Horoscope 14 Dec: ದಿನಭವಿಷ್ಯ, ನಿಮ್ಮ ಹೊಸ ಪ್ರಯತ್ನಕ್ಕೆ ಕುಟುಂಬದ ಬೆಂಬಲವು ಸಿಗುವುದು
ತಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ಹಲವರು ದೀನಂದಿನ ರಾಶಿಭವಿಷ್ಯವನ್ನು ಓದುತ್ತಾರೆ. ಒಂದಷ್ಟು ಮಂದಿ ಯಾವುದೇ ಕಾರ್ಯವನ್ನು ಪ್ರಾರಂಭಿಸಬೇಕಾದರೆ ಇಂದಿನ ದಿನ ಹೇಗಿದೆ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಇದರ ಜೊತೆಗೆ ನಿತ್ಯಪಂಚಾಂಗವನ್ನೂ ನೋಡುತ್ತಾರೆ. ಹಾಗಿದ್ದರೆ, ಇಂದಿನ ಶುಭಾಶುಭಕಾಲ ಹೇಗಿದೆ? 12 ರಾಶಿಗಳ ರಾಶಿಫಲ ಹೇಗಿದೆ ಎಂಬುದು ಇಲ್ಲಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (2023 ಡಿಸೆಂಬರ್ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಗುರುವಾರ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಗಂಡ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 49 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:51 ರಿಂದ 03:16ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:50 ರಿಂದ 08:14ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:39 ರಿಂದ 11: 03ರ ವರೆಗೆ.
ಮೇಷ ರಾಶಿ: ಅಂತರಂಗವು ಇಂದು ಯಾವುದೇ ಉದ್ವೇಗಕ್ಕೆ ಸಿಲುಕದೆ ಶಾಂತವಾಗಿ ಇರುವುದು. ವ್ಯಾಪಾರದ ಕೆಲವು ನಿರ್ಧಾರಗಳಿಗೆ ಅಪರಿಚಿತರಿಂದ ಸಲಹೆಯು ಸಿಗುವುದು. ನಿಮ್ಮ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿ ಅನುಕೂಲತೆಯು ಕೆಲವು ಸಂದರ್ಭಗಳಲ್ಲಿ ಸಿಕ್ಕಿ ಸಂತೋಷವಾಗುವುದು. ಹಳೆಯ ಹಣಕಾಸಿನ ವ್ಯವಹಾರವನ್ನು ನೀವು ತೀರಿಸಿಕೊಳ್ಳುವಿರಿ. ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ತೊಂದರೆ ಆದೀತು. ಮನೆಯನ್ನು ಬದಲಿಸಬೇಕಾಗುವುದು. ಕೆಲವನ್ನು ನೀವು ಮನಃಪೂರ್ವಕವಾಗಿಯೇ ಕಡೆಗಣಿಸುವಿರಿ. ನೀವು ಸ್ಥಾನಕ್ಕಾಗಿ ಯಾರ ಮೇಲೂ ಅಪವಾದ ಹಾಕಬಹುದು. ಬೋಧಕರಿಗೆ ಉತ್ತಮ ಪ್ರಶಂಸೆಯು ಸಿಗುವುದು. ನಿಮ್ಮದಲ್ಲದ ದ್ರವ್ಯವನ್ನು ನೀವು ಇಟ್ಟುಕೊಳ್ಳಲು ಬಯಸುವುದಿಲ್ಲ. ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳಲು ಆಗದು. ನಿಮ್ಮ ತಪ್ಪು ಕೆಲಸವನ್ನು ಆಪ್ತರ ಜೊತೆ ಹೇಳಿ ಅದನ್ನು ಕಳೆದುಕೊಳ್ಳಿ. ಮೃದುವಾದ ಮಾತನ್ನು ಹೆಚ್ಚು ಆಡುವಿರಿ.
