AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಶಿಯವರಿಗೆ ವ್ಯಾಪಾರದಲ್ಲಿ ಲಾಭವಾಗಲಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಕೃಷ್ಣ ಪಕ್ಷದ ಪ್ರತಿಪತ್ ತಿಥಿ, ಭಾನುವಾರ ವಿದೇಶ ಗಮನ, ಯೋಜನೆಯ ನಿರೀಕ್ಷೆ, ಅಧಿಕಾರಕ್ಕೆ ಪ್ರಯತ್ನ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಈ ರಾಶಿಯವರಿಗೆ ವ್ಯಾಪಾರದಲ್ಲಿ ಲಾಭವಾಗಲಿದೆ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Apr 13, 2025 | 1:45 AM

Share

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೀನ ಮಾಸ, ಮಹಾನಕ್ಷತ್ರ : ರೇವತೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಭಾನು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ : ಹಸ್ತಾ, ಯೋಗ : ವ್ಯಾಘಾತ, ಕರಣ : ಗರಜ, ಸೂರ್ಯೋದಯ – 06:21 am, ಸೂರ್ಯಾಸ್ತ – 06:45 pm, ಇಂದಿನ ಶುಭಾಶುಭಕಾಲ : ರಾಹು ಕಾಲ 17:12 – 18:45, ಯಮಘಂಡ ಕಾಲ 12:33 – 14:06, ಗುಳಿಕ ಕಾಲ 15:39 – 17:12

ಮೇಷ ರಾಶಿ: ನಿಮ್ಮ ಯೋಜನೆ ನಿರೀಕ್ಷಿಸದ ರೀತಿಯಲ್ಲಿ ಅಂತ್ಯವಾಗಲಿದೆ. ಇಂದಿನ‌ ನಿಮ್ಮ ಅವಸರವಸರದ ಕಾರ್ಯಗಳಿಂದ ಯಾವುದೂ ಪೂರ್ಣವಾಗದು. ನಿಮ್ಮ ಮೈಂಡ್ ಹಲವು ಕಡೆಗಳಲ್ಲಿ ಓಡುತ್ತಿರುವುದದಕ್ಕೆ ಹೀಗಾಗುವುದು. ವಿದೇಶದ ಮೋಹ ಕಡಿಮೆಯಾಗುವುದು. ಯಾವುದಾದರೂ ದುರ್ವ್ಯಸನಕ್ಕೆ ತುತ್ತಾಗಿ ಹಣವನ್ನೂ ಆರೋಗ್ಯವನ್ನೂ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಮಾಡದೇ ಉಳಿದ ಕೆಲಸ ಕಾರ್ಯಗಳತ್ತ ಗಮನಹರಿಸಿ. ವ್ಯಾಪರದಲ್ಲಿ ಲಾಭವಾಗಲಿದೆ. ವಿದ್ಯಾರ್ಥಿಗಳು ಪರಿಶ್ರಮದ ಓದಿಗೆ ಫಲಸಿಗಬಹುದು. ನಿಮ್ಮ ಅಧಿಕಾರದ ಆಸೆಗೆ ನೀರೆರೆಯಬಹುದು. ಮನೆಯರಿಂದ ಹೊಸ ಸ್ಥಳಕ್ಕೆ ಹೋಗಲು ಒಪ್ಪಿಗೆ ಸಿಗದೇಹೋಗಬಹುದು. ಕಛೇರಿಯಲ್ಲಿ ಉಂಟಾದ ಕೆಲವು ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡುವುದು. ದೌರ್ಬಲ್ಯವನ್ನು ಹೇಳಿಕೊಂಡು ಪರಿಹಾರ ಕಂಡುಕೊಳ್ಳುವುದು ಉತ್ತಮ.ಯಾರನ್ನೂ ಸರಿಯಾಗಿ ಊಹಿಸಲಾರಿರಿ. ವಿಳಂಬವಾಗಿ ಬರುತ್ತದೆ ಎಂದುಕೊಂಡ ಹಣವು ಬೇಗ ನಿಮಗೆ ಬೇಗ ಸಿಗಬಹುದು. ನಿಮ್ಮ ನಿರ್ಧಾರವು ತೂಗುಕತ್ತಿಯಾಗಬಹುದು.

