Astrology: ಈ ರಾಶಿಯವರಿಗೆ ನಾನಾ ಮಾರ್ಗಗಳಿಂದ ಹಣವು ಬರಬಹುದು

ರಾಶಿ ಭವಿಷ್ಯ, ಬುಧವಾರ(ಅಕ್ಟೋಬರ್: 09): ಅಧಿಕಾರಿಗಳಿಂದ ಮೆಚ್ಚುಗೆ ಗಳಿಸುವ ಸಾಧ್ಯತೆ ಇದೆ. ಸ್ತ್ರೀಯರ ಸಹಾಯದಿಂದ ಜವಾಬ್ದಾರಿಯನ್ನು ಮುಗಿಸುವಿರಿ. ಮಕ್ಕಳ ಬಗ್ಗೆ ಹೆಚ್ಚು ಗಮನ ಅಗತ್ಯ. ಯಾರನ್ನು ನೆಚ್ಚುವಿರಿ ಎನ್ನುವುದರ ಮೇಲೆ ನಿಮ್ಮ ಜೀವನಕ್ಕೆ ದಾರಿ ಗೊತ್ತಾಗಲಿದೆ. ಹಾಗಾದರೆ ಅಕ್ಟೋಬರ್: 09ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Astrology: ಈ ರಾಶಿಯವರಿಗೆ ನಾನಾ ಮಾರ್ಗಗಳಿಂದ ಹಣವು ಬರಬಹುದು
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 09, 2024 | 12:20 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಮೂಲಾ, ಯೋಗ: ಶೋಭನ​, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 15 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ12:20 ರಿಂದ 01:49, ಯಮಘಂಡ ಕಾಲ ಬೆಳಗ್ಗೆ 07:53ರಿಂದ 09:22ರವರೆಗೆ, ಗುಳಿಕ ಕಾಲ ಬೆಳಗ್ಗೆ 10:51 ರಿಂದ 12:20 ರವರೆಗೆ.

ಧನು ರಾಶಿ : ಅಧ್ಯಾತ್ಮದ ಕಡೆಗೆ ನಿಮ್ಮ ಮನಸ್ಸು ಹರಿದರೂ ಸರಿಯಾದ ಮಾರ್ಗದರ್ಶನವೂ ಬೇಕು. ದಾಂಪತ್ಯದಲ್ಲಿ ನಂಬಿಕೆ ದೂರಾಗಬಹುದು. ನಾನಾ ಮಾರ್ಗಗಳಿಂದ ಹಣವು ಬರಬಹುದು. ‌ಉತ್ಸಾಹಕ್ಕೆ ಭಂಗ ಬರುವ ಕಡೆ ನೀವು ಇರಲಾರಿರಿ. ನಿಮ್ಮ ಉದ್ಯೋಗವು ನಿಮಗೆ ಸಾಕೆನಿಸಬಹುದು. ಪ್ರಸಿದ್ಧಿಗಾಗಿ ನೀವು ಹಂಬಲಿಸುವಿರಿ. ನಿಮ್ಮ ಕೆಲಸವನ್ನು ಬಿಟ್ಟು ಇತರರ ಕೆಲಸದ ಕಡೆ ಗಮನ ಹರಿಸುವಿರಿ. ಹೂಡಿಕೆಯಿಂದ ಕೈಯನ್ನು ಸುಟ್ಟುಕೊಳ್ಳಬಹುದು. ಉದ್ಯೋಗದಲ್ಲಿ ಅಧಿಕ ಲಾಭಕ್ಕಾಗಿ ಶ್ರಮಿರಿಸಿದರೂ ಲಾಭವನ್ನು ಪಡೆಯುವುದು ಕಷಗಟವಾದೀತು. ಪ್ರಾಮಾಣಿಕತೆಯಿಂದ ನಿಮಗೆ ಉನ್ನತ ಸ್ಥಾನವು ಸಿಗಬಹುದು. ಸಂಗಾತಿಯ ವಿಚಾರದಲ್ಲಿ ನಿಮಗೆ ಗೊಂದಲವು ಬರಬಹುದು. ನಿಮಗೆ ಕೊಟ್ಟ ಜವಾಬ್ದಾರಿಯನ್ನು ನಿರ್ವಹಿಸಲು ನಿಮಗೆ ಕಷ್ಟವಾದೀತು. ಯಾವುದಾದರೂ ಒಂದು ಮಿತಿಯಲ್ಲಿ ಇದ್ದರೆ ಚೆಂದ. ನಂಬಿಕೆಯಿಂದ ಕೆಲಸವನ್ನು ಮಾಡುವಿರಿ. ಪ್ರಯತ್ನಿಸಿದ ಕಾರ್ಯಗಳು ನಿಮಗೆ ಬಹುಪಾಲು ಉತ್ತಮ‌ ಫಲಿತಾಂಶವು ಕೊಡುವುದು.