ವೃಷಭ ರಾಶಿ: ಭವಿಷ್ಯದ ಬಗ್ಗೆ ಬಹಳ ನಂಬಿಕೆಯನ್ನು ಇಟ್ಟುಕೊಂಡು ಮುಂದುವರಿಯುವಿರಿ. ಯಾರ ಮಾತುಗಳೂ ನಿಮಗೆ ಪಥ್ಯವಾದೀತು. ದ್ವಂದ್ವ ನಿಲುವನ್ನು ನೀವು ಸರಿ ಮಾಡಿಕೊಳ್ಳುವ ಅವಶ್ಯಕತೆ ಇರುವುದು. ಸಮಯವನ್ನು ನೀವು ವ್ಯರ್ಥ ಮಾಡಿಕೊಂಡು ಪಶ್ಚಾತ್ತಾಪಪಡುವಿರಿ. ಸದುಪಯೋಗ ಮಾಡಿಕೊಳ್ಳುವತ್ತ ಗಮನವಿರಲಿ. ತಾಯಿಯ ಕಡೆಯಿಂದ ನಿಮಗೆ ಸಹಾಯವು ಸಿಗಬಹುದು. ಉನ್ನತ ವ್ಯಾಸಂಗದಲ್ಲಿ ಆಸಕ್ತಿಯು ಕಡಿಮೆ ಆಗುವುದು. ಮನೆಯ ಕೆಲಸದಿಂದ ಆಯಾಸವಾಗಬಹುದು. ನಿಮ್ಮದಾದ ಸ್ವಂತಮನೆಯು ಬೇಕೆನ್ನಿಸಬಹುದು. ನಿಮ್ಮ ಆಸೆಗಳನ್ನು ಆಪ್ತರಲ್ಲಿ ಹೇಳಿಕೊಳ್ಳಬಹುದು. ಕಛೇರಿಯ ಕೆಲಸಗಳನ್ನು ಮುಗಿಸಲು ಹೆಚ್ಚು ಸಮಯವನ್ನು ತೆಗದುಕೊಳ್ಳುವಿರಿ. ನಿಮ್ಮ ಹಳೆಯ ವಸ್ತುಗಳನ್ನು ಯಾರಿಗಾದರೂ ನಿಶ್ಶುಲ್ಕವಾಗಿ ಕೊಡುವಿರಿ. ಸಂಗಾತಿಯ ಜೊತೆ ನಡೆದುಕೊಳ್ಳುವ ರೀತಿಯು ಬದಲಾದೀತು.
ಮಿಥುನ ರಾಶಿ: ಆರೋಗ್ಯವು ದಿನದಿಂದ ದಿನಕ್ಕೆ ಕ್ಷೀಣಿಸಿದರೂ ಮನಸ್ಸು ಸ್ಥೈರ್ಯವನ್ನು ಉಳಿಸಿಕೊಳ್ಳುವುದು. ನೀವು ಹಳೆಯ ಸ್ನೇಹವು ಪುನಃ ನವೀಕರಣವಾಗುಉದು. ವ್ಯಾಪಾರದಲ್ಲಿ ನಿಮ್ಮ ಸ್ಥಾನವು ಹೆಚ್ಚಬಹುದು. ನಿಮ್ಮದಾದ ಪರಿಧಿಯನ್ನು ಬಿಟ್ಟು ಹೊರಬರಲಾರಿರಿ. ಶ್ರಮಕ್ಕೆ ಯೋಗ್ಯವಾದ ಫಲವು ಲಭಿಸುವುದು. ಅಪರೂಪದ ವಸ್ತುವು ನಿಮಗೆ ಲಾಭವಾಗಲಿದೆ. ಮಹಿಳೆಯರು ಅಲಂಕಾರಿಕ ವಸ್ತುಗಳಿಗಾಗಿ ಖರ್ಚು ಮಾಡಬೇಕಾಗುವುದು. ಮಿತ್ರರ ನಡುವೆ ವೈಮನಸ್ಯ ಬರಬಹುದು. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಸಫಲರಾಗುವಿರಿ. ಬೇಸರವನ್ನು ಕೆಲಸದಲ್ಲಿ ಗಮನಕೊಡುವ ಮೂಲಕ ಪರಿಹರಿಸಿಕೊಳ್ಳುವಿರಿ. ಸಹಾವಾಸದಿಂದ ನಿಮಗೆ ಅಪವಾದವು ಬರಬಹುದು. ಕುಟುಂಬದ ಜೊತೆ ಬಹಳ ದಿನಗಳ ಅನಂತರ ಸಂಯೋಷದ ಸಮಯವನ್ನು ಕಳೆಯುವಿರಿ. ಸಂಗಾತಿಯನ್ನು ಹೂಡಿಕೆ ಮಾಡುವಂತೆ ಪ್ರೇರಣೆ ಕೊಡುವಿರಿ.