ವೃಷಭ ರಾಶಿ: ನಿಮ್ಮ ಯಾವ ಯೋಜನೆಗಳೂ ಹೊಂದಾಣಿಕೆಗೆ ಪೂರಕವಾಗದು. ಹೊಸತನ್ನು ಹುಡುಕಲು ಆರಂಭಿಸುವಿರಿ. ವೈಯಕ್ತಿಕ ವಿಚಾರಕ್ಕೆ ಅನ್ಯರು ಪ್ರವೇಶ ಮಾಡುವುದು ಸರಿಕಾಣದು. ಇಂದು ನಿಮಗೆ ಹಣಕಾಸಿನ ಹರಿವು ಹೆಚ್ಚಾಗುವುದರ ಜೊತೆಗೆ ಆತಂಕವೂ ಇರುವುದು. ಅತಿಯಾದ ಖರ್ಚುಗಳಿಂದ ಚಿಂತೆಯಿದ್ದು, ಬಹುಕಾಲದಿಂದ ಸಿಕ್ಕಿಹಾಕಿಕೊಂಡಿದ್ದ ಹಣ ಇಂದು ಮರಳಿ ಸಿಕ್ಕಿ ಸಮಾಧಾನವಾಗುವುದು. ನಿಮ್ಮ ಮೇಲೆ ಸಹಾನುಭೂತಿಯು ಉಂಟಾಗುವ ಸಾಧ್ಯತೆ ಇದೆ. ಮೋಸ ಹೋಗುವ ಸಾಧ್ಯತೆ ಇರುತ್ತದೆ. ಜಾಗರೂಕರಾಗಿರಿ. ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ. ಯಾರದೋ ಮಾತನ್ನು ನಿಮಗೆಂದು ಭಾವಿಸಿ ಸಿಟ್ಟಾಗುವಿರಿ. ನಕಾರಾತ್ಮಕ ವಿಚಾರಗಳ ನಡೆಯೂ ನೀವು ಬಲವಾಗಿದ್ದರೆ ಅದು ವಿದ್ಯೆಯ ಕಾರಣದಿಂದ. ಆಪ್ತರಿಗೆ ನಿಮ್ಮ ಬದಲಾದ ನಡವಳಿಕೆಯು ಇಷ್ಟವಾಗದು. ಸಮಯದ ಹೊಂದಾಣಿಕೆಯು ನಿಮಗೆ ಕಷ್ಟವಾಗುವುದು. ಮಹಿಳೆಯರು ಅನುಕೂಲಕರ ಸನ್ನಿವೇಶವು ಇರುವುದನ್ನು ಬಳಸಿಕೊಳ್ಳುವರು.

ಮಿಥುನ ರಾಶಿ: ಒಪ್ಪಂದ ಅವಧಿ ಮುಕ್ತಾಯವಾಗಲಿದ್ದು ಕಾನೂನು ಕ್ರಮವನ್ನು ಜಾರಿಗೊಳಿಸುವಿರಿ. ನಂಬಿಕೆ ದ್ರೋಹದಿಂದ ನಿಮಗೆ ಬೇಸರವಾಗಲಿದೆ. ಸಹೋದರ ಜೊತೆ ನಿಮಗೆ ಯೋಗ್ಯ ಸಲಹೆಯು ಸಿಗಬಹುದು. ಇಂದು ಇತರರಿಂದ ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಉಂಟಾಗಬಹುದು. ಸೃಜನಾತ್ಮಕವಾಗಿ ಬದುಕುವ ಸ್ವಭಾವಕ್ಕೆ ಫಲಸಿಗಬಹುದು. ಉತ್ತಮವಾದ ಯೋಜನೆಗಳನ್ನು ರೂಪಿಸಿ. ಶೈಕ್ಷಣಿಕ ಕಾರ್ಯದಲ್ಲಿ ನೀವು ಅಡೆತಡೆಗಳನ್ನು ಎದುರಿಸಬಹುದು. ಭರವಸೆ ಮತ್ತು ಹತಾಶೆಯ ಭಾವನೆ ಇರುತ್ತದೆ. ಕೌಟುಂಬಿಕ ಜೀವನದಲ್ಲಿ ಸಂತೋಷ. ದೈವಭಕ್ತಿಯ ಕಡೆ ಮನಸ್ಸು ಸಾವಧನಾವಾಗಿ ಹೋಗುವುದು. ಅಭಿವೃದ್ಧಿಗೆ ಅವಕಾಶವಿದ್ದರೂ ನಿಮಗೆ ಹಿನ್ನಡೆಯಂತೆ ಎಲ್ಲವೂ ಭಾಸವಾಗುವುದು. ಶ್ರಮಕ್ಕೆ ತಕ್ಕ ಫಲವು ಲಭಿಸಿಲ್ಲ ಎಂದು ನಿಮ್ಮ ಮನಸ್ಸಿಗೆ ಗಾಢವಾಗಿ ತಿಳಿಯುವುದು. ಅತಿಯಾಗಿ ಯಾವುದನ್ನು ಮಾಡಲು ಹೋಗುವುದು ಬೇಡ. ಹೊಸ ಕಲಿಕೆಗೆ ಉತ್ಸಾಹ ಇರಲಿದ್ದು ಶ್ರದ್ಧೆಯಿಂದ ಅದನ್ನು ಅಭ್ಯಾಸ ಮಾಡುವಿರಿ. ನಿಮ್ಮ ತಮಾಷೆಯು ಇಷ್ಟವಾಗದೇ ಇರಬಹುದು.