ಮಕರ ರಾಶಿ : ಮನೆಯಲ್ಲಿ ನಡೆಯುವ ಮಂಗಳ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಸ್ವಪ್ರತಿಷ್ಠೆಯಿಂದ ಎಲ್ಲವನ್ನೂ ಹಾಳು ಮಾಡಿಕೊಳ್ಳುವಿರಿ. ಹಿರಿಯರೆದುರು ತಗ್ಗಿ ಬಗ್ಗಿ ನಡೆಯುವುದು ಒಳ್ಳೆಯದು. ದೇವತಾಕಾರ್ಯಗಳಲ್ಲಿ ಆಸಕ್ತಿಯು ಇದ್ದರೂ ಕಾರಣಾಂತರಗಳಿಂದ ಅದು ಸಾಧ್ಯವಾಗದು. ಯಾರಾದರೂ ನಿಮ್ಮ ಮೇಲೆ ಹೆಚ್ಚು ಪ್ರಭಾವ ಬೀರಬಹುದು. ಕಛೇರಿಯಲ್ಲಿ ಅಧಿಕಾರಿಗಳ ನಿಮ್ಮ ಕಾರ್ಯಕ್ಕೆ ಸಂಬಂಧಿಸಿದಂತೆ ವಾದ ಮಾಡಬಹುದು. ಸಾಲವನ್ನು ಕೊಡಲು ಹೋಗುವುದು ಬೇಡ. ಸಹೋದರರಿಗೆ ಮಾರ್ಗದರ್ಶನ ನೀಡಿ ಮತ್ತು ಅವರ ಅಗತ್ಯಕ್ಕೆ ಅನುಗುಣವಾಗಿ ಅವರನ್ನು ಬೆಂಬಲಿಸಿ. ನಿಮ್ಮ ಸಂಬಂಧಗಳು ಬಳಕೆಯಲ್ಲಿ ಇಲ್ಲದೇ ದೂರವಾಗುವುದು. ಬುದ್ಧಿಪೂರ್ವಕವಾಗಿ ತಪ್ಪುಗಳನ್ನು ಮಾಡಿ ಪಶ್ಚಾತ್ತಪಪಡುವಿರಿ. ಯಾರಿಗೂ ನೀವು ಸುಲಭವಾಗಿ ಸ್ಪಂದಿಸಲಾರಿರಿ. ಸಕಾರಾತ್ಮಕ ಅಂಶಗಳನ್ನು ಸ್ವೀಕರಿಸಲು ಸಿದ್ಧರಿರಿ. ನಿಮ್ಮ ಮಕ್ಕಳು ಪ್ರಗತಿಯತ್ತ ಸಾಗುತ್ತಿರುವುದು ನಿಮಗೆ ಖುಷಿ ಕೊಡುವುದು. ಆಸ್ತಿಯ ಭಾಗವನ್ನು ಮಾರಾಟ ಮಾಡಬೇಕಾದೀತು.

