Horoscope: ನಿತ್ಯಭವಿಷ್ಯ; ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಿ, ಅಪರಿಚಿತ ವ್ಯಕ್ತಿಗಳ ಭೇಟಿ
ಒಂದಷ್ಟು ಮಂದಿ ಪ್ರತಿನಿತ್ಯ ತಮ್ಮ ಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 30 ಮಾರ್ಚ್ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಮಾರ್ಚ್ 30) ರಾಶಿ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಶನಿ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಅನೂರಾಧಾ, ಯೋಗ : ಸಿದ್ಧಿ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:34 ರಿಂದ 11:05ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:09 ರಿಂದ 03:40ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:31 ರಿಂದ 08:02.
ಮೇಷ ರಾಶಿ: ಇಂದು ನಿಮ್ಮ ಅಹಂಕಾರದಿಂದ ಕೋಪವು ಹೆಚ್ಚಾಗುವುದು. ಕೆಲವು ಜನರು ನಿಮ್ಮ ಮುಂದೆ ಅಸಹಜವಾಗಿ ವರ್ತಿಸಿದ್ದು ನಿಮಗೆ ಅಚ್ಚರಿಯಾಗಬಹುದು. ಆದಾಯವು ಉತ್ತಮವಾಗಿದ್ದು ಅದನ್ನು ಯಾರ ಬಳಿಯಾದರೂ ಗೊತ್ತಾಗದೇ ಹೇಳಿಕೊಳ್ಳುವಿರಿ. ಕಾನೂನು ವಿಷಯಗಳಲ್ಲಿ ನೀವು ಯಶಸ್ಸನ್ನು ಪಡೆಯುವ ನಂಬಿಕೆ ಹೆಚ್ಚಾಗುವುದು. ಇಂದು ನಿಮ್ಮ ಕಾರ್ಯದಲ್ಲಿ ಆತುರಗೊಂಡರೆ, ಅಸ್ತವ್ಯಸ್ತವೇ ಆಗಬಹುದು. ನಿಮ್ಮ ಆದಾಯ ಮತ್ತು ಖರ್ಚಿಗೆ ನೀವು ಯೋಜನೆ ಸಿದ್ಧಪಡಿಸಿದರೆ ಅದು ನಿಮಗೆ ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಪ್ರಯತ್ನಗಳಲ್ಲಿ ನೀವು ತೊಡಗಿರುವಿರಿ. ಇದರಲ್ಲಿ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಕಾರ್ಯಗಳನ್ನು ಹಂಚಿ ನೀವು ನಿಶ್ಚಿಂತರಾಗುವಿರಿ. ಯಾರದೋ ಕೆಲಸವನ್ನು ಮಾಡಿಕೊಡಬೇಕಾಗುವುದು. ಯಾರದೋ ಕೋಪಕ್ಕೆ ಇನ್ಯಾರನ್ನೋ ದೂರುವಿರಿ. ಅಚಾತುರ್ಯದಿಂದ ತಪ್ಪನ್ನು ಮಾಡಿ, ಪಶ್ಚಾತ್ತಾಪ ಪಡುವಿರಿ. ಆದಾಯಕ್ಕಿಂತ ಖರ್ಚು ಹೆಚ್ಚಾಗಿ ಆತಂಕ ಪಡುವಿರಿ.
ವೃಷಭ ರಾಶಿ: ಗೊತ್ತಿಲ್ಲದ ವಿಚಾರಕ್ಕೆ ಮೌನವಾಗಿರುವುದು ಒಳ್ಳೆಯದು. ಅಪರಿಚಿತ ವ್ಯಕ್ತಿಗಳ ಭೇಟಿಯಿಂದ ಹೊಸ ಉತ್ಸಾಹ ಇರುವುದು. ಪ್ರತಿಕೂಲ ಸಂದರ್ಭದಲ್ಲೂ ಉದ್ವಿಗ್ನಗೊಳ್ಳದಿರುವುದು. ಅಭ್ಯಾಸಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಅವಕಾಶಗಳು ಸೃಷ್ಟಿಯಾಗುವುದು. ಈ ಸಮಯದಲ್ಲಿ, ನಿಮ್ಮ ಗುರಿಯಿಂದ ವಿಮುಖರಾಗಬೇಡಿ. ನೀವು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯವನ್ನು ಸ್ವೀಕರಿಸುತ್ತೀರಿ. ವ್ಯಾಪಾರ ಯೋಜನೆಯನ್ನು ಪೂರ್ಣಗೊಳಿಸಲು ನೀವು ಹೆಚ್ಚು ಗಮನ ಹರಿಸಬೇಕು. ಆರ್ಥಿಕ ಯೋಜನೆಗಳಿಗೆ ಉತ್ತೇಜನ ದೊರೆಯಲಿದೆ. ನಿಮ್ಮ ಕೆಲವು ಹೊಸ ಪ್ರಯತ್ನಗಳು ಫಲ ನೀಡುತ್ತವೆ. ನಿಮ್ಮ ವೈಯಕ್ತಿಕ ಕಾರ್ಯಗಳು ಹಲವು ಹಾಗಯೇ ಉಳಿದುಕೊಂಡಿರುವುದು. ಸಾಲದ ಬಾಧೆಯು ನಿಮ್ಮ ಮನಸ್ಸನ್ನು ಚುಚ್ಚುವುದು. ನೆಮ್ಮದಿಗೆ ನಿಮ್ಮದೇ ಮಾರ್ಗವನ್ನು ಅನುಸರಿಸಿ. ಇನ್ನೊಬ್ಬರನ್ನು ಸರಿ ಮಾಡಲು ಹೋಗಿ ನೀವೇ ಹಾಳಾಗಬಹುದು.
