Horoscope: ರಾಶಿಭವಿಷ್ಯ; ದೀರ್ಘಕಾಲದ ಅನುಮಾನಕ್ಕೆ ಇಂದು ತೆರೆ, ಮಾತುಗಳನ್ನಾಡುವಾಗ ಎಚ್ಚರ!

|

Updated on: Mar 11, 2024 | 12:10 AM

ಒಂದಷ್ಟು ಮಂದಿ ಪ್ರತಿನಿತ್ಯ ತಮ್ಮ ಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 11 ಮಾರ್ಚ್​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ; ದೀರ್ಘಕಾಲದ ಅನುಮಾನಕ್ಕೆ ಇಂದು ತೆರೆ, ಮಾತುಗಳನ್ನಾಡುವಾಗ ಎಚ್ಚರ!
ಪ್ರಾತಿನಿಧಿಕ ಚಿತ್ರ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಸೋಮ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ಶುಭ, ಕರಣ : ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 43 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:14 ರಿಂದ 09:43ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:13 ರಿಂದ ಮಧ್ಯಾಹ್ನ 12:43ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:12 ರಿಂದ 03:42ರ ವರೆಗೆ.

ಮೇಷ ರಾಶಿ: ಇಂದು ನೀವು ಪ್ರಭಾವಶಾಲಿ ವ್ಯಕ್ತಿಗಳ ಜೊತೆ ಸಂವಹನವಿರುವುದು. ಮಾತಿನಲ್ಲಿ ಅಂಜಿಕೆಯು ಕಾಣಿಸುವುದು. ದ್ವೇಷದ ಸ್ವಭಾವವು ನಿಮ್ಮನ್ನು ಬದಲಿಸಬಹುದು. ದೀರ್ಘಕಾಲದ ಅನುಮಾನಕ್ಕೆ ಇಂದು ತೆರೆ ಬೀಳಬಹುದು. ಸಂದರ್ಭೋಚಿತ ಮಾತುಗಳಿಂದ ಗೆಲುವುದು ಸಿಗಬಹುದು. ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಎಲ್ಲದರಿಂದ ದೂರಾಗಿ ಹೊಸತನ್ನು ಹುಡುಕುವ ಆಸಕ್ತಿ ಇರುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ.

ವೃಷಭ ರಾಶಿ: ನಿಮಗೆ ಎಲ್ಲವೂ ಇಂದ್ರಜಾಲದಂತೆ ಆಗಬೇಕು ಎಂಬ ಮಾನಸಿಕತೆಯಲ್ಲಿ ಇರುವಿರಿ. ಕಛೇರಿಯಲ್ಲಿ ನಿಮ್ಮ ವರ್ತನೆಗಳು ಅಸಹಜದಂತೆ ತೋರುವುದು. ಕೆಲಸದಲ್ಲಿ ನಿಮ್ಮ ಯಶಸ್ಸಿಗೆ ನಿಮ್ಮ ಕುಟುಂಬದ ಬೆಂಬಲವು ಕೊಡುಗೆ ನೀಡುತ್ತದೆ.  ಹೊಸತನ್ನು ಕಲಿಯುವ ಬಗ್ಗೆ ಆಸಕ್ತಿಯು ಹೋಗುವುದು.‌ ಆಲಸ್ಯವನ್ನು ಬಿಡುವುದು ಇಷ್ಟವಾಗದು. ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟವಾದೀತು. ಭವಿಷ್ಯದ ನಿಮ್ಮ ಕಲ್ಪನೆಗೆ ಒಂದು ರೂಪವು ಸಿಕ್ಕಂತೆ ತೋರುವುದು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಹೊಸ ಮನೆಯನ್ನು ಖರೀದಿಸುವ ಬಗ್ಗೆ ಸಂಗಾತಿಯ ಜೊತೆ ಚರ್ಚಿಸುವಿರಿ. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ.

ಮಿಥುನ ರಾಶಿ: ನಿಮ್ಮ‌ ಕನಸಿಗೆ ಸ್ಪಷ್ಟವಾದ ರೂಪವನ್ನು ಕೊಡಿ. ನಿಮ್ಮ ಪರಿಣಾಮಾತ್ಮಕ ಮಾತುಗಳಿಂದ ಯಾರಾದರೂ ಬದಲಾಗಬಹುದು. ದೂರದ ಸಂಬಂಧಿಕರಿಂದ ಅನಿರೀಕ್ಷಿತ ಸಂದೇಶವು ಇಡೀ ಕುಟುಂಬಕ್ಕೆ ಉತ್ಸಾಹವನ್ನು ತರುತ್ತದೆ. ಅನಿರೀಕ್ಷಿತವಾಗಿ ಸಂಬಂಧವೊಂದು ಬೆಳೆಯಬಹುದು. ವೈವಾಹಿಕ ಮಾತುಕತೆಗೆ ನಿಮ್ಮ ಕಡೆಯಿಂದ ಸ್ಪಂದನೆ ಅಗತ್ಯವಾಗಿರುವುದು. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಕಛೇರಿಯಲ್ಲಿ ನಿಮಗೆ ಆರಾಮಾಗಿ ಇರುವ ಯೋಚನೆ ಇರುವುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ‌ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ‌ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ಮೋಸದ ಜಾಲಕ್ಕೆ ಸಿಕ್ಕಬಹುದು, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಎಲ್ಲವನ್ನೂ ನೀವು ಕಳೆದುಕೊಂಡು ಹಗುರಾಗುವಿರಿ.

ಕಟಕ ರಾಶಿ: ಇಂದು ನಿಮಗೆ ಯಾರ ಹಂಗೂ ಇಲ್ಲದೇ ಸ್ವೇಚ್ಛೆಯಿಂದ ವರ್ತಿಸುವಿರಿ. ವಿದೇಶಕ್ಕೆ ಹೋಗುವ ಬಗ್ಗೆ ನಿಮಗೆ ಅತಿಯಾದ ಮೋಹವು ಇರುವುದು. ಮನೆಯನ್ನು ನಿರ್ಮಾಣ ಮಾಡುವ ಬಗ್ಗೆ ಆಸೆಯನ್ನು ಹೇಳಿಕೊಳ್ಳುವಿರಿ. ಸಂಗಾತಿಯ ಮೇಲಿನ ಮುನಿಸನ್ನು ಇನ್ನೊಬ್ಬರ ಮೇಲೆ ತೋರಿಸುವಿರಿ.‌ ಅಪ್ರಾಮಾಣಿಕತೆಯು ನಿಮಗೆ ಇಷ್ಟವಾಗದೇ ಹೋಗಬಹುದು.‌ ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ‌ ಮಾತ್ರ ಇರದು. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು. ಹಿತಶತ್ರುಗಳು ನಿಮ್ಮ ಸಂಪತ್ತನ್ನು ಬಳಸಿಕೊಳ್ಲಕುವರು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ನಿಮ್ಮ ತಪ್ಪನ್ನು ಇತರರ ಮೇಲೆ‌ ಹಾಕುವುದು ಸರಿಯಾಗದು.