ಕರ್ಕ ರಾಶಿ: ಸ್ವಂತಕ್ಕೆ ಪ್ರಯೋಜನವಿಲ್ಲದ ಯಾವ ಕಾರ್ಯವನ್ನೂ ನೀವು ಮಾಡಲಾರಿರಿ. ಕೋಪಗೊಂಡು ಇಡೀ ದಿನವನ್ನು ಹಾಳುಮಾಡಿಕೊಳ್ಳುವಿರಿ. ನಿಮ್ಮ ಬಗ್ಗೆ ನಿಮಗೇ ಸರಿಯಾದ ಸ್ಥಿರತೆಯನ್ನು ಕಂಡುಕೊಳ್ಳಲಾಗದು. ನಿಮ್ಮ ಭಾವನೆಗಳನ್ನು ಯಾರ ಜೊತೆಯೂ ಪ್ರಕಟಗೊಳಿಸುವುದಿಲ್ಲ. ಅಲ್ಪ ಲಾಭಕ್ಕೆ ನೀವು ತೃಪ್ತಿ ಪಡಬೇಕಾಗುವುದು. ಸ್ತ್ರೀಯರ ವಿಚಾರದಲ್ಲಿ ನೀವು ಜಾಗರೂಕತೆಯಿಂದ ಇರಬೇಕಾಗುವುದು. ನಿಮಗೆ ಬರಬೇಕಾದ ಹಣವು ನಿಮ್ಮ ಕೈಗೆ ಸಿಗದು. ಸಂಗಾತಿಯ ಮೇಲೆ ಬೇಸರದ ಭಾವವೂ ಮೂಡುವ ಸಾಧ್ಯತೆ ಇದೆ. ಬೆಳಗಿನಿಂದಲೇ ಮನಸ್ಸಿಗೆ ಕಿರಿಕಿರಿ ಉಂಟಾದೀತು. ನಿಮ್ಮ ಅಶಿಸ್ತಿನ ವರ್ತನೆಯಿಂದ ಸಹೋದ್ಯೋಗಿಗಳ ನಡುವೆ ಮಾತುಕತೆಗಳು ಆಗಬಹುದು. ನಿಮ್ಮನ್ನು ಯಾರೋ ಗಮನಿಸುತ್ತಿದ್ದಾರೆ ಎಂಬ ಭಯವು ಕಾಡುವುದು. ಇಂದು ನೀವು ಸೌಂದರ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯವನ್ನು ಕೊಡುವಿರಿ. ಅತಿಥಿ ಸತ್ಕಾರವನ್ನು ಮಾಡಲು ಉತ್ಸಾಹವಿರುವುದು.