ಕರ್ಕಾಟಕ ರಾಶಿ: ಮಕ್ಕಳು ತಮ್ಮ ಹಕ್ಕನ್ನು ಕೇಳಬಹುದು. ಅದರ ಬೇಸರವನ್ನು ಮತ್ತೆಲ್ಲಿಯಾದರೂ ಹೊರಹಾಕುವಿರಿ. ನಿಮ್ಮ ಆದಾಯದ ಮೂಲವನ್ನು ಸರಿಯಾಗಿ ಪರೀಕ್ಷಿಸಿಕೊಳ್ಳಿ. ನಿಮ್ಮ ವೇತನವನ್ನು ಪ್ರಯತ್ನಪೂರ್ವಕವಾಗಿ ಯಾರಾದರೂ ಕೇಳಬಹುದು. ನಿಮ್ಮನ್ನು ನೀವು ಪರಿಚಯ ಮಾಡಿಕೊಳ್ಳುವಿರಿ. ಸಿಕ್ಕ ಸಮಯವನ್ನು ಧಾರ್ಮಿಕ ಆಚರಣೆಗೆ ಮೀಸಲಿಡುವಿರಿ. ಕಛೇರಿಯ ಕಾರ್ಯಗಳನ್ನು ಮುಂದುವರಿಸಲು ನಿಮಗೆ ಆಗದು. ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯ ಮತ್ತಾವುದೂ ಇಲ್ಲ. ಘಟನೆಗಳು ಉತ್ತಮ ಮತ್ತು ಗೊಂದಲಮಯವಾಗಿರುವ ಒಂದು ದಿನ. ನಿಮ್ಮ ನಿರುದ್ಯೋಗವು ಚಿಂತೆಯಾಗಿ ನಿಮ್ಮ ಬಗ್ಗೆಯೇ ನಿಮಗೆ ನಕಾರಾತ್ಮಕ ಭಾವ ಮೂಡುವುದು. ಯಾವುದೋ ಗಾಢವಾದ ಆಲೋಚನೆಯಲ್ಲಿ ಮುಳುಗಿರುವಿರಿ. ಸರ್ಕಾರದ ಸೌಲಭ್ಯ ಪಡೆಯಲು ಚಿಂತನೆ. ಮಕ್ಕಳಿಂದ ನಿಮಗೆ ಸಂತೃಪ್ತಿಯು ಸಿಗಲಿದೆ. ಬಂಧುಗಳ ಭೇಟಿಯು ನಿಮಗೆ ಅಷ್ಟಾಗಿ ಇಷ್ಟವಾಗದು. ಸರಳವಾದ ಕೆಲಸವನ್ನು ಮನಶ್ಚಾಂಚಲ್ಯದಿಂದ ಸಂಕೀರ್ಣ ಮಾಡಿಕೊಳ್ಳುವಿರಿ.