ಮಿಥುನ ರಾಶಿ: ಇಂದು ಹಣಕಾಸಿನ ವಿಚಾರದಲ್ಲಿ ಬಹಳ ಜಾಗರೂಕತೆ ಇರಲಿದೆ. ಭೂಮಿಯ ಖರೀದಿಯನ್ನು ಬಹಳ ಗೌಪ್ಯವಾಗಿ ಮಾಡಿಕೊಳ್ಳುವಿರಿ. ಸಣ್ಣ ಅನಾರೋಗ್ಯವೂ ನಿರ್ಲಕ್ಷ್ಯದಿಂದ ದೊಡ್ಡ ತೊಂದರೆಯಾಗಬಹುದು. ನೀವು ಕೆಲಸದ ನಿಮಿತ್ತ ಪ್ರವಾಸಕ್ಕೆ ಹೋಗಬಹುದು. ಕುಟುಂಬದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಯಾವುದೇ ಹೊರಗಿನವರಿಗೆ ಬಹಿರಂಗಪಡಿಸುವುದು ಬೇಡ. ಯಾರಾದರೂ ಲಾಭ ಪಡೆಯಲು ಪ್ರಯತ್ನಿಸಬಹುದು. ಸ್ಪರ್ಧಾಮನೋಭಾವವಿಲ್ಲದೇ ಎಲ್ಲರ ಜೊತೆ ಖುಷಿಯಿಂದ ಭಾಗವಹಿಸಿ. ಉದ್ಯಮದ ಕಾರಣಕ್ಕೆ ಅಧಿಕ ಸುತ್ತಾಟವು ಇರುವುದು. ಪ್ರೀತಿಯನ್ನು ನೀವು ಒಪ್ಪಿಕೊಳ್ಳದೇ ನಿಮ್ಮದೇ ವಾದ ಮಾಡುವಿರಿ. ಸಂಗಾತಿಯ ಮಾತುಗಳು ನಿಮಗೆ ಕಿರಿಕಿರಿಯನ್ನು ಕೊಡುವುದು. ನಿಮಗೆ ಅಭದ್ರತೆಯು ಕಾಡಬಹುದು.
ಕಟಕ ರಾಶಿ: ನಿಮ್ಮ ಹಲವು ದಿನಗಳ ಹೂಡಿಕೆಯ ಕಾರಣದಿಂದ ಇಂದು ಲಾಭವು ಸಿಗಲಿದೆ. ನಿಮ್ಮ ವೈಯಕ್ತಿಕ ಕೆಲಸವನ್ನು ಪೂರ್ಣಮಾಡಿಕೊಳ್ಳುವಿರಿ. ಮನೆಯವರ ಪ್ರೀತಿಯನ್ನು ಪಡೆದುಕೊಳ್ಳುವಿರಿ. ಸರಿಯಾದ ನಿರ್ಧಾರವು ನಿಮ್ಮನ್ನು ಸರಿಯಾದ ದಾರಿಯಲ್ಲಿ ಇರಿಸುವುದು. ನೀವು ಸಾಮಾಜಿಕ ಹೆಚ್ಚು ಚಟುವಟಿಕೆಯಿಂದ ಇರುವಿರಿ. ಧಾರ್ಮಿಕ ಕಾರ್ಯಗಳಿಗೆ ಶ್ರದ್ಧೆಯು ಕಡಿಮೆ ಆದಂತೆ ತೋರುವುದು. ನೀವು ದೂರದ ಪ್ರಯಾಣವನ್ನು ಮಾಡುವುದಾದರೆ, ಅದು ನಿಮಗೆ ಅನುಕೂಲಕರವೇ. ವ್ಯವಹಾರದಲ್ಲಿ ಕೆಲವು ಹಳೆಯ ಯೋಜನೆಗಳಿಂದ ನೀವು ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಕುಟುಂಬ ಸದಸ್ಯರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ವೈಯಕ್ತಿಕ ಸಮಸ್ಯೆಯನ್ನು ನೀವು ಯಾರ ಬಳಿಯೂ ಹೇಳಿಕೊಳ್ಳುವುದು ಕಷ್ಟವಾದೀತು. ಸುಮ್ಮನೇ ಎಲ್ಲದಕ್ಕೂ ಒಪ್ಪಿಗೆಯನ್ನು ಸೂಚಿಸುವುದು ಬೇಡ. ನಿಮ್ಮ ಅಭಿಪ್ರಾಯವೂ ಮುಖ್ಯವಾಗಬಹುದು.