ಸಿಂಹ ರಾಶಿ: ನಿಮ್ಮ ಆನಾರೋಗ್ಯದ ಸುಧಾರಣಗೆ ಕೇವಲ ವಿಶ್ರಾಂತಿಯೊಂದೇ ಸಾಲದು. ಸ್ವಲ್ಪ ಚಟುವಟಿಕೆಯೂ ಬೇಕಾದೀತು. ಭೂಮಿಯ ಮೇಲೆ ಹಣವನ್ನು ಹೂಡುವಿರಿ. ನಿಮಗೆ ಇಂದು ಶುಭವಾರ್ತೆಯು ಬರುವುದು. ಇಂದು ನಿಮ್ಮವರ ಬಗ್ಗೆಯೇ ಯೋಚಿಸಲು ಸಮಯ ಸಿಗದು. ದಿನದ ಆರಂಭವು ಬಹಳ ಉತ್ಸಾಹದಿಂದ ಇರಲಿದ್ದು ಎಲ್ಲ ಜೊತೆ ಸೌಹಾರ್ದವಾಗಿ ಇರುವಿರಿ. ಕಛೇರಿಯಲ್ಲಿ ಎಂದಿನ ಉತ್ಸಾಹವು ಇರದು. ಆಪ್ತರಿಂದ ನಿಮಗೆ ಉಡುಗೊರೆ ಸಿಗಬಹುದು. ನಿಮಗೆ ಸಿಕ್ಕ ಜವಾಬ್ದಾರಿಯಲ್ಲಿ ಪೂರ್ಣ ತೃಪ್ತಿ ಇರದು. ಯಾರ ಜೊತೆಯಾದರೂ ಬೆರೆಯಬೇಕು ಅನ್ನಿಸುವುದು. ಸಂಗಾತಿಗೆ ಕಿರಿಕಿರಿ ಉಂಟಾಗುವಂತೆ ಮಾಡುವಿರಿ. ಕಡ್ಡಿ ಮುರಿದಂತೆ ಮಾತನ್ನು ಹೇಳುವುದು ಬೇಡ. ಎಲ್ಲ ತಪ್ಪುಗಳಿಗೂ ನಿಮ್ಮನ್ನೇ ಬೆರಳು ಮಾಡಿ ತೋರಿಸಬಹುದು. ಸರಿಯಾದ ಉತ್ತರವನ್ನು ನೀಡಬೇಕಾಗುತ್ತದೆ. ಅಧಿಕಾರಿಗಳ ಪ್ರಶ್ನೆಗೆ ಸಮಂಜಸ ಉತ್ತರವನ್ನು ನೀಡಿ.
ಕನ್ಯಾ ರಾಶಿ: ನಿಮ್ಮ ಆರೋಗ್ಯದ ಮೇಲೆ ಆಗುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಸರಿಯಾಗಿ ನಿವಾರಿಸಿಕೊಳ್ಳುವಿರಿ. ಸಹವಾಸದಿಂದ ದುರಭ್ಯಾಸವು ಬರಲಿದೆ. ಸಂಗಾತಿಯ ಜೊತೆ ಪ್ರೀತಿಯ ಮಾತೆಕತೆಯು ಆರಂಭವಾಗಿ ಕಲಹದಲ್ಲಿ ಮುಕ್ತಾಯವಾಗುವುದು. ಕಾರ್ಯಗಳಿಗೆ ಅಡೆತಡೆ ಉಂಟಾಗುವ ಶಂಕೆಯು ದೂರವಾಗುವುದು. ಮಿತವಾದ ಆಹಾರ ಸೇವನೆಯನ್ನು ಮಾಡುವಿರಿ. ಮಿತ್ರರ ಜೊತೆ ಪ್ರವಾಸ ಹೋಗಬಹುದು. ಹಿರಿಯರಿಂದ ನಿರೀಕ್ಷಿತ ಲಾಭವು ಸಿಗಲಿದ್ದು ಸಂತೋಷವಾಗುವುದು. ಎಲ್ಲ ತೊಂದರಗಳಿಗೂ ಯಾರನ್ನೋ ಬೈಯುತ್ತಾ ಕುಳಿತಿರುವುದರಲ್ಲಿ ಅರ್ಥವಿರದು. ಇಂದು ವೈಯಕ್ತಿಕ ಕಾರ್ಯಗಳನ್ನು ಮಾಡಿ ಮುಗಿಸಿಕೊಳ್ಳುವಿರಿ. ಚರ್ಮಕ್ಕೆ ಸಂಬಂಧಿಸಿದಂತೆ ಏನಾದರೂ ಕಾಣಿಸಿಕೊಳ್ಳಬಹುದು. ನಿಶ್ಚಲವಾದ ಮನಸ್ಸನ್ನು ಯಾರಾದರೂ ಕಲಕಿ ಹಾಳು ಮಾಡಬಹುದು. ಎಲ್ಲರನ್ನೂ ನಿಮ್ಮ ಪರವಾಗಿ ಮಾಡಿಕೊಳ್ಳಲು ಪ್ರಯತ್ನಿಸುವಿರಿ.
