Astrology: ಕೃಷಿ ಚಟುವಟಿಕೆಗಳ ಬಗ್ಗೆ ಈ ರಾಶಿಯವರಿಗೆ ಆಸಕ್ತಿ ಹೆಚ್ಚಾಗುವುದು

ರಾಶಿ ಭವಿಷ್ಯ ಸೋಮವಾರ(ಸೆ. 16): ಕೆಲವು ಸವಾಲುಗಳು ಉದ್ಭವಿಸಬಹುದು. ನಿಮ್ಮ ವಿವಾಹವು ಕಾನೂನು ವಿವಾದದ ವಿಷಯವಾಗಿದ್ದರೆ, ಅದು ಕೊನೆಗೊಳ್ಳುವ ಸಾಧ್ಯತೆಯಿದೆ. ಪ್ರಯೋಗ ವಿಭಾಗದಲ್ಲಿ ಕೆಲಸ ಮಾಡುವರು. ಯಾರ ಮಾತನ್ನಾದರೂ ಸಮಾಧಾನದಿಂದ ಕೇಳಿ. ಹಾಗಾದರೆ ಸೆಪ್ಟೆಂಬರ್​ 16ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Astrology: ಕೃಷಿ ಚಟುವಟಿಕೆಗಳ ಬಗ್ಗೆ ಈ ರಾಶಿಯವರಿಗೆ ಆಸಕ್ತಿ ಹೆಚ್ಚಾಗುವುದು
ಕೃಷಿ ಚಟುವಟಿಕೆಗಳ ಬಗ್ಗೆ ಈ ರಾಶಿಯವರಿಗೆ ಆಸಕ್ತಿ ಹೆಚ್ಚಾಗುವುದು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Sep 16, 2024 | 12:10 AM

ಜ್ಯೋತಿಷ್ಯದಿಂದ ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಸುಕರ್ಮ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:32 ಗಂಟೆ, ರಾಹು ಕಾಲ ಬೆಳಿಗ್ಗೆ 07:54 ರಿಂದ 09:25, ಯಮಘಂಡ ಕಾಲ ಬೆಳಿಗ್ಗೆ 10:56 ರಿಂದ ಮಧ್ಯಾಹ್ನ 12:27ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:58 ರಿಂದ ಸಂಜೆ 03:30ರ ವರೆಗೆ.

ಧನು ರಾಶಿ: ನಿಮ್ಮ ಬೆಳವಣಿಕೆಗೆಯು ಸಾತ್ತ್ವಿಕ ರೀತಿಯಲ್ಲಿ ಇರಲಿ. ಇಂದು ಸಿಟ್ಟಿನ ಭರದಲ್ಲಿ ನೀವು ವಿವೇಚನೆಯನ್ನು ಕಳೆದುಕೊಳ್ಳುವಿರಿ. ಚಂಚಲ ಮನಸ್ಸಿನಿಂದ ಕಾರ್ಯವನ್ನು ಸಾಧಿಸಲಾಗದು. ಪ್ರೀತಿಯಿಂದ ಕೊಟ್ಟ ಹಣವನ್ನು ನೀವು ಕೇಳುವುದರೊಳಗೆ ಹಿಂದಿರುಗಿಸಿ. ವಾಸದ ಸ್ಥಳವನ್ನು ನೀವು ಬದಲಾಯಿಸುವಿರಿ. ನೀವು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕಾದೀತು. ನಿಮ್ಮ ಸಾಧನೆಯನ್ನು ನೀವು ಎಲ್ಲರ ಬಳಿ ಹೇಳಿಕೊಳ್ಳುವಿರಿ. ಮಹತ್ತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸೂಕ್ಷ್ಮ ವಿವೇಕದ ಅಗತ್ಯತೆ ಇದೆ. ತಂತ್ರವನ್ನು ಹೂಡಿ ನಿಮ್ಮ ಹಿತಶತ್ರುವನ್ನು ಕಂಡುಕೊಳ್ಳುವಿರಿ. ನಿಮ್ಮ‌ ಬಗ್ಗೆ ನಿಮಗೆ ಹೆಮ್ಮೆ ಎನಿಸಬಹುದು. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಕಳೆದುಕೊಂಡಿದ್ದನ್ನು ಹೇಗಾದರೂ ಮಾಡಿ ಪಡೆದುಕೊಳ್ಳುವಿರಿ. ವ್ಯಾಪಾರದಲ್ಲಿ ಜಾಗರೂಕತೆ ಮುಖ್ಯ.

