ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಗಂಡ, ಕರಣ: ಭವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:30 ಗಂಟೆ, ರಾಹು ಕಾಲ ಮಧ್ಯಾಹ್ನ 12:27 ರಿಂದ 01:58, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:25ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:56 ರಿಂದ ಮಧ್ಯಾಹ್ನ 12:27ರ ವರೆಗೆ.
ಧನು ರಾಶಿ: ಅಧಿಕಾರಿ ವರ್ಗದವರಿಗೆ ಇಂದು ಮೇಲಿನಿಂದ ಒತ್ತಡ ಬರುವುದು. ಇಂದು ನಿಮಗೆ ಸಾಲ ಕೊಡಲಿಕ್ಕಾಗಿ ಒಂದರಮೇಲೆ ಒಂದರಂತೆ ಕರೆಗಳು ಬರಬಹುದು. ನಿಮ್ಮ ಚೌಕಟ್ಟನ್ನು ಬಿಟ್ಟು ಆಚೆ ಇರಲಾರಿರಿ. ಪರಿಹಾರವಿಲ್ಲದ ಸಮಸ್ಯೆಯು ಇಲ್ಲವೆಂಬುದು ಅರಿವಿಗೆ ಬರುವುದು. ನೀವು ಸ್ವಾರ್ಥಿಗಳಂತೆ ತೋರಬಹುದು. ಸರ್ಕಾರದ ಸೌಲಭ್ಯವನ್ನು ಪಡೆಯಲು ನೀವು ಓಡಾಟ ಮಾಡಬೇಕಾದೀತು. ಮಾತಿನಿಂದ ನೀವು ಗೆಲ್ಲಲು ಯತ್ನಿಸುವಿರಿ. ಆರ್ಥಿಕತೆಗಾಗಿ ನಿರಂತರ ಶ್ರಮಿಸಬೇಕಾದೀತು. ನಿಮ್ಮ ಲೆಕ್ಕಾಚಾರದ ದಾಖಲೆಯನ್ನು ಸರಿಯಾಗಿ ಇರಿಸಿಕೊಳ್ಳಿ. ಚಿತ್ತವನ್ನು ಸಮಾಧಾನವಾಗಿ ಇಟ್ಟಕೊಳ್ಳಲು ಪ್ರಯತ್ನಿಸಿ ವಿಫಲರಾಗುವಿರಿ. ಮನೋರಂಜನೆಗೆ ಹೆಚ್ಚಿನ ಸಮಯವನ್ನು ನೀವು ಕೊಡುವಿರಿ. ಇನ್ನೊಬ್ಬರಿಗೆ ಕೊಡುವುದು ನಿಮಗೆ ಇಷ್ಟವಾಗದು. ಆರೋಗ್ಯವು ಸ್ಥಿರವಾಗಿರಲಿದೆ. ಧಾರ್ಮಿಕ ಆಚರಣೆಗಳು ನಿಮಗೆ ಇಷ್ಟವಾಗದ ವಿಚಾರವಾಗಲಿದೆ. ನಿಮ್ಮ ಕ್ರಮವನ್ನು ನೀವು ಮಾಡಿ. ಸ್ತ್ರೀಯರ ವಿಚಾರದಲ್ಲಿ ನಿಮಗೆ ಬುದ್ಧಿಯು ಸರಿಯಾಗಿ ಸೂಚಿಸದು. ಇಂದಿನ ವೈಯಕ್ತಿಕ ಕಾರ್ಯವು ಯಾವುದೇ ತೊಂದರೆಗಳಿಲ್ಲದೇ ಮುಗಿಯುವುದು.