ತುಲಾ ರಾಶಿ: ನಿಮ್ಮ ಕುಟುಂಬದ ಸದಸ್ಯರು ಇಂದು ನಿಮ್ಮ ಅಧಿಕಾರದಿಂದ ಸಹಾಯವನ್ನು ಬಯಸುತ್ತಾರೆ. ನಿಮಗೂ ಅದು ಅನಿವಾರ್ಯವಾದೀತು. ಅನಪೇಕ್ಷಿತ ಚರ್ಚೆಯು ನಿಮ್ಮ ನೆಮ್ಮದಿಯನ್ನು ಹಾಳುಮಾಡೀತು. ಉದ್ಯೋಗದಲ್ಲಿ ಅಕಸ್ಮಾತ್ ಬದಲಾವಣೆಗಳು ಆಗಬಹುದು. ಆಲಸ್ಯದ ಪ್ರವೃತ್ತಿಯು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಕ್ರಿಯಾಶೀಲತೆಗೆ ಬೇಕಾದ ಕ್ರಮವನ್ನು ತೆಗೆದುಕೊಳ್ಳುವುದು ಅನಿವಾರ್ಯ ಆಗಬಹುದು. ನಿಮ್ಮ ವಾಹನದಿಂದ ನಿಮಗೆ ಅಲ್ಪ ಲಾಭವಾಗುವುದು. ಅನುಮಾನದ ಬುದ್ಧಿಯಿಂದಲೇ ಅವಕಾಶಗಳನ್ನು ಕಳೆದುಕೊಳ್ಳುವಿರಿ. ನಕಾರಾತ್ಮಕ ಆಲೋಚನೆಯನ್ನು ಇಂದು ಹೆಚ್ಚು ಮಾಡುವಿರಿ. ಮಕ್ಕಳ ವಿವಾಹಕ್ಕಾಗಿ ನೀವು ಓಡಾಡಿ ಆಯಾಸಪಡುವಿರಿ. ನಿಮ್ಮ ಜವಾಬ್ದಾರಿಯ ಮನೋಭಾವಕ್ಕೆ ಹೆಚ್ಚು ಒತ್ತಡವು ಬರಬಹುದು. ನಿಮ್ಮ ಇಂದಿನ ವರ್ತನೆಯಿಂದ ಬಂಧುಗಳಿಗೆ ಅಸಮಾಧಾನವಾಗುವುದು. ಸರ್ಕಾರದಿಂದ ಆಗಬೇಕಾದ ಕಾರ್ಯಗಳಲ್ಲಿ ಹಿನ್ನಡೆಯಾಗುವುದು. ಹಳೆಯ ರಹಸ್ಯ ವಿಚಾರವು ಪುನಃ ಬೆಳಕಿಗೆ ಬರಬಹುದು.
