Horoscope: ಈ ರಾಶಿಯವರು ದಾಂಪತ್ಯದ ಮೇಲೆ‌ ದುಷ್ಟರ ದೃಷ್ಟಿಯು ಬೀಳಬಹುದು-ಎಚ್ಚರ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಇಂದಿನ (ಮಾರ್ಚ್​​​​​ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರು ದಾಂಪತ್ಯದ ಮೇಲೆ‌ ದುಷ್ಟರ ದೃಷ್ಟಿಯು ಬೀಳಬಹುದು-ಎಚ್ಚರ
ರಾಶಿ ಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 03, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಹರ್ಷಣ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 49 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಸಾಯಂಕಾಲ 05:11 ರಿಂದ 06:40ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:45 ರಿಂದ 02:13ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:42 ರಿಂದ 05:11ರ ವರೆಗೆ.

ಧನು ರಾಶಿ : ನಿಮ್ಮ ಆಸೆಯನ್ನು ಪೂರೈಸಿಕೊಳ್ಳಲು ಪ್ರಯತ್ನಿಸುವಿರಿ. ಉದ್ಯಮಿಗಳು ತಮ್ಮ ಕೆಲಸವನ್ನು ಪೂರ್ಣಗೊಳಿಸಿದ ಅನಂತರ ಧನಾತ್ಮಕ ಶಕ್ತಿಯು ಹೆಚ್ವಾಗುವುದು. ಇದನ್ನು ಕಾಪಾಡಿಕೊಳ್ಳಿ. ಕಾಪಾಡಿಕೊಳ್ಳುತ್ತಾರೆ. ಯುವಕರ ಉದ್ದೇಶಗಳು ಯಶಸ್ವಿಯಾಗುತ್ತವೆ ಆದರೆ ಅವರು ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಹಸ್ತಕ್ಷೇಪ ಮಾಡುವವರ ಬಗ್ಗೆ ನಿಮಗೆ ಅಸಮಾಧಾನ ಇರಲಿದೆ. ಶೀಘ್ರಕೋಪಿಗಳಂತೆ ತೋರುವಿರಿ. ಪರಿಸ್ಥಿತಿಯನ್ನು ಎದುರಿಸುವ ಚಾಣಾಕ್ಷತನವನ್ನು ನೀವು ಸಂಪಾದಿಸಿರುವಿರಿ. ಮಕ್ಕಳನ್ನು ಚತುರೋಪಾಯದಿಂದ ಹಿಡಿತಕ್ಕೆ ತರಬೇಕಾಗುವುದು. ದಾಂಪತ್ಯದ ಮೇಲೆ‌ ದುಷ್ಟರ ದೃಷ್ಟಿಯು ಬೀಳಬಹುದು. ನಿಮ್ಮ ನಡೆ-ನುಡಿಗಳು ಆದಷ್ಟು ಸರಳವಾಗಿ ಇರಲಿ. ಮಿತಿಮೀರಿದ ಆಹಾರಸೇವನೆಯಿಂದ ನಿಮಗೆ ಕಷ್ಟವಾದೀತು. ಮಕ್ಕಳ ಬಗೆಗೆ ನಂಬಿಕೆ ಕಡಿಮೆಯಾಗಬಹುದು. ಇಷ್ಟಮಿತ್ರರನ್ನು ಮನೆಗೆ ಆಹ್ವಾನಿಸುವಿರಿ. ಯಾರದೋ ಮಾತಿನಿಂದ ನಿಮಗೆ ಸಂಕಟವಾಗುವುದು. ಆಪ್ತರನ್ನು ಸತ್ಕಾರಕ್ಕಾಗಿ ಮನೆಗೆ ಆಹ್ವಾನಿಸುವಿರಿ.