ಮಕರ ರಾಶಿ: ಉನ್ನತ ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರದರ್ಶನ ಇರಲಿದೆ. ವ್ಯವಹಾರದಲ್ಲಿ ಮಧ್ಯವರ್ತಿಗಳಿಂದ ಕೆಲವು ತೊಂದರೆಗಳು ಎದುರಾಗುವುದು. ಕೃಷಿ ಚಟುವಟಿಕೆಗಳ ಬಗ್ಗೆ ನಿಮಗೆ ಅಸಕ್ತಿಯು ಅಧಿಕವಾಗಿ ಇರಲಿದೆ. ಮಿತ್ರರು ನಿಮ್ಮ ಸಹಾಯಕ್ಕೆ ಬರುವರು. ಅನನುಕೂಲತೆಯನ್ನು ನೀವು ಬಳಸಿಕೊಂಡು ಸಕಾರಾತ್ಮಕವಾಗಿ ಸಾಧಿಸುವಿರಿ. ನಿಮಗೆ ಆತ್ಮಾಭಿಮಾನದಿಂದ ನಿಮಗೇ ತೊಂದರೇ ಇಂದಿನ ದಿನವನ್ನು ಆನಂದಿಸಲು, ನಿಮ್ಮ ಜವಾಬ್ದಾರಿಗಳನ್ನು ಪೂರೈಸುವತ್ತ ಗಮನವಿರಲಿ. ವ್ಯಕ್ತಿಗತ ಸಂಬಂಧಗಳನ್ನು ಸರಿಯಾಗಿ ಇರುವಂತೆ ನೋಡಿಕೊಳ್ಳಿ. ನೀವು ಎಲ್ಲವನ್ನೂ ಪ್ರಾಯೋಗಿಕ ಹಿನ್ನೆಲೆಯಲ್ಲಿ ನೋಡುವಿರಿ. ನೀವು ಮಕ್ಕಳಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವಿರಿ. ಕೆಲವು ಸವಾಲುಗಳು ಉದ್ಭವಿಸಬಹುದು. ನಿಮ್ಮ ವಿವಾಹವು ಕಾನೂನು ವಿವಾದದ ವಿಷಯವಾಗಿದ್ದರೆ, ಅದು ಕೊನೆಗೊಳ್ಳುವ ಸಾಧ್ಯತೆಯಿದೆ. ಪ್ರಯೋಗ ವಿಭಾಗದಲ್ಲಿ ಕೆಲಸ ಮಾಡುವರು. ಯಾರ ಮಾತನ್ನಾದರೂ ಸಮಾಧಾನದಿಂದ ಕೇಳಿ.

