
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ವರೀಯಾನ್, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 46 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:13 ರಿಂದ 03:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:47 ರಿಂದ 08:16ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:45 ರಿಂದ 11:14ರ ವರೆಗೆ.
ಸಿಂಹ ರಾಶಿ : ಇಂದು ಯಾವ ಕಡೆಯಿಂದಲಾದರೂ ಅನಗತ್ಯ ವಿವಾದಕ್ಕೆ ಆಸ್ಪದ ಕೊಡಬೇಡಿ. ಸಣ್ಣ ವಿಚಾರಕ್ಕೆ ಮಾನಸಿಕವಾಗಿ ನೀವು ದುರ್ಬಲರಾಗುವಿರಿ. ಅಮೂಲ್ಯ ವಸ್ತುಗಳನ್ನು ಸುರಕ್ಷಿತವಾಗಿ ಇರಿಸಿಕೊಳ್ಳಿ. ಸಾಹಸದ ಕಾರ್ಯಕ್ಕೆ ತೊಡಗುವುದು ಬೇಡ. ಆತಂಕವನ್ನು ಬುದ್ಧಿಪೂರ್ವಕವಾಗಿ ತೆಗೆದುಹಾಕಿಕೊಳ್ಳಬೇಕಾಗುವುದು. ಆದಾಯದಲ್ಲಿ ಇಳಿಕೆಯನ್ನು ನೀವು ಸಹಿಸಲಾರಿರಿ. ಜನರಿಂದ ಮೆಚ್ಚುಗೆಯನ್ನು ನಿರೀಕ್ಷಿಸದಿದ್ದರೂ ಅದು ಬರುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಇಂದು ಕ್ರಮವನ್ನು ಹಾಕುವಿರಿ. ನಿಮ್ಮನ್ನು ಮೆಚ್ಚಿಸಿ ಕೆಲಸಗಳನ್ನು ಇಂದು ಮಾಡಿಸಿಕೊಳ್ಳುವರು. ಗುರಿಯನ್ನು ಯಾರಾದರೂ ತಪದಪಿಸಬಹಿದಿ. ಇಷ್ಟ ಪಟ್ಟವರನ್ನು ಮದುವೆಯಾಗುವ ಮಕ್ಕಳ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವಿರಿ. ಖರೀದಿಯನ್ನು ನೀವು ಬಹಳ ಉತ್ಸಾಹದಿಂದ ಮಾಡುವಿರಿ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ. ನಿಮ್ಮದಾದ ಜೀವನಕ್ರಮವು ನಿಮಗೆ ಹಿಡಿಸದೇ ಇರಬಹುದು. ನಿಮ್ಮ ಹಿಂದಿನ ಆಸೆಗಳನ್ನು ಇಂದು ಪೂರೈಸಿಕೊಳ್ಳುವಿರಿ.
ಕನ್ಯಾ ರಾಶಿ : ಇಂದು ನೀವು ಪುಣ್ಯ ಸ್ಥಳಕ್ಕೆ ಪ್ರವಾಸವನ್ನು ಮಾಡುವಿರಿ. ಸತ್ಸಂಗದಿಂದ ನಿಮ್ಮ ಚಂಚಲವಾದ ಮನಸ್ಸಿಗೆ ನೆಲೆ ಸಿಗುವುದು. ಬಹಳ ದಿನಗಳ ಅನಂತರ ನಿಮ್ಮ ಕೆಲಸಕ್ಕೆ ಮನೆಯವರೆಲ್ಲರ ಬೆಂಬಲವಿರುವುದು. ಕೆಲವು ವಿಚಾರಕ್ಕೆ ಅನುಭವಿಗಳ ಮಾರ್ಗದರ್ಶನದ ಅಗತ್ಯವಿರುವುದು. ಇರುವಷ್ಟು ಹಣದಲ್ಲಿಯೇ ನೀವು ಉಳ್ಳವರಂತೆ ತೋರಿಸುವಿರಿ. ಹೂಡಿಕೆಯಿಂದ ಅಧಿಕ ಲಾಭವನ್ನು ನೀವು ನಿರೀಕ್ಷಿಸಬಹುದು. ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯ ಮೇಲೆ ತೋರಿಸುವುದು ಸರಿಯಾಗದು. ನೂತನ ಗೃಹ ನಿರ್ಮಾಣದ ಬಗ್ಗೆ ನುರಿತವರ ಜೊತೆ ಚರ್ಚೆಯನ್ನು ನಡೆಸುವು ಯೋಚನೆ ಇರುವುದು. ವಾಹನ ಓಡಾಡವು ಸುಖಕರವಲ್ಲ. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಒಡ ಹುಟ್ಟಿದವರ ಬಗ್ಗೆ ಅಸೂಯೆ ತೋರಿಸುವಿರಿ. ಇಂದು ನಿಮ್ಮ ಮನೋಬಲವು ದುರ್ಬಲವಾಗಬಹುದು. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಇಲ್ಲದೇ ಹೋದೀತು. ಇಂದು ವಾಸದ ಮನೆಯನ್ನು ಬದಲಿಸುವಿರಿ.