ಸಿಂಹ ರಾಶಿ: ನಿಮ್ಮ ಯೋಜನೆ ದಿಕ್ಕು ತಪ್ಪುವುದು, ಹತಾಶಭಾವದಿಂದ ಸಿಟ್ಟೂ ಬರಲಿದೆ. ಸಣ್ಣ ಮೊತ್ತವಾದರೂ ಅದನ್ನು ಉಳಿಸುವ ಬಗ್ಗೆ ಯೋಚಿಸುವಿರಿ‌. ಹಿತಶತ್ರುಗಳಿಂದ ಬೇಕಾದ ಮಾಹಿತಿಯು ಸಿಗಲಿದೆ. ಸಂಗಾತಿಯ ಬಗ್ಗೆ ಪ್ರೀತಿಯನ್ನು ಅನುಭವಿಸುವಿರಿ. ನಿಮಗೆ ಇಂದು ಪ್ರಭಾವೀ ವ್ಯಕ್ತಿಗಳ ಭೇಟಿ ನಿಮ್ಮ ಮನೋಬಲವನ್ನು ಹೆಚ್ಚಿಸುತ್ತದೆ. ಕುಟುಂಬದೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳಿ. ಚಿಂತೆಯಿಂದ ಆರೋಗ್ಯಕ್ಕೆ ತೊಂದರೆ. ಆಪ್ತರಿಂದ ನಿಮಗೆ ಏನಾದರೂ ಅಚ್ಚರಿಯ ಕೊಡುಗೆ ಸಿಗಲಿದೆ. ನಿಮ್ಮ ಗೆಳತಿಯ ಜೊತೆ ಅಸಭ್ಯವಾಗಿ ನಡೆದುಕೊಳ್ಳಬೇಡಿ. ಅದು ನಿಮಗೆ ಮುಳ್ಳಾಗಬಹುದು. ಎಲ್ಲದಕ್ಕೂ ಅತಿಯಾದ ತೊಂದರೆ ಇರುವಂತೆ ಅನ್ನಿಸಬಹುದು. ನಿಮ್ಮನ್ನು ಇನ್ನಷ್ಟು ಎತ್ತರಕ್ಕೆ ಏರಿಸಿಕೊಳ್ಳಲು ಪ್ರಯತ್ನ ನಡೆಯಲಿದೆ. ನಿಮ್ಮ ಅಂತರಂಗವನ್ನು ವ್ಯಕ್ತಪಡಿಸಲು ನಿಮಗೆ ಸೂಕ್ತ ಸಮಯವು ಲಭ್ಯವಾಗದೇ ಇರಬಹುದು. ಅಪರಿಚಿತರ ಬಗ್ಗೆ ಜಾಗರೂಕತೆ ಇರಲಿ. ನಿಮ್ಮ ತಪ್ಪಿನ ನಿರ್ಧಾರದಿಂದ ಪಶ್ಚಾತ್ತಾಪ ಪಡಬೇಕಾಗುವುದು. ಇನ್ನೊಬ್ಬರನ್ನು ಪ್ರಶಂಸಿಸುವ ಮನೋಭಾವ ನಿಮ್ಮಲ್ಲಿ ಇರದು.

ಕನ್ಯಾ ರಾಶಿ: ಹೊಸ ಕಾಮಗಾರಿಯ ಚಾಲನೆಗೆ ಬೇಕಾದ ಸಿದ್ಧತೆ ನಡೆಸುವಿರಿ. ನೀವು ಮಾಡದ ಕಾರ್ಯಗಳಿಗೆ ನಿಮ್ಮ ಹಣೆಪಟ್ಟಿ ಬೀಳಬಹುದು. ಅದನ್ನು ಎದುರಿಸುವ ಚಾಕಚಕ್ಯತೆ ನಿಮ್ಮದಾಗಲಿದೆ. ನೀವೇ ಇಂದು ಕುಟುಂಬದ ಅಸಮಾಧಾನಕ್ಕೆ ಕಾರಣವಾಗಬಹುದು. ನಿಮ್ಮ ದುಃಸ್ಥಿಯನ್ನು ಬಳಸಿಕೊಳ್ಳುವರು. ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ಪ್ರಣಯದ ಸಂಬಂಧಿಸಿದಂತೆ ಹೆಚ್ಚು ಬೇಡಿಕೆಗಳು ಬರಬಹುದು. ಪರರನ್ನೂ ನಿಮ್ಮಂತೆ ಕಾಣುವಿರಿ. ದೈಹಿಕ ಶ್ರಮದಿಂದ ಹೆಚ್ಚು ಆದಾಯ ಪಡೆಯುವಿರಿ. ಕಾರ್ಯಕ್ಕಾಗಿ ಹೆಚ್ಚು ಓಡಾಡಬೇಕಾಗುವುದು. ನಿಮ್ಮದಾದ ಕೆಲವು ಅಸಂಬದ್ಧ ವ್ಯವಸ್ಥೆಯನ್ನು ನೀವು ಸರಿ ಮಾಡಿಕೊಳ್ಳಬೇಕಾಗುವುದು. ಹೊಸ ವಸ್ತುವಿನ ಖರೀದಿಯಲ್ಲಿ ನಿಮಗೆ ಮೋಸ ಆಗುವ ಸಾಧ್ಯತೆ ಇದೆ. ಅಧಿಕಾರ ಹಸಿವನ್ನು ನೀಗಿಸಿಕೊಳ್ಳಲು ಅಶಕ್ತರನ್ನು ಕಳಸಿಕೊಳ್ಳುವಿರಿ. ಪ್ರೀತಿಪಾತ್ರರ ಜೊತೆ ಇಂದು ಸಲುಗೆಯಿಂದ ಇರುವಿರಿ. ಮನಸ್ಸಿಗೆ ಇಷ್ಟವಾಗದ ಕಾರ್ಯವನ್ನು ನೀವು ಮಾಡಬೇಕಾದೀತು. ನಿಮ್ಮ ಯೋಜನೆಯನ್ನು ಪ್ರಯೋಗಕ್ಕೆ ತರಲು ಪೂರ್ಣ ಯಶಸ್ಸನ್ನು ಪಡೆಯಲಾರಿರಿ.

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!