ಮಕರ ರಾಶಿ : ಇಂದು ಬಟ್ಟೆ ವ್ಯಾಪಾರಿಗಳಿಗೆ ನಿರಾಸೆ ಉಂಟಾಗಬಹುದು. ನಿಮ್ಮ ನಿರೀಕ್ಷೆಗೆ ತಕ್ಕಂತೆ ಮಾರಾಟ ಆಗದಿರಬಹುದು. ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯವನ್ನು ಅನಗತ್ಯ ವಿಷಯಗಳಲ್ಲಿ ಕಳೆಯಬಾರದು ಮತ್ತು ತಮ್ಮ ಗುರಿಗಳನ್ನು ಸಾಧಿಸಲು ವಿನಿಯೋಗಿಸಬೇಕು. ನಿಮ್ಮ ಸಂವಹನ ಕೌಶಲದಿಂದ ಜನರನ್ನು ಆಕರ್ಷಿಸುವಿರಿ. ಹೊಸ ಉದ್ಯೋಗಕ್ಕೆ ಸೇರಿಕೊಳ್ಳುವುದು ನಿಮಗೆ ಕಷ್ಟವಾಗದು. ನಿಜವನ್ನು ನೀವು ಮರೆಮಾಚಲು ಹೋದರೂ ಅದು ಆದು ಹೇಗೋ ಗೊತ್ತಾಗುವುದು. ಸರಳವಾದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಒದ್ದಾಡುವಿರಿ. ಒಟ್ಟಿಗೇ ಬರುವ ಕೆಲಸದಿಂದ ನೀವು ಉದ್ವೇಗಕ್ಕೆ ಬೀಳುವಿರಿ. ಸಾಲದಿಂದ ಬಿಡುಗಡೆ ಸಿಕ್ಕಿ ಮನಸ್ಸು ನಿರಾಳವಾಗಲಿದೆ. ಹಿರಿಯರ ಶುಶ್ರೂಷೆಗೆ ಅವಕಾಶ ಸಿಗುವುದು. ಸಂಪೂರ್ಣ ಮಾಹಿತಿಯನ್ನು ಪಡೆದು ಮುಂದಡಿ ಇಡುವುದು ಸೂಕ್ತ. ಹೊಸ ಉದ್ಯೋಗವನ್ನು ಆರಂಭಿಸುವತ್ತ ನಿಮ್ಮ ಆಲೋಚನೆಯು ಗಾಢವಾಗಿ ಇರುವುದು.

ಕುಂಭ ರಾಶಿ : ಇಂದು ಉದ್ಯಮಿಗಳು ಪ್ರಮುಖ ಕಾರ್ಯಗಳ ಬಗ್ಗೆ ಆತುರಪಡಬಾರದು. ಆದರೆ ವ್ಯಾಪಾರಸ್ಥರು ವ್ಯವಹಾರದ ಬಗ್ಗೆ ಚಿಂತಿಸುತ್ತಲೇ ಇರುತ್ತಾರೆ. ಸ್ವಾಭಿಮಾನದ ವಿಚಾರದಲ್ಲಿ ರಾಜಿ ಮಾಡಿಕೊಳ್ಳಬೇಡಿ. ಸ್ವಾಭಿಮಾನ ದೊಡ್ಡ ವಿಷಯ ಅದರೊಂದಿಗೆ ರಾಜಿ ಮಾಡಿಕೊಳ್ಳುವುದು ಒಳ್ಳೆಯದಲ್ಲ. ಏನನ್ನಾದರೂ ಮಾತನಾಡಿ ಕುಟುಂಬದಲ್ಲಿ ಗೌರವವನ್ನು ಕಳೆದುಕೊಳ್ಳುವಿರಿ. ಕೆಲವು ಸಂದರ್ಭಗಳಲ್ಲಿ ಸರಿ ಕಾಣದಿದ್ದರೂ ಅದನ್ನು ಒಪ್ಪಿಕೊಂಡಂತೆ ನಡೆಯುವುದು ಸೂಕ್ತ. ಹಿರಿಯರ ಮಾತನ್ನು