ವೃಶ್ಚಿಕ ರಾಶಿ: ಭೂಮಿಯ ವ್ಯವಹಾರವು ಅಡೆತಡೆಗಳಿಲ್ಲದೇ ಸಾಗುವುದು. ನಿಮ್ಮ ಕಾರ್ಯವನ್ನು ಕೆಲವರು ಆಡಿಕೊಳ್ಳಬಹುದು. ಸಂಗಾತಿಯ ಮಾತುಗಳಿಂದ ಸಿಟ್ಟಾಗುವ ಸಾಧ್ಯತೆ ಇದೆ. ಇನ್ನೊಬ್ಬರ ವ್ಯಕ್ತಿತ್ವವನ್ನು ಅನುಕರಣೆ ಮಾಡುವಿರಿ. ಮನೆಯಲ್ಲಿ ಮಂಗಲಕಾರ್ಯವನ್ನು ಮಾಡಲು ಪ್ರಯತ್ನಿಸುವಿರಿ. ನೌಕರರ ವಿಚಾರಕ್ಕೆ ನೀವು ಸಿಟ್ಟುಗೊಳ್ಳುವಿರಿ. ನಿಜ ಸಂಗತಿಗಳನ್ನು ಯಾರಿಗೂ ಹೇಳದೇ ಮುಚ್ಚಿಡುವಿರಿ. ಮತ್ತೆ ಮತ್ತೆ ನಿಮಗೆ ಅನಾರೋಗ್ಯವು ಕಾಣಿಸಿಕೊಂಡಿದ್ದು ವೈದ್ಯರಿಂದ ಚಿಕಿತ್ಸೆ ಪಡೆಯಿರಿ ಮತ್ತು ದೈವಜ್ಞರನ್ನು ಸಂಪರ್ಕಿಸಿ ದೈವಾನುಕೂಲದ ಬಗ್ಗೆಯೂ ಮಾತನಾಡಿ. ನಿಮ್ಮ ಪೊರ್ವಯೋಜಿತ ಕಾರ್ಯಗಳನ್ನು ಕ್ರಿಯಾರೂಪಕ್ಕೆ ತರಲು ನಿಮಗೆ ಸಾಧ್ಯವಾಗದು. ಏನಾದರೂ ಅಡೆತಡೆಗಳು ಬರಬಹುದು. ನೌಕರರು ನಿಮ್ಮ ಮೇಲೆ ಅಪನಂಬಿಕೆಯನ್ನು ಇಡಬಹುದು. ನಿಮಗೆ ಯಾರೂ ಸ್ಪಂದನೆ ಕೊಡದೇ ಹೋಗಬಹುದು.
ಧನು ರಾಶಿ: ನಿಮ್ಮ ಆಸೆಗಳನ್ನು ನಿಯಂತ್ರಣಕ್ಕೆ ತಂದುಕೊಳ್ಳುವಿರಿ. ದಾನದಿಂದ ನಿಮಗೆ ಮನಶ್ಶಾಂತಿಯು ಸಿಕ್ಕಂತಾಗುವುದು. ಸಂಬಂಧಗಳನ್ನು ಅತಿಯಾಗಿ ಮನಸ್ಸಿಗೆ ಹಚ್ಚಿಕೊಳ್ಳುವಿರಿ. ಬಾಕಿ ಇರುವ ಯೋಜನೆಗಳು ಅಂತಿಮ ರೂಪ ಪಡೆಯುತ್ತವೆ. ನಿಮ್ಮ ಪ್ರೇಮವು ವಿಪರೀತ ಹೊದಲದಲ್ಲಿ ಸಿಕ್ಕಿಕೊಂಡಿದ್ದು ಇದು ಅದೇ ಚಿಂತೆಯು ನಿಮ್ಮನ್ನು ಕಾಡುವುದು. ನಿಮಗೆ ಆಗಬೇಕಾದ ಕಾರ್ಯಕ್ಕೆ ಹಣವೂ ಓಡಾಟವೂ ಅತಿಯಾಯಿತು ಎಂದು ಅನ್ನಿಸುವುದು. ನಿಮ್ಮ ವ್ಯಕ್ತಿತ್ವಕ್ಕೆ ಧಕ್ಕೆಯಾಗಬಹುದು. ಕಛೇರಿಯ ಒತ್ತಡದಿಂದ ಬೇರೆ ಯೋಚನೆಯ ಕಡೆ ಮನಸ್ಸು ಹೋಗದು. ಪ್ರಯಾಣದ ಸಮಯದಲ್ಲಿ ನಿಮ್ಮ ವಸ್ತುಗಳು ಕಳೆದುಹೋಗಬಹುದು. ಹೊಸ ವಿಚಾರಗಳು ನಿಮ್ಮ ಆಸಕ್ತಿಯನ್ನು ಹೆಚ್ಚಿಸುವುದು. ಬಂಧುಗಳ ಸಹಾಯದಿಂದ ಉದ್ಯೋಗ ಪ್ರಾಪ್ತಿಯ ಸಂಭವವಿದೆ. ಕಾರ್ಯಗಳನ್ನು ಪರೀಕ್ಷಿಸಿಕೊಂಡು ಮುಂದೆಸಾಗಿರಿ. ಇಲ್ಲವಾದರೆ ಕುರುಡನು ಹಗ್ಗವನ್ನು ಹೊಸೆದಂತೆ ಆದೀತು.