ಕುಂಭ ರಾಶಿ : ನಿಮ್ಮ ಆಲೋಚನೆಗಳಿಗೆ ಸರಿಹೊಂದುವವರ ಜೊತೆ ಸಖ್ಯವಾಗಲಿದೆ. ನಿಮಗೆ ಇಂದು ದೇಹಾರೋಗ್ಯವು ಕ್ಷೀಣಿಸಿದಂತೆ ಭಾಸವಾಗುವುದು. ಕೋಪದಲ್ಲಿ ಏನನ್ನಾದರೂ ಹೇಳಬಹುದು.‌ ಜಾಗ್ರತೆ. ದೂರದೃಷ್ಟಿಯಿಂದ ಮುಂಬರುವ ತೊಂದರೆಯನ್ನು ತಡೆಗಟ್ಟುವಿರಿ. ಭವಿಷ್ಯದ ಬಗ್ಗೆ ಅಸ್ಪಷ್ಟವಾದ ಚಿಂತೆಯು ಇರಲಿದೆ. ಯಂತ್ರಗಳ ವ್ಯಾಪಾರಿಗಳಿಗೆ ಲಾಭದಾಯಕ ದಿನ ಇಂದು‌. ನಿಮ್ಮ ಅಸತ್ಯದ ಮಾತುಗಳು ಯಾರಿಗೂ ಸಂದೇಶವನ್ನು ಉಂಟುಮಾಡದು. ಇಂದು ನಿಮ್ಮ ಪರಿಶ್ರಮವು ವ್ಯರ್ಥವಾಗಬಹುದು. ಯಾರಾದರೂ ಏನನ್ನಾದರೂ ಕೊಡಲು ಬಂದರೆ ನಿರಾಕರಿಸಿ. ಹಿತಶತ್ರುಗಳಿಗೆ ನಿಮ್ಮ ಯಶಸ್ಸನ್ನು ಸಹಿಸಲಾಗದು. ವ್ಯರ್ಥವಾದ ಚರ್ಚೆಗಳಿಂದ ಸಮಯವನ್ನು ಕಳೆಯುವಿರಿ. ನಿಮ್ಮ ಆಲೋಚನೆಯನ್ನು ಯೋಗ್ಯರ ಜೊತೆ ಹಂಚಿಕೊಳ್ಳಿ. ಸಂಗಾತಿಯ ಜೊತೆಗೆ ಪ್ರೀತಿಯ ಸಲ್ಲಾಪವು ಕಾಣಿಸುವುದು. ವಿಷಯದಲ್ಲಿ ನೀವು ಗೊಂದಲವಿರಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ವ್ಯವಸ್ಥೆಯನ್ನು ಮಾಡಿಕೊಡಬೇಕಾಗಬಹುದು.

ಮೀನ ರಾಶಿ : ನಿಮ್ಮ ದೌರ್ಬಲ್ಯವೇ ಶಕ್ತಿಯ ಕೇಂದ್ರವೂ ಆಗಬಹುದು. ರಾಜಕೀಯ ಕ್ಷೇತ್ರದಲ್ಲಿ ಕಾದಾಟ, ವಾಗ್ವಾದಗಳು ಅಧಿಕವಾಗಿ ಇರಲಿವೆ. ಬೇಸರದಿಂದ ಹೊರಬರಲು ನಿಮಗೆ ಕಷ್ಟವಾದೀತು. ನಕಾರಾತ್ಮಕ ಆಲೋಚನೆಗಳೇ ನಿಮ್ಮ ಮನಸ್ಸಿನಲ್ಲಿ ಓಡಾಡುತ್ತವೆ. ಒತ್ತಡದಿಂದ ಕೆಲಸವನ್ನು ಮಾಡಬೇಕಾಗಬಹುದು. ಅಧಿಕಾರಿಗಳಿಂದ ಮೆಚ್ಚುಗೆ ಗಳಿಸುವ ಸಾಧ್ಯತೆ ಇದೆ. ಸ್ತ್ರೀಯರ ಸಹಾಯದಿಂದ ಜವಾಬ್ದಾರಿಯನ್ನು ಮುಗಿಸುವಿರಿ. ಮಕ್ಕಳ ಬಗ್ಗೆ ಹೆಚ್ಚು ಗಮನ ಅಗತ್ಯ. ಯಾರನ್ನು ನೆಚ್ಚುವಿರಿ ಎನ್ನುವುದರ ಮೇಲೆ ನಿಮ್ಮ ಜೀವನಕ್ಕೆ ದಾರಿ ಗೊತ್ತಾಗಲಿದೆ. ತಿಳಿವಳಿಕೆ ಇಲ್ಲದವರ ಮುಂದೆ ನಿಮ್ಮ ಉದ್ಯಮವನ್ನು ಹೇಳಿ ಪ್ರಯೋಜನವಿಲ್ಲ. ಯಾರದೋ ತಪ್ಪನ್ನು ನೀವು ಸರಿ ಮಾಡಬೇಕಾದೀತು. ಆಪದ್ಧನವನ್ನು ಕೂಡಿಡುವುದು ಒಳ್ಳೆಯದು. ಮೋಸಹೋಗುವ ಸಾಧ್ಯತೆ ಇದೆ. ನಿಮ್ಮ ಆರ್ಥಿಕ ಪರಿಸ್ಥಿತಿಯು ಮೊದಲಿಗಿಂತ ಉತ್ತಮವಾಗಿದ್ದು, ಹೂಡಿಕೆಯ ಕಡೆ ಗಮನವಿರುವುದು. ನಿಮ್ಮ ಪ್ರಮುಖ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಿರಿ.

-ಲೋಹಿತ ಹೆಬ್ಬಾರ್-8762924271 (what’s app only)