Astrology: ಈ ರಾಶಿಯವರು ತಮ್ಮವರಿಂದಲೇ ದ್ರೋಹಕ್ಕೆ ಒಳಗಾಗುವ ಸಾಧ್ಯತೆಯಿದೆ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವರ್ಷ ಋತುವಿನ ಭಾದ್ರಪದ ಮಾಸ ಕೃಷ್ಣ ಪಕ್ಷದ ಚತುರ್ಥೀ ತಿಥಿ ಬುಧವಾರ ಆರ್ಥಿಕ ಹಿಂಜರಿಕೆ, ಉತ್ತಮ ಯೋಜನೆ, ಅಪಖ್ಯಾತಿ, ಸಣ್ಣ ಸೇವೆ, ಮಾತಿನ ಉಳಿವಿಗೆ ಹಠ ಇವೆಲ್ಲ ಇಂದಿನ ವಿಶೇಷ. ಇಂದು ಯಾವ ರಾಶಿಗಳ ಜನರ ಭವಿಷ್ಯ ಹೇಗಿರಲಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು, ಆಗಸ್ಟ್ 27, ನಿತ್ಯಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ವರ್ಷ, ಚಾಂದ್ರ ಮಾಸ : ಭಾದ್ರಪದ, ಸೌರ ಮಾಸ : ಸಿಂಹ, ಮಹಾನಕ್ಷತ್ರ : ಮಘಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಚತುರ್ಥೀ ನಿತ್ಯನಕ್ಷತ್ರ : ಚಿತ್ರಾ, ಯೋಗ : ಶಿವ, ಕರಣ : ವಣಿಜ, ಸೂರ್ಯೋದಯ – 06 – 21 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:34 – 14:07, ಗುಳಿಕ ಕಾಲ 11:01 – 12:34 ಯಮಗಂಡ ಕಾಲ 07:55 – 09:28.
ತುಲಾ ರಾಶಿ: ಇಂದು ಕಾರ್ಯದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಕ್ಕೆ ಅಪಖ್ಯಾತಿ, ಕಳಂಕ, ವಿರೋಧಗಳು ಬರಬಹುದು. ಕುರುಡ ಕತ್ತವನ್ನು ಹೊಸೆದಂತೆ ಆಗಬಹುದು. ಬಂಧುಗಳ ಮನೆಗೆ ಹೋಗಿ ಬರಲಿದ್ದೀರಿ. ಯಥೇಚ್ಛ ಸುತ್ತಾಟವು ನಿಮಗೆ ಆಯಾಸವನ್ನು ತಂದೀತು. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಕಷ್ಟ. ನಿಮಗೆ ಭೂಮಿಯನ್ನು ಕೊಡುವುದು ಅನಿವಾರ್ಯವಾಗಿದ್ದು ಅಲ್ಪ ಮೌಲ್ಯಕ್ಕೆ ಮಾರಾಟ ಮಾಡುವಿರಿ. ಇಂದು ಗುಂಪಿನಲ್ಲಿ ಕೆಲಸಮಾಡುವುದು ನಿಮಗೆ ಕಿರಿಕಿರಿಯಾದೀತು. ಹಿರಿಯರ ಆಶೀರ್ವಾದ ಪ್ರಾಪ್ತವಾಗುವುದು. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಸೂಚನೆ ಸಿಗುವುದು. ನಿಮಗೆ ಸಂಬಂಧಿಸದ ವಿಚಾರಕ್ಕೆ ತಲೆಹಾಕುವುದನ್ನು ನಿಲ್ಲಿಸಿ. ನಿಮ್ಮ ಸಂತೋಷವನ್ನು ಇತರರ ಜೊತೆ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ನೂತನವಾಗಿ ಖರೀದಿಸಿದ ಯಂತ್ರವು ಕೈ ಕೊಡಬಹುದು. ನಿಮ್ಮ ಮನಸ್ಸನ್ನು ಬದಲಿಸಲು ಬಹಳ ಪ್ರಯತ್ನ ನಡೆಯುವುದು. ಹಿಂದಿನ ಘಟನೆಯೇ ಪುನರಾವರ್ತನೆ ಆಗುವುದು. ನಿಮ್ಮನ್ನು ದ್ವೇಷಿಸುವವರನ್ನು ನಿರ್ಲಕ್ಷಿಸಿ ಮುನ್ನಡೆಯುವಿರಿ.