ಮಕರ ರಾಶಿ: ನಿಮಗೆ ಗೊತ್ತಿರುವುದನ್ನು ಹೇಳಲು ನಿಮಗೆ ನಿರ್ಭೀತಿ ಇರುವುದು. ಕಿಂಚಿತ್ತಾದರೂ ನಿಮ್ಮಿಂದ ಸಹಕರಾವಾದರೆ ನಿಮಗೆ ಸಮಾಧಾನ ಸಿಗಲಿದೆ. ನೀವು ಏನಾದರೂ ನಿರ್ಧರಿಸಿದರೆ ನಿಮಗೆ ಸಂಪೂರ್ಣ ಬೆಂಬಲವು ಸಿಗಲಿದೆ. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸಲಿದ್ದೀರಿ. ವಾತಕ್ಕೆ ಸಂಬಂಧಿಸಿದ ಖಾಯಿಲೆಯನ್ನು ಶಮನ ಮಾಡಿಕೊಳ್ಳುವುದು ಉತ್ತಮ. ಆಯ್ಕೆಯ ವಿಚಾರ ಬಂದಾಗ ಸ್ವಲ್ಪ ಸಮಯವನ್ನು ಪಡೆದು ತಾಳ್ಮೆಯಿಂದ ಉತ್ತರಿಸುವಿರಿ. ಸಂಗಾತಿಯ ಮಾತು ನಿಮಗೆ ಸಿಟ್ಟನ್ನು ತಂದೀತು. ಮಕ್ಕಳ ವಿಚಾರದಲ್ಲಿ ಕರುಣೆ ಬಂದು ಅವರಿಗೆ ಇಷ್ಟವಾದುದನ್ನು ಮಾಡುವಿರಿ. ಕಛೇರಿಯಲ್ಲಿ ನಿಮಗೆ ಸ್ವಲ್ಪ ಬಿಡುವುದು ಸಿಗಲಿದೆ. ಆಟದತ್ತ ನಿಮಗೆ ಗಮನ ಹೆಚ್ವಿರಲಿದೆ. ನಿಮ್ಮ ಬೇಸರವನ್ನು ಆಪ್ತರ ಜೊತೆ ಹಂಚಿಕೊಳ್ಳುವಿರಿ. ಸಮಾರಂಭಗಳಿಗೆ ತೆರಳುವಿರಿ. ಕೃಷಿಕರಿಗೆ ಲಾಭದಲ್ಲಿ ಸ್ವಲ್ಪ ಇಳಿಮುಖ ಇರಲಿದೆ. ಹಿರಿಯರಿಂದ ಆದ ದೋಷವನ್ನು ಸರಿ ಮಾಡಿಕೊಳ್ಳುವಿರಿ. ಹಿರಿಯರ ಜೊತೆಗೆ ನಿಮ್ಮ ಸಂಬಂಧವು ಆಪ್ತವಾಗುವುದು.
ಕುಂಭ ರಾಶಿ: ಆಕಸ್ಮಿಕವಾಗಿ ಬರುವ ಜವಾಬ್ದಾರಿಗಳನ್ನು ಧೈರ್ಯವಾಗಿ ನಿರ್ವಹಿಸುವಿರಿ. ನಿಮ್ಮ ಇಂದಿನ ಯೋಜನೆಗಳು ತಲೆಕೆಳಗಾಗುವುದು. ಹಿತವಚನವು ನಿಮಗೆ ಯಾವ ಪರಿವರ್ತನೆಯನ್ನೂ ತರದು. ನಿಮ್ಮದು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು. ಅನಿರೀಕ್ಷಿತ ಬದಲಾವಣೆಯನ್ನು ನೀವು ಸ್ವೀಕರಿಸಬೇಕಸದೀತು. ಎಂದೋ ಕಳೆದುಕೊಂಡ ವಸ್ತುವು ಇಂದು ಪ್ರಾಪ್ತವಾಗಿ ಸಂತೋಷವಾಗುವುದು. ಸಾಮಾಜಿಕ ಕಾರ್ಯಗಳಿಂದ ಪ್ರಶಂಸೆಯನ್ನು ಅಪೇಕ್ಷಿಸುವಿರಿ. ಹಣದ ಅಭಾವವಿದ್ದರೂ ಖರ್ಚನ್ನು ಮಾಡಬೇಕಾದೀತು. ಮನೆಯಿಂದ ದೂರವಿದ್ದು ಬೇಸರವಾಗಬಹುದು. ನಿಮ್ಮ ಅಭಿಪ್ರಾಯಗಳನ್ನು ಹೇಳಲು ನೀವು ಮುಜುಗರ ಪಡುವಿರಿ. ಆಸ್ತಿಯ ವಿಚಾರವಾಗಿ ಮನೆಯಲ್ಲಿ ಮಾತನಾಡುವಿರಿ. ಜೊತೆಗಿರುವವರಿಂದ ಏನನ್ನಾದರೂ ನಿರೀಕ್ಷಿಸುವಿರಿ. ವ್ಯಾಪಾರವು ಸಾಧಾರಣವಾಗಿ ಇರಲಿದೆ. ಹಣವು ಬರುವ ನಿರೀಕ್ಷೆಯಲ್ಲಿ ಎಲ್ಲವನ್ನೂ ಮಾಡುವಿರಿ.
