬವಾಗುತ್ತಿರುವುದು ನಿಮಗೆ ಇಷ್ಟವಾಗದು.‌ ಅನೇಕ‌ ಅನುಮಾನಗಳಿಗೆ ಕಾರಣವಾಗಬಹುದು. ಸ್ತ್ರೀಯರು ಮಂಗಳ‌ಕಾರ್ಯಗಳಲ್ಲಿ ತೊಡಗುವರು. ಮನಃಶಾಂತಿಯು ಇರುವ ಕಾರಣ ಯಾವುದೇ ಉದ್ವೇಗಕ್ಕೆ ಒಳಗಾಗುವುದಿಲ್ಲ. ಮಾತಿನ ಘರ್ಷಣೆಯಿಂದ ಕುಟುಂಬದ ಸೌಖ್ಯವು ಹಾಳಾಗಬಹುದು. ಏಕಾಗ್ರತೆಯಿಂದ ಕೆಲಸ ಮಾಡಿದರೆ ಅನಾಯಾಸವಾಗಿ ಗುರಿಯನ್ನು ತಲುಪಬಹುದು. ಮಕ್ಕಳ ಜೊತೆ ಚಿಂತೆಯನ್ನೆಲ್ಲ ಬಿಟ್ಟು ಸಂತೋಷದಿಂದ ಕಾಲವನ್ನು ಕಳೆಯುವಿರಿ. ಔದಾಸೀನ್ಯದಿಂದ ವ್ಯಾಪಾರದಲ್ಲಿ ನಷ್ಟವಾಗಲಿದೆ. ಮಿತ್ರರಿಂದ ಸಿಗಬೇಕಾದ ಹಣಕ್ಕೆ ಕತ್ತರಿ ಬೀಳುವ ಸಾಧ್ಯತೆ ಇದೆ. ನಿರೀಕ್ಷಿತ ಫಲವು ಲಭಿಸದು. ದೇವರ ಬಗ್ಗೆ ಶ್ರದ್ಧೆಯು ಕಡಿಮೆಯಾಗಲಿದೆ. ಆಸ್ತಿಯ ಖರೀದಿಯ ವಿಚಾರದಲ್ಲಿ ನೀವು ಸರಿಯಾದ ಮಾಹಿತಿಯನ್ನು ಪಡೆಯುವುದು ಸೂಕ್ತ. ಸಹೋದ್ಯೋಗಿಗಳ ಮೇಲೆ ನಿಮಗೆ ಅಸೂಯೆ ಉಂಟಾಗಬಹುದು.

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