ವೃಶ್ಚಿಕ ರಾಶಿ: ನಿಮ್ಮನ್ನು ಚೆನ್ನಾಗಿ ಮಾರ್ಕೆಟಿಂಗ್ ಮಾಡಿಕೊಳ್ಳುವಿರಿ. ಇಂದು ನೀವು ಮುಂದೆ ಮಾಡಬೇಕಾದ ಕೆಲವು ಕಾರ್ಯಗಳ ನಿರ್ಧಾರವನ್ನು ಮಾಡಿ ಮುಂದುವರಿಯುವಿರಿ. ಬೇಡದ ಸಲಹೆಗಳು ನಿಮ್ಮ ಮನಸ್ಸನ್ನು ಹಾಳುಮಾಡುವುದು. ಇಂದು ನೀವು ಅಧಿಕವಾಗಿ ಮಾತನಾಡದೇ ಸುಮ್ಮನಿರುವುದು ಉತ್ತಮ. ತಂಪಾದ ಪರಿಸರ ನಿಮಗೆ ಹಿತವನ್ನು ನೀಡುವುದು. ಕಾಲಹರಣಕ್ಕೆ ನಿಮಗೆ ಇನ್ನೊಬ್ಬರ ವಿಚಾರವನ್ನು ಆಡಿಕೊಳ್ಳುವಿರಿ. ಕಛೇರಿಯಲ್ಲಿ ನೀವು ಪಕ್ಷಪಾತ ಮಾಡುವಂತೆ ಕೋರುವುದು. ಸಂಗಾತಿಯ ಮನಸ್ಸನ್ನು ನೋಯಿಸಿ ಅದನ್ನು ಸರಿಪಡಿಸುವಿರಿ. ಹಳೆಯ ಸ್ನೇಹಿತರ ಜೊತೆ ದೂರಪ್ರಯಾಣವನ್ನು ಮಾಡುವಿರಿ. ತಂದೆಯನ್ನು ನೋಡುವ ಹಂಬಲ ಅಧಿಕವಾಗುದು. ನಿಮ್ಮ ಲೆಕ್ಕಾಚಾರವು ಬುಡಮೇಲಾದೀತು. ಭೂವ್ಯವಹಾರವು ಸುಖಾಂತ್ಯ ಮಾಡಿಕೊಳ್ಳಿ. ನಿಮ್ಮ ಒಳ್ಳೆಯ ಸ್ವಭಾವದ ಬಗ್ಗೆ ಮಾತನಾಡುವರು. ಸಹೋದ್ಯೋಗಿಗಳ ಮಾತನ್ನು ಸಹಿಸಿಕೊಳ್ಳಲು ಕಷ್ಟವಾಗದು. ವೇಗದಲ್ಲಿ ಸಿಗುವ ಯಶಸ್ಸು ಶಾಶ್ವತವಲ್ಲ.
ಧನು ರಾಶಿ: ಯಾವುದಾದರೂ ಹಣಕಾಸಿನ ಒಪ್ಪಂದವನ್ನು ಮಾಡುವಾಗ ಎಚ್ಚರಿಕೆ ಇರಲಿ. ಅಮೂಲ್ಯ ವಸ್ತುಗಳು ಹಾಳಾದೀತು. ನಿಮ್ಮ ಅಪೂರ್ಣ ಕಾರ್ಯಗಳಿಗೆ ಅಂತ್ಯವನ್ನು ಕಾಣಿಸುವಿರಿ. ಇಂದು ನಿಮಗೆ ಸ್ಥಿರವಾದ ಬುದ್ಧಿಯನ್ನು ಇಟ್ಟುಕೊಳ್ಳಲು ಕಷ್ಟವಾದೀತು. ಏನೇನೋ ಯೋಚನೆಗಳು ಬರಬಹುದು. ಮನೆಯಿಂದ ದೂರದಲ್ಲಿ ನೀವು ವಾಸಮಾಡುವ ಸಂದರ್ಭವು ಬರಬಹುದು. ನಿಮ್ಮ ಕೋಪ ಮತ್ತು ಉದ್ವೇಗವನ್ನು ಕೆಲವು ಕಾಲಗಳವರೆಗೆ ನಿಯಂತ್ರಣದಲ್ಲಿ ಇರಿಸಬೇಕಾಗುವುದು. ದಾಂಪತ್ಯ ಬಾಂಧವ್ಯವನ್ನು ಹಿರಿಯರೆದುರು ತೋರಿಸುವಿರಿ. ಇಂದಿನ ಕೆಲಸವನ್ನು ಸರಿಯಾಗಿ ಮಾಡಲು ಕಷ್ಟಪಡುವಿರಿ. ತಾಯಿಯ ಮಾತನ್ನೂ ನೀವು ಕೇಳದೇ ನಿಮ್ಮದೇ ದಾರಿಯಲ್ಲಿ ಸಾಗುವಿರಿ. ಸಾಹಸ ಕೆಲಸಕ್ಕೆ ಹೋಗುವ ಸಾಧ್ಯತೆ ಇದೆ. ಅದೃಷ್ಟದಿಂದ ನಿಮ್ಮ ಕಾರ್ಯ ಸಾಧ್ಯ. ದೇಹಕ್ಕೆ ಪೆಟ್ಟುಮಾಡಿಕೊಳ್ಳಲು ನೀವು ಹೋಗುವುದು ಬೇಡ. ನಿಮಗೆ ಸಿಗಬೇಕಾದ ಹಣವು ವಿಳಂಬವಾಗಿದ್ದಕ್ಕೆ ಬೇಸರಗೊಳ್ಳಬಹುದು. ನಿಮ್ಮ ನೈಪುಣ್ಯತೆಯನ್ನು ಕೆಲಸದಲ್ಲಿ ತೋರಿಸಿ. ಉತ್ತಮ ಕಾರ್ಯಕ್ಕೆ ಶ್ಲಾಘನೆ ಸಿಗಲಿದೆ. ವಾಗ್ವಾದಕ್ಕೆ ಹೋಗಿ ಮನಸ್ಸನ್ನು ಹಾಳುಮಾಡಿಕೊಳ್ಳುವುದು ಬೇಡ.