ತುಲಾ ರಾಶಿ : ಇಂದು ನಿಮ್ಮ ಕೆಲಸದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವಿರಿ. ಎಂದೋ ಹಾಕಿಕೊಂಡ ಯೋಜನೆಯು ಇಂದು ಕಾರ್ಯರೂಪಕ್ಕೆ ಬರಲಿದೆ. ವ್ಯಾಪಾರದಲ್ಲಿ ನಿಮ್ಮದೇ ಆದ ಕ್ರಮವನ್ನು ಅನುಸರಿಸುವಿರಿ. ಸಂಗಾತಿಯನ್ನು ನಿಮ್ಮ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ನೋಡುವಿರಿ. ಆರೋಗ್ಯವು ಉತ್ತಮವಾಗಿ ಇರುವುದು. ಒಳ್ಳೆಯ ಸಮಯ ನಿಮ್ಮದಾಗಲಿದೆ. ವ್ಯಾಪಾರದಲ್ಲಿ ತೊಡಕು ಬರಬಹುದು. ಆದರೆ ಇದನ್ನು ನಿವಾರಿಸಿಕೊಳ್ಳುವ ತಂತ್ರವು ನಿಮಗೆ ಅನುಭವದಿಂದ ಸಿದ್ಧವಾಗಿರುವುದು. ನಿಮ್ಮ ನಿಷ್ಠೆಯನ್ನು ಬದಲಾಯಿಸುವುದು ಬೇಡ. ನಿಮ್ಮ ಇಂದಿನ ಸ್ಥಿತಿಯು ಅಭಿವೃದ್ದಿಗೆ ಹಲವಾರು ದಾರಿಗಳನ್ನು ಹುಡುಕುವಿರಿ. ತಪ್ಪಿದ ಯೋಚನೆಯಿಂದ ನೀವು ಸರಿಯಾಗಬೆರಕಾಗುವುದು. ನಿಮಗಿರುವ ಚಂಚಲ ಮನಸ್ಸಿನಿಂದ ನಕಾರಾತ್ಮಕ ಯೋಚನೇಗಳೇ ಕಾಣಿಸಬಹುದು. ಸಂಗಾತಿಯ ಆಯ್ಕೆಯನ್ನು ನಾನಾ ಕಾರಣದಿಂದ ಮುಂದೂಡುವುದು ಸರಿಯಾಗದು.
ವೃಶ್ಚಿಕ ರಾಶಿ : ಇಂದು ಸಾಲ ಕೊಟ್ಟವರನ್ನು ಅನಿರೀಕ್ಷಿತವಾಗಿ ಭೇಟಿಯಾಗುವಿರಿ. ಹಣದ ಬದಲಿಗೆ ಬೇರೇನಾದರೂ ಕೇಳುವಿರಿ. ಮಿತ್ರರ ಸಹಕಾರದಿಂದ ಓಡಾಟದ ಕಾರ್ಯಗಳು ಪೂರ್ಣಗೊಳ್ಳುವುದು. ಹೊಸತನ್ನು ಆರಂಭಿಸಲು ಯೋಜನೆ ರೂಪಿಸುವಿರಿ. ನಿಮ್ಮ ಕೆಲಸದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಪಡೆಯುವಿರಿ. ಸಮಯವು ಅನುಕೂಲಕರವಾಗಿದೆ. ಸೋಮಾರಿತನ ಬಿಟ್ಟು ಕೆಲಸಕ್ಕೆ ಪ್ರಯತ್ನಿಸಿ. ನಿಮ್ಮವರ ಆರೋಗ್ಯದ ವ್ಯತ್ಯಾಸದಿಂದ ಹಣವನ್ನು ಖರ್ಚುಮಾಡಬೇಕಾಗುವುದು. ತೊಂದರೆಗೆ ಸಿಕ್ಕಿಕೊಳ್ಳಲು ನಿಮ್ಮ ಮೊಂಡುತನವೇ ಕಾರಣ. ಇದೇ ನಿಮಗೆ ಮುಳುವಾಗಬಹುದು. ಇನ್ನೊಬ್ಬರಿಗೆ ನಿಮ್ಮನ್ನು ಹೋಲಿಸಿಕೊಂಡು ಬೇಸರಿಸುವಿರಿ. ಕುಟುಂಬದ ಬಗ್ಗೆ ನಿಮಗೆ ಅಭಿಮಾನದ ಕೊರತೆ ಕಾಣುವುದು. ಸಾಲಗಾರರಿಂದ ಹಿಂಸೆ ಹೆಚ್ಚಾಗುವುದು. ನಿಮಗೆ ಸಿಕ್ಕ ಪ್ರಶಂಸೆಯಿಂದ ಸಹೋದ್ಯೋಗಿಗಳು ತೊಂದರೆಯನ್ನು ಕೊಡಬಹುದು. ಮಿತ್ರರು ನಿಮಗೆ ಬೇಕಾದ ಸಹಾಯ ಮಾಡಲು ಸ್ವಲ್ಪ ಆಲೋಚಿಸುವರು.
Published On - 12:37 am, Thu, 7 March 24