ಮೀನ ರಾಶಿ: ಆಪ್ತರಿಗೆ ನಿಮ್ಮಿಂದ ಸಹಾಯ ಸಿಗಲಿದೆ. ನಿಮ್ಮ ಕನಸುಗಳು ನನಸಾಗಿಸುವ ಸಮಯವನ್ನು ನಿರೀಕ್ಷಿಸುವಿರಿ. ಸಮಯವನ್ನು ವ್ಯರ್ಥ ಮಾಡಲು ಇಷ್ಟಪಡುವುದಿಲ್ಲ. ಯಾವ ಫಲಾಪೇಕ್ಷೆಯನ್ನೂ ಇಂದು ಇಟ್ಟುಕೊಳ್ಳಲಾರಿರಿ. ಇಂದು ನೀವು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಲು ಆಸಕ್ತಿಯು ಇರಲಿದೆ. ನಿಮ್ಮ ಪ್ರಾಮಾಣಿಕತೆಯನ್ನು ಪ್ರಶ್ನಿಸಬಹುದು. ವ್ಯಾಪಾರವನ್ನು ಬಹಳ ಉತ್ಸಾಹದಿಂದ ಮಾಡುವಿರಿ. ಸಂಗಾತಿಯನ್ನು ಭೇಟಿಯಾಗಲು ಕಾರಣವನ್ನು ಹುಡುಕುವಿರಿ. ತಾಯಿಗೆ ನೋವನ್ನು ಕೊಡುವ ಸಾಧ್ಯತೆ ಇದೆ. ವೃತ್ತಿಯಲ್ಲಿ ನಿಮ್ಮ ಸೇವೆಯು ಗಣನೀಯವಾಗಿರಲಿದೆ. ನಿಮ್ಮ ಕ್ರೀಡಾಮನೋಭಾವವೇ ಇಂದು ಹೆಚ್ಚಿರುವುದು. ಏರು ದನಿಯಲ್ಲಿ ಹಿರಿಯ ಜೊತೆ ಮಾತನಾಡುವುದು ನಿಮಗೆ ಶೋಭೆ ತರದು. ನಿಮ್ಮನ್ನು ನಂಬಿಸಿ ಕೆಲಸವನ್ನು ಮಾಡಿಕೊಳ್ಳುವರು. ಆರ್ಥಿಕ ಒತ್ತಡದಿಂದ ನೀವು ಹೊರಬರುವ ಮಾರ್ಗವನ್ನು ಹುಡುಕುವಿರಿ. ಯಾವದೇ ಸಂದರ್ಭದಲ್ಲಿಯೂ ಗಾಬರಿಯಾಗದೇ ಸಮಯಪ್ರಜ್ಞೆಯಿಂದ ಮುನ್ನಡೆಯಿರಿ.