ಮಕರ ರಾಶಿ: ನಿಮ್ಮ ಹಠದ ಸ್ವಭಾವಕ್ಕೆ ಎಲ್ಲರೂ ಒಗ್ಗುತ್ತಾರೆ ಎನ್ನಲಾಗದು. ಕಾನೂನಾತ್ಮಕ ವಿಚಾರದಲ್ಲಿ ನಿಮಗೆ ಹಿನ್ನಡೆ ಸಾಧ್ಯತೆ ಇದೆ. ನಿಮಗೆ ಬೇಕಾದುದನ್ನೇ ಮಾಡಿಕೊಳ್ಳುವ ಛಾತಿಯು ಇಂದು ಇರಲಿದೆ. ನಿಮ್ಮ ಆಸ್ತಿಯ ಬಗ್ಗೆ ನಿಮಗೇ ಸಂಪೂರ್ಣವಾದ ಮಾಹಿತಿ ಕೊರತೆಯಾಗುವುದು. ಅಧಿಕಾರದಿಂದ ನಿಮ್ಮ ಆಸೆಗಳನ್ನು ಪೂರೈಸಲು ಪ್ರಯತ್ನಿಸುವಿರಿ. ಮನಸ್ಸಿನಲ್ಲಿ ಇರುವುದನ್ನು ಯಾರ ಜೊತೆಗಾದರೂ ಹೇಳಿಕೊಳ್ಳುವಿರಿ. ನಿಮ್ಮ ನೋವಿಗೆ ಸ್ಪಂದಿಸಲು ಯಾರಾದರೂ ಸಿಕ್ಕಾರು. ನಿಮ್ಮ ಒಳ್ಳೆಯ ಚಿಂತನೆಗೆ ಪ್ರಶಂಸೆ ಸಿಗಲಿದೆ. ಎಷ್ಟೋ ವಿಚಾರಗಳನ್ನು ನೀವು ನಿಮ್ಮಲ್ಲಿಯೇ ಇಟ್ಟಕೊಂಡು ಅನುಭವಿಸುವಿರಿ. ನಿಮಗೆ ಇಷ್ಟವಾದುದನ್ನು ನೀವು ಪಡೆಯುವಿರಿ. ಸ್ವಾಭಿಮಾನವು ನಿಮ್ಮನ್ನು ಕಟ್ಟಿಹಾಕಬಹುದು. ಇಂದಿನ ವಾಯು ವಿಹಾರವು ನಿಮಗೆ ಹಿತವೆನಿಸುವುದು. ವಿದ್ಯಾರ್ಥಿಗಳು ಆಟದಲ್ಲಿ ಹೆಚ್ಚಿನ ಸಮಯ ಕಳೆಯುವಿರಿ. ಅನ್ನಿಸಿದ್ದನ್ನು ಹೇಳಿ ಕೆಲವರಿಂದ ದೂರವಾಗುವಿರಿ.