ಅಗೌರವದಿಂದ ಕಾಣುವುದು ಬೇಡ. ವಿದ್ಯಾರ್ಥಿಗಳು ಸತತ ಶ್ರಮದಿಂದ ಇಂದು ಹಂತವನ್ನು ತಲುಪುವರು. ಸಂಸಾರದ ಏರಿಳಿತಗಳನ್ನು ಸಮಾಜದ ಮುಂದೆ ತೆರದಿಡುವುದು ಸರಿ ಕಾಣದು. ನಿಮ್ಮ ನೋವನ್ನು ಯಾರ ಬಳಿಯಾದರೂ ಹೇಳಿಕೊಳ್ಳಿ. ಶತ್ರುಗಳ ಚಲನವಲನಗಳ‌ ಮೇಲೆ‌ ಕಣ್ಣಿಡುವಿರಿ. ಅಕಾಸ್ಮಾತ್ತಾಗಿ ಸಿಕ್ಕ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವ ಕಡೆಗೆ ಗಮನವಿರಲಿ.‌

ಮೀನ ರಾಶಿ : ನಿಮ್ಮ ನಾಯಕತ್ವದ ಬಗ್ಗೆ ನಿಮಗೆ ಅಪಾರ ಗೌರವ ಇರಲಿದೆ. ಅನವಶ್ಯಕವಾಗಿ ಚಿಂತೆ ಮಾಡುವುದನ್ನು ತಪ್ಪಿಸಬೇಕು. ಈ ಸಮಯದಲ್ಲಿ ಲಾಭದ ಬದಲು ನಷ್ಟವಾಗುವ ಸಂಭವವಿರುವುದರಿಂದ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಹೂಡಿಕೆ ಮಾಡುವುದನ್ನು ತಪ್ಪಿಸಿ. ಯಾವುದೇ ವೆಚ್ಚದಲ್ಲಿ ಸಮಯವನ್ನು ವ್ಯರ್ಥ ಮಾಡಲು ಬಿಡಬೇಡಿ. ನಿಮ್ಮ ದಕ್ಷತೆಯು ಇತರರನ್ನೂ ಮೆಚ್ಚಿಸುತ್ತದೆ. ನಿತ್ಯದ ಕೆಲಸದ ಹೊರತಾಗಿ ಏನನ್ನಾದರೂ ಮಾಡಲು ನೀವು ಪ್ರಯತ್ನಿಸಿ, ಜಯಗಳಿಸುವುದು ಸುಲಭವಾಗಲಿಕ್ಕಿಲ್ಲ. ವ್ಯಾಪಾರಸ್ಥರಿಗೆ ನಿರಾಸೆಯ ದಿನವಿದು. ಕುಟುಂಬ ವ್ಯವಸ್ಥೆಯನ್ನು ಸರಿದೂಗಿಸುವುದು ಹೊರೆಯಾಗಬಹುದು. ಇಂದು ನಿಮ್ಮ ಸಮಯವನ್ನು ಸ್ನೇಹಿತರ ಕಾರ್ಯಕ್ಕೆ ಕೊಡಬೇಕಾಗಿಬರಬಹುದು. ಅದ್ದರಿಂದ ನಿಮ್ಮ ಕೆಲಸವು ವಿಳಂಬವಾಗಬಹುದು. ಆಸೆಗಳನ್ನು ನೀವು ನಿಯಂತ್ರಣಕ್ಕೆ ತರಲು ಪ್ರಯತ್ನಿಸುವಿರಿ. ಸಂಗಾತಿಯ ನಡವಳಿಕೆಯನ್ನು ಊಹಿಸಲಾಗದು. ಯಾರಿಂದಲೂ ಗೌರವ ಸಿಗಲಿಲ್ಲ ಎಂಬ ನೋವು ಕಾಣಿಸಿಕೊಳ್ಳುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್