ಮಕರ ರಾಶಿ: ವಾಕ್ಸಮರವನ್ನು ಎಲ್ಲರ ಜೊತೆಯೂ ಮಾಡುವಿರಿ. ನಿಮಗೆ ಉತ್ತೇಜನ ಕೊಡದೇ ಕಾರ್ಯಗಳು ನಿಧಾನವಾಗುವುದು. ಸಾಲ ಮಾಡುವ ವಿಚಾರವು ನಿಮಗೆ ಕಹಿಯಾಗಬಹುದು. ಜೊತೆಗಾರರನ್ನು ಆತ್ಮೀಯವಾಗಿ ಕಾಣುವಿರಿ. ಕುಟುಂಬಕ್ಕೆ ನಿಮ್ಮಿಂದ ಆಗಬೇಕಾದ ಕಾರ್ಯಗಳ ಬಗ್ಗೆ ತಿಳಿದುಕೊಳ್ಳುವಿರಿ. ನಿಮ್ಮ ವಿದೇಶ ಪ್ರವಾಸವು ಕಾರಣಾಂತರಗಳಿಂದ ರದ್ದಾಗುವುದು. ನಿರೀಕ್ಷಿತ ಬಂಧುಗಳ ಆಗಮನದಿಂದ ಸಂತೋಷವಾಗುವುದು. ವಿದ್ಯಾರ್ಥಿಗಳಿಗೆ ಅಭ್ಯಾಸವು ಬಹಳ ಕಷ್ಟಕರ ಎನಿಸಬಹುದು. ಉತ್ಪಾದನೆಯಲ್ಲಿ ಕುಂಟಿತವಾಗಲಿದೆ. ನಿಮ್ಮ ಮಕ್ಕಳ ಮಾತಿಗೆ ಕೊಡುವ ಬೆಲೆಯಿಂದ ಅವರಿಗೆ ಸಂತೋಷವಾಗಿ ನಿಮ್ಮನ್ನು ಹೆಚ್ಚು ಇಷ್ಟಪಡುವರು. ನ್ಯಾಯಾಲಯದಲ್ಲಿ ನಿಮ್ಮ ಕಾರ್ಯಗಳು ವಿಳಂಬವಾಗಿ ನಿಮ್ಮ ಮುಂದಿನ ಕಾರ್ಯಗಳಿಗೆ ತೊಂದರೆಯಾಗುವಂತೆ ತೋರುವುದು.
ಕುಂಭ ರಾಶಿ: ಸಂತೃಪ್ತಿಯಿಂದ ನೀವು ನಿಮ್ಮ ಹಳೆಯ ಎಲ್ಲವನ್ನೂ ಮರೆಯುವಿರಿ. ಹಣದ ಅನಿವಾರ್ಯತೆಯು ಬರಲಿದ್ದು, ಹೇಗೋ ಹೊಂದಿಕೆಯಾಗಲಿದೆ. ಸಂಗಾತಿಯ ಬಗ್ಗೆ ಪೂರ್ವಾಗ್ರಹವು ಇರುವ ಕಾರಣ ಯಾವ ಇಷ್ಟವಾಗದು. ಎಲ್ಲರ ಒತ್ತಾಯಕ್ಕೆ ನೂತನ ವಾಹನದ ಖರೀದಿಗೆ ಮನಸ್ಸು ಮಾಡುವಿರಿ. ಸಂತಾನದ ಬಗ್ಗೆ ಸಂಗಾತಿಯ ಜೊತೆ ಮಾತನಾಡುವಿರಿ. ನಿಮ್ಮ ಭಾವನೆಗಳಿಗೆ ಬೆಲೆಯು ಇಲ್ಲದೇ ಹೋಗಬಹುದು. ಮಕ್ಕಳಿಗೆ ಭವಿಷ್ಯದ ಬಗ್ಗೆ ಕಲ್ಪನೆಯನ್ನು ಕೊಡುವಿರಿ. ಕೃಷಿಯಲ್ಲಿ ನೆಮ್ಮದಿಯನ್ನು ಕಾಣುವಿರಿ. ಅಪೂರ್ಣ ಮಾಡಿಕೊಂಡ ಕಛೇರಿಯ ಕೆಲಸಗಳನ್ನು ಇಂದು ಪೂರ್ಣ ಮಾಡುವಿರಿ. ಅವಿವಾಹಿತರಿಗೆ ಬಂಧುಗಳಲ್ಲಿ ಉತ್ತಮ ಸಂಬಂಧವು ಪ್ರಾಪ್ತವಾಗುವುದು. ಕೆಲವನ್ನು ನೀವೇ ಮೈಮೇಲೆ ಹಾಕಿಕೊಂಡು ಸಂಕಟಪಡುವಿರಿ. ಕರ್ತವ್ಯದ ಕಡೆ ಗಮನ ಕೊಡಿ.