ಕುಂಭ ರಾಶಿ: ಅಪಾಯ ಬರುತ್ತದೆ ಎಂಬ ಸೂಚನೆ ಸಿಗಲಿದ್ದು, ಅಂತಹ ಕಾರ್ಯಗಳಿಂದ ದೂರವಿರಿ. ಒತ್ತಾಯಿಸಿದರೂ ಕಾರಣಗಳನ್ನು ಹೇಳಿ ತಪ್ಪಿಸಿಕೊಳ್ಳಿ. ಇಂದು ನೀವು ಪ್ರಾಮಾಣಿಕ ಎಂದು ತೋರಿಸಲು ಹೋಗಿ ಉದ್ಯೋಗದಲ್ಲಿ ತೊಂದರೆ ಮಾಡಿಕೊಳ್ಳುವಿರಿ. ವ್ಯಾಪಾರದ ಸಂಚು ನಿಮಗೆ ಗೊತ್ತಾಗದೇ ಹೋಗಬಹುದು. ಇಂದಿನ ನಿಮ್ಮ ಆರಂಭವು ಬಹಳ ಸಂತೋಷದಿಂದ ಇರಲಿದೆ. ಸ್ವಾಭಿಮಾನವನ್ನು ಬಿಟ್ಟು ಯಾವುದನ್ನೂ ಮಾಡಲಾರಿರಿ. ಕೋಪವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳುವುದು ಉತ್ತಮ. ಇಂದಿನ ತುರ್ತು ಕಾರ್ಯಗಳ ನಡುವೆ ನಿಮಗೆ ಸಮಯ ಹೊಂದಾಣಿಕೆ ಕಷ್ಟವಾಗಬಹುದು. ನಿಮ್ಮ ಅಮೂಲ್ಯ ವಸ್ತುಗಳನ್ನು ಜಾಗರೂಕತೆಯಿಂದ ಇಟ್ಟುಕೊಳ್ಳಿ. ಸಂಗಾತಿಯನ್ನು ನೀವು ಕೆಲವು ವಿಚಾರಗಳಿಗೆ ಬೇಸರಿಸುವಿರಿ. ಚಿತ್ರಕಲೆಯ ಬಗ್ಗೆ ಅಪಾರ ಆಸಕ್ತಿ ಇರುವುದು. ನೀವು ಯತ್ನಿಸಿದ ಕೆಲಸವು ಪೂರ್ಣಫಲಪ್ರದವಾಗದು. ಸಾಗಿದ ದಾರಿಯನ್ನು ನೀವು ನೆನಪಿಸಿಕೊಳ್ಳುವಿರಿ. ತಾಯಿಯ ಮೇಲೆ ಇಂದು ನೀವು ಸಿಟ್ಟಾಗಬಹುದು.
ಮೀನ ರಾಶಿ: ಇಂದು ಪಕ್ಕದವರಿಂದಲೇ ದ್ರೋಹಕ್ಕೆ ಒಳಗಾಗುವ ಸಾಧ್ಯತೆಯಿದೆ. ವ್ಯಾಪಾರ ಚಟುವಟಿಕೆಗಳು ಇಂದು ಕಲಹ ಪೈಪೋಟಿಯ ಜೊತೆ ಇರುತ್ತವೆ. ನೀವು ಯಾವುದೇ ಉದ್ವೇಗಕ್ಕೆ ಒಳಗಾಗದೇ ಶಾಂತವಾಗಿ ಇರಬೇಕು ಎನ್ನುವುದನ್ನು ನಿರ್ಧರಿಸುವಿರಿ. ನಿಮ್ಮ ಉತ್ಸಾಹಕ್ಕೆ ದೃಷ್ಟಿ ಬೀಳಬಹುದು. ನೀವು ಇಟ್ಟ ನಂಬಿಕೆಗೆ ಮೋಸವಾಗುವ ಸಾಧ್ಯತೆ ಇದೆ. ಹಣಕಾಸಿನ ಮೌಲ್ಯವನ್ನು ನೀವು ಇಂದು ತಿಳಿದುಕೊಳ್ಳುವಿರಿ. ಇಂದು ನಿಮ್ಮ ಮನಸ್ಸು ಬಹಳ ಡೋಲಾಯಮಾನವಾಗಿ ಇರಲಿದೆ. ನಿಮಗೆ ಆಗದ ವಿಚಾರವನ್ನು ಮತ್ತೆ ಮತ್ತೆ ಸಹೋದ್ಯೋಗಿಗಳು ನೆನಪಿಸುವರು. ಸಮಯದ ಹೊಂದಾಣಿಕೆ ಮಾಡಿಕೊಳ್ಳಲಾಗದು. ಉದ್ಯೋಗದಲ್ಲಿ ಬದಲಾವಣೆಯನ್ನು ನೀವು ಬಯಸುವಿರಿ. ಮನೆಯ ಹೆಚ್ಚಿನ ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ನಿಮ್ಮ ಖರ್ಚಿನಿಂದ ಸ್ನೇಹಿತರಿಗೆ ಭೋಜನ ಹಾಕಿಸುವಿರಿ. ಸ್ನೇಹಿತರ ಸಂತೋಷದಲ್ಲಿ ಪಾಲ್ಗೊಳ್ಳುವಿರಿ. ನಿಮ್ಮ ಸಾಲವು ತೀರಲು ಬಂಧುಗಳು ಸಹಾಯ ಮಾಡುವರು. ಬೇರೆಯಾದ ಮನಸ್ಸನ್ನು ಒಟ್ಟು ಸೇರಿಸಲಿದ್ದೀರಿ.