ಕುಂಭ ರಾಶಿ: ಪರಧನದಿಂದ ನಿಮಗೆ ಹಿಂಜರಿಕೆ ಇರಲಿದೆ. ಹೂಡಿಕೆಯ ಕಾರಣದಿಂದ‌ ನಿಮ್ಮ ಖರ್ಚನ್ನು ಆದಾಯವಾಗಿ ಪರಿವರ್ತಿಸಲು ಮಾಡಿಕೊಳ್ಳುವಿರಿ. ಹಳೆಯ ರೋಗವು‌ ಮರುಕಳಿಸಬಹುದು. ವಿದೇಶದ ವ್ಯಾಪಾರವನ್ನು ಮಾಡುವವರಿಗೆ ಶುಭ. ಕುಟುಂಬದ ಪ್ರೋತ್ಸಾಹವು ನಿಮಗೆ ಸಿಗಲಿದೆ. ಸಂಗಾತಿಯ ಜೊತೆ ಸಮಯವನ್ನು ಕಳೆಯುವಿರಿ. ಶೈಕ್ಷಣಿಕವಾಗಿ ಪ್ರಗತಿಯನ್ನು ವಿದ್ಯಾರ್ಥಿಗಳು ಸಾಧಿಸುವರು. ಹೊಸದನ್ನು ಕಲಿಯಲು ಮತ್ತು ನಿಮ್ಮ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ಏನನ್ನಾದರೂ ಮಾಡುವುದು ಉತ್ತಮ. ಸಂಗಾತಿಯಿಂದ ನಿಮಗೆ ಬೇಸರವಾಗಲಿದೆ. ಇದು ನಿಮಗೆ ಸಂತೋಷವೂ ಆಗಲಿದೆ. ನಿಮ್ಮ ಪ್ರಯತ್ನಗಳಿಂದ ಉತ್ತಮ ಫಲಿತಾಂಶವನ್ನು ಕಾರಣವಾಗಬಹುದು. ದುಸ್ಸಾಹಸಕ್ಕೆ ಹೋಗಿ ಕೈ ಸುಟ್ಟುಕೊಳ್ಳುವಿರಿ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಬಹುದು. ಕಳೆದುಕೊಂಡು ವಸ್ತುವಿನ ಮೌಲ್ಯವು ಇಂದು ಗೊತ್ತಾಗುವುದು.

ಮೀನ ರಾಶಿ: ಖಾಸಗಿ ಉದ್ಯೋಗದಲ್ಲಿ ಇದ್ದವರಿಗೆ ತೊಂದರೆ. ನಿಮಗೆ ವ್ಯವಹಾರವು ಅಂದುಕೊಂಡಷ್ಟು ಸಾಧಿಸಲಾಗದೇ ಇಂದು ಬೇಸರವಾಗಬಹುದು. ನಿಮ್ಮ ಮೇಲೆ ಯಾರಾದರೂ ಅಪವಾದವನ್ನು ಮಾಡಬಹುದು. ಸಣ್ಣಮಟ್ಟಿನ‌ ಗೌರವವು ನಿಮಗೆ ಸಿಗಲಿದೆ. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಆಸಕ್ತಿಯು ಇರಲಿದ್ದು, ನೀವು ತೊಡಗಿಕೊಳ್ಳುವಿರಿ. ಮಾನಸಿಕ ಅಸ್ಥಿರತೆಯನ್ನು ನೀವು ನಿಯಂತ್ರಮಾಡಬೇಕಾಗುವುದು. ನೀವು ಸ್ಪರ್ಧೆಯಲ್ಲಿ ಜಯಗಳಿಸಲು ಬಹಳ ಪ್ರಯತ್ನವನ್ನು ಮಾಡುವಿರಿ. ಕಾನೂನು‌ಸಮರಕ್ಕೆ ನಿಮಗೆ ಹೊಸ ಆಯಾಮ‌ ಸಿಗಲಿದೆ. ಲಾಭವನ್ನು ಪಡೆಯಲು ಹೋಗಿ ಇರುವ ಸಂಪತ್ತನ್ನೂ ಕಳೆದುಕೊಳ್ಳುವ ಸಾಧ್ಯತೆ ಇದೆ. ಭವಿಷ್ಯದ‌ ಕುರಿತಂತೆ ನಿಮ್ಮ ಉದ್ದೇಶವನ್ನು ಸಂಗಾತಿಯ ಜೊತೆ ಚರ್ಚಿಸುವಿರಿ. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ಇಂದು ನಿಮಗೆ ಆತ್ಮತೃಪ್ತಿಯು ಇರುವುದು. ಯಾವುದನ್ನಾದರೂ ನಂಬಿಕಸ್ಥರ ಜೊತೆ ವ್ಯವಹರಿಸಿ. ನಿಮ್ಮನ್ನು ರೂಪಿಸಿಕೊಳ್ಳಲು ಪ್ರಯತ್ನಿಸುವಿರಿ.

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