ಮೀನ ರಾಶಿ: ಉದ್ಯಮದಲ್ಲಿ ಸಾಧಿಸಬೇಕಾದರೆ ಸಂದರ್ಭಕ್ಕೆ ತಕ್ಕಂತೆ ಆಲೋಚನೆಗಳನ್ನು ಬದಲಾಯಿಸಿ. ನಿಮ್ಮ ವೇಗದ ಕ್ರಿಯೆಯು ಗೊಂದಲಕ್ಕೆ ಸಿಕ್ಕಿಸಬಹುದು. ಮೌಲ್ಯಯುತವಾದ ವಸ್ತುವೊಂದನ್ನು ಖರೀದಿಸುವಿರಿ. ನಿಮ್ಮ ಹೊಸ ಪ್ರಯತ್ನಕ್ಕೆ ಕುಟುಂಬದ ಬೆಂಬಲವು ಸಿಗುವುದು. ಅಲ್ಪಾವಧಿಯಲ್ಲಿ ಹೆಚ್ಚು ಪಡೆಯಬೇಕು ಎನ್ನುವ ಅತಿಯಾದ ಆಸೆ ಬೇಡ. ಸಂಗಾತಿಯ ಜೊತೆ ಕಲಹವಾಡಿ ಯಾವ ಕಾರ್ಯವನ್ನೂ ಮಾಡಲು ಹೋಗುವುದು ಬೇಡ. ಹಣದ ಮೇಲೆ ಸ್ವಲ್ಪ ನಿಯಂತ್ರಣ ಇಂದು ಅವಶ್ಯಕ. ನಿಮ್ಮ ಮನೋವೇಗವು ಕಾರ್ಯಕ್ಕೆ ಹೆಚ್ಚು ಪುಷ್ಟಿಯನ್ನು ನೀಡುವುದು. ವೈವಾಹಿಕ ಜೀವನದಲ್ಲಿ ಸಂತೋಷದ ಕ್ಷಣಗಳು ಬರಲಿದೆ. ಬೇಡದ ವಿಚಾರಗಳನ್ನು ಮಾತನಾಡುತ್ತ ಇರುವುದನ್ನು ಬಿಟ್ಟು ನಿಮ್ಮ ಕೆಲಸದಲ್ಲಿ ತೊಡಗಿ. ಪಾಲದಾರಿಕೆಯಲ್ಲಿ ಒಬ್ಬರನ್ನೊಬ್ಬರು ಬಿಟ್ಟುಕೊಡಲಾರಿರಿ. ಪ್ರೀತಿಯಿಂದ ಹೇಳಿದರೆ ನಿಮ್ಮ ಕಾರ್ಯವು ಸಲೀಸಾಗಿ ಆಗುವುದು.
-ಲೋಹಿತ ಹೆಬ್ಬಾರ್ – 8762924271 (what’s app only)